ಬಿಗ್ ನ್ಯೂಸ್
Dharmasthala-BIG BReaking:ಧರ್ಮಸ್ಥಳ ಬುರುಡೆ ಪ್ರಕರಣ – ಜಯಂತ್ ಟಿ ಸ್ಫೋಟಕ ಹೇಳಿಕೆ!
ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ದೂರುದಾರ ಜಯಂತ್ ಟಿ., ಎಸ್ಐಟಿ ವಿಚಾರಣೆ ಮತ್ತು ಬೆಳವಣಿಗೆಗಳ ಕುರಿತು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಬುರುಡೆ ಅಗೆದ ಜಾಗದಲ್ಲಿ ತೆಂಗಿನ ಸಸಿ ನೆಡುವ ಪ್ರಸ್ತಾವಕ್ಕೆ ಜಯಂತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟ್ಯಂತರ ರೂಪಾಯಿ ಗಣಿಗಾರಿಕೆಯ ಪ್ರಶ್ನೆ ಎತ್ತಿದ್ದಾರೆ.
ಮಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ದೂರುದಾರ ಜಯಂತ್ ಟಿ., ಎಸ್ಐಟಿ ವಿಚಾರಣೆ ಮತ್ತು ಬೆಳವಣಿಗೆಗಳ ಕುರಿತು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಬುರುಡೆ ಅಗೆದ ಜಾಗದಲ್ಲಿ ತೆಂಗಿನ ಸಸಿ ನೆಡುವ ಪ್ರಸ್ತಾವಕ್ಕೆ ಜಯಂತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟ್ಯಂತರ ರೂಪಾಯಿ ಗಣಿಗಾರಿಕೆಯ ಪ್ರಶ್ನೆ ಎತ್ತಿದ್ದಾರೆ.
ಎಸ್ಐಟಿ ವಿಚಾರಣೆಯ ಕಹಿಸತ್ಯ!
“ಎಸ್ಐಟಿ ಕಚೇರಿಯಲ್ಲಿ ನನ್ನ ವಿಚಾರಣೆ ನಡೆದಿದ್ದು, ಬೆಳಗ್ಗೆ 10 ಗಂಟೆಗೆ ಹೋದರೆ ರಾತ್ರಿ 10 ಗಂಟೆಯಾಗುತ್ತಿತ್ತು” ಎಂದು ಜಯಂತ್ ಹೇಳಿದ್ದಾರೆ. ಹೋರಾಟಗಾರರಿಂದ ಮಾಹಿತಿ ಪಡೆದು ಷಡ್ಯಂತ್ರದ ಕುರಿತು ತನಿಖೆ ನಡೆಸಲಾಗುತ್ತಿತ್ತು. “ದೇವಸ್ಥಾನದ ವಿರುದ್ಧ ನಾವು ಯಾವುದೇ ಷಡ್ಯಂತ್ರ ಮಾಡಿಲ್ಲ, ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೇವೆ. ಎಸ್ಐಟಿ ಕಚೇರಿಯಿಂದ ನಮಗೆ ಯಾವುದೇ ತೊಂದರೆ ಆಗಿಲ್ಲ, ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
ಮೊಬೈಲ್, ದಾಖಲೆಗಳ ವಶ: ಸತ್ಯ ಮರೆಮಾಚುವ ಯತ್ನವೇ?
ಜಯಂತ್ ಟಿ ಅವರ ಮೊಬೈಲ್ ಫೋನ್ ಮತ್ತು ಧರ್ಮಸ್ಥಳ ಗ್ರಾಮ ಪಂಚಾಯತ್ನಿಂದ ಆರ್.ಟಿ.ಐ ಮೂಲಕ ಪಡೆದ ಪತ್ರಗಳನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. “ಠಾಣೆಗಳಿಂದ ಪಡೆದ ನಾಪತ್ತೆ ಪ್ರಕರಣ ಸಂಬಂಧಿಸಿದ ದಾಖಲೆಗಳಿದ್ದವು” ಎಂದು ಜಯಂತ್ ತಿಳಿಸಿದ್ದಾರೆ. “ನಾನು ಯಾವುದೇ ಮೆಸೇಜ್ ಡಿಲೀಟ್ ಮಾಡಿಲ್ಲ. ಜಯಂತ್ ಷಡ್ಯಂತ್ರ ಮಾಡಿದರೆ ಎಂದು ಮಲ್ಲಸಂದ್ರದಲ್ಲಿ ಜನ ಕೇಳುತ್ತಿದ್ದರು. ಜನರಿಗೆ ಈಗ ಸತ್ಯ ಗೊತ್ತಾಗಿದೆ” ಎಂದು ಹೇಳಿದ್ದಾರೆ.
ಭೀಮನ ಬದಲಾದ ಹೇಳಿಕೆ: ಷಡ್ಯಂತ್ರದ ವಾಸನೆ?
“ಭೀಮ ಬಂದು ಹೇಳಿದ್ದೆಲ್ಲಾ ಸತ್ಯ ಆದರೆ ಈಗ ಹೇಗೆ ಬದಲಾದ ಎಂದು ಗೊತ್ತಾಗುತ್ತಿಲ್ಲ. ಈಗ ಬರ್ತಾ ಇರುವ ವಿಡಿಯೋ ನೋಡಿದ್ರೆ ಗೊತ್ತಾಗುತ್ತೆ. ಎರಡು ವರ್ಷದ ಹಿಂದೆ ಮಹೇಶಣ್ಣನ ಮನೆಗೆ ಬಂದು ಹೇಳಿದ್ದನ್ನು ಈಗ ಹಾಕ್ತ ಇದ್ದಾರೆ. ಮನೆಗೆ ಬಂದಿದ್ದು, ವಿಡಿಯೋ ಮಾಡಿದ್ದು ಈ ವಿಚಾರಗಳು ನನಗೆ ಗೊತ್ತಿರಲಿಲ್ಲ. ನಮ್ಮ ಹೋರಾಟ ಸೌಜನ್ಯ ವಿಚಾರದಲ್ಲಿ ನಡೆಯುತ್ತಿತ್ತು. ನನ್ನ ಬಳಿಯೂ ಈ ವಿಚಾರಗಳನ್ನು ಹೇಳಿದ್ದ” ಎಂದು ಜಯಂತ್ ಆಘಾತಕಾರಿ ಮಾಹಿತಿ ನೀಡಿದ್ದಾರೆ.
ಬುರುಡೆ ಜಾಗದಲ್ಲಿ ತೆಂಗಿನ ಸಸಿ: ಕೋಟ್ಯಂತರ ರೂಪಾಯಿ ಗಣಿಗಾರಿಕೆ ಮರೆಮಾಚಲು ಯತ್ನ?
ಇತ್ತೀಚೆಗೆ ಬುರುಡೆ ಅಗೆದ ಜಾಗದಲ್ಲಿ ತೆಂಗಿನ ಸಸಿ ನೆಡುವ ಪ್ರಸ್ತಾವದ ಬಗ್ಗೆ ಜಯಂತ್ ಟಿ. ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈಗ ಗುಂಡಿ ತೆಗೆದ ಜಾಗದಲ್ಲಿ ತೆಂಗಿನ ಸಸಿ ನೆಡೋಕೆ ಬಂದಿದ್ದಾರಂತೆ. ಹಾಗಾದರೆ ಕೋಟ್ಯಾಂತರ ಹಣ ಮಾಡಲು ಗಣಿಗಾರಿಕೆ ಮಾಡಿದ್ರಲ್ಲ ಅದಕ್ಕೆ ಏನು ಮಾಡಿದ್ರಿ? ಅಲ್ಲಿ ಹೋಗಿ ತೆಂಗಿನ ಸಸಿ ನೆಡಿ!” ಎಂದು ಸವಾಲೆಸೆದಿದ್ದಾರೆ.
ಸತ್ಯ ಹೊರಬರಲಿದೆ: ದೇವರ ಮೇಲೆ ಭರವಸೆ!
“ಸತ್ಯ ಒಂದಲ್ಲ ಒಂದು ದಿನ ಹೊರಗೆ ಬರುತ್ತದೆ. ಮಂಜುನಾಥ, ಅಣ್ಣಪ್ಪ ಸ್ವಾಮಿ ಸತ್ಯ ಹೊರಗೆ ತರ್ತಾರೆ. ದೇವರೇ ನಮ್ಮ ಮೂಲಕ ಈ ಕೆಲಸ ಮಾಡಿಸುತ್ತಿದ್ದಾರೆ” ಎಂದು ಜಯಂತ್ ಟಿ. ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ21 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ21 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ20 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್15 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ19 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ20 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ19 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ21 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















