ಆಸ್ಪತ್ರೆಯನ್ನು ಉದ್ಘಾಟಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಮಾತನಾಡಿ ಪುತ್ತೂರಿನ ಸಂಪ್ಯದಲ್ಲಿ ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆಯ ದೃಷ್ಟಿಯಿಂದ ಅತ್ಯಾಧುನಿಕ […]" /> ಆಸ್ಪತ್ರೆಯನ್ನು ಉದ್ಘಾಟಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಮಾತನಾಡಿ ಪುತ್ತೂರಿನ ಸಂಪ್ಯದಲ್ಲಿ ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆಯ ದೃಷ್ಟಿಯಿಂದ ಅತ್ಯಾಧುನಿಕ […]"> Medland-ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ - Nikhara News | Kannada News Website
Connect with us

ಕಾರ್ಯಕ್ರಮಗಳು

Medland-ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

Published

on

Ad Widget

Ad Widget

Ad Widget

Ad Widget

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಆಸ್ಪತ್ರೆಯನ್ನು ಉದ್ಘಾಟಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಮಾತನಾಡಿ ಪುತ್ತೂರಿನ ಸಂಪ್ಯದಲ್ಲಿ ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆಯ ದೃಷ್ಟಿಯಿಂದ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡಿರುವುದು ಸಂತೋಷ ವಿಷಯ, ಆಸ್ಪತ್ರೆಯ ಸಿಬ್ಬಂದಿಗಳು ಗ್ರಾಮ ಮಟ್ಟದಲ್ಲಿ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ನೀಡುವ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು.

Ad Widget

Ad Widget <> Ad Widget

ಆಸ್ಪತ್ರೆಗೆ ರೋಗಿಗಳು ಒಂದಲ್ಲಾ ಒಂದು ರೀತಿಯ ನೋವು, ದುಖ, ಆತಂಕದಿಂದ ಬರುವಾಗ ಅವರನ್ನು ನಗುಮುಖದಿಂದ, ಪ್ರೀತಿ ವಿಶ್ವಾಸದಿಂದ ಸ್ವೀಕರಿಸಿ, ಸಮರ್ಪಕ ಮಾಹಿತಿ ನೀಡಿ ಆರೋಗ್ಯ ಸೇವೆ ನೀಡುವ ಕಾರ್ಯ ಆಗಬೇಕು, ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿಯೂ ಈ ಆಸ್ಪತ್ರೆ ಕಾರಣವಾಗಲಿ ಎಂದು ಅವರು ಹೇಳಿದರು.

ಆರೋಗ್ಯ ತಪಾಸಣೆ ಮಾಡಿಕೊಳ್ಳಿ:
ಬಿ.ಪಿ ಮತ್ತು ಶುಗರ್ ಮುಖ್ಯವಾಗಿ ಜನರ ಆರೋಗ್ಯ ಕೆಡಿಸುತ್ತಿದ್ದು ಬಿ.ಪಿ ಮತ್ತು ಶುಗರ್ ವಿಚಾರದಲ್ಲಿ ಜನರು ಹೆಚ್ಚಿನ ಗಮನಹರಿಸುವ ಮೂಲಕ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು, ಅಧಿಕಾರ, ಆಸ್ತಿ, ಅಂತಸ್ತಿಗಿಂತ ಆರೋಗ್ಯ ಮುಖ್ಯ, ಹಾಗಾಗಿ ಜನರು ಬಿಡುವು ಮಾಡಿಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಆರೋಗ್ಯವಂತ ಜನರಿಂದ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

Ad Widget

Ad Widget

ಬಡವರಿಗೆ ಮಿತ ದರದಲ್ಲಿ ಸೇವೆ ಸಿಗಲಿ-ರಹೀಂ ಖಾನ್
ಶಸ್ತç ಚಿಕಿತ್ಸಾ ವಿಭಾಗವನ್ನು ಉದ್ಘಾಟಿಸಿದ ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಮಾತನಾಡಿ ಮನುಷ್ಯರಾದವರಲ್ಲಿ ಮಾನವೀಯತೆ ಇರಬೇಕು, ದೇವರು ಮನುಷ್ಯರನ್ನು ಜಾತಿ, ಧರ್ಮ ಎಂದು ನೋಡುವುದಿಲ್ಲ, ನಾವು ಉಸಿರಾಡುವ ಗಾಳಿ, ನಮ್ಮ ದೇಹದ ರಕ್ತ ಎಲ್ಲವೂ ಒಂದೇ, ದೇವರು ಎಲ್ಲರಿಗಿಂತ ಮಿಗಿಲು, ಹಾಗಾಗಿ ನಾವೆಲ್ಲರೂ ಪರಸ್ಪರ ಅರಿತುಕೊಂಡು ಜೀವನ ನಡೆಸಬೇಕು ಎಂದು ಹೇಳಿದರು. ಆರೋಗ್ಯ ಮನುಷ್ಯನಿಗೆ ಬಹಳ ಮುಖ್ಯ, ಆರೋಗ್ಯವನ್ನು ಪ್ರತಿಯೊಬ್ಬರೂ ಕಾಪಾಡಿಕೊಳ್ಳಬೇಕು ಎಂದ ಅವರು ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂರಕ್ಕೆ ನೂರು ಬಡವರಿಗೆ ಮಿತ ದರದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ದೊರೆಯಲಿದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.

ಪುತ್ತೂರಿಗೆ ಎಲ್ಲ ವ್ಯವಸ್ಥೆ ಹೊಂದಿರುವ ಆಸ್ಪತ್ರೆಯ ಅಗತ್ಯವಿತ್ತು-ಅಶೋಕ್ ರೈ
ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೊಕ್ ಕುಮಾರ್ ರೈ ಮಾತನಾಡಿ ಪುತ್ತೂರಿನಲ್ಲಿ ಎಲ್ಲ ವ್ಯವಸ್ಥೆಗಳಿರುವ ಆಸ್ಪತ್ರೆಯ ಕೊರತೆ ಇರುವ ಕಾರಣ ಕ್ರಿಟಿಕಲ್ ಕೇಸ್‌ಗಳು ಬಂದಾಗ ರೋಗಿಗಳನ್ನು ಇಲ್ಲಿಂದ ಮಂಗಳೂರಿಗೆ ಕರೆದೊಯ್ಯಬೇಕಾದ ಪರಿಸ್ಥಿತಿ ಇದೆ, ಹಾಗೆ ಹೋದ ಸಂದರ್ಭಗಳಲ್ಲಿ ಜೀವ ಹಾನಿಯಾಗುವುದೇ ಹೆಚ್ಚು, ಹೃದಯ ಸಂಬಂಧಿ ವಿಚಾರದಲ್ಲಿ ಹೆಚ್ಚಾಗಿ ಇಂತಹ ಘಟನೆಗಳು ನಡೆಯುತ್ತದೆ, ಹಾಗಾಗಿ ಪುತ್ತೂರಿನಲ್ಲಿ ಎಲ್ಲ ವ್ಯವಸ್ಥೆಗಳಿರುವ ಮತ್ತು ತಜ್ಞ ವೈದ್ಯರುಗಳಿರುವ ಆಸ್ಪತ್ರೆ ಬೇಕು ಎನ್ನುವುದು ನಮ್ಮ ಕನಸಾಗಿತ್ತು, ಆ ಕಾರಣಕ್ಕಾಗಿಯೂ ಮೆಡಿಕಲ್ ಕಾಲೇಜು ಇಲ್ಲಿಗೆ ತರಲು ಕಾರಣ ಎಂದು ಅವರು ಹೇಳಿದರು. ಆರೋಗ್ಯ ಕ್ಷೇತ್ರ ಕೂಡಾ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಜನರಿಗೆ ಒಳ್ಳೆಯ ಸೇವೆ ಸಿಗಲಿ, ಬಡವರ ಬಗ್ಗೆ ವಿಶೇಷ ಕಾಳಜಿ ಇರಲಿ, ಒಳ್ಳೆಯ ಕೆಲಸಕ್ಕೆ ನಮ್ಮ ಸಹಕಾರ ಇದೆ, ನಾನು ಯಾವತ್ತೂ ನಿಮ್ಮೊಂದಿಗಿದ್ದೇನೆ ಎಂದು ಅವರು ಹೇಳಿದರು.

ಸಮಾಜಕ್ಕೆ ಅತ್ಯಮೂಲ್ಯ ಕೊಡುಗೆ-ಹರೀಶ್ ಇಂಜಾಡಿ
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮಾತನಾಡಿ ಡಾ.ಅಶ್ರಫ್ ಕಮ್ಮಾಡಿಯವರು ಸಮಾಜಕ್ಕೆ ಅತ್ಯಮೂಲ್ಯ ಕೊಡುಗೆಯೊಂದನ್ನು ನೀಡುವ ಮೂಲಕ ಮಾದರಿಯಾಗಿದ್ದಾರೆ, ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಿಗಲಿ ಎಂದು ಹೇಳಿದರು.

ಮನುಕುಲಕ್ಕೆ ಉಪಯುಕ್ತ ಕೊಡುಗೆ-ಈಶ್ವರ ಭಟ್
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮಾತನಾಡಿ ನನ್ನ ಆತ್ಮೀಯರಾಗಿದ್ದ ಇಬ್ರಾಹಿಂ ಹಾಜಿ ಕಮ್ಮಾಡಿಯವರು ಕಂಡಿದ್ದ ಆಸ್ಪತ್ರೆ ನಿರ್ಮಾಣದ ಕನಸನ್ನು ಅವರ ಪುತ್ರ ಅಶ್ರಫ್ ಕಮ್ಮಾಡಿಯವರು ನೆರವೇರಿಸಿದ್ದು ಅಭಿನಂದನೀಯ ಎಂದು ಹೇಳಿದರು. ಕತ್ತಲೆ ಕೋಣೆಯಲ್ಲಿ ಒಬ್ಬ ದೀಪ ಹಚ್ಚಿದರೂ ಅದು ಹತ್ತು ಜನರಿಗೆ ಬೆಳಕು ನೀಡುತ್ತದೆ, ಅದೇ ರೀತಿ ಡಾ.ಅಶ್ರಫ್ ಕಮ್ಮಾಡಿ ನಿರ್ಮಿಸಿದ ಮೆಡ್‌ಲ್ಯಾಂಡ್ ಆಸ್ಪತ್ರೆ ಮಾನವ ಕುಲಕ್ಕೆ ಉಪಯುಕ್ತವಾಗುತ್ತದೆ ಎಂದು ಹೇಳಿದರು.

ಹೆಮ್ಮೆ ತಂದಿದೆ-ಗೀತಾ
ಆAಬ್ಯಲೆನ್ಸ್ ಸೇವೆಗೆ ಚಾಲನೆ ನೀಡಿದ ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಗೀತಾ ಮಾತನಾಡಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಿರುವ ಮಾಡಿರುವ ಡಾ.ಅಶ್ರಫ್ ಕಮ್ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ನಮ್ಮ ಗ್ರಾ.ಪಂ ವ್ಯಾಪ್ತಿಯಲ್ಲಿ ಮತ್ತು ನನ್ನ ಅವಧಿಯಲ್ಲಿ ಆಗಿರುವುದು ನನಗೆ ವೈಯಕ್ತಿಕವಾಗಿ ಹೆಮ್ಮೆ ತಂದಿದೆ, ಇಲ್ಲಿ ಉತ್ತಮ ಆರೋಗ್ಯ ಸೇವೆ ಸಿಗಲಿದೆ ಎನ್ನುವ ಭರವಸೆ ನನಗಿದೆ ಎಂದು ಅವರು ಹೇಳಿದರು.

ಡಾ.ವಾಸುದೇವನ್‌ಗೆ ಸನ್ಮಾನ:
Sಏಙ ಹಾಸ್ಪಿಟಲ್ ಗ್ರೂಪ್ ಕಣ್ಣೂರು ಇದರ ಚೇರ್‌ಮೆನ್ ಡಾ.ವಾಸುದೇವನ್ ಟಿ.ಪಿ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು.

ಶಾಸಕಿ ಭಾಗೀರಥಿ ಮುರುಳ್ಯ ಭೇಟಿ:
ಲೋಕಾರ್ಪಣಾ ಸಮಾರಂಭದ ಸಭಾ ಕಾರ್ಯಕ್ರಮದ ಬಳಿಕ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ಆಸ್ಪತ್ರೆಯನ್ನು ವೀಕ್ಷಣೆ ಮಾಡಿದ್ದಲ್ಲದೇ ಮೆಡ್‌ಲ್ಯಾಂಡ್ ಆಸ್ಪತ್ರೆಯ ಚೇರ್‌ಮೆನ್ ಡಾ.ಅಶ್ರಫ್ ಕಮ್ಮಾಡಿ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಡಾ.ಅಶ್ರಫ್ ಕಮ್ಮಾಡಿಯವರು ಶಾಸಕರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಬೆಂಗಳೂರು ಮಿಲನ್ ಫ್ಲೈವುಡ್‌ನ ಮಿಲಪ್ ಚಂದ್ ಜೈನ್, ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಶ್ಮೀರ್ ಕಮ್ಮಾಡಿ, ಕಾರ್ಯನಿರ್ವಾಹಕ ನಿರ್ದೇಶಕ ಆಶೀಶ್ ಕಮ್ಮಾಡಿ, ಮೆಡಿಕಲ್ ಡೈರೆಕ್ಟರ್ ಡಾ.ಅದ್ರಾಮ, ಅಸೋಸಿಯೇಟ್ ಜನರಲ್ ಡಾ.ವಿಶಾಲ್, ಜನರಲ್ ಪಿಸಿಶಿಯನ್ ಡಾ.ಸ್ವಾತಿ, ನಿರ್ಮಲಾ ವಾಸುದೇವನ್, ಡಾ.ಅನೀಸ್ ಅಬ್ದುಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಕಾನೂನು ಸಲಹೆಗಾರ ಮೂಸಕುಂಞ ಪೈಂಬಚ್ಚಾಲ್ ಸ್ವಾಗತಿಸಿದರು. ಆಸ್ಪತ್ರೆಯ ಎಚ್.ಆರ್ ಅನುಶ್ರೀ ವಂದಿಸಿದರು. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಝಾಕ್ ಸಾಲ್ಮರ ಕಾರ್ಯಕ್ರಮ ನಿರೂಪಿಸಿದರು.

ಲ್ಯಾಬ್ ಇನ್‌ಚಾರ್ಜ್ ರಝಾಕ್ ಅಂಙತ್ತಡ್ಕ, ಸಿಬ್ಬಂದಿಗಳಾದ ಪದ್ಮನಾಭ ಬಂಗೇರ, ಅಶ್ರಫ್ ಅಡ್ಕಾರ್ ಮತ್ತಿತರರು ಸಹಕರಿಸಿದರು. ಕಾರ್ಯಕ್ರಮದಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ, ಉದ್ಯಮ ಕ್ಷೇತ್ರದ, ಸಂಘ ಸಂಸ್ಥೆಗಳ ನೂರಾರು ಮಂದಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಸ್ಥಳೀಯ

Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

Ad Widget

Ad Widget <> Ad Widget

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್‌ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್‌. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

Ad Widget

Ad Widget

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!