ಮಂಗಳೂರು
Harinarayana Dasa Asranna-ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ದೇಗುಲದ ಅಭಿವೃದ್ದಿಗೆ ಮಾತ್ರ ಬಳಕೆ – ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ – ಗ್ಯಾರಂಟಿ ಯೋಜನೆಗಳಿಗಾಗಿ ದೇಗುಲದ ಹಣ ಬಳಕೆ ಎನ್ನುವುದು ಶುದ್ಧ ಅಪಪ್ರಚಾರ – ಕಿಡಿಗೇಡಿಗಳ ಕೃತ್ಯ ; ಹರಿನಾರಾಯಣ ದಾಸ ಅಸ್ರಣ್ಣ
ಅಕ್ಟೋಬರ್ 1, 2025 ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ವಾಸುದೇವ ಅಸ್ರಣ್ಣ ಅವರ ಸಹೋದರ ಹರಿನಾರಾಯಣ ದಾಸ ಅಸ್ರಣ್ಣ ಸ್ಪಷ್ಟಪಡಿಸಿದ್ದಾರೆ.
ಕಟೀಲು: ಅಕ್ಟೋಬರ್ 1, 2025 ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ವಾಸುದೇವ ಅಸ್ರಣ್ಣ ಅವರ ಸಹೋದರ ಹರಿನಾರಾಯಣ ದಾಸ ಅಸ್ರಣ್ಣ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ಸುದ್ದಿಗಳನ್ನು ಅವರು ‘ಸಂಪೂರ್ಣ ಸುಳ್ಳು’ ಎಂದು ತಳ್ಳಿಹಾಕಿದ್ದಾರೆ.
ಸರ್ಕಾರದ ‘ಗ್ಯಾರಂಟಿ’ ಆರೋಪ ಸತ್ಯಕ್ಕೆ ದೂರ:
ಕಟೀಲು ದೇವಸ್ಥಾನದ ಸೇವಾ ದರ ಪರಿಷ್ಕರಣೆಯು ಸ್ಥಳೀಯ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ದೇವಸ್ಥಾನದ ಆಡಳಿತ ಮಂಡಳಿಯಿಂದಲೇ ನಡೆದಿದೆ. ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳಿಗೆ ದೇವಸ್ಥಾನದ ಹಣವನ್ನು ಬಳಸಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದುದು ಎಂದು ಹರಿನಾರಾಯಣ ದಾಸ ಅಸ್ರಣ್ಣ ತಿಳಿಸಿದ್ದಾರೆ.
ದುರುದ್ದೇಶಪೂರಿತ ಅಪಪ್ರಚಾರ:
ಮಾಧ್ಯಮದವರೊಂದಿಗೆ ಮಾತನಾಡಿದ ಹರಿನಾರಾಯಣ ದಾಸ ಅಸ್ರಣ್ಣ, “ದೇವಸ್ಥಾನ ಮತ್ತು ಸರ್ಕಾರದ ವಿರುದ್ಧ ಮಸಿ ಬಳಿಯುವ ಉದ್ದೇಶದಿಂದ ಕಿಡಿಗೇಡಿಗಳು ಈ ಸುಳ್ಳು ಪ್ರಚಾರವನ್ನು ನಡೆಸುತ್ತಿದ್ದಾರೆ,” ಎಂದು ಆರೋಪಿಸಿದರು. “ಸೇವಾ ದರಗಳನ್ನು ದೇವಸ್ಥಾನದ ಆಡಳಿತ ಮಂಡಳಿಯೇ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸಿದೆ. ಇದರಲ್ಲಿ ಯಾವುದೇ ಬಾಹ್ಯ ಹಸ್ತಕ್ಷೇಪವಿಲ್ಲ. ಆದರೂ, ಮುಖ್ಯಮಂತ್ರಿಯವರ ಹೆಸರನ್ನು ತಪ್ಪಾಗಿ ಬಳಸಿ ಅಪಪ್ರಚಾರ ನಡೆಸಲಾಗುತ್ತಿದೆ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ವದಂತಿಗಳಿಗೆ ಸ್ಪಷ್ಟನೆ:
ಸಾಮಾಜಿಕ ಜಾಲತಾಣಗಳಲ್ಲಿ, ‘ದೇವಸ್ಥಾನಕ್ಕೆ ನೀಡುವ ಕಾಣಿಕೆ ಸರ್ಕಾರದ ಖಜಾನೆಗೆ ಸೇರುತ್ತದೆ, ಗ್ಯಾರಂಟಿ ಯೋಜನೆಗಳಿಗಾಗಿ ದರ ಪರಿಷ್ಕರಣೆ ಮಾಡಲಾಗಿದೆ, ಹೀಗಾಗಿ ದೇವಸ್ಥಾನಕ್ಕೆ ಕೇವಲ ಹೂವು ಮತ್ತು ಎಳನೀರು ನೀಡಿ’ ಎಂಬ ಸಂದೇಶಗಳು ಹರಡುತ್ತಿವೆ. ಇವೆಲ್ಲವೂ ಸುಳ್ಳು ಎಂದು ಖಂಡಿಸಿರುವ ಹರಿನಾರಾಯಣ ದಾಸ ಅಸ್ರಣ್ಣ, ಕಟೀಲು ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣವು ದೇವಸ್ಥಾನದ ಬ್ಯಾಂಕ್ ಖಾತೆಯಲ್ಲೇ ಉಳಿಯುತ್ತದೆ ಮತ್ತು ಅದನ್ನು ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಸಲಾಗುತ್ತದೆ ಎಂದು ಒತ್ತಿ ಹೇಳಿದರು. ಸರ್ಕಾರಕ್ಕೆ ಯಾವುದೇ ಹಣವನ್ನು ವರ್ಗಾಯಿಸಲಾಗುವುದಿಲ್ಲ ಎಂದವರು ಸ್ಪಷ್ಟಪಡಿಸಿದರು.
ದೇವಸ್ಥಾನದ ಹಣದ ಸದ್ಬಳಕೆ:
ದೇವಸ್ಥಾನದಿಂದ ಸಂಗ್ರಹವಾಗುವ ಹಣವನ್ನು ದೇವಾಲಯದ ನಿರ್ವಹಣೆ, ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತದೆ. ಉಳಿದ ಮೊತ್ತದ ಶೇ.10ರಷ್ಟನ್ನು ಧಾರ್ಮಿಕ ದತ್ತಿ ಇಲಾಖೆಗೆ ನೀಡಲಾಗುತ್ತದೆ, ಇದನ್ನು ದೇವಸ್ಥಾನದ ನೌಕರರ ಮಕ್ಕಳ ಶಿಕ್ಷಣ, ಪಿಂಚಣಿ, ಮತ್ತು ಸಣ್ಣ ದೇವಾಲಯಗಳ ಜೀರ್ಣೋದ್ಧಾರಕ್ಕೆ ಬಳಸಲಾಗುತ್ತದೆ. ಈ ಹಣವು ಹಿಂದೂ ಧರ್ಮದ ಅಭಿವೃದ್ಧಿಗೆ ಮಾತ್ರ ಸೀಮಿತವಾಗಿದ್ದು, ಸರ್ಕಾರದ ಇತರ ಯೋಜನೆಗಳಿಗೆ ಅಥವಾ ಬೇರೆ ಧರ್ಮಗಳಿಗೆ ಬಳಕೆಯಾಗುವುದಿಲ್ಲ ಎಂದು ಅವರು ವಿವರಿಸಿದ್ದಾರೆ.
ಈ ಸ್ಪಷ್ಟೀಕರಣದ ಮೂಲಕ ಕಟೀಲು ದೇವಸ್ಥಾನದ ಆಡಳಿತ ಮಂಡಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ವದಂತಿಗಳಿಗೆ ತೆರೆ ಎಳೆದಿದೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
ನಿಧನ ವಾರ್ತೆ
Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.
ತರಬೇತಿ ಮುಗಿದ ಬಳಿಕ ಶ್ರೇಯಸ್ ಹಾಗೂ ಸ್ನೇಹಿತರು ಸ್ಟೇಟ್ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.
ಶ್ರೇಯಸ್ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್ ಕುಟುಂಬಸ್ಥರಿಗೆ ತಿಳಿದುಬಂದಿದೆ.
ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
-
ಮಂಗಳೂರು8 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ13 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು15 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
-
ಸ್ಥಳೀಯ13 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಅಂತರ ರಾಜ್ಯ7 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ9 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
Uncategorized6 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ರಾಜಕೀಯ14 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ


















