ಬಿಗ್ ನ್ಯೂಸ್
Dharmasthala-BIG BREAKING:ಧರ್ಮಸ್ಥಳ ಭೂಗತ ರಹಸ್ಯ ಸ್ಫೋಟಕ್ಕೆ ಕ್ಷಣಗಣನೆ! ಚಿನ್ನಯ್ಯನಿಂದ ಮತ್ತೊಂದು ‘ಬಾಂಬ್’ ಹೇಳಿಕೆ? ಇಂದು ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ ಮತ್ತೊಂದು ಸ್ವ ಇಚ್ಚಾ ಹೇಳಿಕೆ ನೀಡಲಿರುವ ಚಿನ್ನಯ್ಯ – 72 ದಿನಗಳ ಬಳಿಕ ‘ಯೂ ಟರ್ನ್’?
ರಾಜ್ಯಾದ್ಯಂತ ತಲ್ಲಣ ಮೂಡಿಸಿರುವ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಇಂದು ಮಹತ್ವದ ಘಟ್ಟ ತಲುಪಿದೆ. ಪ್ರಕರಣದ ಕೇಂದ್ರಬಿಂದುವಾಗಿರುವ, ಪ್ರಮುಖ ಸಾಕ್ಷಿ ಕಮ್ ಆರೋಪಿ ಚಿನ್ನಯ್ಯ, ತನ್ನ ಭವಿಷ್ಯ ಮತ್ತು ಇಡೀ ಪ್ರಕರಣದ ದಿಕ್ಕನ್ನೇ ಬದಲಿಸಬಲ್ಲ ಮತ್ತೊಂದು ಸ್ವಇಚ್ಛಾ ಹೇಳಿಕೆ (BNSS 183ರ ಅಡಿಯಲ್ಲಿ) ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾನೆ. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲರ ಚಿತ್ತ ಚಿನ್ನಯ್ಯನತ್ತ ನೆಟ್ಟಿದೆ.
ಬೆಳ್ತಂಗಡಿ, ಸೆಪ್ಟೆಂಬರ್ 23, 2025: ರಾಜ್ಯಾದ್ಯಂತ ತಲ್ಲಣ ಮೂಡಿಸಿರುವ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಇಂದು ಮಹತ್ವದ ಘಟ್ಟ ತಲುಪಿದೆ. ಪ್ರಕರಣದ ಕೇಂದ್ರಬಿಂದುವಾಗಿರುವ, ಪ್ರಮುಖ ಸಾಕ್ಷಿ ಕಮ್ ಆರೋಪಿ ಚಿನ್ನಯ್ಯ, ತನ್ನ ಭವಿಷ್ಯ ಮತ್ತು ಇಡೀ ಪ್ರಕರಣದ ದಿಕ್ಕನ್ನೇ ಬದಲಿಸಬಲ್ಲ ಮತ್ತೊಂದು ಸ್ವಇಚ್ಛಾ ಹೇಳಿಕೆ (BNSS 183ರ ಅಡಿಯಲ್ಲಿ) ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾನೆ. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲರ ಚಿತ್ತ ಚಿನ್ನಯ್ಯನತ್ತ ನೆಟ್ಟಿದೆ.
72 ದಿನಗಳ ಬಳಿಕ ‘ಯೂ ಟರ್ನ್’?
ಕಳೆದ 72 ದಿನಗಳ ಹಿಂದೆ ತಾನು ನೀಡಿದ್ದ ಸ್ಫೋಟಕ ಹೇಳಿಕೆಗೆ ಚಿನ್ನಯ್ಯ ಈಗ ವ್ಯತಿರಿಕ್ತವಾದ ಹೇಳಿಕೆ ನೀಡುವ ಸಾಧ್ಯತೆ ಇದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಇದು ಈ ಬೃಹತ್ ಪ್ರಕರಣಕ್ಕೆ ಹೊಸ ತಿರುವು ನೀಡಲಿದೆಯೇ ಅಥವಾ ಮತ್ತಷ್ಟು ಗೊಂದಲ ಸೃಷ್ಟಿಸಲಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.
ಏನಿದು ಧರ್ಮಸ್ಥಳ ಭೂಗತ ರಹಸ್ಯ? ಒಂದು ಮರುಪರಿಶೀಲನೆ:
ಜುಲೈ 3ರಂದು ಚಿನ್ನಯ್ಯ ಎಂಬಾತ ಧರ್ಮಸ್ಥಳ ಠಾಣೆಗೆ ದೂರು ನೀಡಿ, ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಿದ್ದ. ಈ ಆರೋಪಗಳು ರಾಜ್ಯಾದ್ಯಂತ ಸಂಚಲನ ಮೂಡಿಸಿದವು.
• ಜುಲೈ 11: ಆರೋಪದ ಬೆನ್ನಲ್ಲೇ ಚಿನ್ನಯ್ಯ ಮಾನವ ತಲೆಬುರುಡೆಯೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ BNSS 183ರ ಅಡಿಯಲ್ಲಿ ಸ್ವಇಚ್ಛಾ ಹೇಳಿಕೆ ನೀಡಿದ್ದ. ತಾನು ನೀಡಿದ ದೂರುಗಳನ್ನು ಪುನರುಚ್ಚರಿಸಿದ ಆತ, ಅಪರಾಧ ಕೃತ್ಯದಲ್ಲಿ 30ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದಾರೆ ಎಂದು ಹೆಸರಿಸಿದ್ದ ಎನ್ನಲಾಗುತ್ತಿದೆ. ಹೀಗಾಗಿಯೂ ನ್ಯಾಯಾಲಯದ ಮುಂದೆ ನೀಡಿರುವ ಗೌಪ್ಯ ಹೇಳಿಕೆ ಇನ್ನು ಸಾರ್ವಜನಿಕಗೊಂಡಿಲ್ಲ
•
• SIT ರಚನೆ, ಶವಗಳ ಹುಡುಕಾಟ: ಚಿನ್ನಯ್ಯನ ಹೇಳಿಕೆಗಳ ಆಧಾರದ ಮೇಲೆ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿತು. ಚಿನ್ನಯ್ಯ ತೋರಿಸಿದ 16 ಸ್ಥಳಗಳಲ್ಲಿ ಭೂಮಿಯನ್ನು ಅಗೆದು ಶವಗಳಿಗಾಗಿ ತೀವ್ರ ಹುಡುಕಾಟ ನಡೆಸಲಾಯಿತು. ಆದರೆ, ನೂರಾರು ಶವಗಳ ಬದಲು ಕೇವಲ 2 ಅಸ್ಥಿಪಂಜರಗಳು ಮಾತ್ರ ದೊರೆತಿದ್ದವು.
• ನಾಟಕೀಯ ತಿರುವು, ಚಿನ್ನಯ್ಯ ಬಂಧನ: SIT ವಿಚಾರಣೆಯ ವೇಳೆ ಚಿನ್ನಯ್ಯ, ತಾನು ಕೆಲವರ ಷಡ್ಯಂತ್ರದ ಭಾಗವಾಗಿ ಸುಳ್ಳು ಹೇಳಿರುವುದಾಗಿ ಮತ್ತು ತಾನು ತಂದ ಬುರುಡೆಯ ಮೂಲವನ್ನು ತೋರಿಸುವಲ್ಲಿ ವಿಫಲನಾಗಿರುವುದಾಗಿ ವರದಿಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತವಾದ SIT, ಚಿನ್ನಯ್ಯನನ್ನು ಬಂಧಿಸಿ 10ಕ್ಕೂ ಹೆಚ್ಚು ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿತು.
• ಬುರುಡೆ ಮೂಲದ ಬಂಡವಾಳ: ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ತನಗೆ ಬುರುಡೆ ತಂದುಕೊಟ್ಟವರ ಹೆಸರುಗಳನ್ನು ಚಿನ್ನಯ್ಯ ನ್ಯಾಯಾಲಯಕ್ಕೆ ತಿಳಿಸಿದ್ದ ಎನ್ನಲಾಗಿದೆ.
ಚಿನ್ನಯ್ಯನ ಮೂರನೇ ಹೇಳಿಕೆ – ತನಿಖೆಗೆ ಹೊಸ ತಿರುವು?
ಸೆಪ್ಟೆಂಬರ್ 18ರಂದು ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಆತ ಮತ್ತೊಮ್ಮೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಾಯ್ದೆಯ ಸೆಕ್ಷನ್ 183ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದನು. ಇದರಂತೆ, ಇಂದು (ಸೆಪ್ಟೆಂಬರ್ 23) ಮೂರನೇ ಬಾರಿಗೆ ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ನೀಡುತ್ತಿದ್ದು, ಈ ಹೇಳಿಕೆ ಪ್ರಕರಣದ ಮುಂದಿನ ಹಂತದ ತನಿಖೆಗೆ ನಿರ್ಣಾಯಕವಾಗಲಿದೆ.
“ನೂರಾರು ಶವ” ಹೇಳಿಕೆಗೆ ಅಂತ್ಯ?
ಇಂದಿನ ಸ್ವಇಚ್ಛಾ ಹೇಳಿಕೆಯ ವೇಳೆ ಚಿನ್ನಯ್ಯ ತನ್ನ ಮೊದಲಿನ ಸ್ಫೋಟಕ ಹೇಳಿಕೆಗೆ ವ್ಯತಿರಿಕ್ತವಾಗಿ “ತಾನು ಕಾನೂನು ರೀತ್ಯಾ ಪೋಸ್ಟ್ಮಾರ್ಟಂ ಮಾಡಿದ ಶವಗಳನ್ನು ಮಾತ್ರ ಹೂಳುತ್ತಿದ್ದೆ” ಎಂಬ ಹೇಳಿಕೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳುತ್ತಿವೆ. ಒಂದು ವೇಳೆ ಈ ಹೇಳಿಕೆ ನಿಜವಾದರೆ, “ನೂರಾರು ಶವ” ರಹಸ್ಯಕ್ಕೆ ತೆರೆಬೀಳಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಒಂದು ವೇಳೆ ಈ ಹಿಂದಿನ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆಯನ್ನು ಚಿನ್ನಯ ನೀಡಿದೆ ಆದಲ್ಲಿ, ಈ ಹೇಳಿಕೆ ಬದಲಿಸಲು ಕಾರಣವಾದ ಅಂಶಗಳು ಯಾವುದು ಎನ್ನುವುದನ್ನು ಎಸ್ ಐಟಿ ಪತ್ತೆ ಹಚ್ಚುವ ಸಾದ್ಯತೆಯೂ ಇದೆ. ಚಿನ್ನಯ ಸೌಜನ್ಯ ಪರ ಹೋರಾಟಗಾರ ಷಡ್ಯಂತ್ರದ ಭಾಗವಾಗಿ ಆರಂಭದಲ್ಲಿ ಸುಳ್ಳು ದೂರು ನೀಡಿದನೇ ಅಥಾವ ದೂರು ನೀಡಿದ ಬಳಿಕ ಪ್ರಭಾವಿಗಳ ಆಮೀಷ ಅಥಾವ ಒತ್ತಡಕ್ಕೆ ಬಲಿಯಾಗಿ ತನ್ನ ಹೇಳಿಕೆಗಳಿಂದ ಹಿಂದೆ ಸರಿದನೇ ಎಂಬ ಬಗ್ಗೆ ಎಸ್ ಐಟಿ ತನಿಖೆ ನಡೆಸುವ ಸಾದ್ಯತೆಯಿದೆ.
ಈಗಾಗಲೇ ಸೌಜನ್ಯ ಪರ ಹೋರಾಟಗಾರರು ವಿವಿಧ ವೇದಿಕೆಗಳಲ್ಲಿ ಚಿನ್ನಯ ಯಾರದೋ ಒತ್ತಡಕ್ಕೆ ಬಲಿಯಾಗಿ ತಪ್ಪು ಸ್ಪಾಟ್ ಗಳನ್ನು ತೋರಿಸಿದ್ದ ಎಂದು ಆರೋಪಿಸಿದ್ದಾರೆ, ಇದೆ ವೇಳೆ ಇನ್ನು ತಂಡದ ಹೋರಾಟಗಾರರು, ಚಿನ್ನಯ ಷಡ್ಯಂತ್ರದ ಭಾಗವಾಗಿ ಸುಳ್ಳು ದೂರು ನೀಡಿದ್ದ ಎಂದು ಆರೋಪಿಸಿದ್ದರು.
SIT ತನಿಖೆ ಮತ್ತು ಭವಿಷ್ಯದ ದಾರಿ:
ಚಿನ್ನಯ್ಯನ ಈ ಹಿಂದಿನ ಹೇಳಿಕೆಗಳು SIT ತನಿಖೆಗೆ ದಿಕ್ಸೂಚಿಯಾಗಿದ್ದವು. ಆದರೆ, ಆತನ ಬಂಧನದ ನಂತರ ತನಿಖೆಯ ದಿಕ್ಕು ಬದಲಾಗಿತ್ತೇ ಎಂಬ ಪ್ರಶ್ನೆಗಳು ಎದ್ದಿದ್ದವು. ಈಗ ಆತ ನೀಡಲಿರುವ ಮೂರನೇ ಹೇಳಿಕೆ ಈ ಬೃಹತ್ ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದೆ. ನೂರಾರು ಶವಗಳ ರಹಸ್ಯ, ಅದರ ಹಿಂದಿನ ಶಕ್ತಿಗಳು, ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು10 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ14 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು16 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ14 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
Uncategorized7 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ9 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ರಾಜಕೀಯ16 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಉದ್ಯೋಗ10 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening


















