ಬಿಗ್ ನ್ಯೂಸ್
Gruhalakshmi money-ದಸರಾ ಹಬ್ಬಕ್ಕೆ ಬಂಪರ್ – ಮಹಿಳೆಯರ ಖಾತೆಗೆ 23ನೇ ಕಂತಿನ ಗೃಹಲಕ್ಷ್ಮೀ ಹಣ – ಇನ್ನೆಷ್ಟು ಕಂತು ಬಾಕಿ ..?
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ದಸರಾ ಹಬ್ಬದ ಸಂಭ್ರಮಕ್ಕಾಗಿ 23ನೇ ಕಂತಿನ (ಜುಲೈ ತಿಂಗಳ) ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ದಸರಾ ಹಬ್ಬದ ಸಂಭ್ರಮಕ್ಕಾಗಿ 23ನೇ ಕಂತಿನ (ಜುಲೈ ತಿಂಗಳ) ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರಿನ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವೆ, ರಾಜ್ಯದ 1.24 ಕೋಟಿ ಫಲಾನುಭವಿಗಳಿಗೆ ಈವರೆಗೆ 22 ಕಂತುಗಳ ಹಣವನ್ನು ವಿತರಿಸಲಾಗಿದೆ. ದಸರಾ ಉತ್ಸವಕ್ಕೆ ಅನುಕೂಲವಾಗಲೆಂದು ಮೂರು ದಿನಗಳ ಹಿಂದೆ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ, 24ನೇ ಕಂತಿನ (ಆಗಸ್ಟ್ ತಿಂಗಳ) ಹಣವನ್ನು ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಹಂತ-ಹಂತವಾಗಿ ಹಣ ವರ್ಗಾವಣೆ
ಆರ್ಥಿಕ ಇಲಾಖೆಯಿಂದ ಜಿಲ್ಲಾ ಖಜಾನೆಗಳಿಗೆ ಮೂರು ದಿನಗಳ ಹಿಂದೆ ಹಣ ವರ್ಗಾವಣೆಯಾಗಿದ್ದು, ಒಂದರಿಂದ ಎರಡು ದಿನಗಳ ಅಂತರದಲ್ಲಿ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಲಿದೆ. ಈ ವಾರಾಂತ್ಯದೊಳಗೆ ಎಲ್ಲರಿಗೂ ಹಣ ತಲುಪಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೆ ಎಷ್ಟು ಹಣ ವಿತರಣೆ?
ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ 23 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಇದರಿಂದ ಪ್ರತಿ ಫಲಾನುಭವಿಗೆ ತಿಂಗಳಿಗೆ 2,000 ರೂ. ದರದಂತೆ ಒಟ್ಟು 46,000 ರೂ. ಸಂದಾಯವಾಗಿದೆ ಎಂದು ಸಚಿವೆ ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಯೋಜನೆ
ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಸರಿಯಾಗಿ ದೊರೆಯದಿರುವುದರಿಂದ ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳಲು ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಸಹಕಾರ ಸಂಘವನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಈ ಸಂಘದ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಿ, ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಪಂಚ ಗ್ಯಾರಂಟಿ ಯೋಜನೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ರೂಪಿತವಾದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಮಹಿಳೆಯರ ಜೀವನವನ್ನು ಸುಧಾರಿಸಿವೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸ್ವಾವಲಂಬನೆಯ ದೃಷ್ಟಿಕೋನದಿಂದ ಈ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಕೋಟ್ಯಂತರ ಮಹಿಳೆಯರು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ.
ದಸರಾ ಹಬ್ಬವು ಮಹಿಳೆಯರ ಸ್ವಾಭಿಮಾನ, ಸಮೃದ್ಧಿ ಮತ್ತು ಶಕ್ತಿಯ ಪ್ರತೀಕವಾಗಿದೆ ಎಂದು ಸಚಿವೆ ಹೇಳಿದರು. ದೇವಿಯ ಆರಾಧನೆಯ ಮೂಲಕ ಶಿಷ್ಟರ ರಕ್ಷಣೆ ಮತ್ತು ದುಷ್ಟರ ಸಂಹಾರವನ್ನು ಸಂಕೇತಿಸುವ ಈ ಹಬ್ಬವು ಸಾಂಸ್ಕೃತಿಕವಾಗಿ ಮಹಿಳೆಯರ ಪಾತ್ರವನ್ನು ಎತ್ತಿ ತೋರಿಸುತ್ತದೆ. ರಾಜ್ಯ ಸರ್ಕಾರವು ದಸರಾವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ ಎಂದು ಅವರು ತಿಳಿಸಿದರು.
ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ
ಐಸಿಡಿಎಸ್ ವ್ಯಾಪ್ತಿಯ ಅಂಗನವಾಡಿಗಳು ಐವತ್ತು ವರ್ಷಗಳನ್ನು ಪೂರೈಸಿವೆ. ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲು ಯೋಜನೆ ರೂಪಿಸಲಾಗಿದೆ. ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವೆ ತಿಳಿಸಿದರು.
ಬಿಗ್ ನ್ಯೂಸ್
Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ
ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.
ಪುತ್ತೂರು: ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.

ನವೆಂಬರ್ 24ರಂದು ಕಬಕ ಜಂಕ್ಷನ್‌ನಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂತರ್ ಮಂತರ್ ಪ್ರತಿಭಟನಾ ಧರಣಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಪ್ರಜಾಪ್ರಭುತ್ವದ ಮೂಲ ಆಶಯವಾದ ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅರ್ಹ ಮತದಾರರಿಗೆ ಯಾವುದೇ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಯಂಗ್ ಡೆಮಾಕ್ರಟ್ಸ್ ಕೇರಳ ರಾಜ್ಯ ಸಮಿತಿ ಸದಸ್ಯರಾದ ಅಹ್ಮದ್ ನಿಸಾರ್ ಮಾತನಾಡಿ, ಸಂಘಪರಿವಾರದ ರಾಜಕೀಯ ನಿಲುವುಗಳು ಹಾಗೂ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತು ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿದ ಅವರು, ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು.
SDPI ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಮಜೀದ್ ಖಾನ್ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಖಾತರಿಯಾಗಬೇಕು. ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಉಂಟಾಗಬಹುದಾದ ಲೋಪಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
WIM ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಮಾನವಾಗಿ ದೊರೆಯಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ಮತದಾನ ವಂಚನೆ, ಬೆಲೆ ಏರಿಕೆ ವಿರುದ್ಧ ಹೆನ್ರಿ ಡಿಸೋಜಾ ಆಕ್ರೋಶ:
SDTU ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಹೆನ್ರಿ ಡಿಸೋಜಾ ಮಾತನಾಡಿ, ಮತದಾನದ ಹಕ್ಕು ಕಸಿಯುವ ಹುನ್ನಾರ ನಡೆಯುತ್ತಿದ್ದು, ಹಕ್ಕಿಗಾಗಿ ಹೋರಾಡುವವರನ್ನು ಜೈಲಿಗೆ ಹಾಕುವ ಪ್ರಯತ್ನ ಖಂಡನೀಯ ಎಂದರು. ಮತದಾನ ವಂಚನೆಯ ಆರೋಪ ಹೊತ್ತಿರುವ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಮಾಜಸೇವಕ ಹರೇಕಳ ಹಾಜಬ್ಬ ಅವರಂತಹವರ ಹೆಸರೇ ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗಿದ್ದು, ಸುಮಾರು 13 ಕೋಟಿಗೂ ಅಧಿಕ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗಿರುವುದು ಆತಂಕಕಾರಿಯಾಗಿದೆ ಎಂದರು. ಇದೇ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಮತ್ತು ಪ್ರವೇಶ ಶುಲ್ಕ ವಸೂಲಾತಿಯ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಪುತ್ತೂರು ಕ್ಷೇತ್ರಾಧ್ಯಕ್ಷರಾದ ಅಶ್ರಫ್ ಬಾವು ವಹಿಸಿದ್ದರು.
ವೇದಿಕೆಯಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಮೀದ್ ಸಾಲ್ಮರ, SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲಕೆಮಜಲು, ಉಪಾಧ್ಯಕ್ಷ ಇನಾಸ್ ರೊಡ್ರಿಗಸ್, ಸದಸ್ಯ ಸಿದ್ದೀಕ್ ಅಲೆಕ್ಕಾಡಿ, ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಸದಸ್ಯರಾದ ಹಮ್ದಾ ಮೆಲ್ಕಾರ್, ಹಮೀದ್ ಪುತ್ತೂರು, SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯಿಲ್ ಕೆಮ್ಮಾಯಿ ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಸಿರಾಜ್ ಕೂರ್ನಡ್ಕ ಮತ್ತು ತಂಡ ಎಸ್‌ಐಆರ್ ವಿರೋಧಿ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆಗೆ ಧ್ವನಿಗೂಡಿಸಿದರು.
ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಪುತ್ತೂರು ನಗರ ಸಮಿತಿ ಅಧ್ಯಕ್ಷ ತಾಜುದ್ದೀನ್ ಸಾಲ್ಮರ ವಂದಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಕಾರ್ಯಕ್ರಮ ನಿರೂಪಿಸಿದರು.
ಬಿಗ್ ನ್ಯೂಸ್
Rain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ಪುತ್ತೂರು : ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಕೋಲಾರ ರಾಮನಗರ ಬೆಂಗಳೂರು ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ದ.ಕ. ಉಡುಪಿ ಉ.ಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆ ಬರುವ ಸಾಧ್ಯತೆ ಇದೆ. ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಹ್ಯುಮಿಡಿಟಿ ಕಡಿಮೆ ಆದರೇ ಮಳೆ ಪ್ರಮಾಣ ಕಡಿಮೆ ಆಗಿ ಮೋಡದ ವಾತಾವರಣ ಮುಂದುವರೆಯಬಹುದು ಎನ್ನಲಾಗಿದೆ. ನವೆಂಬರ್ 28 ತನಕ ಸಂಜೆ ಮೋಡ – ಮಳೆಯ ಸಾಧ್ಯತೆ ಮುಂದುವರೆಯಬಹುದು ಎಂದು ಹವಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಮಲೆನಾಡಿನಲ್ಲಿ ಸಂಜೆಯ ಮೋಡ ಬರಲಿದ್ದು ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು – ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 27 ತನಕ ಸಂಜೆ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ರಾಮನಗರ ಚಾಮರಾಜನಗರ ಮೈಸೂರು ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ತುಮಕೂರು ಚಿತ್ರದುರ್ಗ ದಾವಣಗೆರೆ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ನ 28 ರಿಂದ ಮಳೆ ಪೂರ್ತಿ ಕಡಿಮೆ ಆಗಬಹುದು.
ಉತ್ತರ ಒಳನಾಡಿನಲ್ಲಿ ಮೋಡದ ವಾತಾವರಣ ಬರಬಹುದು.ಬಳ್ಳಾರಿ ರಾಯಚೂರು ಹಾವೇರಿ ಗದಗ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ತುಂತುರು/ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೋಡ ಮಧ್ಯ ಕರ್ನಾಟಕ ಚಲಿಸುವ ಕಾರಣ ಒಂದೆರಡು ದಿನ ಸಣ್ಣ ಮಳೆಯಾಗಲಿದ್ದು ನಂತರ ಚಳಿ ಮುಂದುವರೆಯಬಹುದು.
ಬಂಗಾಳಕೊಲ್ಲಿಯಿಂದ ಬೀಸುವ ಪೂರ್ವದ ಮಾರುತಗಳಿಂದ ತಮಿಳುನಾಡು ಕೇರಳ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು ಮುಂದಿನ 3-4 ದಿನ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಡಿಸೆಂಬರ್ ಮೊದಲ ವಾರ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವಾಗಿ ದಕ್ಷಿಣ ಶ್ರೀಲಂಕಾ ಮೂಲಕ ಅರಬ್ಬೀಸಮುದ್ರದತ್ತ ಚಲಿಸುವ ಸಾಧ್ಯತೆಯೂ ಇದೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
-
ಸ್ಥಳೀಯ19 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಕಾರ್ಯಕ್ರಮಗಳು24 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ19 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಪರಾಧ23 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ23 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಅಂತರ ರಾಜ್ಯ19 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ19 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು17 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ















