Connect with us

ರಾಜಕೀಯ

Ashok Rai-ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ : ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Published

on



Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡ 94ಸಿ ಮತ್ತು 94ಸಿಸಿ ಕಡತ ಮರು ಪರಿಶೀಲಿಸಿ ಅರ್ಹರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯ‌ಸಚಿವ ಕೃಷ್ಣಬೈರೇಗೌಡರಿಗೆ ಬುಧವಾರ ಮನವಿ ಸಲ್ಲಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡ 94ಸಿ ಮತ್ತು 94ಸಿಸಿ ಕಡತ ಮರು ಪರಿಶೀಲಿಸಿ ಅರ್ಹರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯ‌ಸಚಿವ ಕೃಷ್ಣಬೈರೇಗೌಡರಿಗೆ ಬುಧವಾರ ಮನವಿ ಸಲ್ಲಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು
ಪುತ್ತೂರು ತಾಲೂಕಿನಲ್ಲಿ 94ಸಿ ಮತ್ತು 94ಸಿಸಿ ಯ ಸುಮಾರು 8420 ಕಡತ ಸರಿಯಾಗಿ ಪರಿಶೀಲನೆ ಮಾಡದೆ ಈ ಹಿಂದೆ ಕಡತವನ್ನು ರದ್ದು ಮಾಡಿರುತ್ತಾರೆ. ಪ್ರಸ್ತುತ ತಿರಸ್ಕೃತಗೊಂಡ ಅರ್ಜಿಗಳಲ್ಲಿ ಫಲಾನುಭವಿಗಳು ಮನೆ ನಿರ್ಮಾಣಗೊಂಡು ಎಲ್ಲಾ ದಾಖಲೆಗಳೊಂದಿಗೆ ವಾಸ ಮಾಡಿಕೊಂಡಿರುತ್ತಾರೆ. ಫಲಾನುಭವಿಗಳಿಗೆ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳಿಂದ ವಂಚಿರತಾಗಿರುತ್ತಾರೆ. ಇದರಿಂದಾಗಿ ಫಲಾನುಭವಿಗಳಿಗೆ ತುಂಬಾ ತೊಂದರೆಯಾಗಿರುತ್ತದೆ. ಆದ್ದುದರಿಂದ ತಿರಸ್ಕೃತಗೊಂಡ ಅರ್ಜಿಗಳನ್ನು ಮರುತನಿಖೆ ಮಾಡಿ ವಿಲೇ ಮಾಡಲು ಇಲಾಖೆಗೆ ಸೂಕ್ತ ನಿರ್ದೇಶನ ನೀಡಲು ಶೀಫಾರಸ್ಸು ಮಾಡುವಂತೆ ಶಾಸಕರು‌ಮನವಿ ಮಾಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Ad Widget

Ad Widget <> Ad Widget

ಸುಮಾರು 8420 94 ಸಿ ಮತ್ತು 94 ಸಿ ಸಿ ಅರ್ಜಿಗಳನ್ನು ಈ ಹಿಂದೆ ತಿರಸ್ಕೃತಗೊಳಿಸಿದ್ದಾರೆ‌ . ಅರ್ಜಿ ಹಾಕಿದ್ದ ಫಲಾನುಭವಿಗಳಿಗೆ ಮನೆ ಇದ್ದರೂ ಯಾಕೆ ತಿರಸ್ಕಾರ ಮಾಡಿದ್ದಾರೆ? ಬಡವರು ಕೇಳಿದ್ದು ಅವರು ಮನೆ ಕಟ್ಟಿ ವಾಸ್ತವ್ಯವಿರುವ ಮನೆಯ ಅಡಿಸ್ಥಳವನ್ನು ಅದನ್ನು ಯಾಕೆ ಕೊಡಲು ಸಾಧ್ಯವಾಗಿಲ್ಲ? ಎಲ್ಲಾ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸುವೆ



Ad Widget

ಅಶೋಕ್ ರೈ ಶಾಸಕರು,ಪುತ್ತೂರು

Click to comment

Leave a Reply

ಅಂತರ ರಾಜ್ಯ

March to Supreme Court-ಮತಗಳವು ಆರೋಪ: ಇಂಡಿಯಾ ಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ

Published

on



Ad Widget

Ad Widget

Ad Widget

Ad Widget

ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಯೋಜಿಸಿರುವ ಪೊಲೀಸರ ಸಂಖ್ಯೆಯನ್ನು ನೋಡಿದರೆ ಕೇಂದ್ರ ಸರ್ಕಾರದ ಆತಂಕ ಅರ್ಥವಾಗುತ್ತದೆ ಎಂದೂ ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಇಂಡಿಯಾ ಕೂಟದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಇತರ ಸಂಘಟನೆಗಳಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.



Ad Widget

ಶನಿವಾರ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೇಶದ ವಿವಿಧ ಭಾಗಗಳಿಂದ ಯುವಕರು ಆಗಮಿಸಿದ್ದರು. ಆದರೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಮಗೆ ಬೇಕಿರುವುದು ಇಂತಹ ಭಾರತವಲ್ಲ” ಎಂದು ಅವರು ಹೇಳಿದ್ದಾರೆ.

Continue Reading

ಸ್ಥಳೀಯ

Sharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ

Published

on



Ad Widget

Ad Widget

Ad Widget

Ad Widget

ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget

Ad Widget

Ad Widget

Ad Widget

ಶರವೂರು: ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಲಂಕಾರು ಸಮೀಪದಲ್ಲಿರುವ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ನಾಡಿನ ಪ್ರಸಿದ್ಧ ಶಕ್ತಿಕ್ಷೇತ್ರಗಳಲ್ಲಿ ಒಂದಾಗಿದ್ದು, ನವರಾತ್ರಿ ಉತ್ಸವವನ್ನು ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ವೈಭವದಿಂದ ಆಚರಿಸುವ ಕ್ಷೇತ್ರವೆಂಬ ಖ್ಯಾತಿಯನ್ನು ಹೊಂದಿದೆ. ನವರಾತ್ರಿಯ ಸಂದರ್ಭದಲ್ಲಿ ದೇವಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಕುಮಾರಿ ಶೋಭಾ ಕರಂದ್ಲಾಜೆ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭಿಕ್ಷೆ, ಜನರ ಕಲ್ಯಾಣ ಹಾಗೂ ಲೋಕಶಾಂತಿಗಾಗಿ ಪ್ರಾರ್ಥಿಸಿದರು.



Ad Widget

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟ ಗಣ್ಯರು ಉಪಸ್ಥಿತರಿದ್ದರು.

Continue Reading

ಅಂತರ ರಾಜ್ಯ

By-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ

Published

on



Ad Widget

Ad Widget

Ad Widget

Ad Widget

ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ ಸೆಳೆದಿದೆ. ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪಶ್ಚಿಮ ಬಂಗಾಳದ ರೇಜಿನಗರ ಮತ್ತು ನಂದಿಗ್ರಾಮ, ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ಹಾಗೂ ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರ ಜತೆಗೆ ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ನಡೆದಿತ್ತು. ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಲವು ಕ್ಷೇತ್ರಗಳಲ್ಲಿ ಫಲಿತಾಂಶದ ಚಿತ್ರಣ ಸ್ಪಷ್ಟವಾಗಿದ್ದರೂ ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಬಾಕಿಯಿದೆ.

Ad Widget

Ad Widget <> Ad Widget

ನಾಗೌನ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರವು ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರದ್ಯುತ್ ಬೊರ್ದೊಲೊಯಿ ಅವರು ಬಿಜೆಪಿ ಅಭ್ಯರ್ಥಿ ಸುರೇಶ್ ಬೋರಾ ವಿರುದ್ಧ 2,12,231 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.



Ad Widget

ಬಳಿಕ ಪ್ರದ್ಯುತ್ ಬೊರ್ದೊಲೊಯಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಿಸ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ನಾಗೌನ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು.

Ad Widget

Ad Widget

ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ಅಭ್ಯರ್ಥಿ ದೇವಶಿಸ್ ಶರ್ಮಾ ಅವರು ಎಐಯುಡಿಎಫ್ ಅಭ್ಯರ್ಥಿ ಬದ್ರುದ್ದೀನ್ ಅಜ್ಮಲ್ ವಿರುದ್ಧ ಸುಮಾರು 1.2 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಬಾಮಣಿ ಬೋರಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿ ಪೈಪೋಟಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ ಸುಮಾರು 1.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಇನ್ನು ರೇಜಿನಗರ ಕ್ಷೇತ್ರದಲ್ಲಿ ಸಖಾರವ್ ಸರ್ಕಾರ್ ಅವರು ಎಜೆಯುಪಿ ಅಭ್ಯರ್ಥಿ ಗೋಲಂ ನಬಿ ಆಜಾದ್ ವಿರುದ್ಧ ಸುಮಾರು 38 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿಯೂ ಮತ ಎಣಿಕೆಯ ಬೆಳವಣಿಗೆಗಳ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.

ತಮಿಳುನಾಡಿನಲ್ಲಿ ಟಿವಿಕೆ ಅಭ್ಯರ್ಥಿಗಳಿಗೆ ಮುನ್ನಡೆ
ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಮಧುರಂಟಕಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಮರಗತಂ ಕುಮಾರವೇಲು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಮಾರು 6 ಸಾವಿರ ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಎಐಎಡಿಎಂಕೆ ಅಭ್ಯರ್ಥಿಯಾಗಿದ್ದ ಅವರು, ನಂತರ ಟಿವಿಕೆ ಸೇರಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಸುಮಾರು 9,600 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯಭಾಮಾ, ಡಿಎಂಕೆ ಅಭ್ಯರ್ಥಿ ಟಿ. ಇಂದಿರಾಣಿ ವಿರುದ್ಧ 16,727 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.

ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವು
ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಆನಂದ್ ಅವರು ಕಾಂಗ್ರೆಸ್ ಅಭ್ಯರ್ಥಿ ಇ. ವಿನಾಯಗಂ ವಿರುದ್ಧ 8,482 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.

ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ತಟ್ಟನಚಾವಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಉಪಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳ ಮೇಲೆ ಇದರ ಪರಿಣಾಮದ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading