ಸುಳ್ಯ
ಮಾಣಿ – ಮೈಸೂರು ಹೈವೆಯ ಸುಳ್ಯದ ಅರಂಬೂರಿನಲ್ಲಿ ‘ರಸಪಾಕ ಗ್ರೂಪ್ಸ್’ನ ನೂತನ ಸಸ್ಯಹಾರಿ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್’ ಶುಭಾರಂಭ: ದೇಶದ ವಿವಿಧ ನಗರಗಳಲ್ಲಿ ಹೋಟೆಲ್ ಉದ್ಯಮವನ್ನು ಬೆಳೆಸಿದ ಕೀರ್ತಿ ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಸಲ್ಲುತ್ತದೆ – ಎಡನೀರು ಶ್ರೀ

ಸುಳ್ಯ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸುಳ್ಯ ಸಮೀಪ ಅರಂಬೂರಿನಲ್ಲಿ ಉದ್ಯಮಿಗಳಾದ ನಾರಾಯಣ ಕೇಕಡ್ಕ ಹಾಗೂ ಕೃಷ್ಣ ಕಾಮತ್ ಅವರ ಪಾಲುದಾರಿಕೆಯ ‘ರಸಪಾಕ ಗ್ರೂಪ್ಸ್ನ’ ವತಿಯಿಂದ ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್’ ಉದ್ಘಾಟನೆಗೊಂಡಿತು.
ದೀಪ ಬೆಳಗಿಸಿ ಉದ್ಘಾಟಿಸಿದ ಕಾಸರಗೋಡು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ , ಮನುಷ್ಯನ ಬುದುಕಿಗೆ ಗಾಳಿ, ನೀರು, ಆಹಾರ ಅತೀ ಅಗತ್ಯ. ಆಧುನಿಕ ಬದುಕಿನಲ್ಲಿ ಆಹಾರ ಸೇವೆನೆಗೆ ಉಪಹಾರ ಗೃಹ, ಹೋಟೆಲ್ಗಳನ್ನು ಅವಲಂಬಿಸಬೇಕಾಗಿ ಬರುವುದು ಸಹಜ. ಆದುದರಿಂದ ಮನುಷ್ಯನ ಆರೋಗ್ಯ ಕಾಪಾಡುವ ರುಚಿ, ಶುಚಿಯಾದ ಗುಣಮಟ್ಟದ ಆಹಾರವನ್ನು ನೀಡುವ ಉಪಾಹಾರ ಗೃಹಗಳು ಅನಿವಾರ್ಯ ಎಂದು ಕಾಸರಗೋಡು ಎಡನೀರು ಮಠಾಧೀಶರಾದ ಶ್ರೀಗಳು ಹೇಳಿದರು.
ಶುಚಿ,ರುಚಿಯಾದ ಆಹಾರವನ್ನು ನೀಡುವ ಮೂಲಕ ಗ್ರಾಹಕರ ಆರೋಗ್ಯವನ್ನು ಕಾಪಾಡಿಕೊಂಡು ಜನರ ಪ್ರೀತಿ ವಿಶ್ವಾಸವನ್ನು ಗಳಿಸಬೇಕು ಆ ಮೂಲಕ ಯಶಸ್ಸಿನ ಮೆಟ್ಟಿಲೇರಬೇಕು ಎಂದ ಅವರು ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಹೋಟೆಲ್ ಉದ್ಯಮವನ್ನು ಬೆಳೆಸಿದ ಕೀರ್ತಿ ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಇದೆ. ಅದೇ ರೀತಿ ಬೆಳೆಯುತ್ತಿರುವ ಸುಳ್ಯಕ್ಕೆ ಈ ರೀತಿಯ ಅತ್ಯುತ್ತಮ ಉಪಾಹಾರ ಗೃಹ ಅತೀ ಅಗತ್ಯವಿತ್ತು ಎಂದು ಅವರು ಹೇಳಿದರು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರಿಬ್ಬನ್ ಕತ್ತರಿಸಿ ಹೋಟೆಲ್ ಲೋಕಾರ್ಪಣೆ ಮಾಡಿದರು.
ಹವಾನಿಯಂತ್ರಿತ ಕೊಠಡಿಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಕುಂಟಾರು ರವೀಶ ತಂತ್ರಿ ಹಾಗೂ ದೇಲಂಪಾಡಿ ಗಣೇಶ್ ತಂತ್ರಿಯವರು ಆಶೀರ್ವಚನ ನೀಡಿದರು. ಹೋಟೆಲ್ನ ಪಾಲುದಾರರಾದ ಉದ್ಯಮಿ ಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಅಂಗಾರ, ಕಾಸರಗೋಡು ಕಾಮತ್ ಮೆಡಿಕಲ್ ಸೆಂಟರ್ನ ಡಾ. ಅನಂತ್ ಕಾಮತ್, ಪದ್ಮಶ್ರೀ ಪುರಸ್ಕೃತ ರಾದ ಡಾ.ಗಿರೀಶ್ ಭಾರದ್ವಾಜ್, ಆರ್.ಎಸ್.ಎಸ್. ಕರ್ನಾಟಕ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನ.ಸೀತಾರಾಮ, ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ, ಜಿ.ಪಂ. ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷೆ ವೀಣಾ ವಸಂತ್, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ,ಎಸ್.ಸಂಶುದ್ದೀನ್, ಲಯನ್ಸ್ ಮಾಜಿ ಗವರ್ನರ್ ಎಂ.ಬಿ.ಸದಾಶಿವ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ರಾಮ್ ಮೋಹನ್, ಆಲೆಟ್ಟಿ ಗ್ರಾ.ಪಂ. ಸದಸ್ಯರಾದ ಸುದೇಶ್ ಅರಂಬೂರು, ಪುಷ್ಪಾವತಿ ಕುಡೆಕಲ್ಲು, ಅನಿತಾ ಇಡ್ಯಡ್ಕ ಭಾಗವಹಿಸಿದ್ದರು.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಸ್ಥಳೀಯ20 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ20 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ20 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ20 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು18 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್21 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್20 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
-
ಅಂತರ ರಾಜ್ಯ21 hours agoRBI-ಡಿಜಿಟಲ್ ವಂಚನೆಗೆ ಆರ್ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!















