ಕಾರ್ಯಕ್ರಮಗಳು
Puttur-ಪಿಲಿಗೊಬ್ಬು ಸೀಸನ್-3: ಸೆ. 27, 28: ಸಾಂಸ್ಕೃತಿಕ ಸಡಗರ, ಜಾನಪದ ಕಲೆಯ ವೈಭವ, ಮತ್ತು ಬಾಯಿ ನೀರೂರಿಸುವ ಖಾದ್ಯಗಳ ಚಿತ್ತಾರಕ್ಕೆ ಪುತ್ತೂರು ಸಜ್ಜು – ಬಹುಮಾನಗಳ ಸುರಿಮಳೆ!
ಸಾಂಸ್ಕೃತಿಕ ಸಡಗರ, ಜಾನಪದ ಕಲೆಯ ವೈಭವ, ಮತ್ತು ಬಾಯಿ ನೀರೂರಿಸುವ ಖಾದ್ಯಗಳ ಚಿತ್ತಾರಕ್ಕೆ ಪುತ್ತೂರು ಸಜ್ಜಾಗಿದೆ. ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಆಶ್ರಯದಲ್ಲಿ, ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ‘ಪುತ್ತೂರು ಫುಡ್ ಫೆಸ್ಟ್’ ಮತ್ತು ‘ಪಿಲಿಗೊಬ್ಬು ಸೀಸನ್-3’ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ.
ಪುತ್ತೂರು: ಸಾಂಸ್ಕೃತಿಕ ಸಡಗರ, ಜಾನಪದ ಕಲೆಯ ವೈಭವ, ಮತ್ತು ಬಾಯಿ ನೀರೂರಿಸುವ ಖಾದ್ಯಗಳ ಚಿತ್ತಾರಕ್ಕೆ ಪುತ್ತೂರು ಸಜ್ಜಾಗಿದೆ. ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಆಶ್ರಯದಲ್ಲಿ, ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ‘ಪುತ್ತೂರು ಫುಡ್ ಫೆಸ್ಟ್’ ಮತ್ತು ‘ಪಿಲಿಗೊಬ್ಬು ಸೀಸನ್-3’ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ. ಧಾರ್ಮಿಕ ಮತ್ತು ಜಾನಪದ ಹಿನ್ನೆಲೆಯ ಈ ಕಾರ್ಯಕ್ರಮಗಳು ಕಳೆದ ಎರಡು ವರ್ಷಗಳಂತೆ ಈ ಬಾರಿಯೂ ಯಶಸ್ಸಿನ ನಿರೀಕ್ಷೆಯಲ್ಲಿವೆ.
ಫುಡ್ ಫೆಸ್ಟ್ ಉದ್ಘಾಟನೆ: ವಿಶಿಷ್ಟ ಖಾದ್ಯಗಳ ರಸದೌತಣ!
ಸೆಪ್ಟೆಂಬರ್ 27ರಂದು ಸಂಜೆ 4 ಗಂಟೆಗೆ ‘ಪುತ್ತೂರು ಫುಡ್ ಫೆಸ್ಟ್’ಗೆ ಚಾಲನೆ ದೊರೆಯಲಿದೆ. ಮುಳಿಯ ಜ್ಯುವೆಲ್ಲರ್ಸ್ನ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಅವರು ಫುಡ್ ಫೆಸ್ಟ್ ಉದ್ಘಾಟಿಸಿದರೆ, ಭಟ್ ಆಂಡ್ ಭಟ್ ಯೂಟ್ಯೂಬ್ ಚಾನೆಲ್ನ ಸುದರ್ಶನ್ ಭಟ್ ಬೆದ್ರಾಡಿ ಅವರು ಆಹಾರ ಮಳಿಗೆಗಳಿಗೆ ಚಾಲನೆ ನೀಡಲಿದ್ದಾರೆ.
ಇಲ್ಲಿ 45ಕ್ಕೂ ಹೆಚ್ಚು ಆಹಾರ ಮಳಿಗೆಗಳು ಇರಲಿದ್ದು, ಬರ್ಗರ್, ಸ್ಯಾಂಡ್ವಿಚ್, ವಿವಿಧ ದೋಸೆಗಳು, ಐಸ್ಕ್ರೀಮ್ಗಳು, ಮೋಕ್ಟೈಲ್ ಜ್ಯೂಸ್, ಮಟ್ಕಾ ಸೋಡಾ, ಕರಾವಳಿಯ ರುಚಿಕರ ಖಾದ್ಯಗಳು ಸೇರಿದಂತೆ ಹಲವು ವಿಶಿಷ್ಟ ಆಹಾರಗಳು ಲಭ್ಯವಿರಲಿವೆ. ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, 13 ಜನರ ತಂಡವು ನಿರಂತರವಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಲಿದೆ.
ಪಿಲಿಗೊಬ್ಬು ಸೀಸನ್-3: ಹುಲಿವೇಷದ ಅಬ್ಬರ!
ಸೆಪ್ಟೆಂಬರ್ 28ರಂದು ಬೆಳಿಗ್ಗೆ 10:30ಕ್ಕೆ ಪಿಲಿಗೊಬ್ಬು ಸೀಸನ್-3 ಕಾರ್ಯಕ್ರಮಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಸರಸ್ವತಿ ಶ್ರೀಪಾದಂಗಳವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ ಆಚಾರ್ಯ ಅವರು ಪಿಲಿಗೊಬ್ಬು ಉದ್ಘಾಟಿಸಿದರೆ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ವೇದಿಕೆ ಉದ್ಘಾಟಿಸಲಿದ್ದಾರೆ.
ಗಣ್ಯರು ಹಾಗೂ ತಾರಾಗಣದ ಮೆರುಗು:
ಸಂಜೆ 4:30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶಶಿಕ್ಯಾಟರಿಂಗ್ ಬರೋಡದ ಶಶಿಧರ್ ಶೆಟ್ಟಿ, ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್ ಭಟ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕೋಸ್ಟಲ್ವುಡ್ ಮತ್ತು ಕನ್ನಡ ಚಿತ್ರರಂಗದ ಹೆಸರಾಂತ ನಟ-ನಟಿಯರು ಈ ಕಾರ್ಯಕ್ರಮದ ಆಕರ್ಷಣೆಯ ಕೇಂದ್ರವಾಗಲಿದ್ದಾರೆ. ಬಿಗ್ಬಾಸ್ ಖ್ಯಾತಿಯ ತ್ರಿವಿಕ್ರಮ್, ಧನ್ರಾಜ್ ಆಚಾರ್ಯ, ಸೀರಿಯಲ್ ನಟಿ ವೈಷ್ಣವಿ, ‘ಸೂ ಫ್ರಮ್ ಸೋ’ ಚಿತ್ರದ ನಾಲ್ವರು ನಟರು ಸೇರಿದಂತೆ ಇನ್ನೂ ಹಲವು ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ.
ಪಿಲಿಗೊಬ್ಬು ಸ್ಪರ್ಧೆ: ಬಹುಮಾನಗಳ ಸುರಿಮಳೆ!
ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 8 ಆಯ್ದ ಹುಲಿವೇಷ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ಪ್ರಥಮ ಬಹುಮಾನ ₹3 ಲಕ್ಷ, ದ್ವಿತೀಯ ಬಹುಮಾನ ₹2 ಲಕ್ಷ, ತೃತೀಯ ಬಹುಮಾನ ₹1 ಲಕ್ಷ ಹಾಗೂ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ಪ್ರತಿ ತಂಡಕ್ಕೆ ₹50,000 ಗೌರವ ಸಂಭಾವನೆಯೂ ಇರಲಿದೆ.
ಸಮಗ್ರ ತಂಡ ಪ್ರಶಸ್ತಿ (ಉತ್ತಮ ತಾಸೆ, ಬಣ್ಣ, ಧರಣಿ ಮಂಡಲ ಕುಣಿತ) ಹಾಗೂ ವೈಯಕ್ತಿಕ ಪ್ರಶಸ್ತಿಗಳಾದ ಕಪ್ಪು ಹುಲಿ, ಮರಿ ಹುಲಿ, ಪುತ್ತೂರುದ ಹುಲಿ, ಮುಡಿ ಹಾರಿಸುವಿಕೆ, ನಾಣ್ಯ ತೆಗೆಯುವಿಕೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುವುದು. ಪಂದ್ಯಶ್ರೇಷ್ಠ ‘ಪುತ್ತೂರುದ ಪಿಲಿ’ ಮತ್ತು ‘ಕಪ್ಪು ಹುಲಿ’ಗೆ ₹10,000 ನಗದು ಮತ್ತು ಎಲ್ಇಡಿ ಟಿವಿ ಬಹುಮಾನವಾಗಿ ಲಭಿಸಲಿದೆ. ಪ್ರತಿ ತಂಡದಲ್ಲಿ 15 ಹುಲಿವೇಷ ಕಲಾವಿದರಿರಲಿದ್ದು, 22+1 ನಿಮಿಷಗಳ ಕಾಲ ಕುಣಿತ ಪ್ರದರ್ಶನಕ್ಕೆ ಅವಕಾಶವಿರುತ್ತದೆ. ಜಿಲ್ಲೆಯ ಖ್ಯಾತ ತೀರ್ಪುಗಾರರು ಪ್ರದರ್ಶನವನ್ನು ಮೌಲ್ಯಮಾಪನ ಮಾಡಲಿದ್ದಾರೆ.
ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸಮಾಜಮುಖಿ ಕಾರ್ಯಗಳು:
2020ರಲ್ಲಿ ಸ್ಥಾಪನೆಯಾದ ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್, ಕೋವಿಡ್ ಸಂದರ್ಭದಲ್ಲಿ 5,000 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ, ಗೃಹರಹಿತರಿಗೆ ಮನೆ ನಿರ್ಮಾಣ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಪುತ್ತೂರಿನಲ್ಲಿ ಗುರುತಿಸಿಕೊಂಡಿದೆ. ಪ್ರತಿ ವರ್ಷ ಒಂದು ಮನೆಯನ್ನು ನಿರ್ಮಿಸಿ ಬಡವರಿಗೆ ಹಸ್ತಾಂತರಿಸಲಾಗುತ್ತಿದ್ದು, ಈಗಾಗಲೇ 3 ಮನೆಗಳು ವಿತರಣೆಯಾಗಿವೆ.
ಪತ್ರಿಕಾಗೋಷ್ಠಿಯಲ್ಲಿ ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷ ಸುಜಿತ್ ರೈ ಪಾಲ್ತಾಡ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೆಲು, ಉಪಾಧ್ಯಕ್ಷ ರತನ್ ರೈ ಕುಂಬ್ರ ಉಪಸ್ಥಿತರಿದ್ದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.
ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.
ಅಶೋಕ್ ರೈಗೆ ವಿಶೇಷ ಸನ್ಮಾನ
ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.
ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.
ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.
-
ಪುತ್ತೂರು21 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು24 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್23 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ24 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ22 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ23 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ23 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
-
ಶಿಕ್ಷಣ24 hours agoPhilomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ


















