ಬಿಗ್ ನ್ಯೂಸ್
Chinnayya PIL | ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನಾ ಸುಪ್ರೀಂ ಕೋರ್ಟ್ ಕದ ತಟ್ಟಿದ್ದ ಅನಾಮಿಕ ದೂರುದಾರ – ಪಿಐಎಲ್ ವಜಾಗೊಳಿಸಿದ್ದ ನ್ಯಾಯಾಲಯ
ಹೊಸದಿಲ್ಲಿ, ಸೆ 25: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ಸಾಕ್ಷಿದಾರ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನಾ ಭಾರತದ ಸರ್ವೊಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (Chinnayya PIL) ಸಲ್ಲಿಸಿದ್ದ ಮತ್ತು ಅದನ್ನು ನ್ಯಾಯಾಲಯವು ವಿಳಂಬ ಮತ್ತು ನಿರ್ಲಕ್ಷ್ಯದ ಕಾರಣಕ್ಕೆ ವಜಾ ಮಾಡಿರುವುದಾಗಿ ತಡವಾಗಿ ತಿಳಿದು ಬಂದಿದೆ. ಅರ್ಜಿದಾರ 20 ವರ್ಷಗಳಷ್ಟು ಹಳೆಯ ವಿಷಯದ ಬಗ್ಗೆ 2025ರಲ್ಲಿ ಕ್ರಿಮಿನಲ್ ರಿಟ್ ಅರ್ಜಿ (ಸಂಖ್ಯೆ 184/2025) ಸಲ್ಲಿಸಿದ ಹಿನ್ನಲೆಯಲ್ಲಿ ನ್ಯಾಯಮೂರ್ತಿಗಳಾದ ಬಿ. ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು.
ರಿಟ್ ಅರ್ಜಿ ವಜಾಗೊಳಿಸಲು ಈ ಕೇಳಗಿನ ಕಾರಣಗಳನ್ನು ನ್ಯಾಯಾಪೀಠ ನೀಡಿತ್ತು. ಈ ವೇಳೆ ಅರ್ಜಿದಾರರು 1995-2004ರ ಅವಧಿಗೆ ಸಂಬಂಧಿಸಿದ ವಿಷಯದ ಬಗ್ಗೆ 2025ರಲ್ಲಿ ಅರ್ಜಿ ಸಲ್ಲಿಸಿದ್ದರು. ಈ 20 ವರ್ಷಗಳ ವಿಳಂಬ ಮತ್ತು ನಿರ್ಲಕ್ಷ್ಯದ ಕಾರಣದಿಂದ ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಪರಿಗಣಿಸದೆ ನೇರವಾಗಿ ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
• ಪರಿಹಾರಗಳ ಅಸಾಧ್ಯತೆ: ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸಲ್ಲಿಸಿದ ಈ ಅರ್ಜಿಯಲ್ಲಿ ಕೋರಿರುವ ಪರಿಹಾರಗಳನ್ನು ನೀಡಲು ಸಾಧ್ಯವಿಲ್ಲ. ಅರ್ಜಿದಾರರು ಯಾವುದೇ ಪ್ರಥಮ ಮಾಹಿತಿ ವರದಿಯನ್ನು (FIR) ದಾಖಲಿಸಿಲ್ಲ ಅಥವಾ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.
ನಿಷ್ಪ್ರಯೋಜಕ ಅರ್ಜಿ: ಪ್ರತಿವಾದಿಗಳ ವಿರುದ್ಧ ಯಾವುದೇ ಪರಿಹಾರವನ್ನು ಕೋರದ ಕಾರಣ, ಅರ್ಜಿಯ ಸಲ್ಲಿಕೆಯು ‘ನಿಷ್ಪ್ರಯೋಜಕ’ ಎಂದು ನ್ಯಾಯಾಲಯ ಹೇಳಿದೆ.
• ಗುರುತು ಗೋಪ್ಯತೆ: ಅರ್ಜಿದಾರರ ವಕೀಲರ ಮನವಿಯಂತೆ, ಅರ್ಜಿದಾರರ ಗುರುತನ್ನು (XXXX) ಬಹಿರಂಗಪಡಿಸದೆ, ಅವರ ಆಧಾರ್ ಪ್ರತಿ ಮತ್ತು ಅಫಿಡವಿಟ್ ಅನ್ನು ಮೊಹರು ಮಾಡಿದ ಲಕೋಟೆಯಲ್ಲಿ ಸ್ವೀಕರಿಸಲಾಗಿದೆ.
• PIL ಹೆಸರಿನ ದುರುಪಯೋಗಕ್ಕೆ ತರಾಟೆ: “ಈ ರಿಟ್ ಅರ್ಜಿಯನ್ನು ಕೇವಲ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (PIL) ಎಂದು ಕರೆಯುವುದು ಅದರ ಉದಾತ್ತ ಉದ್ದೇಶವನ್ನು ಹಾಳುಮಾಡುತ್ತದೆ. ನಿಜವಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಎಂದರೆ ಕೇವಲ “ಪ್ರಚಾರ ಹಿತಾಸಕ್ತಿ ಮೊಕದ್ದಮೆ”, “ಪೈಸಾ ಹಿತಾಸಕ್ತಿ ಮೊಕದ್ದಮೆ”, “ಖಾಸಗಿ ಹಿತಾಸಕ್ತಿ ಮೊಕದ್ದಮೆ” ಅಥವಾ “ರಾಜಕೀಯ ಹಿತಾಸಕ್ತಿ ಮೊಕದ್ದಮೆ” ಆಗಿರಬಾರದು,” ಎಂದು ನ್ಯಾಯಾಲಯ ಹೇಳಿತ್ತು.
ಬಿಗ್ ನ್ಯೂಸ್
Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಂಗಳೂರು
ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.
ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.
ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.
ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.
ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.
ಮಂಗಳೂರು
Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
-
ಅಂತರ ರಾಜ್ಯ13 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು7 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್13 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಬಿಗ್ ನ್ಯೂಸ್8 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ10 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ10 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ13 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ10 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್