Connect with us

ಸ್ಥಳೀಯ

S.L. Bhyrappa-ಸಾಹಿತಿ ಸಹನಾ ಅಂತ್ಯಕ್ರಿಯೆ ನಡೆಸಲಿ- ನನ್ನ ಗಂಡು ಮಕ್ಕಳು ಅಂತ್ಯಕ್ರಿಯೆ ನಡೆಸುವುದು ಬೇಡ : ಎಸ್‌ ಎಲ್‌ ಬೈರಪ್ಪ ವಿಲ್‌ ಗೊಂದಲ

Published

on



Ad Widget

Ad Widget

Ad Widget

Ad Widget

ಕನ್ನಡದ ಮೇರು ಸಾಹಿತಿ ಎಸ್‌ಎಲ್‌ ಭೈರಪ್ಪ (94) ಅವರು ಬುಧವಾರ ಹೃದಯ ಸ್ತಂಭನದಿಂದ ನಿಧನರಾದ ನಂತರ, ಅವರು ತಮ್ಮ ಇಬ್ಬರು ಪುತ್ರರಾದ ಉದಯಶಂಕರ್‌ ಮತ್ತು ರವಿಶಂಕರ್‌ ಅವರಿಗೆ ತಮ್ಮ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಬಾರದೆಂದು ಬರೆದಿದ್ದರು ಎನ್ನಲಾದ ವಿಲ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Ad Widget

Ad Widget

Ad Widget

Ad Widget

ಕನ್ನಡದ ಮೇರು ಸಾಹಿತಿ ಎಸ್‌ಎಲ್‌ ಭೈರಪ್ಪ (94) ಅವರು ಬುಧವಾರ ಹೃದಯ ಸ್ತಂಭನದಿಂದ ನಿಧನರಾದ ನಂತರ, ಅವರು ತಮ್ಮ ಇಬ್ಬರು ಪುತ್ರರಾದ ಉದಯಶಂಕರ್‌ ಮತ್ತು ರವಿಶಂಕರ್‌ ಅವರಿಗೆ ತಮ್ಮ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಬಾರದೆಂದು ಬರೆದಿದ್ದರು ಎನ್ನಲಾದ ವಿಲ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಭೈರಪ್ಪನವರು ಕಳೆದ ಜೂನ್‌ 18, 2025ರಂದು ತಮ್ಮ ಉಯಿಲಿನಲ್ಲಿ ತಿದ್ದುಪಡಿ ಮಾಡಿದ್ದರು ಎಂದು ಫಣೀಶ್‌ ಎಂಬ ಅವರ ಅಭಿಮಾನಿ ಮೈಸೂರಿನ ಕಲಾಮಂದಿರದಲ್ಲಿ ಬಹಿರಂಗಪಡಿಸಿದ್ದಾರೆ. ಆದರೆ, ಈ ಪ್ರದರ್ಶನದ ಬೆನ್ನಲ್ಲೇ ಪೊಲೀಸರು ಫಣೀಶ್‌ ಅವರನ್ನು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಯಿಲಿನ ತಿದ್ದುಪಡಿ ವಿವರ
ಭೈರಪ್ಪನವರು 2022ರ ಮಾರ್ಚ್‌ 15ರಂದು ಮಾಡಿದ ಉಯಿಲನ್ನು 2025ರ ಜನವರಿ 30ರಂದು ತಿದ್ದುಪಡಿ ಮಾಡಲು ಬಯಸಿದ್ದರು ಮತ್ತು ಫೆಬ್ರವರಿ 10, 2025ರಂದು ಅದನ್ನು ನೋಂದಾಯಿಸಿದ್ದರು. ಕುಟುಂಬದ ಕೆಲವು ಘಟನೆಗಳು, ವಿಶೇಷವಾಗಿ ಅವರ ಪತ್ನಿ ಬಿಎಸ್‌ ಸರಸ್ವತಿ ಮತ್ತು ಪುತ್ರರಾದ ರವಿಶಂಕರ್‌ ಹಾಗೂ ಉದಯಶಂಕರ್‌ ಅವರು ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ದಾಖಲಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಈ ತಿದ್ದುಪಡಿ ಮಾಡಲಾಯಿತು. ಅವರು ಭೈರಪ್ಪನವರ ಬುದ್ಧಿಮತ್ತೆ ಮತ್ತು ಸ್ಮರಣಶಕ್ತಿ ಕ್ಷೀಣಿಸುತ್ತಿದೆ ಎಂದು ಆರೋಪಿಸಿ, ತಮ್ಮನ್ನು ಪೋಷಕರನ್ನಾಗಿ ನೇಮಿಸಬೇಕೆಂದು ಕೋರಿದ್ದರು. ಇದಕ್ಕೆ ಭೈರಪ್ಪನವರು ಸ್ವಯಂ ಇಚ್ಛೆಯಿಂದ ಪ್ರತಿವಾದಿಯಾಗಿ ಹಾಜರಾಗಿ ಉತ್ತರಿಸಿದ್ದರು. ಈ ಕಾರಣದಿಂದ, 2025ರ ಜನವರಿ 30ರ ಉಯಿಲಿನ ತಿದ್ದುಪಡಿಯ ಕೆಲವು ಅಂಶಗಳನ್ನು ಮತ್ತೆ ಸರಿಪಡಿಸಲು ಈ ಹೊಸ ಉಯಿಲಿನ ತಿದ್ದುಪಡಿಯನ್ನು ರಚಿಸಿದ್ದಾರೆ.
ಉಯಿಲಿನ ಪ್ರಮುಖ ಅಂಶಗಳು

Ad Widget

Ad Widget <> Ad Widget

ಪುತ್ರನ ಕೊಡುಗೆ ರದ್ದು:
ಉದಯಶಂಕರ್‌ಗೆ ನೀಡಿದ್ದ 50 ಲಕ್ಷ ರೂಪಾಯಿಗಳ ಕೊಡುಗೆಯನ್ನು ರದ್ದುಗೊಳಿಸಲಾಗಿದೆ, ಆ ಮೂಲಕ ಆತನಿಗೆ ಈ ಹಣವನ್ನು ನಗದೀಕರಿಸಿಕೊಳ್ಳುವ ಅಧಿಕಾರವನ್ನು ಹಿಂಪಡೆಯಲಾಗಿದೆ.



Ad Widget

ಅಂತ್ಯಸಂಸ್ಕಾರದ ನಿರ್ದೇಶನ:
ಭೈರಪ್ಪನವರ ಪಾರ್ಥಿವ ಶರೀರಕ್ಕೆ ಹಿಂದೂ ಧರ್ಮಶಾಸ್ತ್ರದಂತೆ ಅಂತ್ಯಸಂಸ್ಕಾರ ನಡೆಸಬೇಕು. ಅವರ ಶರೀರವನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತಶಿವರ ಗ್ರಾಮಕ್ಕೆ ಕೊಂಡೊಯ್ದು ವಿಧಿವತ್ತಾಗಿ ಸಂಸ್ಕಾರ ಮಾಡಬೇಕು. ಈ ಕಾರ್ಯವನ್ನು ಬೆಂಗಳೂರಿನ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್‌ ನಿರ್ವಹಿಸಬೇಕು, ಏಕೆಂದರೆ ಇವರು ಹಲವು ವರ್ಷಗಳಿಂದ ಭೈರಪ್ಪನವರ ಯೋಗಕ್ಷೇಮವನ್ನು ಮಗಳಂತೆ ಕಾಳಜಿಯಿಂದ ನೋಡಿಕೊಂಡಿದ್ದಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದಾರೆ.

Ad Widget

Ad Widget

ಪುತ್ರರಿಗೆ ನಿಷೇಧ:
ಉದಯಶಂಕರ್‌ ಮತ್ತು ರವಿಶಂಕರ್‌ ಅವರಿಗೆ ಅಂತ್ಯಸಂಸ್ಕಾರ ನಡೆಸುವ ಅವಕಾಶವನ್ನು ಸ್ಪಷ್ಟವಾಗಿ ನಿರಾಕರಿಸಲಾಗಿದೆ. ಭೈರಪ್ಪನವರು, ಹೆಣ್ಣುಮಕ್ಕಳು ಕೂಡ ಇಂದು ಅಂತ್ಯಸಂಸ್ಕಾರ ಕಾರ್ಯಗಳಲ್ಲಿ ಭಾಗವಹಿಸಲು ಯಾವುದೇ ಧಾರ್ಮಿಕ ನಿಷೇಧವಿಲ್ಲ ಎಂದು ತಿಳಿದುಕೊಂಡಿದ್ದಾರೆ.

ಭೈರಪ್ಪನವರ ಹೇಳಿಕೆ
ಈ ಉಯಿಲಿನ ತಿದ್ದುಪಡಿಯನ್ನು ಬರೆಯುವ ವೇಳೆ ತಮ್ಮ ಬುದ್ಧಿಶಕ್ತಿ ಮತ್ತು ಯೋಚನಾಶಕ್ತಿ ಸಂಪೂರ್ಣವಾಗಿ ಸಮರ್ಪಕವಾಗಿದ್ದು, ಯಾವುದೇ ಒತ್ತಡ ಅಥವಾ ಒತ್ತಾಯವಿಲ್ಲದೆ ಸ್ವಯಂ ಇಚ್ಛೆಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಭೈರಪ್ಪನವರು ತಿಳಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading