ಅವರು ಗುರುವಾರ ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ “ಸಿಂದೂರ” ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳದ ಪವಿತ್ರ […]" /> ಅವರು ಗುರುವಾರ ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ “ಸಿಂದೂರ” ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳದ ಪವಿತ್ರ […]"> Dharmasthala-ಧರ್ಮಸ್ಥಳ: ಶಾಂತಿವನದಲ್ಲಿ “ಸಿಂದೂರ” ಉದ್ಘಾಟನೆ; ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಪರಿಶುದ್ಧ ಗಾಳಿ, ನೀರು ಮತ್ತು ಸಾತ್ವಿಕ ಆಹಾರ ಸೇವನೆಯಿಂದ ಆರೋಗ್ಯ ಭಾಗ್ಯ ಪಡೆಯಬಹುದು-ಶ್ರದ್ಧಾಅಮಿತ್ - Nikhara News | Kannada News Website
Connect with us

ಕಾರ್ಯಕ್ರಮಗಳು

Dharmasthala-ಧರ್ಮಸ್ಥಳ: ಶಾಂತಿವನದಲ್ಲಿ “ಸಿಂದೂರ” ಉದ್ಘಾಟನೆ; ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಪರಿಶುದ್ಧ ಗಾಳಿ, ನೀರು ಮತ್ತು ಸಾತ್ವಿಕ ಆಹಾರ ಸೇವನೆಯಿಂದ ಆರೋಗ್ಯ ಭಾಗ್ಯ ಪಡೆಯಬಹುದು-ಶ್ರದ್ಧಾಅಮಿತ್

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ “ಸಿಂದೂರ” ಉದ್ಘಾಟಿಸಿ ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ಮಾತನಾಡಿದರು.

Ad Widget

Ad Widget

Ad Widget

Ad Widget

ಉಜಿರೆ: ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಪರಿಶುದ್ಧ ಗಾಳಿ, ನೀರು ಮತ್ತು ಸಾತ್ವಿಕ ಆಹಾರ ಸೇವನೆಯಿಂದ ಆರೋಗ್ಯಭಾಗ್ಯ ಹೊಂದಬಹುದು ಎಂದು ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಗುರುವಾರ ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ “ಸಿಂದೂರ” ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಧರ್ಮಸ್ಥಳದ ಪವಿತ್ರ ಸಾನ್ನಿಧ್ಯದಲ್ಲಿ ಶಾಂತಿವನದಲ್ಲಿರುವ ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಉತ್ತಮ ವಿನ್ಯಾಸ, ಮೂಲಭೂತ ಸೌಕರ್ಯಗಳು, ಸಕಾಲಿಕವಾಗಿ ಯೋಗಾಭ್ಯಾಸ, ಪ್ರಾರ್ಥನೆ, ಜಪ, ತಪ, ಧ್ಯಾನ, ಚಿಂತನ-ಮಂಥನ ಹಾಗೂ ವೈದ್ಯರು ಮತ್ತು ಸಿಬ್ಬಂದಿಯ ಕರ್ತವ್ಯನಿಷ್ಠೆ, ನಗುಮೊಗದ ಸೌಜನ್ಯಪೂರ್ಣ ಸೇವೆ, ತಾಳ್ಮೆ ಮತ್ತು ಸಂಯಮದಿಂದ ಇಲ್ಲಿ ಸೇರಿದ “ಸಾಧಕರು” ಶೀಘ್ರ ಪೂರ್ಣ ಆರೋಗ್ಯ ಹೊಂದುತ್ತಾರೆ.

ಇಲ್ಲಿನ ಯಶಸ್ಸಿನ ಫಲವಾಗಿ ಮಣಿಪಾಲದ ಬಳಿ ಪರೀಕಾದಲ್ಲಿ “ಸೌಖ್ಯವನ” ಹಾಗೂ ಬೆಂಗಳೂರಿನ  ನೆಲಮಂಗಲದಲ್ಲಿ “ಕ್ಷೇಮವನ” ಎಂಬ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಪ್ರಾರಂಭಿಸಿದ್ದು, ಮೂರೂ ಆಸ್ಪತ್ರೆಗಳು ಸದಾ “ಹೌಸ್‌ಫುಲ್ ಆಗಿರುವುದು ಪ್ರಕೃತಿಚಿಕಿತ್ಸಾ ಪದ್ಧತಿಯ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget

ಸುಪ್ರಿಯಾ ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡಿದರು. ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ, ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ, ಆಡಳಿತಾಧಿಕಾರಿ ಜಗನ್ನಾಥ್ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಶುಭ ಹಾರೈಸಿದರು.

ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಸ್ವಾಗತಿಸಿದರು. ಡಾ. ಸುಜಾತ ದಿನೇಶ್ ಧನ್ಯವಾದವಿತ್ತರು. ಡಾ. ಧನ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!