ಸುಳ್ಯ
Sullia-ಸುಳ್ಯದ ನೂತನ ಸಸ್ಯಾಹಾರಿ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್’ ಗೆ ಖ್ಯಾತ ನಟ ಪ್ರಕಾಶ್ ತೂಮಿನಾಡು ಭೇಟಿ
ಸುಳ್ಯ ಅರಂಬೂರಿನ ರಸಪಾಕ ಗ್ರೂಪ್ಸ್ನ ನೂತನ ಸಸ್ಯಾಹಾರಿ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರೌಂಡ್ಗೆ ಖ್ಯಾತ ಚಲನಚಿತ್ರ ನಟ ಪ್ರಕಾಶ್ ತೂಮಿನಾಡು ಭೇಟಿ ನೀಡಿದರು.
ಸುಳ್ಯ: ಸುಳ್ಯ ಅರಂಬೂರಿನ ರಸಪಾಕ ಗ್ರೂಪ್ಸ್ನ ನೂತನ ಸಸ್ಯಾಹಾರಿ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರೌಂಡ್ಗೆ ಖ್ಯಾತ ಚಲನಚಿತ್ರ ನಟ ಪ್ರಕಾಶ್ ತೂಮಿನಾಡು ಭೇಟಿ ನೀಡಿದರು.
ಇಂದು ಬೆಳಿಗ್ಗೆ ಆಗಮಿಸಿದ ಅವರನ್ನು ಹೋಟೆಲ್ನ ಪಾಲುದಾರರಾದ ನಾರಾಯಣ ಕೇಕಡ ಸ್ವಾಗತಿಸಿ, ಸನ್ಮಾನಿಸಿ ಗೌರವಿಸಿದರು.
ಸೂ ಪ್ರಮ್ ಸೋ, ಕಾಸರಗೋಡು ಪ್ರಾಥಮಿಕ ಶಾಲೆ ಸಿನಿಮಾ ಖ್ಯಾತಿಯ ಪ್ರಕಾಶ್ ತೂಮಿನಾಡು ನೂತನ ಹೋಟೆಲ್ಗೆ ಶುಭ ಹಾರೈಸಿ ಉಪಾಹಾರ ಸೇವಿಸಿ ತೆರಳಿದರು.
ಈ ಸಂದರ್ಭದಲ್ಲಿ ಹರಿರಾಯ ಕಾಮತ್, ಸುಪ್ರೀತಾ ಕೇಕಡ್ಕ, ಅಭಿಷೇಕ್ ಕೇಕಡ್ಕ ಮತ್ತಿತರರು ಉಪಸ್ಥಿತರಿದ್ದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ನಿಧನ ವಾರ್ತೆ19 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ19 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ18 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ18 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ19 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಸ್ಥಳೀಯ12 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ19 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ18 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















