ರಾಜಕೀಯ
CM and DCM-ಎಸ್ಐಟಿ ತನಿಖೆಗೆ ಹೆಗ್ಗಡೆ ಕೃತಜ್ಞತೆ – ಸಿಎಂ, ಡಿಸಿಎಂ ರಿಯಾಕ್ಷನ್ ಏನಿತ್ತು ?
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯನ್ನು ಸ್ವಾಗತಿಸಿ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯನ್ನು ಸ್ವಾಗತಿಸಿ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.
ತೊಂದರೆ ನೀಡಿಲ್ಲ: ಡಿಸಿಎಂ
ಹೆಗ್ಗಡೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ಪ್ರಕರಣದಲ್ಲಿ ಯಾರಿಗೂ ತೊಂದರೆ ನೀಡಿಲ್ಲ. ನಾವು ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತಿದ್ದೇವೆ. ತಪ್ಪು ಮಾಡಿದವರಿಗೆ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು. ಈವರೆಗೆ ಈ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡಿಲ್ಲ, ಅಧಿಕಾರಿಗಳಿಂದ ಮಾಹಿತಿಯನ್ನೂ ಕೇಳಿಲ್ಲ. ಇದುವರೆಗೆ ಮಾಧ್ಯಮ ವರದಿಗಳ ಆಧಾರದಲ್ಲಿಯೇ ಮಾತನಾಡಿದ್ದೇವೆ. ಎಸ್ಐಟಿ ಅಂತಿಮ ವರದಿ ಬಂದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್ಅಪ್ಗಳು, ಡೀಪ್ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
-
ನಿಧನ ವಾರ್ತೆ6 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ5 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ5 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ5 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ6 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ5 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ5 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
-
ಸ್ಥಳೀಯ5 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















