Connect with us

ಬಿಗ್ ನ್ಯೂಸ್

ಸಹಾಯ ಬೇಡಿದ ಯುವತಿಯ ನಗ್ನ ಫೋಟೊ ಪಡೆದು ನಿರಂತರ ಲೈಂಗಿಕ ದೌರ್ಜನ್ಯ- ಹಿಂಜಾವೇ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಮಂಗಳೂರು : ಯುವತಿಯೋರ್ವಳ ನಗ್ನ ಫೋಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ ಮುಖಂಡ ಹಾಗೂ ಶಾಸಕರೋರ್ವರ ಆಪ್ತ ಸಮಿತ್ ರಾಜ್ ಅಲಿಯಾಸ್ ಸಮಿತ್ ರಾಜ್ ಧರೆಗುಡ್ಡೆಯ ವಿರುದ್ಧ ಸೆ.27ರ ಶನಿವಾರ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದಲ್ಲದೆ, ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2023ರಲ್ಲಿ ಸಂತ್ರಸ್ತೆಯ ಸಹೋದರನಿಗೆ ಬಜ್ಜೆಯಲ್ಲಿ ಅಪಘಾತವಾಗಿ ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿದ್ದ ಸಂದರ್ಭ ಸಂತ್ರಸ್ತೆಯ ಮನೆಯ ಆರ್ಥಿಕ ಪರಿಸ್ಥಿತಿಯನ್ನು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊರ್ವ ಗಮನಿಸಿ ಮೂಡುಬಿದಿರೆ ಶಾಸಕರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಧರೆಗುಡ್ಡೆಯ ಸಮೀತ್ ರಾಜ್ ನ ಮೊಬೈಲ್ ನಂಬ‌ರ್ ಅನ್ನು ಕೊಟ್ಟು ಮಾತನಾಡಲು ಹೇಳಿದ್ದರು. ಅದರಂತೆ ಸಂತ್ರಸ್ತೆ ಆತನಿಗೆ ಫೋನ್ ಮಾಡಿ ಕಷ್ಟವನ್ನು ಹೇಳಿಕೊಂಡಿದ್ದಳು. ಬಳಿಕ ಮೂಡಬಿದ್ರೆ ಶಾಸಕರು ಆಸ್ಪತ್ರೆಗೆ ಬಂದು ಸಹಾಯ ಮಾಡಿದ್ದರು.

Ad Widget

Ad Widget <> Ad Widget

ಇದಾದ ಬಳಿಕ ಆರೋಪಿ ಸಮಿತ್ ರಾಜ್ ಪದೇ ಪದೇ ಸಂತ್ರಸ್ತೆಯ ಮೊಬೈಲ್ ಫೋನ್ ಗೆ ಕರೆ ಮಾಡಿ ಒಳ್ಳೆಯ ರೀತಿಯಲ್ಲಿ ಮಾತನಾಡಿ ನಂತರ ಯುವತಿಯನ್ನು ಪ್ರೀತಿ ಮಾಡುತ್ತಿದ್ದು, ಮದುವೆಯಾಗುವುದಾಗಿ ಹೇಳಿದ್ದ. ಇದರಿಂದ ಹೆದರಿದ ಯುವತಿ ಮನೆಯಲ್ಲಿ ಮಾತನಾಡುವಂತೆ ತಿಳಿಸಿದ್ದಳು. ಈ ಸಂಬಂಧ ಆರೋಪಿ ಸಮಿತ್ ರಾಜ್ ನೊಂದಿಗೆ ಮಾತನಾಡಿದ್ದ ಆಕೆಯ ತಾಯಿ ಸಣ್ಣ ವಯಸ್ಸಿಗೆ ಮದುವೆ ಮಾಡಿಸುವುದಿಲ್ಲ ಎಂದು ಹೇಳಿದ್ದರು.



Ad Widget

ಇದಾದ ಬಳಿಕವೂ ಆರೋಪಿಯು ಯುವತಿಗೆ ನಿರಂತರ ಫೋನ್ ಕರೆಗಳನ್ನು ಮಾಡುತ್ತಿದ್ದು ಕರೆ ಸ್ವೀಕರಿಸದಿದ್ದಾಗ ಕಾಲೇಜಿನ ಬಳಿ ಮತ್ತು ಮನೆ ಬಳಿ ಬರುವುದಾಗಿ ಬೆದರಿಸುತ್ತಿದ್ದ. ಹೀಗಾಗಿ ಆತನ ಒತ್ತಡಕ್ಕೆ ಮಣಿದು ಆತನೊಂದಿಗೆ ಇಷ್ಟ ಇಲ್ಲದಿದ್ದರೂ ಮಾತನಾಡುತ್ತಿದ್ದೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

2023ರ ಮಾರ್ಚ್ 23ರಂದು ಕಾಲೇಜು ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಆರೋಪಿಯು ಕಾರಿನಲ್ಲಿ ಬಂದು ಆಕೆಯನ್ನು ಕರೆದೊಯ್ದು, ಬಜ್ಜೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ಬಲಾತ್ಕಾರವಾಗಿ ಬಟ್ಟೆ ಬಿಚ್ಚಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಜೋರಾಗಿ ಬೊಬ್ಬೆ ಹೊಡೆದಾಗ ಬಾಯಿಗೆ ಕೈ ಅಡ್ಡ ಇಟ್ಟು, ಈ ವಿಚಾರ ಯಾರಲ್ಲಾದರೂ ಹೇಳಿದರೆ ಮನೆಗೆ ಬಂದು ನನ್ನನ್ನು ಮತ್ತು ನನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಕೊಲೆ ಬೆದರಿಕೆ ಹಾಕಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆ ಬಳಿಕ ಯುವತಿಯನ್ನು ಹಲವು ಬಾರಿ ಆತನೊಂದಿಗೆ, ಹೋಗಲು ಒಪ್ಪದೇ ಇದ್ದಾಗ ಆಶ್ಲೀಲ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಮಾನ ಹರಾಜು ಹಾಕುವುದಾಗಿ ಬೆದರಿಸುತ್ತಿದ್ದ. ಅಲ್ಲದೆ, ನಗ್ನ ಫೊಟೊಗಳನ್ನೂ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಕಾರಣ ಯುವತಿ ನಗ್ನ ಫೊಟೊಗಳನ್ನೂ ಕಳುಹಿಸಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಮಾಹಿತಿ ನೀಡಿದ್ದಾಳೆ.

ಆರೋಪಿ ಸಮಿತ್ ರಾಜ್ ನ ಕಿರುಕುಳ ಹೆಚ್ಚಾದಾಗ ಮೂಡುಬಿದಿರೆ ಶಾಸಕರಿಗೆ ಹೇಳುವುದಾಗಿ ಹೇಳಿದಾಗ, “ನಾನು ಪ್ರಭಾವಿ ವ್ಯಕ್ತಿಯಾಗಿದ್ದು, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮಟ್ಟದ ನಾಯಕನಾಗಿದ್ದೇನೆ ಮತ್ತು ಮೂಡಬಿದ್ರೆ ಶಾಸಕರ ಆಪ್ತನಿದ್ದೇನೆ. ಮೂಡುಬಿದಿರೆ ಶಾಸಕರು ನಾನು ಹೇಳಿದ ಹಾಗೆ ಕೇಳುತ್ತಾರೆ. ನಾನು ಹೇಳಿದರೆ ಅವರು ನನ್ನೊಂದಿಗೆ ಪೊಲೀಸ್ ಸ್ಟೇಷನ್ ಗೂ ಬರುತ್ತಾರೆ. ನನ್ನ ಹಿಂದೆ ಸಂಘಟನೆ ಇದೆ. ಯಾವ ಪೊಲೀಸರೂ ಏನೂ ಮಾಡಲು ಆಗುವುದಿಲ್ಲ” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, “ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಸಂಬಂಧ ಬಜ್ಜೆ ಪೊಲೀಸರು IPC 1860 U/s-354(A),504,506) ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಮಿತ್ ಮೊಬೈಲ್ ನಲ್ಲಿದ್ದ ಅಶ್ಲೀಲ ವೀಡಿಯೊಗಳ ಕಥೆ ಬಿಚ್ಚಿಟ್ಟದ್ದೇಗೆ ಗೊತ್ತೇ..?

2024ರಲ್ಲಿ ಮೂಡಬಿದ್ರೆ ತಾಲೂಕಿನ ಮಿಜಾರು ಬಳಿಯ ನಡೆದಿದ್ದ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಮತ್ತು ಆಕೆಯ ಮಗನಿಗೆ, ಬಸ್ ಮಾಲಕನನ್ನು ಬೆದರಿಸಿ 5 ಲಕ್ಷ ರೂ. ತೆಗೆಸಿಕೊಟ್ಟಿದ್ದ ಪ್ರಕರಣ ಸಂಬಂಧ ಮೂಡುಬಿದಿರೆ ಪೊಲೀಸರು ಸಮಿತ್ ರಾಜ್ ಧರೆಗುಡ್ಡೆಯ ವಿರುದ್ಧ 2025ರ ಜೂ. 26 ರಂದು ಪ್ರಕರಣ ದಾಖಲಿಸಿದ್ದರು.

ಈ ವೇಳೆ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಂದಿದ್ದ ಸುಧೀ‌ರ್ ಕುಮಾರ್ ರೆಡ್ಡಿ ಅವರು ಈ ಪ್ರಕರಣವನ್ನು ವಿಚಾರಣೆ ನಡೆಸುವಂತೆ ಮೂಡುಬಿದಿರೆ ಪೊಲೀಸರಿಗೆ ಸೂಚನೆ ನೀಡಿದ್ದರು. ಅದರಂತೆ ಪ್ರಕರಣದ ಆರೋಪಿ ಸಮೀತ್ ರಾಜ್ ಧರೆಗುಡ್ಡೆಯನ್ನು ಮೂಡುಬಿದ್ರೆ ಪೊಲೀಸ್ ನಿರೀಕ್ಷಕ ಸಂದೇಶ್‌ ಪಿ.ಜಿ. ಬಂಧಿಸಿದ್ದರು. ಈ ವೇಳೆ ಆತನ ಮೊಬೈಲ್ ಎಫ್ ಎಸ್ ಎಲ್ ಪರೀಕ್ಷೆಗೆ ಒಳಪಡಿಸಿದ ವೇಳೆ ಅದರಲ್ಲಿ 40-50 ಅಶ್ಲೀಲ ವೀಡಿಯೊಗಳಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅಲ್ಲದೆ, ಸಮಿತ್ ರಾಜ್ ಸ್ವತಃ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಡಿಯೋಗಳೂ ಪತ್ತೆಯಾಗಿದ್ದವು ಎಂದು ಹೇಳಲಾಗಿದೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸರು ಈತನ ವಿರುದ್ಧ 2025 ಜು.4 ರಂದು ಪ್ರಕರಣ ದಾಖಲಿಸಿ ಬಂಧಿಸಿದ್ದರು. ಈ ಪ್ರಕರಣದಲ್ಲಿ ಸಮಿತ್ ರಾಜ್ ಜಾಮೀನು ಪಡೆದು ಹೊರಬಂದಿದ್ದ ಎಂದು ತಿಳಿದು ಬಂದಿದೆ. ಈ ವಿಚಾರ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು

Ad Widget
Click to comment

Leave a Reply

ಅಂತರ ರಾಜ್ಯ

Dhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?

Published

on



Ad Widget

Ad Widget

Ad Widget

Ad Widget

ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ಗುರುಗ್ರಾಮ, ಅ. 10: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಆಯೋಜಿಸಲು ಉದ್ದೇಶಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಧ್ರುವ್ ರಾಠಿ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

Ad Widget

Ad Widget <> Ad Widget

ವರದಿಯ ಪ್ರಕಾರ, ಗುರುಗ್ರಾಮದ ಸೆಕ್ಟರ್ 56ರ ಸೆಂಟ್ರಲ್ ಪಾರ್ಕ್ ವಿಹಾರ್‌ನಲ್ಲಿರುವ ರಾಠಿ ಅವರ ಕುಟುಂಬದ ನಿವಾಸಕ್ಕೆ ಶುಕ್ರವಾರ ತಡರಾತ್ರಿಯಿಂದಲೇ ಸುಮಾರು 50 ಪೊಲೀಸ್ ಸಿಬ್ಬಂದಿ ಜಮಾಯಿಸಿದ್ದರು. ಶನಿವಾರ ಬೆಳಗ್ಗೆ 7.48ರ ಸುಮಾರಿಗೆ ಅವರ ತಾಯಿ ಬಾಗಿಲು ತೆರೆದ ಬಳಿಕ ಪೊಲೀಸರು ಮನೆಯೊಳಗೆ ಪ್ರವೇಶಿಸಿ ರಾಠಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.



Ad Widget

ಆದರೆ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಅಧಿಕೃತವಾಗಿ ನೀಡಿರುವ ಹೇಳಿಕೆ ಅಥವಾ ವಶಕ್ಕೆ ಪಡೆಯಲು ಕಾರಣವೇನು ಎಂಬ ಕುರಿತು ಹೆಚ್ಚಿನ ಮಾಹಿತಿ ವರದಿಯಲ್ಲಿ ಲಭ್ಯವಾಗಿಲ್ಲ

Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading