Connect with us

ರಾಜಕೀಯ

Karur Stampede | ವಿಜಯ್ Rally : ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆ – ಮೃತರಿಗೆ 10ಲಕ್ಷ ರೂ ಪರಿಹಾರ ಘೋಷಣೆ : ತನಿಖೆಗೆ ನಿವೃತ್ತ ನ್ಯಾಯಾಧೀಶರ ಆಯೋಗ ರಚನೆ – ಮೌನ ಮುರಿದ ವಿಜಯ್

Published

on

Ad Widget

Ad Widget

Ad Widget

Ad Widget

ಚೆನ್ನೈ: ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ (Actor Vijay) ಅವರ ಕರೂರ್ ರ್ಯಾಲಿ (Karur Stampede) ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಭಾರಿ ದುರಂತ ಸಂಭವಿಸಿದ್ದು, ಒಂಬತ್ತು ಮಕ್ಕಳು ಮತ್ತು 17 ಮಹಿಳೆಯರು ಸೇರಿದಂತೆ 39 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. 46 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.38 ಜನರ ಶವಗಳನ್ನು ಗುರುತಿಸಲಾಗಿದೆ. ಈ ಪೈಕಿ 14 ಜನರನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಒಬ್ಬ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಅವರನ್ನು ಗುರುತಿಸುವ ಕೆಲಸ ನಡೆಯುತ್ತಿದೆ ಎಂದು ದಿಂಡಿಗಲ್ ಜಿಲ್ಲಾಧಿಕಾರಿ ಎಸ್. ಸರವಣನ್ ಕರೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ರ್ಯಾಲಿಗೆ ಕನಿಷ್ಠ 30 ಸಾವಿರ ಜನರು ಸೇರಿದ್ದರು. ಅಲ್ಲದೆ ಅತೀವ ಬಿಸಿಲು ಮತ್ತು ಶೆಖೆಯಿಂದಾಗಿ ದಣಿದಿದ್ದ ಜನರ ಪೈಕಿ ಹಲವರು ಮೂರ್ಛೆ ಹೋಗಿದ್ದರು. ಇದೇ ಸಂದರ್ಭದಲ್ಲಿ ನಟ ವಿಜಯ್ ವೇದಿಕೆ ಮೇಲೆ ಆಗಮಿಸಿದಾಗ ಅವರನ್ನು ನೋಡಲು ಅಭಿಮಾನಿಗಳು ಏಕಾಏಕಿ ನುಗ್ಗಿದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಜನಸಂದಣಿ ಹೆಚ್ಚಾದಾಗ ಮತ್ತು ಬಿಸಿಲು ಮತ್ತು ಜನದಟ್ಟಣೆಯಿಂದಾಗಿ ಜನರು ಉಸಿರುಗಟ್ಟಿ ಬೀಳಲು ಆರಂಭವಾದಾಗ , ನಟ ವಿಜಯ್ ತಮ್ಮ ಭಾಷಣವನ್ನು ನಿಲ್ಲಿಸಿ ಸಹಾಯಕ್ಕಾಗಿ ಜನಸಮೂಹದ ಮೇಲೆ ನೀರಿನ ಬಾಟಲಿಗಳನ್ನು ಎಸೆಯಲು ಪ್ರಾರಂಭಿಸಿದರು ಎಂದು ಸಾಮಾಜಿಕ ಜಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವೀಡಿಯೊಗಳಲ್ಲಿ ದಾಖಲಾಗಿದೆ.

Ad Widget

Ad Widget <> Ad Widget

ಕರೂರಿನಲ್ಲಿ ಲಕ್ಷಾಂತರ ಜನರು ಬೆಳಿಗ್ಗೆಯಿಂದಲೇ ಕುಡಿಯುವ ನೀರು ಅಥವಾ ಆಹಾರವಿಲ್ಲದೆ ವಿಜಯ್ ಅವರನ್ನು ನೋಡಲು ಕಾಯುತ್ತಿದ್ದರು. ಗಾಳಿ ವ್ಯವಸ್ಥೆ ಇಲ್ಲದ ಕಾರಣ ಜನರು ಸುಸ್ತಾಗಿದ್ದರು. ಸಾವಿರಾರು ಜನರು ಸೇರಿದ್ದರಿಂದ ಅವರಿಗೆ ಅಲ್ಲಿಂದ ಹೊರಹೋಗಲು ಕೂಡ ಸಾಧ್ಯವಾಗಲಿಲ್ಲ. ವಿಜಯ್ ತಮ್ಮ ಭಾಷಣ ಮುಗಿಸಿದ ನಂತರ, ಜನರು ಹೊರಹೋಗಲು ಪ್ರಯತ್ನಿಸಿದಾಗ ಕಾಲ್ತುಳಿತ ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಇನ್ನು ದುರಂತದ ಕುರಿತು ಮಾತನಾಡಿದ ತಮಿಳುನಾಡು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಸ್. ಡೇವಿಡ್ಸನ್ ದೇವಶಿರ್ವತಮ್ ಅವರು, ‘ನಾವು ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಬೇಕಾಗಿದೆ. ದುರಂತದಲ್ಲಿ ಮೂವತ್ತೊಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Ad Widget

Ad Widget

ಈ ಮಧ್ಯೆ ದುರಂತ ಕುರಿತು ಟಿವಿಕೆ ಮುಖ್ಯಸ್ಥ ವಿಜಯ್ ಮೌನ ಮುರಿದಿದ್ದಾರೆ. ಈ ದುರಂತದಿಂದ ಹೃದಯ ಚೂರಾಗಿದೆ. “ಅಸಹನೀಯ, ವಿವರಿಸಲಾಗದ ನೋವು ಮತ್ತು ದುಃಖದಲ್ಲಿರುವುದಾಗಿ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ವಿಜಯ್, ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರದಿಂದ ಪರಿಹಾರ ಘೋಷಣೆ: ಕಾಲ್ತುಳಿತ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಸಿಎಂ ಸ್ಟಾಲಿನ್, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದರೆ, ಗಾಯಾಳುಗಳಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.ಈ ದುರ್ಘಟನೆಯ ತನಿಖೆ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ರಚಿಸಲಾಗುವುದು ಎಂದು ಸ್ಟಾಲಿನ್ ಘೋಷಿಸಿದ್ದಾರೆ.

FIR ದಾಖಲು: ಏತನ್ಮಧ್ಯೆ, ಕರೂರು ಪಟ್ಟಣ ಪೊಲೀಸರು ಟಿವಿಕೆ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್ ಸೇರಿದಂತೆ ಹಲವರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 109,110,125ಬಿ, 223 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 109 ಮತ್ತು 110 ಕ್ರಮವಾಗಿ ಕೊಲೆ ಯತ್ನ ಮತ್ತು ಅಪರಾಧಿಕ ನರಹತ್ಯೆಗೆ ಯತ್ನಿಸುವ ಪ್ರಕರಣಗಳಾಗಿವೆ. ಸೆಕ್ಷನ್ 125 ದುಡುಕಿನ ಅಥವಾ ನಿರ್ಲಕ್ಷ್ಯದ ವರ್ತನೆಯ ಮೂಲಕ ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳನ್ನು ಉಲ್ಲೇಖಿಸುತ್ತದೆ. ಸೆಕ್ಷನ್ 223 ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶವನ್ನು ಪಾಲಿಸದಿದ್ದಕ್ಕೆ ಸಂಬಂಧಿಸಿದ್ದಾಗಿದೆ.

ಕಂಬನಿ ಮಿಡಿದ ಗಣ್ಯರು: ಕರೂ‌ರ್ ದುರ್ಘಟನೆಗೆ ಸಂಬಂಧಿಸಿ ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣ ಸಚಿವ ರಾಜನಾಥ್ ಸಿಂಗ್, ಹಲವು ಕೇಂದ್ರ ಸಚಿವರು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget alt="Ad Widget"/>

Ad Widget

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.

Ad Widget

Ad Widget <> Ad Widget

ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

Ad Widget

Ad Widget

ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.

ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.

ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ

ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.

ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು

ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.

ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.

ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.

Ad Widget
Continue Reading

ಅಂತರ ರಾಜ್ಯ

CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?

Published

on

Ad Widget

Ad Widget

Ad Widget

Ad Widget

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget

Ad Widget

Ad Widget

ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.

Ad Widget

Ad Widget alt="Ad Widget"/>

Ad Widget

ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

Ad Widget

Ad Widget

“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್–ಎಸ್‌ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್‌ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್‌ಪಿ ವಿರುದ್ಧ ಕಿಡಿಕಾರಿದ್ದಾರೆ.

ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್‌ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.

Ad Widget
Continue Reading

ರಾಜಕೀಯ

Priyanka Kharge-ಕರ್ನಾಟಕದ ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ; ಬೆಂಗಳೂರಿನ ಬೆಳವಣಿಗೆಯ ಅಂತರವನ್ನು ಕಡಿಮೆ ಮಾಡುವ ಸಾಮರ್ಥ್ಯ ಮಂಗಳೂರಿಗಿದೆ; ಹೂಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ನವೋದ್ಯಮಗಳ ಮೂಲಕ ಬಿಯಾಂಡ್ ಬೆಂಗಳೂರು ಅಭಿಯಾನವನ್ನು ವೇಗಗೊಳಿಸಲು ಉದ್ಯಮ ವಲಯಕ್ಕೆ ಸಚಿವರ ಕರೆ

Published

on

Ad Widget

Ad Widget

Ad Widget

Ad Widget

ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಉದ್ಯಮ ವಲಯದ ನಾಯಕರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಬೆಂಗಳೂರು, ನ. 25,: ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಉದ್ಯಮ ವಲಯದ ನಾಯಕರಿಗೆ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಡೆಲಾಯ್ಟ್ ಸಂಸ್ಥೆಯ ಭಾರತದ 27ನೇ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಬೆಂಗಳೂರು ನಂತರ ಕರ್ನಾಟಕದ ರಾಜ್ಯದ ಒಟ್ಟು ಆಂತರಿಕ ಉತ್ಪನ್ನಕ್ಕೆ ಎರಡನೇ ಅತಿ ಹೆಚ್ಚು ಕೊಡುಗೆ ನೀಡುವ ಜಿಲ್ಲೆಯಾಗಿ ದಕ್ಷಿಣ ಕನ್ನಡ ಗುರುತಿಸಿಕೊಂಡಿದೆ. ರಾಜ್ಯದ ಒಟ್ಟು ಆಂತರಿಕ ಉತ್ಪನ್ನಕ್ಕೆ ಜಿಲ್ಲೆಯ ಕೊಡುಗೆ ಶೇ. 5.3ರಷ್ಟಿದೆ ಎಂದು ತಿಳಿಸಿದರು. ಈ ಆರ್ಥಿಕ ಶಕ್ತಿ, ಈ ಭಾಗದ ಪ್ರತಿಭಾನ್ವಿತ ಮಾನವ ಸಂಪನ್ಮೂಲ, ಶೈಕ್ಷಣಿಕ ಸಂಸ್ಥೆಗಳು ಹಾಗೂ ಉತ್ತಮ ಜೀವನಮಟ್ಟದೊಂದಿಗೆ ಮಂಗಳೂರು, ಕರ್ನಾಟಕದ ಮುಂದಿನ ಹಂತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದರು.

Ad Widget

Ad Widget <> Ad Widget

“ಕರ್ನಾಟಕದ ಪ್ರಮುಖ ಆರ್ಥಿಕ ಬೆಳವಣಿಗೆಯ ಕೇಂದ್ರವಾಗಿ ಹೊರಹೊಮ್ಮುವ ಅಪಾರ ಸಾಮರ್ಥ್ಯ ಮಂಗಳೂರಿಗಿದೆ. ಬಿಯಾಂಡ್ ಬೆಂಗಳೂರು ಮೂಲಕ ಪ್ರತಿಭೆಗಳು ಈಗಾಗಲೇ ಇರುವ ಪ್ರದೇಶಗಳಿಗೆ ಅವಕಾಶಗಳನ್ನು ಕೊಂಡೊಯ್ಯುವುದು ನಮ್ಮ ಉದ್ದೇಶವೇ ಹೊರತು, ಪ್ರತಿಭೆಗಳು ಬೆಂಗಳೂರಿಗೆ ಬರಬೇಕೆಂದು ನಿರೀಕ್ಷಿಸುವುದಲ್ಲ. ನಮ್ಮ ಪ್ರಾದೇಶಿಕ ನಗರಗಳಲ್ಲಿರುವ ಸಾಮರ್ಥ್ಯವನ್ನು ಉದ್ಯಮಗಳು ಗುರುತಿಸಿ, ಸದೃಢ ಆರ್ಥಿಕ ವ್ಯವಸ್ಥೆಗಳನ್ನು ನಿರ್ಮಿಸುವಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು,” ಎಂದು ಸಚಿವರು ಹೇಳಿದರು.

ಮಂಗಳೂರಿನಲ್ಲಿ ತನ್ನ ಕಚೇರಿಯನ್ನು ಸ್ಥಾಪಿಸುವ ಡೆಲಾಯ್ಟ್ ಸಂಸ್ಥೆಯ ನಿರ್ಧಾರವನ್ನು ಶ್ಲಾಘಿಸಿದ ಖರ್ಗೆ, ಈ ಹೂಡಿಕೆಯು ಸರ್ಕಾರದ ಬಿಯಾಂಡ್ ಬೆಂಗಳೂರು ದೃಷ್ಟಿಕೋನದಡಿ ಉತ್ತೇಜಿಸಲು ಬಯಸುತ್ತಿರುವ ಉದ್ಯಮ ವಲಯದ ಪಾಲ್ಗೊಳ್ಳುವಿಕೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

Ad Widget

Ad Widget

“ಈ ಕಾರ್ಯ ಸಾಕಾರಗೊಳ್ಳಲು ವಿಶೇಷವಾಗಿ ಶ್ರಮಿಸಿದ ರೋಮಲ್ ಶೆಟ್ಟಿ ಮತ್ತು ಡೆಲಾಯ್ಟ್‌ನ ಇಡೀ ತಂಡವನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಸರ್ಕಾರದ ಬಿಯಾಂಡ್ ಬೆಂಗಳೂರು ನೀತಿ ಉತ್ತೇಜಿಸಲು ಬಯಸುತ್ತಿರುವ ಉದ್ಯಮ ಸಹಭಾಗಿತ್ವ ಮತ್ತು ಬದ್ಧತೆ ಇದೇ ರೀತಿಯದ್ದಾಗಿದೆ. ಮಂಗಳೂರಿನಲ್ಲಿ ಅಪಾರ ಸಾಮರ್ಥ್ಯವಿದೆ ಎಂದು ನಾನು ಭಾವಿಸುತ್ತೇನೆ. ಇಂತಹ ಉಪಕ್ರಮಗಳು ಈ ಭಾಗದ ಅವಕಾಶಗಳನ್ನು ಅನಾವರಣಗೊಳಿಸಲು ನೆರವಾಗಲಿವೆ. ರೋಮಲ್ ಮತ್ತು ಡೆಲಾಯ್ಟ್‌ನ ಇಡೀ ತಂಡಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ,” ಎಂದು ಅವರು ಹೇಳಿದರು.

ಬಿಯಾಂಡ್ ಬೆಂಗಳೂರು: ಪ್ರಾದೇಶಿಕ ನಗರಗಳಿಗೆ ಬೆಳವಣಿಗೆಯ ಅವಕಾಶ

ಸರ್ಕಾರದ ಬಿಯಾಂಡ್ ಬೆಂಗಳೂರು ಕಾರ್ಯತಂತ್ರವನ್ನು ವಿವರಿಸಿದ ಖರ್ಗೆ, ವಿವಿಧ ಪ್ರದೇಶಗಳ ಸಾಮರ್ಥ್ಯ ಮತ್ತು ಶಕ್ತಿಯನ್ನು ಬಳಸಿಕೊಂಡು ರಾಜ್ಯದಲ್ಲಿ ಬಹು ಆರ್ಥಿಕ ಬೆಳವಣಿಗೆಯ ಕೇಂದ್ರಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

ಮಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ನಗರದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯನ್ನು ಉಲ್ಲೇಖಿಸಿದ ಅವರು, ಈ ಭಾಗದ ಪ್ರಮುಖ ಬೆಳವಣಿಗೆಯ ಅವಕಾಶಗಳನ್ನು ಗುರುತಿಸಲಾಗಿದ್ದು, ಪ್ರದೇಶದ ಅಭಿವೃದ್ಧಿಗಾಗಿ ಸುಮಾರು ₹6,000 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಆರ್ಥಿಕತೆಯ ವೇಗವರ್ಧನೆ ಕಾರ್ಯಕ್ರಮ (ಲೀಪ್) ಮೂಲಕ ಸ್ಥಳೀಯ ಸಾಮರ್ಥ್ಯಗಳನ್ನು ಗುರುತಿಸುವುದು, ಹೂಡಿಕೆಗಳಿಗೆ ಅವಕಾಶ ಕಲ್ಪಿಸುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶ ಹೊಂದಿರುವುದಾಗಿ ಸಚಿವರು ತಿಳಿಸಿದರು.

“ಮಂಗಳೂರಿನಲ್ಲಿ ಅತ್ಯಂತ ಚುರುಕಾದ ಪ್ರತಿಭಾನ್ವಿತ ಮಾನವ ಸಂಪನ್ಮೂಲವಿದ್ದು, ದೇಶದ ಅತ್ಯುತ್ತಮ ಶೈಕ್ಷಣಿಕ ಸಂಸ್ಥೆಗಳು ಈ ಭಾಗಕ್ಕೆ ಬೆಂಬಲವಾಗಿವೆ. ಬೇರೆಡೆಗಳಲ್ಲಿ ಮರುಸೃಷ್ಟಿಸಲು ಕಷ್ಟವಾಗುವಂತಹ ಉತ್ತಮ ಜೀವನಮಟ್ಟವೂ ಇಲ್ಲಿದೆ. ಸಾಫ್ಟ್‌ವೇರ್ ಸಂಸ್ಥೆ ಇಜಿಯ ಡೆನ್ಮಾರ್ಕ್ ತಂಡವೊಂದು ಬೆಳಿಗ್ಗೆ ಸಸಿಹಿತ್ಲು ಕಡಲತೀರದಲ್ಲಿ ಅಲೆಗಳ ಮೇಲೆ ಸವಾರಿ ಮಾಡಿ, ನಂತರ ಕಚೇರಿಗೆ ಬಂದು ಕೆಲಸ ಮಾಡುವುದನ್ನು ನಾನು ಗಮನಿಸಿದ್ದೇನೆ. ಇಂತಹ ಅನುಕೂಲ ಬೇರೆ ಯಾವ ನಗರದಲ್ಲಿದೆ? ಇಂತಹ ಶಕ್ತಿಗಳನ್ನು ನಾವು ಬಳಸಿಕೊಳ್ಳಬೇಕು,” ಎಂದು ಅವರು ಹೇಳಿದರು.

ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ವಲಸಿಗರನ್ನು ಆಕರ್ಷಿಸುತ್ತಿರುವುದರಿಂದ ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡವನ್ನೂ ಅವರು ಪ್ರಸ್ತಾಪಿಸಿದರು. ಉತ್ತಮ ಉದ್ಯೋಗಾವಕಾಶಗಳಿರುವ ಇತರ ನಗರ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದರಿಂದ ರಾಜ್ಯದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚು ಸಮಾನವಾಗಿ ಹಂಚಿಕೆ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಉದ್ಯಮ ಸಹಭಾಗಿತ್ವ

ಭವಿಷ್ಯದ ಅಗತ್ಯಗಳಿಗೆ ಸಿದ್ಧವಾಗಿರುವ ಮಾನವ ಸಂಪನ್ಮೂಲವನ್ನು ರೂಪಿಸುವಲ್ಲಿ ಉದ್ಯಮ ವಲಯದ ಪಾಲ್ಗೊಳ್ಳುವಿಕೆಯ ಮಹತ್ವವನ್ನು ಒತ್ತಿಹೇಳಿದ ಸಚಿವರು, ಉದ್ಯಮ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕರ್ನಾಟಕ ಸರ್ಕಾರ ಹಲವು ಕೌಶಲ್ಯಾಭಿವೃದ್ಧಿ ಉಪಕ್ರಮಗಳನ್ನು ಜಾರಿಗೊಳಿಸುತ್ತಿದೆ. ಪಠ್ಯಕ್ರಮ ರೂಪಿಸುವಲ್ಲಿ ಕಂಪನಿಗಳು ಪಾಲ್ಗೊಳ್ಳುವುದರ ಜೊತೆಗೆ, ತರಬೇತಿಯು ಬದಲಾಗುತ್ತಿರುವ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದರು.

ಮಂಗಳೂರಿನಲ್ಲಿಯೇ ಉದ್ಯಮಕ್ಕೆ ಸಿದ್ಧವಾಗಿರುವ ಪ್ರತಿಭೆಗಳನ್ನು ರೂಪಿಸಲು ಡೆಲಾಯ್ಟ್‌ನಂತಹ ಕಂಪನಿಗಳು ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

“ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಡೆಲಾಯ್ಟ್‌ನಂತಹ ಕಂಪನಿಯಲ್ಲಿ ಕೆಲಸ ಮಾಡಲು ಅಗತ್ಯವಾದ ಕೌಶಲ್ಯಗಳನ್ನು ಹೊಂದಿರಬಾರದೇ? ಉದ್ಯಮ ಮತ್ತು ಸರ್ಕಾರ ಒಟ್ಟಾಗಿ ಸಾಧಿಸಬಹುದಾದ ಅತ್ಯಂತ ಸುಲಭವಾದ ಅವಕಾಶವಿದು. ನಮ್ಮ ಶಿಕ್ಷಣ ಸಂಸ್ಥೆಗಳಿಂದ ಹೊರಬರುವ ಪ್ರತಿಭೆಗಳು ಇಲ್ಲಿಯೇ ಸೃಷ್ಟಿಯಾಗುತ್ತಿರುವ ಉದ್ಯೋಗಾವಕಾಶಗಳಿಗೆ ಸಿದ್ಧರಾಗಿರುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು,” ಎಂದು ಅವರು ಹೇಳಿದರು.

ಆರೋಗ್ಯ ಸೇವೆ ಮತ್ತು ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಈ ಪ್ರದೇಶ ಹೊಂದಿರುವ ಬಲವನ್ನು ಗಮನದಲ್ಲಿಟ್ಟುಕೊಂಡು, ಮಂಗಳೂರಿನಲ್ಲಿ ಆರೋಗ್ಯ ವಿಜ್ಞಾನಕ್ಕೆ ಆದ್ಯತೆ ನೀಡುವ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆಯೂ ಖರ್ಗೆ ಪ್ರಸ್ತಾಪಿಸಿದರು.

ನವೋದ್ಯಮ ಪರಿಸರ ವ್ಯವಸ್ಥೆಯನ್ನು ಬಲಪಡಿಸುವುದು

ಕರ್ನಾಟಕದ ಪ್ರಮುಖ ಎಲಿವೇಟ್ ಕಾರ್ಯಕ್ರಮವನ್ನು ಪ್ರಸ್ತಾಪಿಸಿದ ಸಚಿವರು, ಅರ್ಹ ನವೋದ್ಯಮಗಳಿಗೆ ಯಾವುದೇ ಪಾಲುದಾರಿಕೆ ಹಕ್ಕನ್ನು ನೀಡುವ ಅಗತ್ಯವಿಲ್ಲದೆ ₹1 ಕೋಟಿವರೆಗೆ ಅನುದಾನ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮ ಉದ್ಯಮಗಳನ್ನು ನಿರ್ಮಿಸಲು ಮತ್ತು ವಿಸ್ತರಿಸಲು ಈ ಭಾಗದ ಉದ್ಯಮಿಗಳಿಗೆ ಅವರು ಪ್ರೋತ್ಸಾಹ ನೀಡಿದರು.

ನಗರ ಸಂಚಾರ ಸೇರಿದಂತೆ ಸಾರ್ವಜನಿಕ ವಲಯದ ಸವಾಲುಗಳಿಗೆ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ನವೋದ್ಯಮಗಳು ಸರ್ಕಾರದ ಸಹಭಾಗಿತ್ವದಲ್ಲಿ ತಮ್ಮ ನವೀನ ಪರಿಹಾರಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಅವಕಾಶ ಕಲ್ಪಿಸುವ ಸರ್ಕಾರದ ನಿಯಂತ್ರಣಾತ್ಮಕ ಪ್ರಯೋಗ ವ್ಯವಸ್ಥೆಯ ಬಗ್ಗೆಯೂ ಅವರು ವಿವರಿಸಿದರು.

ಈ ಉಪಕ್ರಮದಡಿ ಯಶಸ್ವಿಯಾಗುವ ಪ್ರಾಯೋಗಿಕ ಯೋಜನೆಗಳನ್ನು ಕರ್ನಾಟಕದಾದ್ಯಂತ ವಿಸ್ತರಿಸುವುದರ ಜೊತೆಗೆ ಇತರ ರಾಜ್ಯಗಳಿಗೂ ಕೊಂಡೊಯ್ಯುವ ಅವಕಾಶವಿದೆ. ಈಗಾಗಲೇ 16 ನವೋದ್ಯಮಗಳು ಈ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿದ್ದು, ಈ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪ್ರಾದೇಶಿಕ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಖರ್ಗೆ, ಹೂಡಿಕೆಗಳಿಗೆ ಅನುಕೂಲ ಕಲ್ಪಿಸುವುದು, ಪ್ರತಿಭಾನ್ವಿತ ಮಾನವ ಸಂಪನ್ಮೂಲ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಕರಾವಳಿ ಕರ್ನಾಟಕದಲ್ಲಿ ಉದ್ಯಮಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಉದ್ಯಮ ವಲಯದ ನಾಯಕರಿಗೆ ಭರವಸೆ ನೀಡಿದರು.

“ಕರ್ನಾಟಕದ ಮುಂದಿನ ಹಂತದ ಬೆಳವಣಿಗೆ ನಮ್ಮ ಪ್ರಾದೇಶಿಕ ನಗರಗಳಿಂದ ಬರಬೇಕು. ಬೆಂಗಳೂರಿನ ಆಚೆಗೂ ಇರುವ ಅವಕಾಶಗಳನ್ನು ಉದ್ಯಮಗಳು ಗುರುತಿಸಿ, ರಾಜ್ಯದಾದ್ಯಂತ ಸದೃಢ ಮತ್ತು ಸುಸ್ಥಿರ ಆರ್ಥಿಕ ವ್ಯವಸ್ಥೆಗಳನ್ನು ನಿರ್ಮಿಸುವಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದು ನಮ್ಮ ಆಶಯ,” ಎಂದು ಅವರು ಹೇಳಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!