ಕಾರ್ಯಕ್ರಮಗಳು
Dharmasthala-ಧರ್ಮಸ್ಥಳದಲ್ಲಿ ಸತ್ಯದರ್ಶನ ಸಮಾವೇಶ; ಧರ್ಮಸ್ಥಳದ ವತಿಯಿಂದ ಹಲವು ಸಮಾಜಮುಖಿ ಸೇವಾಕಾರ್ಯಗಳನ್ನು ಸದ್ಯದಲ್ಲೆ ಪ್ರಾರಂಭಿಸಲಾಗುವುದು: ಡಿ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ವತಿಯಿಂದ ಸದ್ಯದಲ್ಲೆ ಹಲವು ಸಮಾಜಮುಖಿ ಸೇವಾಕಾರ್ಯಗಳನ್ನು ಎಲ್ಲರ ಕಲ್ಯಾಣಕ್ಕಾಗಿ ಸದ್ಯದಲ್ಲೆ ಪ್ರಾರಂಭಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.
ಉಜಿರೆ: ಧರ್ಮಸ್ಥಳದ ವತಿಯಿಂದ ಸದ್ಯದಲ್ಲೆ ಹಲವು ಸಮಾಜಮುಖಿ ಸೇವಾಕಾರ್ಯಗಳನ್ನು ಎಲ್ಲರ ಕಲ್ಯಾಣಕ್ಕಾಗಿ ಸದ್ಯದಲ್ಲೆ ಪ್ರಾರಂಭಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ೮೧ ಗ್ರಾಮಗಳ ಗ್ರಾಮಸ್ಥರು ಸೇರಿ ಆಯೋಜಿಸಿದ ಸತ್ಯದರ್ಶನ ಸಮಾವೇಶದಲ್ಲಿ ಮಾತನಾಡಿದರು.

ಚಿನ್ನವನ್ನು ಬೆಂಕಿಗೆ ಹಾಕಿದರೆ ಅದು ಮತ್ತಷ್ಟು ಸ್ಪುಟಗೊಂಡು ಪರಿಶುದ್ಧವಾಗಿ ಹೊಳೆಯುತ್ತದೆ. ಅದೇ ರೀತಿ ಧರ್ಮಸ್ಥಳದ ಬಗ್ಯೆ ಷಡ್ಯಂತ್ರದಿAದ ಸುಳ್ಳು ವದಂತಿ ಪಸರಿಸಿ ಅಪಚಾರ ಮಾಡಿದರೂ, ಷಡ್ಯಂತ್ರದ ಚಿದಂಬರ ರಹಸ್ಯ ಬಯಲಾಗಿ, ಪವಿತ್ರಕ್ಷೇತ್ರ ಇನ್ನಷ್ಟು ಬೆಳಗುತ್ತಿದೆ, ಬೆಳೆಯುತ್ತಿದೆ. ಈಗ ಇಲ್ಲಿಗೆ ಬರುವ ಭಕ್ತರು ಮತ್ತು ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಗಿದೆ. ಎಲ್ಲಾ ಭಕ್ತರು ಶ್ರದ್ಧಾ-ಭಕ್ತಿಯಿಂದ ಬಂದು ಸೇವೆ ಮಾಡುತ್ತಿದ್ದಾರೆ.
ಸರ್ಕಾರ ರಚಿಸಿದ ವಿಶೇಷ ತನಿಖಾ ದಳ (ಎಸ್.ಐ.ಟಿ)ದಿಂದ ಸತ್ಯದ ಅನಾವರಣವಾಗಿದ್ದು, ನಾವು ನಿರಾಳವಾಗಿದ್ದೇವೆ. ಆರಂಭದಲ್ಲೆ ಎಸ್.ಐ.ಟಿ. ರಚನೆಯನ್ನು ನಾನು ಸ್ವಾಗತಿಸಿ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದೆ. ಈಗಲೂ ಮತ್ತೊಮ್ಮೆ ಸರ್ಕಾರ ಮತ್ತು ಎಸ್.ಐ.ಟಿ.ಯನ್ನು ಅಭಿನಂದಿಸುವುದಾಗಿ ಹೆಗ್ಗಡೆಯವರು ತಿಳಿಸಿದರು.

ಇಂದಿನವರೆಗೆ ಮನದಾಳದಲ್ಲಿ ಕೊಂಚ ನೋವಿತ್ತು. ಚಿಂತನ-ಮಂಥನಕ್ಕೆ ಅವಕಾಶವಿರಲಿಲ್ಲ. ಆದರೆ ಇಂದು ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ 81 ಗ್ರಾಮಗಳ ಗ್ರಾಮಸ್ಥರು ಸಂಘಟಿತರಾಗಿ ಬಂದು “ನಾವು ನಿಮ್ಮ ಹಿಂದೆ ಸದಾಕಾಲ ಇದ್ದೇವೆ” ಎಂದು ಪ್ರೀತಿ-ವಿಶ್ವಾಸ, ಗೌರವ ಮತ್ತು ಅಭಿಮಾನ ವ್ಯಕ್ತಪಡಿಸಿರುವುದರಿಂದ ತಾವು ತುಂಬಾ ಸಂತೋಷ ಮತ್ತು ತೃಪ್ತಿ ಹೊಂದಿರುವುದಾಗಿ ಹೆಗ್ಗಡೆಯವರು ತಿಳಿಸಿದರು.
ಒಂದು ಕುಟುಂಬದ ಕಾರ್ಯಕ್ರಮದಂತೆ ಎಲ್ಲರೂ ಸಂಭ್ರಮ-ಸಡಗರದಿಂದ ಭಾಗವಹಿಸಿರುವಿರಿ. ಈಗ ತಾವು ಸಂಪೂರ್ಣ ನಿರಾಳರಾಗಿದ್ದು ಅನೇಕ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು.

ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಗ್ರಾಮಸ್ಥರು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದು ಶ್ರದ್ಧಾ-ಭಕ್ತಿಯಿಂದ ಸೇವೆ ಮಾಡುತ್ತಿರುವುದು ಕ್ಷೇತ್ರದ ಸೌಹಾರ್ದಯುತ ಸಂಬಂಧವನ್ನು ಇನ್ನಷ್ಟು ಭದ್ರಗೊಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಲ್ಲರೂ ನಿಮ್ಮ ಮನೆಯ ಹಾಗೂ ಗ್ರಾಮದ ಕಲ್ಯಾಣದ ಬಗ್ಯೆಯೂ ಪ್ರಾರ್ಥನೆ ಮಾಡಿಕೊಳ್ಳಿ. ಎಲ್ಲರಿಗೂ ಶುಭವಾಗಲಿ, ಭವಿಷ್ಯ ಉಜ್ವಲವಾಗಿ ಸುಖ-ಶಾಂತಿ, ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ಹೆಗ್ಗಡೆಯವರು ಶುಭ ಹಾರೈಸಿದರು. ಸತ್ಯದರ್ಶನ ಸಮಾವೇಶದಿಂದ ತಮಗೆ ಸಂತೋಷ ಮತ್ತು ತೃಪ್ತಿ ಉಂಟಾಗಿದೆ ಎಂದರು.
ಡಾ. ಪ್ರದೀಪ್ ನಾವೂರು ಮಾತನಾಡಿ, ದೇವರು ತನ್ನ ಪ್ರಿಯ ಭಕ್ತರ ಮೂಲಕ ಎಲ್ಲಾ ಲೋಕಕಲ್ಯಾಣ ಕಾರ್ಯಗಳನ್ನು ಮಾಡಿಸುತ್ತಾರೆ. ಅದೇ ರೀತಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ, ಧರ್ಮದೇವತೆಗಳು ಹಾಗೂ ಅಣ್ಣಪ್ಪ ಸ್ವಾಮಿಯ ಅನುಗ್ರಹದೊಂದಿಗೆ ತಮ್ಮ ಕರ್ತವ್ಯ ಮತ್ತು ಧರ್ಮದ ನೆಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಲೋಕಕಲ್ಯಾಣ ಕಾರ್ಯಗಳನ್ನು ನಿರಂತರ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿ ಗೌರವಪೂರ್ವಕವಾಗಿ ಅಭಿನಂದಿಸಿದರು.

ಸತ್ಯದರ್ಶನ ಸಮಾವೇಶದ ಸಂಚಾಲಕ ಬೆಳ್ತಂಗಡಿಯ ವಕೀಲ ಸುಬ್ರಹ್ಮಣ್ಯ ಅಗರ್ತ ಸರ್ವರನ್ನೂ ಸ್ವಾಗತಿಸಿ ಸತ್ಯ, ಧರ್ಮ, ನ್ಯಾಯ, ನೀತಿ ಸದಾ ನೆಲೆ ನಿಂತಿರುವ ಪವಿತ್ರಕ್ಷೇತ್ರ ಧರ್ಮಸ್ಥಳದ ಪಾವಿತ್ರö್ಯ ರಕ್ಷಣೆಗೆ ಇಡೀ ತಾಲ್ಲೂಕಿನ ಎಲ್ಲಾ ಜನತೆ ಸದಾ ಕಟಿಬದ್ಧರಾಗಿರುವುದಾಗಿ ಭರವಸೆ ನೀಡಿದರು. ಅಪಪ್ರಚಾರ ಹಾಗೂ ಭ್ರಮೆಯನ್ನು ಸೃಷ್ಟಿಸಿದ ಗೊಂದಲಗಳ ನಿವಾರಣೆಯಾಗುತ್ತಿದ್ದು ಸತ್ಯದ ಸಾಕ್ಷಾತ್ಕಾರವಾಗುತ್ತಿದೆ. ಇಡೀ ಬೆಳ್ತಂಗಡಿ ತಾಲ್ಲೂಕಿನ ಜನರಿಗೆ ತಾಲ್ಲೂಕೇ ಮನೆಯಾಗಿದ್ದು ಧರ್ಮಸ್ಥಳ ದೇವರ ಕೋಣೆಯಾಗಿದೆ. ಹೆಗ್ಗಡೆಯವರೆ ಇಡೀ ಕುಟುಂಬದ ಯಜಮಾನರಾಗಿದ್ದು ಅವರೊಬ್ಬ “ಶ್ರೇಷ್ಠ ಸಾಮಾಜಿಕ ಸಂತ” ಎಂದು ಬಣ್ಣಿಸಿದರು. ಬೆಳ್ತಂಗಡಿ ತಾಲ್ಲೂಕಿನ ಸಮಸ್ತರು ಧರ್ಮಸ್ಥಳದ ರಾಯಭಾರಿಗಳಾಗಿ ಧರ್ಮಕ್ಷೇತ್ರದ ಸೇವೆ ಮಾಡುವುದಾಗಿ ಅವರು ಭರವಸೆ ನೀಡಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಶ್ರದ್ಧಾ ಅಮಿತ್ ಮತ್ತು ಮೈತ್ರಿನಂದೀಶ್ ಉಪಸ್ಥಿತರಿದ್ದರು.
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಉಜಿರೆಯ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಶಶಿಧರ ಶೆಟ್ಟಿ ಬರೋಡಾ, ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದರು.
ಉಜಿರೆಯ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್. ಧನ್ಯವಾದವಿತ್ತರು. ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಉಪನ್ಯಾಸಕ ಪ್ರೊ. ಸುವೀರ್ ಜೈನ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿದರು.

ಸಮಾವೇಶಕ್ಕೆ ಪೂರ್ವಭಾವಿಯಾಗಿ ಧರ್ಮಸ್ಥಳದ ದೇವಸ್ಥಾನದ ಅರ್ಚಕ ರಾಮಕೃಷ್ಣ ಕಲ್ಲೂರಾಯರ ನೇತೃತ್ವದಲ್ಲಿ ಚಂಡಿಕಾಹೋಮ ನಡೆಸಲಾಯಿತು. ಪೂರ್ಣಾಹುತಿ ಸಂದರ್ಭದಲ್ಲಿ ಹೆಗ್ಗಡೆಯವರು ಮತ್ತು ಕುಟುಂಬದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.
ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.
ಅಶೋಕ್ ರೈಗೆ ವಿಶೇಷ ಸನ್ಮಾನ
ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.
ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.
ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.
-
ಪುತ್ತೂರು21 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಪರಾಧ23 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
Uncategorized2 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized2 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















