ಶಿಕ್ಷಣ
Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಫೆಸ್ಟ್ – ಫಿಲೋ ಸೇವಾಮೃತ 2025 ಉದ್ಘಾಟನಾ ಸಮಾರಂಭ
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಎನ್ ಎಸ್ಎಸ್ ದಿನ ಮತ್ತು ವಾರ್ಷಿಕೋತ್ಸವ ಫಿಲೋ- ಸೇವಾಮೃತ 2025 ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು : ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಎನ್ ಎಸ್ಎಸ್ ದಿನ ಮತ್ತು ವಾರ್ಷಿಕೋತ್ಸವ ಫಿಲೋ- ಸೇವಾಮೃತ 2025 ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇಲ್ಲಿನ ಪ್ರಾಶುಂಪಾಲರಾದ ಪ್ರೊ.ಸುಬ್ಬಪ್ಪ ಕೈಕಂಬ ಅವರು ಮಾತನಾಡಿ,ನನಗೆ ಬದುಕನ್ನು ರೂಪಿಸಿದ್ದು ಎನ್ ಎಸ್ ಎಸ್, ಇದೊಂದು ಕ್ರಿಯಾಶೀಲವಾದ ಸಂಘಟನೆಯಾಗಿದೆ. ದ್ವೇಷ, ಅಸೂಯೆ ಮನದಿಂದ ಕಳೆದು ಸೇವೆಯನ್ನು ಮಾಡೋದೆ ಎನ್ ಎಸ್ ಎಸ್ ಆಗಿದೆ. ಎನ್ ಎಸ್ ಎಸ್ ಮೂಲಕ ನಮ್ಮನು ನಾವು ಸ್ವಚ್ಛ ಮಾಡಿಕೊಳ್ಳುತ್ತೇವೆ.ಎನ್ ಎಸ್ ಎಸ್ ಸಂಭಂದವನ್ನು ಹಾಗೂ ಪ್ರೀತಿಯನ್ನು ಕಟ್ಟುವ ಕೆಲಸವನ್ನು ಮಾಡುತ್ತದೆ. ಇನ್ನೊಬ್ಬರನ್ನು ದ್ವೇಷಿಸದ ಹಾಗೆ ಎನ್ ಎಸ್ ಎಸ್ ನಮ್ಮನ್ನು ಬೆಳೆಸುತ್ತದೆ. ಎನ್ ಎಸ್ ಎಸ್ ದಿಂದಾಗಿ ಸ್ವಚ್ಛ ಸುಂದರವಾದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ ಫಾ ಡಾ ಆ್ಯಂಟನಿ ಪ್ರಕಾಶ್ ಮೊಂತೆರೊ ಅವರು ಮಾತನಾಡಿ,ಎನ್ ಎಸ್ ಎಸ್ ನಲ್ಲಿ ಪ್ರತಿಯೊಬ್ಬರೂ ‘ಸೇವೆ’ ಎಂಬ ಪದವನ್ನು ಬಳಸುತ್ತಾರೆ, ಆದರೆ ನೀವು ಸಾಮಾನ್ಯ, ಜವಾಬ್ದಾರಿಯುತ ವಿದ್ಯಾರ್ಥಿಗಳಾಗಿ, ಕುಟುಂಬದ ಸಾಮಾನ್ಯ ಮಕ್ಕಳಾಗಬೇಕು. ನಿಮಗೆ ಜೀವನದ ಗಾಂಭೀರ್ಯ ತಿಳಿದಿದ್ದರೆ, ನೀವು ಜವಾಬ್ದಾರಿಯುತ ಮಗುವಾಗುತ್ತೀರಿ. ನೀವು ಅಸಾಧಾರಣ ಸೇವೆಯನ್ನು ಮಾಡಬೇಕಾಗಿಲ್ಲ, ಮನೆಯಲ್ಲಿ ಜವಾಬ್ದಾರಿಯುತ ಮಗುವಾಗಲು ಪ್ರಯತ್ನಿಸಿ. ಶಿಕ್ಷಣವನ್ನು ಪಡೆದು ಎಲ್ಲಾ ಆಯಾಮಗಳನ್ನು ಅಭಿವೃದ್ಧಿಪಡಿಸಿ. ಜವಾಬ್ದಾರಿಗಳನ್ನು ಕಲಿಯಿರಿ ಎಂದು ಹೇಳಿದರು.

ವೇದಿಕೆಯಲ್ಲಿ ಎನ್ ಎಸ್ ಎಸ್ ಘಟಕದ ಅಧಿಕಾರಿಗಳಾದ ಡಾ ಚಂದ್ರಶೇಖರ್ ಕೆ ಮತ್ತು ಪುಷ್ಪಾ ಎನ್,ಎನ್ ಎಸ್ ಎಸ್ ಕಾರ್ಯದರ್ಶಿ ವಿಷ್ಣುಜೀತ್ ತ್ರಿತೀಯ ಬಿಕಾಂ, ಯೂನಿಟ್ ಲೀಡರ್ಸ್ ಮನ್ವಿತ್ ಬಿ ಎಸ್ ದ್ವಿತೀಯ ಬಿ ಸಿ ಎ, ಮನೀಶ್ ಬಿ ಪಿ ದ್ವಿತೀಯ ಬಿ ಎಸ್ಸಿ, ಜಿ ಲವಿಕಾ ದ್ವಿತೀಯ ಬಿ ಕಾಂ, ಪುಣ್ಯ ಕೆ ದ್ವಿತೀಯ ಬಿ ಬಿ ಎ, ಕಾಲೇಜಿನ ಉಪ ಪ್ರಾಶುಂಪಾಲರಾದ ಡಾ ವಿಜಯ್ ಕುಮಾರ್ ಎಂ,ಪಿ ಆರ್ ಒ ಭಾರತಿ ಎಸ್ ರೈ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ
ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

ಪುತ್ತೂರು: ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದಲ್ಲಿ ಪದವೀಧರರ ಮಹಾಪೂರವಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಿವಿಲ್ ಸರ್ವೀಸಸ್ ಹಾಗೂ ರಕ್ಷಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಯುವಕರ ಭಾಗವಹಿಸುವಿಕೆ ಹಿಂದಿನಿಂದಲೂ ಕಡಿಮೆಯಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಉದ್ಯೋಗಗಳು ಅಥವಾ ಗಲ್ಫ್ ದೇಶಗಳ ವಲಸೆಗೆ ಸೀಮಿತರಾಗಿದ್ದರು. ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.
ಸಾಮಾನ್ಯವಾಗಿ ದೊಡ್ಡ ಮಟ್ಟದ ಕೋಚಿಂಗ್ ಸಂಸ್ಥೆಗಳು ನೂರರಲ್ಲಿ ಒಬ್ಬರು IAS ಅಥವಾ KAS ಅಧಿಕಾರಿಯಾದರೆ ಆ ಯಶಸ್ಸನ್ನು ಮಾತ್ರ ದೊಡ್ಡದಾಗಿ ಬಿಂಬಿಸುತ್ತವೆ. ಆದರೆ, ಆ ಪ್ರಕ್ರಿಯೆಯಲ್ಲಿ ಸ್ಪರ್ಧೆಗಿಳಿದು ಸೋತ ಉಳಿದ 99 ವಿದ್ಯಾರ್ಥಿಗಳ ಭವಿಷ್ಯದ ಕಥೆಯೇನು ಎಂಬ ಆಳವಾದ ಸಾಮಾಜಿಕ ಪ್ರಶ್ನೆಯನ್ನು ವಿದ್ಯಾಮಾತಾ ಅಕಾಡೆಮಿಯ ಮ್ಯಾನೇಜಿಂಗ್ ಡೈರೆಕ್ಟರ್ ಭಾಗ್ಯೇಶ್ ರೈ ಮುಂದಿಟ್ಟಿದ್ದಾರೆ. ಒಬ್ಬ ವಿಜೇತನನ್ನು ರೂಪಿಸುವಷ್ಟೇ ಗಂಭೀರವಾಗಿ, ಅಲ್ಲಿ ಹಿನ್ನಡೆ ಅನುಭವಿಸುವ ಉಳಿದ 99 ವಿದ್ಯಾರ್ಥಿಗಳ ಬದುಕಿಗೂ ಭದ್ರತೆ ಮತ್ತು ಆತ್ಮವಿಶ್ವಾಸ ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸಂಸ್ಥೆಯ ಮೂಲ ಮಂತ್ರವಾಗಿದೆ.
ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕೇವಲ ಅಂಕಗಳ ಬೆನ್ನೇರುವ ಯುವಜನತೆಗೆ ಪ್ರಾಯೋಗಿಕ ಕೌಶಲ್ಯ, ಸಂವಹನ ಕಲೆ ಹಾಗೂ ವಾಸ್ತವ ಜಗತ್ತಿನ ಸವಾಲುಗಳನ್ನು ಎದುರಿಸುವ ತಾಕತ್ತು ಕೊರತೆಯಿದೆ. ಸ್ನಾತಕೋತ್ತರ ಪದವಿ ಪಡೆದರೂ ಕನಿಷ್ಠ ಸ್ವ-ಪರಿಚಯ ಮಾಡಿಕೊಳ್ಳಲು ಅಥವಾ ಕಂಪ್ಯೂಟರ್ ನಿರ್ವಹಿಸಲು ಬಾರದ ಇಂದಿನ ಸ್ಥಿತಿಯನ್ನು ಬದಲಾಯಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸ್ವಾವಲಂಬನೆಯನ್ನು ತುಂಬುವ ಕೆಲಸ ಇಲ್ಲಿ ನಡೆಯುತ್ತಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಿರ್ಣಾಯಕ ಹಂತದಲ್ಲಿ ಸಮಯವನ್ನು ವ್ಯರ್ಥ ಮಾಡದಂತೆ ಸಂಸ್ಥೆಯು ‘ಕಲಿಕೆಯೊಂದಿಗೆ ಗಳಿಕೆ’ ಎನ್ನುವ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಪಿಯುಸಿ (PUC) ಮುಗಿದ ಕೂಡಲೇ ದೂರಶಿಕ್ಷಣದ ಮೂಲಕ ಡಿಗ್ರಿ (ಬಿ.ಎ, ಬಿ.ಕಾಮ್, ಬಿ.ಬಿ.ಎ) ವ್ಯಾಸಂಗಕ್ಕೆ ದಾಖಲಾಗಿ, ಅದೇ ಮೂರು ವರ್ಷಗಳ ಅವಧಿಯಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಪೊಲೀಸ್ ಹಾಗೂ ರರಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾನಾಂತರ ತರಬೇತಿ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಯು ಪದವಿ ಮುಗಿಸುವ ವೇಳೆಗೆ ಸರ್ಕಾರದ ಉದ್ಯೋಗ ಅಥವಾ ಉನ್ನತ ಖಾಸಗಿ ವಲಯದಲ್ಲಿ ನೆಲೆಗೊಳ್ಳಲು ಸಂಪೂರ್ಣ ಸಿದ್ಧನಾಗಿರುತ್ತಾನೆ.
ವಿಶೇಷವಾಗಿ ಭಾರತೀಯ ಭೂಸೇನೆ (Agniveer), ವಾಯುಸೇನೆ, ನೌಕಾಸೇನೆ, ಅರೆಮಿಲಿಟರಿ ಪಡೆಗಳು, ಕರ್ನಾಟಕ ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ನೇಮಕಾತಿಗಾಗಿ ಯುವಕರಿಗೆ 17ನೇ ವಯಸ್ಸಿನಿಂದಲೇ ಸುವರ್ಣ ಅವಕಾಶಗಳಿವೆ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಲಿಖಿತ ಪರೀಕ್ಷೆಯಷ್ಟೇ ಅಲ್ಲದೆ, ನುರಿತ ತರಬೇತುದಾರರಿಂದ ಮೈದಾನದಲ್ಲಿ ದೈಹಿಕ ಕ್ಷಮತೆ ಮತ್ತು ಕಠಿಣ ತರಬೇತಿಯನ್ನು ನೀಡಲಾಗುತ್ತಿದೆ. ಇದರೊಂದಿಗೆ ನವೋದಯ, ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಗಳು, KAR-TET, KSET, NET, HSTR, PSTR, GPSTR ನಂತಹ ಶೈಕ್ಷಣಿಕ ಹಾಗೂ ಬೋಧನಾ ಅರ್ಹತಾ ಪರೀಕ್ಷೆಗಳಿಗೂ ಇಲ್ಲಿ ಅತ್ಯುತ್ತಮ ತರಬೇತಿ ಲಭ್ಯವಿದೆ.
ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಅವರ ನೇತೃತ್ವದಲ್ಲಿ ಸಂಸ್ಥೆಯು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ದಿನದ 24 ಗಂಟೆಯೂ ನಿರಾಳವಾಗಿ ಓದಲು ‘ದೇವಿದ್ಯಾ’ 24×7 ಸದಾಶಿವ ಅಧ್ಯಯನ ಗ್ರಂಥಾಲಯ ಹಾಗೂ AI ಚಾಲಿತ ಡಿಜಿಟಲ್ ಇಂಟರಾಕ್ಟಿವ್ ಪ್ಯಾನಲ್‌ಗಳನ್ನು ಹೊಂದಿರುವ ‘ಸ್ತುತ್ಯ’ ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ.
ಇದರೊಂದಿಗೆ ಟ್ಯಾಲಿ ಪ್ರೈಮ್, ಪ್ರಾಯೋಗಿಕ ಅಕೌಂಟಿಂಗ್, ಗಲ್ಫ್ ವ್ಯಾಟ್ (Gulf VAT), ಡೇಟಾ ಅನಾಲಿಟಿಕ್ಸ್, ಕೋಡ್-ಆರ್ಕಿಟೆಕ್ಟ್ ಪ್ರೋಗ್ರಾಮಿಂಗ್ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿಗಳನ್ನು ನೀಡುವುದರ ಮೂಲಕ ಕರಾವಳಿಯ ಯುವಜನತೆಯನ್ನು ಜಾಗತಿಕ ಮಟ್ಟದ ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಬರಿ ಅಂಕಗಳ ಕಾರ್ಖಾನೆಯಾಗದೆ, ಬದುಕಿನ ಪ್ರತಿ ಹಂತದಲ್ಲೂ ವಿದ್ಯಾರ್ಥಿಗೆ ಭರವಸೆಯ ದಾರಿದೀಪವಾಗುವ ಮೂಲಕ ವಿದ್ಯಾಮಾತಾ ಅಕಾಡೆಮಿಯು ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
-
Uncategorized20 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized23 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized22 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized23 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
ಅಂತರ ರಾಜ್ಯ6 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized22 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್6 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಸ್ಥಳೀಯ7 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ


















