ಶಿಕ್ಷಣ
Vivekananda College-ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ
ಪುತ್ತೂರು: ವಿವೇಕಾನಂದ ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ(ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಎನ್ಸಿಸಿ, ರೆಡ್ಕ್ರಾಸ್ ಹಾಗೂ ಎನ್ಎಸ್ಎಸ್ ಘಟಕ ಹಾಗೂ ಕಾಲೇಜಿನ ಐಕ್ಯೂಎಸಿ ಇದರ ಸಹಯೋಗದಲ್ಲಿ ಪುತ್ತೂರಿನ ರೈಲ್ವೇ ಸ್ಟೇಷನ್ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಸಿತು.

‘ಸ್ವಚ್ಛತಾ ಹಿ ಸೇವಾ’ ಎನ್ನುವ ಅಭಿಯಾನದಡಿಯಲ್ಲಿ ನಡೆದ ಈ ಕಾರ್ಯದಲ್ಲಿ ಕಾಲೇಜಿನ ಎನ್ಸಿಸಿ ಅಧಿಕಾರಿ ಲೆ.ಭಾಮಿ ಅತುಲ್ ಶೆಣೈ, ಎನ್ಎಸ್ಎಸ್ ಅಧಿಕಾರಿ ಡಾ. ಅರುಣ್ ಪ್ರಕಾಶ್, ರೆಡ್ ಕ್ರಾಸ್ ಘಟಕದ ಸಂಯೋಜಕಿ ಡಾ.ದುರ್ಗಾ ರತ್ನ ಹಾಗೂ ರೈಲ್ವೇ ಸ್ಟೇಷನ್ ನ ಅಧಿಕಾರಿಗಳು ಉಪಸ್ಥಿತರಿದ್ದರು.
ಸಂಗ್ರಹವಾದ ಸುಮಾರು 70 ಕೆ.ಜಿ ಯಷ್ಟು ತ್ಯಾಜ್ಯವನ್ನು ವಿದ್ಯಾರ್ಥಿಗಳು ಪುತ್ತೂರು ಪುರಸಭೆಗೆ ಹಸ್ತಾಂತರಿಸಲಾಯಿತು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರವು ನ 24 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರವು ನ 24 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರು ಅನಿಕೇತನ ಲಾ ಚೇಂಬರ್ಸ್ ನ ವಕೀಲರಾದ ಕೃಷ್ಣಪ್ರಸಾದ್ ಎನ್ ಆರ್ ಮಾತನಾಡಿ, ಪತ್ರಿಕೆಗಳಲ್ಲಿ ಆಗಾಗ ವರದಿಯಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ಬಾಲಕಿಯರ ಅಪಹರಣ, ಆ್ಯಸಿಡ್ ದಾಳಿ ಮುಂತಾದ ಘಟನೆಗಳು ಸಮಾಜದಲ್ಲಿ ಆತಂಕವನ್ನು ಉಂಟುಮಾಡುತ್ತಿವೆ. ಇಂತಹ ಅನ್ಯಾಯಗಳು ನಡೆಯುವಾಗ ಅನೇಕರು ಧ್ವನಿ ಎತ್ತದೆ ಮೌನವಾಗಿರುವುದು ವಿಷಾದನೀಯ. ಅನ್ಯಾಯದ ವಿರುದ್ಧ ಪ್ರತಿಯೊಬ್ಬರೂ ಧೈರ್ಯದಿಂದ ಧ್ವನಿ ಎತ್ತಬೇಕು. ಮಹಿಳೆಯರ ಮೇಲಿನ ದೌರ್ಜನ್ಯವೆಂದರೆ ಕೇವಲ ದೈಹಿಕ ಹಿಂಸೆ ಮಾತ್ರವಲ್ಲ; ಮಾನಸಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಶೋಷಣೆ ಮತ್ತು ತಾರತಮ್ಯವೂ ದೌರ್ಜನ್ಯದ ವ್ಯಾಪ್ತಿಗೆ ಬರುತ್ತವೆ ಎಂದು ವಿವರಿಸಿದರು. ಮಹಿಳೆಯರ ಮೇಲಿನ ಯಾವುದೇ ರೀತಿಯ ದೌರ್ಜನ್ಯವನ್ನು ಸಹಿಸದೆ, ಅದರ ವಿರುದ್ಧ ಧ್ವನಿ ಎತ್ತಬೇಕು ಹಾಗೂ ಇತರರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ನಮ್ಮ ಸಮಾಜವು ಸಾಂಪ್ರದಾಯಿಕವಾಗಿ ಪುರುಷ ಪ್ರಧಾನ ಸಮಾಜವಾಗಿದ್ದು, ಪುರುಷರ ಪ್ರಾಬಲ್ಯದಿಂದಾಗಿ ಮಹಿಳೆಯರಿಗೆ ಸಮಾನ ಸ್ವಾತಂತ್ರ್ಯ ಮತ್ತು ಅವಕಾಶಗಳು ದೊರೆಯದೆ ಇದ್ದ ಸಂದರ್ಭಗಳಿವೆ. ಈ ಅಸಮಾನತೆಯು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದೆ. ಆದರೆ ಶಿಕ್ಷಣದಿಂದಾಗಿ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳು ಉಂಟಾಗಿವೆ. ಹಿಂದೆ ಮಹಿಳೆಯರಿಗೆ ಸ್ವಾತಂತ್ರ್ಯ ಬಹಳ ಕಡಿಮೆಯಿತ್ತು. ಆದರೆ ಇಂದು ಮಹಿಳೆಯರು ಉತ್ತಮ ಶಿಕ್ಷಣ ಪಡೆದು, ಸ್ವಾವಲಂಬಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸ್ವಾತಂತ್ರ್ಯ ಮತ್ತು ಸಮಾನ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಆದಾಗ್ಯೂ, ಮಹಿಳೆಯರ ಮೇಲಿನ ದೌರ್ಜನ್ಯಗಳು ಇನ್ನೂ ಮುಂದುವರಿದಿರುವುದು ಕಳವಳಕಾರಿ ಸಂಗತಿಯಾಗಿದೆ. ಮಹಿಳೆಯರ ಸುರಕ್ಷತೆ, ಘನತೆ ಮತ್ತು ಸಮಾನತೆಯನ್ನು ಖಚಿತಪಡಿಸಲು ಇನ್ನೂ ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಮಹಿಳಾ ಸಬಲೀಕರಣ ಘಟಕದ ನಿರ್ದೇಶಕರಾದ ಸತ್ಯಾಲತಾ ರೈ ಹಾಗೂ ಅವಿನಾ ಮಾಡ್ತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿಕ್ಷಣ
Philomena-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಚಿನ್ನದ ಪದಕ
ಮಾಝ್ ಟೇಕ್ವಾಂಡೋ ಅಕಾಡೆಮಿ ಆಶ್ರಯದಲ್ಲಿ ನ 15 ರಂದು ನಡೆದ ರಾಜ್ಯಮಟ್ಟದ ಓಪನ್ ಸ್ಟೇಟ್ ಲೆವೆಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ 2026 – 27′ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಮಾಝ್ ಟೇಕ್ವಾಂಡೋ ಅಕಾಡೆಮಿ ಆಶ್ರಯದಲ್ಲಿ ನ 15 ರಂದು ನಡೆದ ರಾಜ್ಯಮಟ್ಟದ ಓಪನ್ ಸ್ಟೇಟ್ ಲೆವೆಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ 2026 – 27′ ಟೇಕ್ವಾಂಡೋ
ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ. ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ಪುತ್ತೂರು: ನಾಳೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ವಾರ್ಷಿಕೋತ್ಸವ
ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.
ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.26ರಂದು ಗುರುವಾರ ಮಧ್ಯಾಹ್ನ 2.30ರಿಂದ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುಟಾಣಿಗಳ ಮುಗ್ಧ ನೃತ್ಯ ಪ್ರದರ್ಶನದಿಂದ ಹಿಡಿದು ಹಿರಿಯ ವಿದ್ಯಾರ್ಥಿಗಳ ಅರ್ಥಪೂರ್ಣ ಸಾಂಸ್ಕೃತಿಕ ಪ್ರಸ್ತುತಿಗಳವರೆಗೆ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳು ನಡೆಯಲಿದ್ದು, ಶಾಲಾ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ ಪಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತಿ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಗೌರವ ಅತಿಥಿಯಾಗಿ FirstByteFast ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸಿಇಒ ಸ್ವಸ್ತಿಕ್ ಪದ್ಮ ಉಪಸ್ಥಿತರಿದ್ದು, ತಮ್ಮ ಅನುಭವ ಹಾಗೂ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಕನಸು ಮತ್ತು ಹುಮ್ಮಸ್ಸು ತುಂಬಲಿದ್ದಾರೆ.
ದಿನವಿಡೀ ಸಾಂಸ್ಕೃತಿಕ ವೈಭವ
ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಶಿಕ್ಷಣದ ಪ್ರದರ್ಶನದೊಂದಿಗೆ ಆರಂಭವಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಭಕ್ತಿ, ಶಿಸ್ತು ಮತ್ತು ಸಂಸ್ಕಾರ ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣದ ಪರಿಚಯ ಈ ಪ್ರದರ್ಶನದ ಮೂಲಕ ದೊರೆಯಲಿದೆ.
ಮಧ್ಯಾಹ್ನ 3ರಿಂದ 4ರವರೆಗೆ ಪೂರ್ವ ಪ್ರಾಥಮಿಕದಿಂದ 2ನೇ ತರಗತಿವರೆಗಿನ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮುದ್ದಾದ ವೇಷಭೂಷಣ, ಮುಗ್ಧ ಅಭಿನಯ ಹಾಗೂ ಲಯಬದ್ಧ ನೃತ್ಯಗಳ ಮೂಲಕ ಪುಟಾಣಿಗಳು ಸಭಿಕರನ್ನು ರಂಜಿಸಲಿದ್ದಾರೆ.

ಸಂಜೆ 4ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಬಳಿಕ ಸಂಜೆ 5.30ರಿಂದ 3ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ನೃತ್ಯ, ನಾಟಕ, ಸಂಗೀತ ಹಾಗೂ ರೂಪಕಗಳ ಮೂಲಕ ಹಿರಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಲಾ ಸಂಚಾಲಕ ರವಿನಾರಾಯಣ ಎಂ. ತಿಳಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಾರ್ಷಿಕೋತ್ಸವವು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ; ಮಕ್ಕಳ ವರ್ಷವಿಡೀ ನಡೆದ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಪ್ರತಿಫಲವಾಗಿದೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ವೇದಿಕೆಯ ಮೇಲೆ ಅನಾವರಣಗೊಳಿಸುವ ಪ್ರಯತ್ನವೇ ಈ ವಾರ್ಷಿಕೋತ್ಸವದ ವಿಶೇಷವಾಗಿದೆ.
-
Uncategorized20 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ7 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ7 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್7 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕಾರ್ಯಕ್ರಮಗಳು6 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ5 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ5 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸಿನೆಮಾ5 hours agoAakasham Lo Ok Tara-ಬಾಕ್ಸ್ ಆಫೀಸ್ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’















