ದಿನಾಂಕ 26-09-2025 […]" /> ದಿನಾಂಕ 26-09-2025 […]"> Mangalore-BIG BREAKING: ಮಂಗಳೂರು : ಕಾರಿನಲ್ಲಿ ಅಪಹರಿಸಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ದರೋಡೆ - ಐವರು ಬಂಧನ, ಬಾಲಕ ಸೇರಿ ಮಾಹಿತಿ ನೀಡಿದವನ ಕೃತ್ಯ ಬಯಲು- ಇಲ್ಲಿದೆ ಬೆಚ್ಚಿ ಬೀಳಿಸಿದ ಘಟನೆಯ Inside Story - Nikhara News | Kannada News Website
Connect with us

ಮಂಗಳೂರು

Mangalore-BIG BREAKING: ಮಂಗಳೂರು : ಕಾರಿನಲ್ಲಿ ಅಪಹರಿಸಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ದರೋಡೆ – ಐವರು ಬಂಧನ, ಬಾಲಕ ಸೇರಿ ಮಾಹಿತಿ ನೀಡಿದವನ ಕೃತ್ಯ ಬಯಲು- ಇಲ್ಲಿದೆ ಬೆಚ್ಚಿ ಬೀಳಿಸಿದ ಘಟನೆಯ Inside Story

Published

on

Ad Widget

Ad Widget

Ad Widget

Ad Widget

ನಗರದ ಕಾರ್ ಸ್ಟ್ರೀಟ್ ಬಳಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಪ್ರಾಪ್ತ ಬಾಲಕನೂ ಸೇರಿದ್ದು, ದರೋಡೆಗೆ ಬೇಕಾದ ಮಾಹಿತಿ ಒದಗಿಸಿದವನು ಇವರೇ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕಾರ್ ಸ್ಟ್ರೀಟ್ ಬಳಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಪ್ರಾಪ್ತ ಬಾಲಕನೂ ಸೇರಿದ್ದು, ದರೋಡೆಗೆ ಬೇಕಾದ ಮಾಹಿತಿ ಒದಗಿಸಿದವನು ಇವರೇ ಎಂದು ತಿಳಿದುಬಂದಿದೆ.

Ad Widget

Ad Widget alt="Ad Widget"/>

Ad Widget

ದಿನಾಂಕ 26-09-2025 ರಂದು ರಾತ್ರಿ 8:45ರ ಸುಮಾರಿಗೆ ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರ ಮುಸ್ತಾಫಾ ಅವರು ತಮ್ಮ ಸ್ಕೂಟರ್ (KA-19EZ-2079) ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಕಾರ್ ಸ್ಟ್ರೀಟ್ನಲ್ಲಿರುವ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

Ad Widget

Ad Widget <> Ad Widget

ದರೋಡೆಯ ವಿವರಗಳು:
ಇಬ್ಬರು ಆರೋಪಿಗಳು ಸ್ಕೂಟರಿನಲ್ಲಿ ಬಂದು ಮುಸ್ತಾಫಾ ಅವರನ್ನು ತಡೆದಿದ್ದಾರೆ. ಅದೇ ಸಮಯದಲ್ಲಿ, ಇನ್ನಿತರ ಆರೋಪಿಗಳು ಕಾರೊಂದರಲ್ಲಿ ಬಂದು ಮುಸ್ತಾಫಾ ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ. ಕಾರಿನಲ್ಲಿ ಹಲ್ಲೆ ನಡೆಸಿ, ನಂತರ ಮಂಗಳೂರು ಎಕ್ಕೂರು ಬಳಿ ಅವರನ್ನು ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಲಂ 137(2), 310(2) BNS -2023 ರಂತೆ ಪ್ರಕರಣ ದಾಖಲಾಗಿ, ತನಿಖೆ ಕೈಗೊಳ್ಳಲಾಗಿತ್ತು. ಕೃತ್ಯದ ಸಿಸಿಟಿವಿ ಸಾಮಾಜಿಕ ಮಾದ್ಯಮದಲ್ಲಿ ವೈರಲ್‌ ಆಗಿತ್ತು.

ಬಂಧಿತ ಆರೋಪಿಗಳು:
ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಸೆ .26ರಂದು ಈ ಕೆಳಗಿನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ:

Ad Widget

Ad Widget
  1. ಫಾರಿಶ್ (18 ವರ್ಷ): ಅಬ್ದುಲ್ ಲತೀಫ್ ಅವರ ಪುತ್ರ, ಮುಮ್ತಾಝ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಕೆ.ಸಿ.ರೋಡ್, ಕೋಟೆಕಾರು ಅಂಚೆ ಮತ್ತು ಗ್ರಾಮ, ಉಳ್ಳಾಲ ತಾಲ್ಲೂಕು ನಿವಾಸಿ.
  2. ಸಫ್ವಾನ್ (23 ವರ್ಷ): ಹಸನಬ್ಬ ಅವರ ಪುತ್ರ, ಮಹಮ್ಮದ್ ಕಂಪೌಂಡ್, ಮುಕ್ಕಚೇರಿ, ಉಳ್ಳಾಲ ಗ್ರಾಮ, ಉಳ್ಳಾಲ ತಾಲ್ಲೂಕು ನಿವಾಸಿ.
  3. ಅರಾಫತ್ ಆಲಿ (18 ವರ್ಷ): ಮೊಹಮ್ಮದ್ ಬಶೀರ್ ಅವರ ಪುತ್ರ, ಮಾಸ್ತಿಕಟ್ಟೆ, ಉಳ್ಳಾಲ ತಾಲ್ಲೂಕು ನಿವಾಸಿ.
  4. ಫರಾಝ್ (19 ವರ್ಷ): ಇಸ್ಮಾಯಿಲ್ ಅವರ ಪುತ್ರ, ಉಳ್ಳಾಲ ದರ್ಗಾ ಸಮೀಪ, ಉಳ್ಳಾಲ, ಮಂಗಳೂರು ನಿವಾಸಿ.
  5. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ: (ಹೆಸರು ಬಹಿರಂಗಪಡಿಸಿಲ್ಲ)
  6. ಬಾಲಕನ ಪಾತ್ರ ಮತ್ತು ಪೂರ್ವಯೋಜಿತ ಕೃತ್ಯ:
    ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನು ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಾಯ್ಸ್ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಇದೇ ಅಂಗಡಿಯಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಫಾರಿಶ್ ಎಂಬಾತನ್ನು ಈ ಬಾಲಕನಲ್ಲಿ ಚಿನ್ನದ ಗಟ್ಟಿ ಸಾಗಣೆಯ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದನು. ಅದರಂತೆ, ಮುಸ್ತಾಫಾ ಅವರು ಸೆ 26ರಂದು ರಾತ್ರಿ 8:30 ಗಂಟೆಗೆ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ಶುದ್ಧೀಕರಿಸಲು ರಥಬೀದಿಯ ಸಂತೋಷ್ ಎಂಬವರ ಅಂಗಡಿಗೆ ಸ್ಕೂಟರ್‌ ನಲ್ಲಿ ತೆರಳುತ್ತಿದ್ದರು. ಈ ಮಾಹಿತಿಯನ್ನು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಆರೋಪಿ ಫಾರಿಶ್ಗೆ ರವಾನಿಸಿದ್ದಾನೆ.
  7. ಈ ಮಾಹಿತಿಯ ಆಧಾರದ ಮೇಲೆ, ಆರೋಪಿಗಳು ಪೂರ್ವಯೋಜಿತ ಸಂಚು ರೂಪಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಲು ಯೋಜನೆ ರೂಪಿಸಿದ್ದರು. ಆರೋಪಿ ಸಫ್ವಾನ್ ದರೋಡೆಗೆ ಬೇಕಾದ ಕಾರನ್ನು ಒದಗಿಸಿದ್ದಾನೆ.ಮುಸ್ತಾಫರವರು ಜಿಎಚ್ಎಸ್ ರಸ್ತೆಯ ಮೂಲಕ ರಥಬೀದಿ ವೆಂಕಟರಮಣ ದೇವಸ್ಥಾನದ ಬಳಿ ಬಂದಾಗ,ಆರೋಪಿಗಳಾದ ಅರಾಫತ್ ಆಲಿ ಮತ್ತು ಫರಾಝ್ ಸುಜುಕಿ ಆಕ್ಸೆಸ್ ಸ್ಕೂಟರಿನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ನಂತರ, ಸಫ್ವಾನ್ ಒದಗಿಸಿದ ಬಿಳಿ ಬಣ್ಣದ ಕಾರಿನಲ್ಲಿ ಬಂದ ಉಳಿದ ಆರೋಪಿಗಳು ಮುಸ್ತಾಫಾ ಅವರನ್ನು ಅಪಹರಿಸಿ, ಹಲ್ಲೆ ನಡೆಸಿ, ಎಕ್ಕೂರು ಬಳಿ ಇಳಿಸಿ ಚಿನ್ನದ ಗಟ್ಟಿಯನ್ನು ಕಸಿದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
  8. ಪೊಲೀಸರು ಕೃತ್ಯಕ್ಕೆ ಬಳಸಿದ ಸುಜುಕಿ ಆಕ್ಸೆಸ್ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ದರೋಡೆ ಮಾಡಿದ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲು ತನಿಖೆ ಮುಂದುವರಿದಿದೆ.
  9. ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ), ಮಂಗಳೂರು ನಗರ, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗ, ಮತ್ತು ಸಹಾಯಕ ಪೊಲೀಸ್ ಆಯುಕ್ತರು, ಸಿಸಿಬಿ ಘಟಕ ಮಂಗಳೂರು ರವರ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿ ಹಾಗೂ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!