ಮಂಗಳೂರು
Puttur-ಪುತ್ತೂರು : ಮಹಿಳೆಯರು ಹಾಗೂ ಅಪ್ರಾಪ್ತೆಯರಿದ್ದ ಪಿಜಿಗೆ ಬಂದು ಲೈಂಗಿಕ ಕಿರುಕುಳ – ಕಾಮುಕನ ಅಪರಾಧ ಸಾಬೀತು ; ಆರೋಪಿ ನಮನ್ ನಾಯಕ್ ಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟು ತೀರ್ಪು
ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರು ವಾಸವಾಗಿದ್ದ ಪಿಜಿಗೆ ಬಂದು ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ನಮನ್ ನಾಯಕ್ಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಪುತ್ತೂರು : ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರು ವಾಸವಾಗಿದ್ದ ಪಿಜಿಗೆ ಬಂದು ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ನಮನ್ ನಾಯಕ್ಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಮುಕ್ವೆ ನಿವೇದಿತ ನಿಲಯ ನಿವಾಸಿ ನಮನ್ ನಾಯಕ್ ಶಿಕ್ಷೆಗೊಳಗಾದಾತ. 8 ವರ್ಷಗಳ ಹಿಂದೆ ಅಂದರೇ 2013ರಲ್ಲಿ ಈತ ಪುತ್ತೂರು ನಗರದ ನೆಲ್ಲಿಕಟ್ಟೆಯಲ್ಲಿರುವ ಪಿಜಿಯಲ್ಲಿ ಕೃತ್ಯ ಎಸಗಿದ್ದ.
ಪಿಜಿಯ ಮೇಲಂತಸ್ತಿನಲ್ಲಿ ಬಾಡಿಗೆಗೆ ನೀಡಲಾಗಿದ್ದ ಮಹಿಳೆಯರ ಮತ್ತು ಅಪ್ರಾಪ್ತ ಬಾಲಕಿಯರ ವಸತಿಗೃಹಕ್ಕೆ ಊಟ ತಿಂಡಿ ಕೊಡುವ ನೆಪದಲ್ಲಿ ಆಗಾಗ್ಗೆ ನಮನ್ ಬರುತ್ತಿದ್ದ. ಈ ಸಮಯದಲ್ಲಿ ತಡರಾತ್ರಿಯವರೆಗೆ ಅಲ್ಲೇ ಕಾಲ ಕಳೆಯುತ್ತಿದ್ದಲ್ಲದೆ, ಬಾಲಕಿಯರೊಂದಿಗೆ ಲೈಂಗಿಕ ಉದ್ದೇಶದಿಂದ ಅಶ್ಲೀಲ ಪದಗಳನ್ನು ಬಳಸುತ್ತಾ, ಅವರನ್ನು ಅವಮಾನಿಸುತ್ತಿದ್ದ.
ತಡರಾತ್ರಿ ಪಿಜಿಗೆ ಬರುವುದನ್ನು ಪ್ರಶ್ನಿಸಿದಾಗ ಬಾಲಕಿಯರೊಂದಿಗೆ ಏರುಧ್ವನಿಯಲ್ಲಿ ಮಾತನಾಡಿ, ಅಪ್ರಾಪ್ತೆಯರಿಗೆ ಹಲ್ಲೆ ಮಾಡಿ, ಸೊಂಟ ಮತ್ತು ಹಿಂಭಾಗಕ್ಕೆ ಹೊಡೆದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ, ಓರ್ವ ಬಾಲಕಿ ಕಾಂಡೋಮ್ ಬಳಸುತ್ತಾಳೆ ಎಂದು ಸುಳ್ಳು ಅಪಪ್ರಚಾರ ಮಾಡಿ ಜೀವ ಬೆದರಿಕೆಯನ್ನೂ ಒಡ್ಡಿದ್ದ.
ಬಾಲಕಿಯರ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಸಂತ್ರಸ್ತ ಬಾಲಕಿಯರು ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಸವಿವರವಾದ ಹೇಳಿಕೆ ನೀಡಿದರು. ಪುತ್ತೂರು ಪೊಲೀಸ್ ಉಪನಿರೀಕ್ಷಕಿ ಓಮನಾ ಎನ್.ಕೆ. ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಗ್ಗೆ ವಿವರವಾದ ಸಾಕ್ಷ್ಯ ನೀಡಿದರು.
ನ್ಯಾಯಾಧೀಶರಾದ ಶ್ರೀಮತಿ ಸರಿತಾ ಡಿ. ಅವರು ಇತ್ತಂಡಗಳ ವಾದ ಆಲಿಸಿ, ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಶಿಕ್ಷೆಯ ವಿವರ:
• ಭಾ.ದಂ.ಸಂ. ಕಲಂ 448 ರಡಿ: 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ. 1000/- ದಂಡ. ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಸಾದಾ ಶಿಕ್ಷೆ.
• ಭಾ.ದಂ.ಸಂ. ಕಲಂ 354 ರಡಿ: 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 30,000/- ದಂಡ. ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.
• ಭಾ.ದಂ.ಸಂ. ಕಲಂ 506 ರಡಿ: 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ. 5,000/- ದಂಡ. ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ.
• ಪೋಕ್ಸೋ ಕಾಯ್ದೆ ಕಲಂ 12 ರಡಿ: 2 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 10,000/- ದಂಡ.
ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.
ದಂಡದ ಮೊತ್ತದಲ್ಲಿ ರೂ. 20,000/- ವನ್ನು ನೊಂದ ಮಹಿಳೆಗೆ ) ನೀಡಲು ನ್ಯಾಯಾಲಯ ಆದೇಶಿಸಿದೆ. ಅಲ್ಲದೆ, ನೊಂದ ಐವರು ಬಾಲಕಿಯರಿಗೆ ಕಲಂ 357A ಅಡಿಯಲ್ಲಿ ತಲಾ ರೂ. 20,000/- ವನ್ನು ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯವು ಆದೇಶಿಸಿದೆ.
ಸರಕಾರದ ಪರವಾಗಿ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಅಂತರ ರಾಜ್ಯ6 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!















