Connect with us

ಕಾರ್ಯಕ್ರಮಗಳು

Beltangadi-ಬೆಳ್ತಂಗಡಿ: ಸಿರಿ ಕೇಂದ್ರ ಕಛೇರಿಯಲ್ಲಿ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸರ‍್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ಸೆ.29 ರಂದು ಬೆಳ್ತಂಗಡಿ ಸಿರಿ ಕೇಂದ್ರ ಕಚೇರಿಯಲ್ಲಿ ಜರುಗಿತು.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸರ‍್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ಸೆ.29 ರಂದು ಬೆಳ್ತಂಗಡಿ ಸಿರಿ ಕೇಂದ್ರ ಕಚೇರಿಯಲ್ಲಿ ಜರುಗಿತು.

Ad Widget

Ad Widget

Ad Widget alt="Ad Widget"/>

Ad Widget

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ದನ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಛೇರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಅಮ್ಮಿಯವರು ದೀಪ ಪ್ರಜ್ವಲಿಸಿ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.

Ad Widget

Ad Widget <> Ad Widget

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್. ಜನಾರ್ದನರವರು ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಖಾಯಿಲೆಯನ್ನು ಪ್ರಾರಂಭಿಕ ಹಂತದಲ್ಲಿಯೆ ಪತ್ತೆ ಹಚ್ಚಿ ಅದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆಯುವುದರಿಂದ ಮುಂದಾಗುವ ಬಾರಿ ಅನಾಹುತವನ್ನು ತಪ್ಪಿಸಬಹುದಾಗಿದೆ. ನಮ್ಮ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡಲ್ಲಿ ಅದನ್ನು ಗೌಪ್ಯವಾಗಿಡದೆ ಸಕಾಲದಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯುವುದರಿಂದ ನಮ್ಮ ಅತ್ಯಮೂಲ್ಯ ಜೀವವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಪೂಜ್ಯರು ಹಾಗೂ ಮಾತೃಶ್ರೀ ಅಮ್ಮನವರ ಆಶ್ರಯದಲ್ಲಿ ನಡೆಯುತ್ತಿರುವ ನಮ್ಮ ಸಿರಿ ಸಂಸ್ಥೆಯಲ್ಲಿ ಶೇ.90ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು, ಇಲ್ಲಿ ದುಡಿಯುವ ಪ್ರತಿ ಮಹಿಳೆಯರೂ ಆರೋಗ್ಯವಾಗಿದ್ದಲ್ಲಿ, ಆಕೆಯ ಕುಟುಂಬ ಪರಿವಾರವೂ ಉತ್ತಮ ಆರೋಗ್ಯಪೂರ್ಣ ವಾತಾವರಣವನ್ನು ಹೊಂದಲು ಸಾಧ್ಯ. ಹಾಗಾಗಿ ಎಲ್ಲರೂ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸುವ ಮುಖಾಂತರ ಶಿಬಿರದ ಸದುಪಯೋಗವನ್ನು ಪಡೆದು ಆರೋಗ್ಯವಂತರಾಗಿ ಬಾಳಿ ಎಂದು ಶುಭ ಹಾರೈಸಿದರು.



Ad Widget

ಸಿರಿ ಸಂಸ್ಥೆಯಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಮಹತ್ವಪರ‍್ಣವಾದ ಆರೋಗ್ಯ ಶಿಬಿರವನ್ನು ಆಯೋಜಿಸಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ, ಸಿರಿ ಕ್ಲಬ್‌ನ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Ad Widget

Ad Widget

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಅಮ್ಮಿಯವರು ಕಾರ‍್ಯಕ್ರಮವನ್ನುದ್ದೇಶಿಸಿ ಮಾತನಾಡಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ಇತ್ಯಾದಿ ಯಾವುದೇ ಖಾಯಿಲೆಗಳು ಬಂದ ನಂತರ ಅದಕ್ಕೆ ಚಿಕಿತ್ಸೆ ಪಡೆಯುವ ಬದಲಾಗಿ, ಈ ಖಾಯಿಲೆಗಳನ್ನು ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಹಾಗಾಗಿ ಸಿರಿ ಸಿಬ್ಬಂದಿಗಳ ಮೇಲೆ ವಿಶೇಷ ಕಾಳಜಿ ಹೊಂದಿರುವ ಸಿರಿ ಎಂ.ಡಿಯವರ ಮಾರ್ಗದರ್ಶನದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಐ.ಸಿ.ಟಿ.ಸಿ ವಿಭಾಗದ ಸಹಯೋಗದಲ್ಲಿ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ಸಹಕಾರದಲ್ಲಿ ಈ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು.

ಕಾರ‍್ಯಕ್ರಮದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮನೀಷಾ, ಹಿರಿಯ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಲೀಲಾವತಿ, ಐ.ಟಿ.ಸಿ.ಟಿ ಆಪ್ತ ಸಮಾಲೋಚಕರಾದ ಧರ್ಮಪಾಲ್, ಬಿ.ಪಿ.ಎಂ ಅಜೇಯ್, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಸಿರಿ ಕ್ಲಬ್‌ನ ವಿನ್ಸೆಂಟ್ ಲೋಬೋ ಸ್ವಾಗತಿಸಿ, ಸಿರಿ ಗೋದಾಮು ಪ್ರಬಂಧಕರಾದ ಜೀವನ್ ಕಾರ‍್ಯಕ್ರಮ ನಿರೂಪಿಸಿ, ಸಿರಿ ಕ್ಲಬ್ ಅಧ್ಯಕ್ಷೆ ಕು. ರ‍್ಷಿತಾರವರು ಧನ್ಯವಾದವಿತ್ತರು.

ಸುಮಾರು 136 ಮಂದಿ ಸಿರಿ ಸಿಬ್ಬಂದಿಗಳು ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading