ರಾಷ್ಟ್ರೀಯ
ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೊದಲ ಬಾರಿ ಭಾರತ ಭೇಟಿ
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಅಧಿಕಾರದಲ್ಲಿರುವ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವರಾಗಿರುವ ಅಮಿರ್ ಖಾನ್ ಮುತ್ತಾಖಿ ಅಕ್ಟೋಬರ್ 9ರಿಂದ 16ರವರೆಗೆ ಇದೇ ಮೊದಲ ಬಾರಿಗೆ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಈ ಪ್ರವಾಸಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ ಸಿ) ಒಪ್ಪಿಗೆ ನೀಡಿದೆ. ಅ. 6ರಿಂದಲೇ ಅವರ ವಿದೇಶಿ ಪ್ರವಾಸ ಶುರುವಾಗಲಿದೆ. ಆನಂತರದಲ್ಲಿ ಅವರು ಅ. 9ರಂದು ಭಾರತಕ್ಕೆ ಬರಲಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುದಾಣಗಳು, ತರಬೇತಿ ಶಿಬಿರಗಳ ಮೇಲೆ ಭಾರತ ದಾಳಿ ಮಾಡಿದಾಗಲೆಲ್ಲಾ ಅವರನ್ನು ಪಾಕಿಸ್ತಾನದ ಪಶ್ಚಿಮದಲ್ಲಿರುವ ಅಪ್ಘಾನಿಸ್ತಾನದ ಗಡಿಯಲ್ಲಿರುವ ಗುಡ್ಡಗಾಡು ಪ್ರದೇಶಕ್ಕೆ ಅವರನ್ನು ಪಾಕಿಸ್ತಾನ ಶಿಫ್ಟ್ ಮಾಡುತ್ತದೆ. ಅವರನ್ನು ಬಗ್ಗು ಬಡಿಯಲು ಅಪ್ಘಾನಿಸ್ತಾನದ ಸಹಾಯವನ್ನು ಭಾರತ ಹಿಂದಿನಿಂದಲೂ ಕೇಳುತ್ತಿದೆ. ಈಗ ಅಫ್ಘಾನಿಸ್ತಾನದ ಸಚಿವರು ಭಾರತಕ್ಕೆ ಬರುತ್ತಿರುವುದು ಪಾಕಿಸ್ತಾನಕ್ಕೆ ಕಸಿವಿಸಿಯಾಗುವ ಸಾಧ್ಯತೆಗಳೇ ಹೆಚ್ಚು.
ಇತ್ತೀಚೆಗೆ, ಭಾರತದ ವಿದೇಶಾಂಗ ಸಚಿವರ ಜೊತೆಗೆ ಮುತ್ತಾಖಿ ಅವರು ದೂರವಾಣಿಯಲ್ಲಿ ಮಾತನಾಡಿದ್ದಾಗ ಪಾಕಿಸ್ತಾನದಲ್ಲಿರುವ ಉಗ್ರರ ವಿಚಾರದ ಚರ್ಚೆಯಾಗಿತ್ತು. ಆಗ ಮುತ್ತಾಕಿ ಅವರು ‘ಪಾಕಿಸ್ತಾನದ ಉಗ್ರರ ಚಿಂತೆ ಬಿಟ್ಟುಬಿಡಿ’ ಎಂದಿದ್ದರು. ಈಗ ಮುತ್ತಾಕಿಯವರೇ ಭಾರತಕ್ಕೆ ಬರುತ್ತಿರುವುದರಿಂದ ಪಾಕಿಸ್ತಾನದ ಉಗ್ರರಿಗೆ ಕೊಂಚ ತಳಮಳ ಎದುರಾಗಿದೆ. ಅದು ಅಲ್ಲಿನ ಸರ್ಕಾರಕ್ಕೂ ಇರುಸು ಮುರುಸು ತಂದಿದೆ.
ಅಂದಹಾಗೆ, ಅಮಿರ್ ಖಾನ್ ಮತ್ತಾಖಿಯವರ ಈ ಪ್ರವಾಸಕ್ಕೆ ಯುಎನ್ಎಸ್ ಸಿ ಒಪ್ಪಿಗೆ ಕೊಟ್ಟಿರುವುದೇ ದೊಡ್ಡ ವಿಚಾರ. ಏಕೆಂದರೆ, ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನೇ ಆಳುತ್ತಿದ್ದರೂ ಅಲ್ಲಿನ ಯಾವುದೇ ಸಚಿವರಿಗೆ ವಿದೇಶ ಪ್ರವಾಸ ಕೈಗೊಳ್ಳಬೇಕೆಂದರೆ ಅವರು ಯುಎನ್ಎಸ್ ಸಿ ಅನುಮತಿ ಪಡೆಯಲೇಬೇಕು. ಏಕೆಂದರೆ, 1988ರಲ್ಲಿ ಯುಎನ್ಎಸ್ ಸಿ ತಾಲಿಬಾನ್ ಸಂಘಟನೆಗಳ ವಿರುದ್ಧ ಕೈಗೊಂಡಿದ್ದ ನಿರ್ಣಯಗಳು ಇನ್ನೂ ಜಾರಿಯಲ್ಲಿವೆ. ಆ ಹಿನ್ನೆಲೆಯಲ್ಲಿ ಈಗ ತಾಲಿಬಾನಿಗಳಿಗೆ ಅಧಿಕಾರ ಸಿಕ್ಕಿದ್ದರೂ ಅವರು ಯುಎನ್ಎಸ್ ಸಿ ನಿರ್ಬಂಧಗಳು ಮುಂದುವರಿದಿವೆ.
ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಭಾರತಕ್ಕೆ ಬರುವುದರಿಂದ ಆ ದೇಶದ ಜೊತೆಗಿನ ಭಾರತದ ರಾಜತಾಂತ್ರಿಕ ಸಂಬಂಧಗಳು, ವಾಣಿಜ್ಯ ವ್ಯವಹಾರಗಳಿಗೆ ಹೊಸ ಉತ್ತೇಜನ ಸಿಗಬಹುದು. ಅದೆಲ್ಲದಕ್ಕಿಂತ ಹೆಚ್ಚಾಗಿ, ಪಾಕಿಸ್ತಾನದ ಅನೇಕ ಉಗ್ರ ಸಂಘಟನೆಗಳು ಪಾಕಿಸ್ತಾನ- ಅಫ್ಘಾನಿಸ್ತಾನ ಗಡಿಯಲ್ಲಿ ನೆಲೆ ನಿಂತಿವೆ. ಆ ಉಗ್ರರನ್ನು ಮಟ್ಟ ಹಾಕಲು ಅಫ್ಘಾನಿಸ್ತಾನದ ಸಹಾಯವನ್ನು ಭಾರತ ಕೇಳಬಹುದು.
ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಬಂಧ ಹಳಸಿರುವ ಈ ಹೊತ್ತಿನಲ್ಲಿ ಅಫ್ಘಾನಿಸ್ತಾನದೊಂದಿಗೆ ಭಾರತವು ತನ್ನ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿ ಮಾಡಿಕೊಂಡರೆ, ಅದು ಸೌದಿಯ ಮುಸ್ಲಿಂ ರಾಷ್ಟ್ರಗಳ ಒಲವು ಗಳಿಸಲು ಸಹಾಯವಾಗುತ್ತದೆ.
ಮೂರನೇಯದ್ದಾಗಿ, ಭಾರತದಿಂದ ಇರಾನ್ ವರೆಗೆ ಸಾಮಗ್ರಿಗಳನ್ನು ಹಿಂದೆ ಭಾರತ, ಪಾಕಿಸ್ತಾನದ ಮೂಲಕ ರಸ್ತೆ ಮಾರ್ಗವಾಗಿ ಸಾಗಿಸುತ್ತಿತ್ತು. ಆದರೆ, ಪಾಕಿಸ್ತಾನದಲ್ಲಿ ಡಕಾಯಿತರ ಹಾವಳಿ ಹೆಚ್ಚಾಗಿದ್ದರಿಂದ ಸಾಮಗ್ರಿಗಳು ಕಳುವಾಗಿ ಭಾರತಕ್ಕೆ ತೀವ್ರ ನಷ್ಟವಾಗುತ್ತಿತ್ತು. ಅದೇ ಕಾರಣಕ್ಕಾಗಿಯೇ ಭಾರತ ಸಮುದ್ರ ಮಾರ್ಗದ ಮೂಲಕ ಸಾಮಗ್ರಿಗಳನ್ನು ಸಾಗಿಸಲು ಮುಂದಾಗಿದ್ದು ಇರಾನ್ ನಲ್ಲಿ ಚಬಾಹರ್ ಬಂದರನ್ನು ಅಲ್ಲಿನ ಸರ್ಕಾರದ ಸಹಾಯದಿಂದ ತಾನೇ ಬಂಡವಾಳ ಹಾಕಿ ಅಭಿವೃದ್ಧಿಪಡಿಸಿತು. ಆ ಜಲಮಾರ್ಗದ ಬಳಕೆ ಮತ್ತಷ್ಟು ಪರಿಣಾಮಕಾರಿಯಾಗಬೇಕಾದರೆ ಅಫ್ಘಾನಿಸ್ತಾನದ ಬೆಂಬಲ ಬೇಕು. ಅದೂ ಸಹ ಈ ಬಾರಿಯ ಭೇಟಿಯಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು21 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಂತರ ರಾಜ್ಯ24 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಶಿಕ್ಷಣ21 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ23 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ19 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ


















