Connect with us

ಬಿಗ್ ನ್ಯೂಸ್

ವಿಜಯನಗರ : ರೂ 5.25 ಕೋಟಿ ಅಪಘಾತ ವಿಮೆ ಹಣ ಪಡೆಯಲು ಅಪಘಾತವೆಸಗಿ ವ್ಯಕ್ತಿಯ ಕೊಲೆ : 6 ಜನರ ಬಂಧನ

Published

on



Ad Widget

Ad Widget

Ad Widget

Ad Widget

ವಿಜಯನಗರ : ‘ವ್ಯಕ್ತಿಯೊಬ್ಬರ ಹೆಸರಲ್ಲಿ ₹5.25 ಕೋಟಿ ಮೊತ್ತದ ಅಪಘಾತ ವಿಮೆ ಮತ್ತು ಇತರೆ ವಿಮೆ ಮಾಡಿಸಿ, ವಿಮಾ ಮೊತ್ತ ಪಡೆಯುವ ದುರುದ್ದೇಶದಿಂದ ಆತನನ್ನು ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ ಪ್ರಕರಣ ಇಲ್ಲಿ ನಡೆದಿದೆ. ಈ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ತಿಳಿಸಿದರು.

Ad Widget

Ad Widget

Ad Widget

Ad Widget

‘ನಗರದ ಕೌಲ್‌ಪೇಟೆ ನಿವಾಸಿ ಕೆ.ಗಂಗಾಧರ ಸೆಪ್ಟೆಂಬ‌ರ್ 28ರಂದು ಎಚ್‌ಎಲ್‌ಸಿ ಕಾಲುವೆಯಲ್ಲಿ ಬೈಕ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿತ್ತು. ಈ ಸಾವಿನ ಕುರಿತು ಅವರ ಪತ್ನಿ ಕೆ.ಶಾರದಮ್ಮ ಅವರು ಪಟ್ಟಣದ ಠಾಣೆಯಲ್ಲಿ ದೂರು ನೀಡಿದ್ದರು. ಮೂರು ತಂಡ ರಚಿಸಿ ತನಿಖೆ ನಡೆಸಿದಾಗ ಆರೋಪಿಗಳ ಸಂಚು ಬಯಲಾಗಿದೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

‘ಗಂಗಾಧರ ಅವರಿಗೆ ತೀವ್ರ ಅನಾರೋಗ್ಯ, ಆರ್ಥಿಕ ಸಂಕಷ್ಟ ಕಾಡುತಿತ್ತು. ಅವರ ಪರಿಸ್ಥಿತಿಯ ಲಾಭ ಪಡೆಯಲು ಆರು ಜನರು ಸಂಚು ರೂಪಿಸಿದರು. ಅವರಿಗೆ ಮದುವೆಯಾಗಿದ್ದರೂ ಬೇರೊಬ್ಬ ಮಹಿಳೆಯನ್ನು ಪತ್ನಿ ಎಂದು ನಮೂದಿಸಿ ಉಪನೋಂದಣಿ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿದ್ದರು.

Ad Widget

Ad Widget <> Ad Widget

ಗಂಗಾಧರನ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು, ನಕಲಿ ನಾಮಿನಿ ಸೃಷ್ಟಿಸಿದ್ದರು. ವಿವಿಧ ವಿಮಾ ಕಂಪನಿಗಳಲ್ಲಿ ₹5.25 ಕೋಟಿ ಮೊತ್ತದ ಅಪಘಾತ ವಿಮೆ, ಇತರೆ ವಿಮೆಯ ಆರು ಪಾಲಿಸಿಗಳನ್ನು ಮಾಡಿಸಿ ಆರೋಪಿಗಳೇ ಪ್ರೀಮಿಯಂ ಹಣತುಂಬಿದ್ದರು. ಆದರೆ, ಅವರು ಬೇಗನೇ ಮೃತಪಡದ ಕಾರಣ ಕೆಲ ಪಾಲಿಸಿಗಳು ತಿರಸ್ಕೃತಗೊಂಡವು. ಹೀಗಾಗಿ ಅಪಘಾತ ವಿಮೆ ಪಾಲಿಸಿಯ ಹಣವನ್ನು ಪಡೆಯಲು ವ್ಯಕ್ತಿಯನ್ನು ಕೊಲೆ ಮಾಡಿ, ಅಪಘಾತ ಎಂದು ಬಿಂಬಿಸಿದ್ದರು’ ಎಂದು ಅವರು ವಿವರಿಸಿದರು.



Ad Widget
Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading