ಮಂಗಳೂರು
Prathibha Kulai-ಈ ಜಿಲ್ಲೆಯಲ್ಲಿ ಯಾರೂ ಗಂಡಸರಿಲ್ಲವೇ? ಇಲ್ಲಿ ದನಕ್ಕಿರುವ ಮರ್ಯಾದೆ ಹೆಣ್ಣು ಮಕ್ಕಳಿಗಿಲ್ಲ – ಕೃಷ್ಣರಾವ್ ಮನೆಗೆ ನುಗ್ಗಿ ಪ್ರತಿಭಟನೆ ಮಾಡುತ್ತೇವೆ- ಪ್ರತಿಭಾ ಕುಳಾಯಿ ಎಚ್ಚರಿಕೆ
ಪುತ್ತೂರಿನಲ್ಲಿ ಸಹಪಾಠಿಯಿಂದ ಗರ್ಭಿಣಿಯಾದ ಪ್ರಕರಣದಲ್ಲಿ ಡಿಎನ್ಎ ವರದಿ ಕೃಷ್ಣರಾವ್ ಅವರೇ ಮಗುವಿಗೆ ತಂದೆ ಎಂದು ದೃಢಪಡಿಸಿದ್ದು, ಇದರ ಬೆನ್ನಲ್ಲೇ ಆಕ್ರೋಶಗೊಂಡಿರುವ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಕೃಷ್ಣರಾವ್ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎನ್ಎ ವರದಿ ಬಳಿಕವೂ ಮದುವೆ ಪ್ರಸ್ತಾಪ ಮಾಡದ ಕುಟುಂಬದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಕೃಷ್ಣರಾವ್ ಮನೆಗೆ ನುಗ್ಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು, ಅ.3: ಪುತ್ತೂರಿನಲ್ಲಿ ಸಹಪಾಠಿಯಿಂದ ಗರ್ಭಿಣಿಯಾದ ಪ್ರಕರಣದಲ್ಲಿ ಡಿಎನ್ಎ ವರದಿ ಕೃಷ್ಣರಾವ್ ಅವರೇ ಮಗುವಿಗೆ ತಂದೆ ಎಂದು ದೃಢಪಡಿಸಿದ್ದು, ಇದರ ಬೆನ್ನಲ್ಲೇ ಆಕ್ರೋಶಗೊಂಡಿರುವ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಕೃಷ್ಣರಾವ್ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎನ್ಎ ವರದಿ ಬಳಿಕವೂ ಮದುವೆ ಪ್ರಸ್ತಾಪ ಮಾಡದ ಕುಟುಂಬದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಕೃಷ್ಣರಾವ್ ಮನೆಗೆ ನುಗ್ಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, “ಮದುವೆ ಮಾಡಿಸುತ್ತೇವೆ ಎಂದು ಹೇಳಿದ್ದ ಆರೋಪಿಯ ಹೆತ್ತವರು ಈಗ ಯಾಕೆ ಸುಮ್ಮನಿರುವುದು? ಹಿಂದುತ್ವದ ಹೆಸರಿನಲ್ಲಿ ಜನರನ್ನು ಒಗ್ಗೂಡಿಸುವ ಸಾಕಷ್ಟು ನಾಯಕರು ಜಿಲ್ಲೆಯಲ್ಲಿ ಇದ್ದರೂ, ಯಾರೂ ಗಂಡಸರಿಲ್ಲವೇ? ಬೆಂಗಳೂರಿನಿಂದ ಬರುವ ನಂಜುಂಡಿ ಒಬ್ಬರೇ ಸಾಕಾ? ರಾಜಕೀಯ ನಾಯಕರು ಯಾಕೆ ಮೌನ?” ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
‘ನಂಜುಂಡಿ ಒಬ್ಬರೇ ಸಾಕಾ? ಜಿಲ್ಲೆಯಲ್ಲಿ ಗಂಡಸರಿಲ್ಲವೇ?’
ನಂಜುಂಡಿ ಅವರು ಎಲ್ಲ ನಾಯಕರ ಮನೆಗಳಿಗೂ ಸಹಾಯ ಕೋರಿ ಹೋದರೂ, ಯಾರೂ ಜಿಲ್ಲೆಯ ಗಂಡಸರು ಎಂದು ತೋರಿಸಿಲ್ಲ. ವಿಶ್ವಕರ್ಮ ಸಮಾಜದ ಹೆಣ್ಣುಮಕ್ಕಳ ಪರವಾಗಿ ಬೆಂಗಳೂರಿನಿಂದ ಅವರೇ ಬರಬೇಕಾಯಿತು. ಈ ಸಮಾಜದಲ್ಲಿ ನಾಯಕರಿಲ್ಲವೇ? ಯಾಕೆ ಮಾತಾಡುತ್ತಿಲ್ಲ?” ಎಂದು ಪ್ರತಿಭಾ ಕಿಡಿ ಕಾರಿದರು.
ಕೃಷ್ಣರಾವ್ ಮನೆಗೆ ನುಗ್ಗಿ ಪ್ರತಿಭಟನೆ ಎಚ್ಚರಿಕೆ
“ಕಾನೂನು ಹೋರಾಟ ಒಂದು ಮಾರ್ಗವೇ, ಆದರೆ ನಾವು ಸುಮ್ಮನಿರುವುದಿಲ್ಲ. ನಮ್ಮ ಮಹಿಳಾ ತಂಡ ಕೃಷ್ಣರಾವ್ನ ಮನೆಗೆ ನುಗ್ಗಿ ಪ್ರತಿಭಟಿಸುತ್ತೇವೆ. ಮಹಿಳೆ ಅಬಲೆಯಲ್ಲ; ಏನು ಮಾಡಿದರೂ ಸಮಾಜ ಒಪ್ಪಿಕೊಳ್ಳುತ್ತದೆ ಎಂಬ ದಾರ್ಷ್ಟ್ಯಕ್ಕೆ ತಕ್ಕ ಉತ್ತರ ನೀಡುತ್ತೇವೆ” ಎಂದು ಅವರು ತಿಳಿಸಿದರು.
‘ಡಿಎನ್ಎ ದೃಢಪಟ್ಟರೂ ಮದುವೆ ಪ್ರಸ್ತಾಪವಿಲ್ಲ ಯಾಕೆ?’
“ನಾನು ಕೂಡ ಕೃಷ್ಣರಾವ್ ಹೆತ್ತವರೊಂದಿಗೆ ಮಾತನಾಡಿದ್ದೆ. ಮಗು ಅವನದ್ದೇ ಎಂದು ಸಾಬೀತಾದರೆ ಮದುವೆ ಮಾಡಿಸುತ್ತೇವೆ ಎಂದಿದ್ದರು. ಈಗ ಕೇಸು ಕೋರ್ಟ್ನಲ್ಲಿದ್ದು, ಸಮಾಜಕ್ಕೆ ಸಂದೇಶ ನೀಡಲು ಮದುವೆಯಾಗಬೇಕೇ? ಮದುವೆಯ ನಂತರ ಹೊಂದಾಣಿಕೆ ಆಗದಿದ್ದರೆ ಕಾನೂನು ಪ್ರಕಾರ ನೋಡಿಕೊಳ್ಳಲಿ. ಆದರೆ ಮಗು ಅವನದ್ದೇ ಎಂದು ಸಾಬೀತಾಗಿದ್ದರಿಂದ ಸಮಾಜಕ್ಕೆ ಒಳ್ಳೆಯ ಸಂದೇಶವಾಗಬೇಕು” ಎಂದು ಪ್ರತಿಭಾ ಕುಳಾಯಿ ಒತ್ತಿ ಹೇಳಿದರು.
ಮಹಿಳೆಯ ಮಗುವಿನ ಅಸ್ತಿತ್ವದ ಪ್ರಶ್ನೆ ಇದ್ದು, ಒಪ್ಪಿಗೆಯಿಂದ ಲೈಂಗಿಕ ಕ್ರಿಯೆ ಎಂದಿದ್ದರಿಂದ ಜಾಮೀನು ದೊರೆತಿದೆ. ಆದರೆ ಮದುವೆಯಾಗದಿದ್ದರೆ ಜಾಮೀನು ರದ್ದಾಗಬಹುದು ಎಂದು ಅವರು ಎಚ್ಚರಿಸಿದರು.
‘ದಕ್ಷಿಣ ಕನ್ನಡದಲ್ಲಿ ದನಕ್ಕೆ ಮರ್ಯಾದೆ, ಹೆಣ್ಣುಮಕ್ಕಳಿಗೆ ಇಲ್ಲ’
“ದಕ್ಷಿಣ ಕನ್ನಡದಲ್ಲಿ ದನಕ್ಕೆ ಮರ್ಯಾದೆ ಇದೆ, ಹೆಣ್ಣುಮಕ್ಕಳಿಗೆ ಇಲ್ಲ. ಹಿಂದು-ಮುಸ್ಲಿಂ ಸಂಬಂಧವಾಗಿತ್ತಿದ್ದರೆ ಹೆಣ್ಣು ಬೀಳುತ್ತಿತ್ತು. ಬಡ ಹಿಂದುಳಿದ ವರ್ಗಗಳನ್ನು ಎತ್ತಿಹಿಡಿಯುವ ‘ಸೋಕಾಲ್ಡ್’ ನಾಯಕರು ಎಲ್ಲಿದ್ದಾರೆ? ಬಡ ಹೆಣ್ಮಕ್ಕಳು ರಸ್ತೆಯಲ್ಲಿ ಕುಣಿಯಲು ಮಾತ್ರವೇ? ಹಿಂದು ಸಮಾಜದ ಸ್ವಾಮೀಜಿಗಳು ಯಾಕೆ ಮೌನ? ಸಮಾಜವು ಎಲ್ಲವನ್ನೂ ನೋಡುತ್ತದೆ; ನಾವು ಏನು ಮಾಡುತ್ತೇವೆ ಅಂತ ಮುಂದೆ ನೋಡಿ. ಆತನ ಹೆತ್ತವರಿಗೆ ಸಮಾಜದ ಹೆದರಿಕೆ ಇಲ್ಲ ಅದನ್ನು ತೋರಿಸುತ್ತೇವೆ” ಎಂದು ಪ್ರತಿಭಾ ಕುಳಾಯಿ ಕಠಿಣವಾಗಿ ನುಡಿದರು.
‘ಕೃಷ್ಣರಾವ್ ಮದುವೆ ಆದರೆ ಎಲ್ಲಾ ಖರ್ಚನ್ನೂ ನಾನು ನೋಡಿಕೊಳ್ಳುತ್ತೇನೆ’
“ಪಕ್ಷದಲ್ಲಿ ಹುದ್ದೆ ಇದೆಯೆಂದು ಆಚಾರ್ಯ ಸಮಾಜದವರು ಮಾತಾಡಲ್ವಂತೆ. ನೀವು ಇದೇ ರೀತಿಯಾದರೆ ನಿಮ್ಮನ್ನು ಮುಂದೆ ಯಾರೂ ಮೂಸಿಯೂ ನೋಡುವುದಿಲ್ಲ. ಆ ಹುಡುಗಿಯ ಕುಟುಂಬದ ಪರವಾಗಿ ನಂಜುಂಡಿಯವರು ನಿಂತಿದ್ದಕ್ಕಾಗಿ ಬದುಕಿದ್ದಾರೆ. ಅವರ ಜೊತೆಗೆ ನಿಲ್ಲುವುದಕ್ಕೂ ಸಮಾಜದವರಿಗೆ ಹೆದರಿಕೆ ಇದೆ. ಈಗಲೂ ಹೇಳುತ್ತೇನೆ, ಕೃಷ್ಣ ರಾವ್ ಮದುವೆ ಮಾಡಿಕೊಂಡರೆ ಎಲ್ಲ ಖರ್ಚನ್ನೂ ನಾನು ನೋಡಿಕೊಳ್ಳುತ್ತೇನೆ. ಹುಡುಗಿಗೆ ಏನೆಲ್ಲ ಬೇಕು ಎಲ್ಲವನ್ನೂ ಮಾಡಿಸುತ್ತೇನೆ” ಎಂದು ಪ್ರತಿಭಾ ಕುಳಾಯಿ ಪುನರುಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವಕರ್ಮ ಸಮಾಜದ ಅರ್ಚನಾ ಮತ್ತು ಸಂತ್ರಸ್ತ ಹುಡುಗಿಯ ತಾಯಿ ನಮಿತಾ ಉಪಸ್ಥಿತರಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು15 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್22 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ14 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ21 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ20 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ21 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ20 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















