Connect with us

ಬಿಗ್ ನ್ಯೂಸ್

Dharmasthala-ಧರ್ಮಸ್ಥಳ ಕೇಸ್ – ಎಸ್ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ – ಬೆಳ್ತಂಗಡಿಯ ಇಬ್ಬರು ಆಂಬುಲೆನ್ಸ್ ಡ್ರೈವರ್ಗಳಿಗೆ SIT ಸಮನ್ಸ್ – ವಿಚಾರಣೆ ! ಬಯಲಾಗುತ್ತಾ ರಹಸ್ಯ ?

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮೃತದೇಹಗಳ ಅಕ್ರಮ ಹೂತುಹಾಕಿದ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಕಳೆದ ಎರಡು ದಶಕಗಳಿಂದ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಇಬ್ಬರು ಸಮಾಜ ಸೇವಕ ಆಂಬುಲೆನ್ಸ್ ಚಾಲಕರಿಗೆ ನೋಟಿಸ್ ಜಾರಿ ಮಾಡಿದ್ದು, ಅವರಿಬ್ಬರೂ ಶನಿವಾರ ತನಿಖೆಗೆ ಹಾಜರಾಗಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ, ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮೃತದೇಹಗಳ ಅಕ್ರಮ ಹೂತುಹಾಕಿದ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಕಳೆದ ಎರಡು ದಶಕಗಳಿಂದ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಇಬ್ಬರು ಸಮಾಜ ಸೇವಕ ಆಂಬುಲೆನ್ಸ್ ಚಾಲಕರಿಗೆ ನೋಟಿಸ್ ಜಾರಿ ಮಾಡಿದ್ದು, ಅವರಿಬ್ಬರೂ ಶನಿವಾರ ತನಿಖೆಗೆ ಹಾಜರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ, ಯಾವುದೇ ಮಾಹಿತಿ ಇಲ್ಲದೆ ಹಲವಾರು ಮೃತದೇಹಗಳನ್ನು ಅಕ್ರಮವಾಗಿ ಹೂತುಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಗುರುತು ಸಿಗದ ಮೃತದೇಹಗಳು, ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣಗಳಿಗೆ ಸಂಬಂಧಿಸಿದ ಶವಗಳು ಸೇರಿದಂತೆ ಹಲವು ದೇಹಗಳನ್ನು ನಿಗೂಢವಾಗಿ ಸಮಾಧಿ ಮಾಡಲಾಗಿದೆ ಎಂಬ ಆರೋಪಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡ ಇದೆಯೆಂದು ಹೋರಾಟಗಾರರು ಶಂಕೆ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ SIT ತನಿಖೆಗೆ ಆದೇಶಿಸಿತ್ತು.

Ad Widget

Ad Widget <> Ad Widget

SIT ಬಲೆಗೆ ಬೆಳ್ತಂಗಡಿ ಆಂಬುಲೆನ್ಸ್ ಚಾಲಕರು!
ಬೆಳ್ತಂಗಡಿಯ ಇಬ್ಬರು ಆಂಬುಲೆನ್ಸ್ ಚಾಲಕರಾದ ಜಲೀಲ್ ಬಾಬಾ ಮತ್ತು ಹಮೀದ್ ಅವರಿಗೆ SIT ನೋಟಿಸ್ ಜಾರಿ ಮಾಡಿದೆ. ಈ ಪೈಕಿ ಹಮೀದ್ ಅವರು 23 ವರ್ಷದಿಂದ ಹಾಗೂ ಜಲೀಲ್ ಬಾಬಾ ಅವರು 21 ವರ್ಷಗಳಿಂದ ಆಂಬುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಆರಂಭದ ದಿನಗಳಲ್ಲಿ ಇವರಿಬ್ಬರು ಮಾತ್ರ ಬೆಳ್ತಂಗಡಿಯಲ್ಲಿ ಆಂಬುಲೆನ್ಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಬೆಳಿಗ್ಗೆಯೇ ಇವರಿಬ್ಬರು ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು, ವಿಚಾರಣೆ ಎದುರಿಸಿದ್ದಾರೆ. ಕೆಲ ಗಂಟೆಗಳ ವಿಚಾರಣೆಯ ಬಳಿಕ ಅವರಿಬ್ಬರು ಹಿಂತುರುಗಿದ್ದಾರೆ. ಅವರಿಬ್ಬರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಕರೆ ಕಳುಹಿಸುವುದಾಗಿಯೂ ಅಧಿಕಾರಿಗಳು ತಿಳಿಸಿರುವುದಾಗಿ ತಿಳಿದುಬಂದಿದೆ. ನಿರ್ದಿಷ್ಟವಾಗಿ, ಈ ಶವಗಳನ್ನು ಪೊಲೀಸರ ಸಮ್ಮುಖದಲ್ಲಿಯೇ ಶವಗಾರಕ್ಕೆ ಸಾಗಿಸಲಾಗಿತ್ತೇ, ಶವ ಸಾಗಿಸುವ ಪ್ರಕ್ರಿಯೆ ಹೇಗೆ ನಡೆಯಿತು, ಯಾರ ಸೂಚನೆ ಮೇರೆಗೆ ಈ ಕೆಲಸ ಮಾಡಲಾಯಿತು ಎಂಬಂತಹ ಮಹತ್ವದ ಮಾಹಿತಿಗಳನ್ನು ಎಸ್‌ಐಟಿ ಅಧಿಕಾರಿಗಳು ಇವರಿಂದ ಕಲೆಹಾಕಿರುವುದಾಗಿ ತಿಳಿದುಬಂದಿದೆ.

Ad Widget

Ad Widget

ಸತ್ಯ ಹೊರಬರುತ್ತಾ?
ಈ ಇಬ್ಬರು ಆಂಬುಲೆನ್ಸ್ ಚಾಲಕರ ವಿಚಾರಣೆಯು ಪ್ರಕರಣಕ್ಕೆ ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ. ಮೃತದೇಹಗಳ ಅಕ್ರಮ ಸಮಾಧಿ ಹಿಂದೆ ಯಾರಿದ್ದಾರೆ? ಈ ಪ್ರಕರಣದಲ್ಲಿ ಪೊಲೀಸರ ಪಾತ್ರವೇನು? ಅಥವಾ ಯಾವುದೇ ಅಧಿಕಾರಿಗಳು ಶಾಮೀಲಾಗಿದ್ದಾರೆಯೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಸಿಗುವ ನಿರೀಕ್ಷೆ ಇದೆ.

Ad Widget
Click to comment

Leave a Reply

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಸ್ಥಳೀಯ

Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget alt="Ad Widget"/>

Ad Widget

ಬಿ.ಸಿ.ರೋಡ್‌ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್‌ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.

8 ಲೇನ್‌ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್‌ಗಳಿದ್ದು, ಅವುಗಳಲ್ಲಿ 6 ಲೇನ್‌ಗಳು ಡೆಡಿಕೇಟೆಡ್ ಲೇನ್‌ಗಳಾಗಿರಲಿವೆ. ಈ ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.

Ad Widget

Ad Widget

ಉಳಿದ ಎರಡು ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್‌ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್‌ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Ad Widget
Continue Reading

ಬಿಗ್ ನ್ಯೂಸ್

Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget <> Ad Widget

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget

ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.

ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.

ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.

ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!