ಅಪರಾಧ
Mangalore-ಕಾರಿನ ಗ್ಲಾಸ್ ಒಡೆದ ಪೊಲೀಸ್ ಸಿಬ್ಬಂದಿಯೆಂಬ ವೈರಲ್ ವಿಡಿಯೋ ! ಕುಡಿದು ಟ್ರಾಫಿಕ್ ರೂಲ್ಸ್ ಮೀರಿದ್ದು ವಿನಾಯಕ ಬಾಳಿಗ ಕೊಲೆ ಆರೋಪಿ, ರೌಡಿಶೀಟರ್! ಈತನನ್ನು ಬೆಂಬಲಿಸಿದವರ ಉದ್ದೇಶವೇನು – ಪೊಲೀಸ್ ಕಮಿಷನರ್ ಗರಂ
ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆಯುವ ಪ್ರಯತ್ನದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ ಎನ್ನಲಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ಕ್ರಮವನ್ನು ಖಂಡಿಸಿ ಹಲವರು ಕಾರು ಚಾಲಕನ ಪರವಾಗಿ ಪೋಸ್ಟ್ಗಳನ್ನು ಹಾಗೂ ಕಾಮೆಂಟ್ಗಳನ್ನು ಹಾಕಿದ್ದರು.
ಮಂಗಳೂರು, ಅಕ್ಟೋಬರ್ 6: ಮಂಗಳೂರಿನ ನಂತೂರಿನಲ್ಲಿ ಅಕ್ಟೋಬರ್ 2ರ ತಡರಾತ್ರಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆಯುವ ಪ್ರಯತ್ನದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ ಎನ್ನಲಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ಕ್ರಮವನ್ನು ಖಂಡಿಸಿ ಹಲವರು ಕಾರು ಚಾಲಕನ ಪರವಾಗಿ ಪೋಸ್ಟ್ಗಳನ್ನು ಹಾಗೂ ಕಾಮೆಂಟ್ಗಳನ್ನು ಹಾಕಿದ್ದರು.
ಆದರೆ, ತನಿಖೆಯಿಂದ ಆ ಕಾರು ಚಾಲಕ ಕುಡಿದ ಮತ್ತಿನಲ್ಲಿದ್ದ ಮತ್ತು ಇದೇ ಕಾರಣಕ್ಕೆ ಪೊಲೀಸರ ಸೂಚನೆಯನ್ನು ದಿಕ್ಕರಿಸಿದ್ದ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ, ಈತ ಕೊಲೆ ಆರೋಪಿಯಾಗಿದ್ದು, ರೌಡಿಶೀಟರ್ ಎಂಬುದು ಬಯಲಾಗಿದೆ. ಇಂತಹ ವ್ಯಕ್ತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸಿದವರ ಉದ್ದೇಶವೇನು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಾರವಾಗಿ ಪ್ರಶ್ನಿಸಿದ್ದಾರೆ.
ಘಟನೆಯ ವಿವರ:
ಅಕ್ಟೋಬರ್ 2ರ ರಾತ್ರಿ, ಕುದ್ರೋಳಿ ದಸರಾ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪಂಪ್ವೆಲ್ ಕಡೆಯಿಂದ ಬರುತ್ತಿದ್ದ ಕಾರನ್ನು ಸಂಚಾರಿ ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ, ಚಾಲಕ ವಾಹನ ನಿಲ್ಲಿಸದೆ ಮುಂದುವರಿದಾಗ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ಮೊಬೈಲ್ನಿಂದ ಕಾರಿನ ಹಿಂಬದಿ ಗಾಜಿಗೆ ಬಡಿದಿದ್ದಾರೆ. ಈ ಸಂದರ್ಭದಲ್ಲಿ ಕಾರಿನ ಹಿಂಬದಿ ಗಾಜು ಒಡೆದಿದೆ. ಕೂಡಲೇ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಪೊಲೀಸರನ್ನು ಸುತ್ತುವರಿದು ಪ್ರಶ್ನಿಸಿದ್ದಾರೆ. ಒಬ್ಬ ವ್ಯಕ್ತಿ ಈ ಇಡೀ ಘಟನೆಯನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ, ಶಿವಪ್ರಸಾದ್ನ ಆಪ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ. “ಗಾಡಿಯ ಗಾಜು ಒಡೆದಿದ್ದು ಯಾಕೆ? ತಪ್ಪಿದ್ದರೆ ಕೇಸ್ ದಾಖಲಿಸಿ, ಗಾಡಿಗೆ ಹಾನಿ ಮಾಡುವುದು ಸರಿಯೇ?” ಎಂದು ಸಾರ್ವಜನಿಕರು ಪೊಲೀಸರನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವೇಳೆ ಹಲವು ನೆಟ್ಟಿಗರು ಪೊಲೀಸ್ ಸಿಬ್ಬಂದಿಯನ್ನು ಕಟುವಾಗಿ ಟೀಕಿಸಿ ಕಾರು ಚಾಲಕನ ಪರ ಬ್ಯಾಟಿಂಗ್ ಮಾಡಿದ್ದರು.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದ ಕಾರು ಚಾಲಕನಿಗೆ ಪೊಲೀಸ್ ಕಾನ್ಸ್ಟೆಬಲ್ ವಾಹನ ನಿಲ್ಲಿಸುವಂತೆ ಸೂಚಿಸಿದ್ದರೂ, ಆತ ಅದನ್ನು ದಿಕ್ಕರಿಸಿದ್ದಾನೆ ಎಂದು ತಿಳಿಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರ ಮೀರಿ ವರ್ತಿಸಿ, ಕಾರಿಗೆ ಹೊಡೆದು ಗಾಜನ್ನು ಹಾನಿ ಮಾಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ.
ಆದರೆ, ಕಮಿಷನರ್ ನೀಡಿರುವ ಮುಂದಿನ ಮಾಹಿತಿ ಎಲ್ಲರನ್ನೂ ದಂಗುಬಡಿಸಿದೆ. ಕಾರು ಚಾಲಕ ಶಿವಪ್ರಸಾದ್ ವಿರುದ್ಧ ಕದ್ರಿ ಸಂಚಾರಿ ಠಾಣೆಯಲ್ಲಿ ಕುಡಿದು ವಾಹನ ಚಲಾಯಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಅದಕ್ಕೂ ಮಿಗಿಲಾಗಿ, ಈತ 2018ರ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಬರ್ಕೆ ಠಾಣೆಯಲ್ಲಿ ರೌಡಿಶೀಟರ್ ಎಂದು ದಾಖಲಾಗಿದ್ದಾನೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಕಮಿಷನರ್ ಪ್ರಶ್ನೆ: ಕೊಲೆ ಆರೋಪಿಯನ್ನು ಬೆಂಬಲಿಸಿದ್ದೇಕೆ?
ವೈರಲ್ ಆಗಿರುವ ವಿಡಿಯೋ ಕುರಿತು ಮಾತನಾಡಿದ ಕಮಿಷನರ್, “ಕುಡಿದ ಮತ್ತಿನಲ್ಲಿ ಪೊಲೀಸರ ಆದೇಶ ಉಲ್ಲಂಘಿಸಿದ ಈ ವ್ಯಕ್ತಿಯನ್ನು ಬೆಂಬಲಿಸಿ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿ ಪೋಸ್ಟ್ ಮಾಡಿದವರೆಲ್ಲರೂ, ಕೊಲೆ ಆರೋಪಿಯನ್ನು ಬೆಂಬಲಿಸುವ ತಮ್ಮ ಉದ್ದೇಶ ಏನಿತ್ತು ಎಂಬುದನ್ನು ಈಗ ವಿವರಿಸಬೇಕಾಗುತ್ತದೆ. ಸತ್ಯ ಹೊರಬರಲು ಸಮಯ ತೆಗೆದುಕೊಳ್ಳುತ್ತದೆ. ಈಗ ಸತ್ಯಗಳು ಹೊರಬಂದಿವೆ” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
“ಕುಡಿದು ವಾಹನ ಚಲಾಯಿಸುವವರನ್ನು ತಡೆಯುವುದು ಪೊಲೀಸರ ಕರ್ತವ್ಯ. ಈ ರೀತಿಯ ಘಟನೆಗಳು ಪೊಲೀಸರ ಕೆಲಸಕ್ಕೆ ಅಡ್ಡಿಯಾಗುತ್ತವೆ. ಜನರು ಸ್ವತಃ ನ್ಯಾಯ ತೀರ್ಮಾನಕ್ಕೆ ಇಳಿದು ವಿಡಿಯೋಗಳನ್ನು ವೈರಲ್ ಮಾಡುವುದು ಸರಿಯಲ್ಲ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪೊಲೀಸರ ಸ್ಪಷ್ಟನೆ ಮತ್ತು ಸಾರ್ವಜನಿಕರ ಸಂಶಯ:
ಸಂಚಾರಿ ಪೊಲೀಸರು, ಕಾರಿನ ಗಾಜು ಹೇಗೆ ಒಡೆಯಿತು ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ. ಕಾರಿನ ಗಾಜು ಈಗಾಗಲೇ ಬಿರುಕು ಬಿಟ್ಟಿರಬಹುದು, ಕೈಯಿಂದ ಬಡಿದರೆ ಹೀಗೆ ಗಾಜು ಒಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದು ಸಾರ್ವಜನಿಕರಲ್ಲಿ ಮತ್ತಷ್ಟು ಸಂಶಯಗಳನ್ನು ಹುಟ್ಟುಹಾಕಿದೆ. ಪೊಲೀಸ್ ಸಿಬ್ಬಂದಿಯೊಬ್ಬರು ಮೊಬೈಲ್ನಿಂದ ಬಡಿದಾಗ ಗಾಜು ಒಡೆದರೆ, ಅದು ಅವರ ಅಧಿಕಾರ ದುರುಪಯೋಗವೇ ಅಥವಾ ಆ ಸಂದರ್ಭದ ಅನಿವಾರ್ಯತೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಒಟ್ಟಾರೆ, ಮಂಗಳೂರು ಘಟನೆ ಸೋಶಿಯಲ್ ಮೀಡಿಯಾದಲ್ಲಿ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ ಹೇಗೆ ಅಭಿಪ್ರಾಯಗಳು ರೂಪುಗೊಳ್ಳುತ್ತವೆ ಎಂಬುದಕ್ಕೆ ಒಂದು ಉದಾಹರಣೆಯಾಗಿದೆ. ಪೊಲೀಸರ ದೌರ್ಜನ್ಯ ಎಂದು ಬಿಂಬಿತವಾದ ಒಂದು ಘಟನೆ, ಕೊನೆಗೆ ಒಬ್ಬ ಕೊಲೆ ಆರೋಪಿ ಮತ್ತು ರೌಡಿಶೀಟರ್ನ ಕೃತ್ಯವಾಗಿ ಹೊರಹೊಮ್ಮಿದೆ. ಸತ್ಯ ಹೊರಬಂದ ನಂತರವೂ, ಪೊಲೀಸರ ನಡೆಯನ್ನು ಸಂಪೂರ್ಣವಾಗಿ ಸಮರ್ಥಿಸಲು ಸಾಧ್ಯವಿಲ್ಲವಾದರೂ, ಸಾರ್ವಜನಿಕರು ಯಾರ ಪರ ನಿಲ್ಲಬೇಕು ಎಂಬುದನ್ನು ಪುನರ್ವಿಮರ್ಶಿಸಬೇಕಾಗಿದೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ಮಂಗಳೂರು15 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್22 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ14 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ21 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ20 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ21 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ20 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















