ಪುತ್ತೂರು
ಬಾಸ್ಕೇಟ್ ಬಾಲ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಾಸಕ ಅಶೋಕ್ ರೈ ಪುತ್ರ – ಪಂದ್ಯಾಟದ ನಡುವೆ ಕಾಲು ಟ್ವಿಸ್ಟ್ : ಮಂಗಳೂರಿನಲ್ಲಿ ಆಪರೇಷನ್ – ಶಾಸಕರಿಂದ ಪುತ್ತೂರಿನಲ್ಲಿ ಜನರ ಅಹವಾಲು ಸ್ವೀಕಾರ..!
ಪುತ್ತೂರು: ರಾಜ್ಯ ಮಟ್ಟದ ಬಾಸ್ಕೇಟ್ ಬಾಲ್ ಪಂದ್ಯಾಟದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪುತ್ತೂರು ಶಾಸಕ ಅಶೋಕ್ ರೈ ಪುತ್ರ ಪ್ರದೀಲ್ ರೈ ಹಾಗೂ ಮೃನಲ್ ಲಸ್ರದೋ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ನಡೆದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲೆಯಿಂದ ಮೂವರು ಬಾಸ್ಕೆಟ್ ಬಾಲ್ ಪಟುಗಳು ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಇರ್ವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಟವಾಡುತ್ತಿದ್ದ ವೇಳೆ ಶಾಸಕರ ಪುತ್ರನ ಕಾಲು ಟ್ವಿಸ್ಟ್ ಆಗಿ ಎಲುಬು ತುಂಡರಿಸಿತ್ತು. ಪುತ್ರನನ್ನು ಮಂಗಳೂರಿಗೆ ಕರೆದುಕೊಂಡು ಬಂದು ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸೋಮವಾರ ಬೆಳಿಗ್ಗೆ 10.30 ಕ್ಕೆ ಮಗನ ಕಾಲು ಸರ್ಜರಿಯಾಗಿದೆ. ಪತ್ನಿ ಸುಮಾ ಅಶೋಕ್ ರೈ ಆಸ್ಪತ್ರೆಯಲ್ಲಿದ್ದರು.
ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ
ಇವರು ತಮ್ಮ ಬಳಿ ಬಂದ ಪ್ರತಿಯೊಬ್ಬರಲ್ಲೂ ಮತನಾಡಿಸಿದರು. ಬೆಳಿಗ್ಗೆ 12 ಗಂಟೆಯಿಂದ ರಾತ್ರಿ 7.30 ರತನಕ ಕಚೇರಿಯಲ್ಲೇ ಇದ್ದರು.
ಪುತ್ರನ ಶಸ್ತ್ರಚಿಕಿತ್ಸೆ ನಡುವೆ ಜನರ ಸಮಸ್ಯೆಗೆ ಸ್ಪಂದನೆಯನ್ನು ಮಾಡಿದ್ದಾರೆ ಎಂದು ಕಚೇರಿಗೆ ಬಂದ ಯಾವ ಸಾರ್ವಜನಿಕರಿಗೂ ಗೊತ್ತಾಗಲಿಲ್ಲ.
ಈ ಬಗ್ಗೆ ಶಾಸಕ ಅಶೋಕ್ ರೈ ಅವರಲ್ಲಿ ಕೇಳಿದಾಗ ‘ನನ್ನ ಮಗನಿಗೆ ಅವಘಡ ಸಂಭವಿಸಿದೆ, ಕಾಲಿನ ಎಲುಬು ಫ್ಯಾಕ್ಚರ್ ಆದ ಕಾರಣ ಆಸ್ಪತ್ರೆಯಲ್ಲಿ ದಾಖಲಿಸಿ ಸರ್ಜರಿ ಮಾಡಲಾಗಿದೆ, ನಾನು ಹೋಗಬೇಕಿತ್ತು. ಇವತ್ತು ಸೋಮವಾರ, ಪ್ರತೀ ಸೋಮವಾರ ನಾನು ಕಚೇರಿಯಲ್ಲಿರುತ್ತೇನೆ ಎಂದು ಜನರಿಗೆ ವಾಗ್ದಾನ ಹೇಳುತ್ತಿದ್ದೇನೆ. ನನ್ನ ಬಳಿ ಸಂಕಷ್ಟ ಹೇಳಲು ಒಂದಷ್ಟು ಮಂದಿ ಬಡವರು, ನೊಂದವರು ಬರುತ್ತಾರೆ. ಏಕಾಏಕಿ ನಾನು ಕಚೇರಿಗೆ ಬಾರದೆ ರಜೆ ಹಾಕಿದ್ದಲ್ಲಿ ನನ್ನನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ಬೇಸರವಾಗಬಹುದು, ಅವರ ಮನಸ್ಸು ನೋಯಿಸುವುದು ನನಗೆ ಇಷ್ಟವಾಗಲಿಲ್ಲ, ಈ ಕಾರಣಕ್ಕೆ ನಾನು ಕಚೇರಿಗೆ ಬಂದಿದ್ದೆ’ ಎಂದು ಹೇಳಿದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ
ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’; ಇಂದಿನ ಮಕ್ಕಳಿಗೆ ಕಷ್ಟದ ಅರಿವು ಕಡಿಮೆ – ಶಿವಪ್ರಸಾದ್ ಶೆಟ್ಟಿ
ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವ್ಯಾಪಾರ ಕೌಶಲ್ಯ, ಉದ್ಯಮಶೀಲತೆ ಮತ್ತು ವ್ಯಾವಹಾರಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು.
ಪುತ್ತೂರು: ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವ್ಯಾಪಾರ ಕೌಶಲ್ಯ, ಉದ್ಯಮಶೀಲತೆ ಮತ್ತು ವ್ಯಾವಹಾರಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಎನ್. ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಕೇಳಿದ್ದೆಲ್ಲವೂ ಸುಲಭವಾಗಿ ಸಿಗುತ್ತಿರುವುದರಿಂದ ಕಷ್ಟದ ದಿನಗಳ ಅರಿವು ಕಡಿಮೆಯಾಗುತ್ತಿದೆ. ಆದರೆ ಹಿಂದಿನ ತಲೆಮಾರಿನವರು ತಮ್ಮ ಬಾಲ್ಯದಲ್ಲಿ ಹಳ್ಳಿಯಿಂದ ಕಿಲೋಮೀಟರ್‌ಗಟ್ಟಲೆ ನಡೆದುಕೊಂಡು ಶಾಲೆಗೆ ಹೋಗುವ ದಿನಮಾನಗಳಿದ್ದವು. ಸೀಮಿತ ಸೌಲಭ್ಯಗಳ ನಡುವೆ ಕಷ್ಟಪಟ್ಟು ಬೆಳೆದಿದ್ದರಿಂದಲೇ ಇಂದು ಹಲವರು ಎತ್ತರಕ್ಕೆ ಏರಲು ಸಾಧ್ಯವಾಗಿದೆ ಎಂದು ನುಡಿದರು.

ಇಂದಿನ ಮಕ್ಕಳಿಗೆ ಸಾಕಷ್ಟು ಅವಕಾಶಗಳಿವೆ. ಮಕ್ಕಳು ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಸಂಸ್ಥೆಗೆ ಕೀರ್ತಿ ತರುವ ಕೆಲಸವನ್ನು ಮಾಡಬೇಕು. ಬಾಲ್ಯದಲ್ಲೇ ವ್ಯಾಪಾರದ ಆದರ್ಶಗಳನ್ನು ಕಲಿಯಲು ಮತ್ತು ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಲು ಶಾಲೆಗಳಲ್ಲಿ ಆಯೋಜಿಸುವ ಮಾರ್ಕೆಟ್ ಫೆಸ್ಟ್ನಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ಶಿಕ್ಷಣವೆಂದರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಪಡೆಯುವ ಪಾಠವಲ್ಲ. ವ್ಯಕ್ತಿತ್ವ ರೂಪುಗೊಳಿಸುವ, ಸಮಾಜಕ್ಕೆ ಮಕ್ಕಳನ್ನು ಅಣಿಗೊಳಿಸುವ ಪ್ರಕ್ರಿಯೆಯೂ ಆಗಿದೆ.
ವ್ಯವಹಾರದಲ್ಲಿ ಕೇವಲ ಶ್ರಮವಷ್ಟೇ ಸಾಲದು, ‘ಸ್ಮಾರ್ಟ್ ವರ್ಕ್’ ಕೂಡ ಅತ್ಯಗತ್ಯ. ಎಂದರಲ್ಲದೆ ಮಕ್ಕಳು ಮುಂದಿನ ದಿನಗಳಲ್ಲಿ ಸ್ವಂತ ಉದ್ಯಮಗಳನ್ನು ಸ್ಥಾಪಿಸಬೇಕು. ನಮ್ಮ ಉತ್ಪನ್ನಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೂಲಕ ಭಾರತದ ಆರ್ಥಿಕ ಮೌಲ್ಯವನ್ನು ಹೆಚ್ಚಿಸಬೇಕು. ವಿದೇಶಿಯರನ್ನು ನಮ್ಮ ಸಂಸ್ಥೆಗಳಲ್ಲಿ ದುಡಿಸಿಕೊಳ್ಳುವ ಶಕ್ತಿಯನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
-
Uncategorized21 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ8 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ8 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು7 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್8 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ6 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ7 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸಿನೆಮಾ6 hours agoAakasham Lo Ok Tara-ಬಾಕ್ಸ್ ಆಫೀಸ್ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’















