Connect with us

ಬಿಗ್ ನ್ಯೂಸ್

BigBoss | ಕೊಳಚೆ ನೀರನ್ನು ಸಂಸ್ಕರಿಸದೆ ಹೊರ ಬಿಟ್ಟ ಕನ್ನಡ ಬಿಗ್ ಬಾಸ್ ಸ್ಟುಡಿಯೋ : ಸ್ಟುಡಿಯೋ ಸೀಜ್ – ಪೊಲೀಸ್ ದಾಳಿ ವೇಳೆ ಅಡ್ಡಗಟ್ಟಿದ ಸಿಬ್ಬಂದಿ – ಸ್ಪರ್ಧಿಗಳು ಸ್ಥಳಾಂತರ

Published

on

Ad Widget

Ad Widget

Ad Widget

Ad Widget

ಬೆಂಗಳೂರು: ಬಿಗ್‌ ಬಾಸ್‌ (BigBoss) ಕನ್ನಡ ರಿಯಾಲಿಟಿ ಶೋ ನಡೆಯುತ್ತಿರುವ ಬಿಡದಿ ಸಮೀಪದ ಜಾಲಿವುಡ್‌ ಸ್ಟುಡಿಯೋವನ್ನು ರಾಮನಗರ ಜಿಲ್ಲಾಡಳಿತದಿಂದ ಸೀಜ್‌ ಮಾಡಲಾಗಿದೆ. ಪೊಲೀಸರು ಸ್ಟೂಡಿಯೋ ಒಳಗೆ ದಾಳಿ ನಡೆಸಿದ್ದು, ಅಷ್ಟರಲ್ಲಾಗಲೇ ಎಲ್ಲಾ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಯಿಂದ ಹೊರ ಬಂದಿದ್ದರು.

Ad Widget

Ad Widget

Ad Widget

Ad Widget

ರಾಮಗರ ಜಿಲ್ಲಾ ವ್ಯಾಪ್ತಿಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್‌ ಸ್ಟುಡಿಯೋ, ಕೊಳಚೆ ನೀರನ್ನು ಸಂಸ್ಕರಿಸದೆ ನೇರವಾಗಿ ಮೋರಿಗೆ ಬಿಡುತ್ತಿದೆ. ಇದು ನಿಯಮ ಉಲ್ಲಂಘನೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೋಮವಾರ ನೋಟಿಸ್‌ ಜಾರಿ ಮಾಡಿತ್ತು. ಈ ಬೆನ್ನಲ್ಲೆ ಮಂಗಳವಾರ ಸಂಜೆ ರಾಮನಗರ ಜಿಲ್ಲಾಡಳಿತದಿಂದ ಸ್ಟೂಡಿಯೋ ಮೇಲೆ ದಾಳಿ ನಡೆಸಿ ಸೀಜ್‌ ಮಾಡಲಾಗಿದೆ.

Ad Widget

Ad Widget alt="Ad Widget"/>

Ad Widget

ಸ್ಟೂಡಿಯೋಗೆ ಒಟ್ಟು ನಾಲ್ಕು ಗೇಟ್‌ಗಳಿದ್ದು, ಮೂರು ಗೇಟ್‌ಗಳನ್ನು ಜಿಲ್ಲಾಡಳಿತ ಬಂದ್‌ ಮಾಡಿದೆ. ಒಂದು ಗೇಟ್‌ ಅನ್ನು ಸ್ಪರ್ಧಿಗಳು ಹೊರ ಹೋಗಲು ಬಿಟ್ಟು ಸಂಜೆ 7 ಗಂಟೆಯವರೆಗೂ ಕಾಲಾವಕಾಶ ನೀಡಿತ್ತು. ಆ ಬಳಿಕ ಸ್ಟುಡಿಯೋ ಒಳಗೆ ಇರುವ ಬಿಗ್‌ ಬಾಸ್‌ ಮನೆಗೆ ಅಧಿಕಾರಿಗಳು ಪ್ರವೇಶಿಸಲು ಯತ್ನಿಸಿದಾಗ ವಾಹಿನಿ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ತಡೆಯಲು ಮುಂದಾಗಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿ ಪೊಲೀಸರು ಬಿಗ್‌ ಬಾಸ್‌ ಮನೆಯೊಳಗೆ ಹೋಗಿದ್ದಾರೆ. ಅಷ್ಟರಲ್ಲಾಗಲೇ ಎಲ್ಲಾ ಸ್ಪರ್ಧಿಗಳನ್ನು ವಾಹಿನಿ ಹೊರಗೆ ಕಳುಹಿಸಿದೆ.

Ad Widget

Ad Widget <> Ad Widget

ದಾಳಿ ಹಿನ್ನೆಲೆ ಥಿಯೇಟರ್‌ಗೆ ಸ್ಥಳಾಂತರ
ರಾಮನಗರ ಜಿಲ್ಲಾಡಳಿಯ ಹಾಗೂ ಪೊಲೀಸರ ದಾಳಿ ಹಿನ್ನೆಲೆ ಬಿಗ್‌ ಬಾಸ್‌ ಮನೆಯಲ್ಲಿದ್ದ ಎಲ್ಲಾ ಸ್ಪರ್ಧಿಗಳನ್ನು ಜಾಲಿವುಡ್‌ ಸ್ಟೂಡಿಯೋದಲ್ಲಿಯೇ ಇದ್ದ ಥಿಯೇಟರ್‌ಗೆ ಸ್ಥಳಾಂತರ ಮಾಡಲಾಗಿತ್ತು. ಆ ಬಳಿಕ ಸ್ಪರ್ಧಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿದೆ ಎನ್ನಲಾಗಿದೆ.

ಬಿಗ್‌ ಬಾಸ್‌ ಮನೆಯಿಂದ ಹೊರ ಬಂದು ಕಾರ್‌ನಲ್ಲಿ ಹೊರಟ ಸ್ಪರ್ಧಿಗಳು
ಬಿಗ್‌ ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರ ಬಂದು ವಾಹಿನಿಯಿಂದ ವ್ಯವಸ್ಥೆ ಮಾಡಿ ಕಾರ್‌ಗಳಲ್ಲಿ ಸ್ಟೂಡಿಯೋದಿಂದ ಹೊರಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

ಮನೆಯಲ್ಲಿದ್ದ 17 ಸ್ಪರ್ಧಿಗಳು ಯಾರು..?
ಕಾಕ್ರೋಚ್ ಸುಧಿ
ಕಾವ್ಯ ಶೈವ
ಡಾಗ್ ಸತೀಶ್
ಗಿಲ್ಲಿ ನಟ
ಜಾಹ್ನವಿ
ಧನುಷ್ ಗೌಡ
ಚಂದ್ರಪ್ರಭ
ಮಂಜುಭಾಷಿಣಿ
ರಾಶಿಕಾ ಶೆಟ್ಟಿ
ಧ್ರುವಂತೆ
ಅಶ್ವಿನಿ
ಅಭಿಷೇಕ್ ಶ್ರೀಕಾಂತ್
ಮಲ್ಲಮ್ಮ
ರಕ್ಷಿತಾ ಶೆಟ್ಟಿ
ಮಾಳು ನಿಪನಾಳ
ಸ್ಪಂದನಾ ಸೋಮಣ್ಣ
ಅಶ್ವಿನಿ ಗೌಡ

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!