Connect with us

ಉಡುಪಿ

Karkala-13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳದ ಯುವಕ ಬೆಂಗಳೂರಿನಲ್ಲಿ ಪತ್ತೆ : ಯುವಕನ ಪತ್ತೆ ಹಚ್ಚಿದ ವಿಶೇಷ ತನಿಖಾ ತಂಡ

Published

on



Ad Widget

Ad Widget

Ad Widget

Ad Widget

ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, 2012ರಲ್ಲಿ ಕಾರ್ಕಳದಿಂದ ನಾಪತ್ತೆಯಾಗಿದ್ದ ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.8: ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, 2012ರಲ್ಲಿ ಕಾರ್ಕಳದಿಂದ ನಾಪತ್ತೆಯಾಗಿದ್ದ ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮುಂಡೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಭಾಕರ ಪ್ರಭು ಅವರ ಮಗ ಅನಂತ ಕೃಷ್ಣ ಪ್ರಭು (16) 2012ರ ಡಿಸೆಂಬರ್ 6ರಂದು ಮನೆಯಿಂದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೊರಟು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದನು.

Ad Widget

Ad Widget <> Ad Widget

ಈ ಬಗ್ಗೆ ಪ್ರಭಾಕರ ಪ್ರಭು ಅವರು ನೀಡಿದ ದೂರದಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



Ad Widget

ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಖಚಿತ ಮಾಹಿತಿಯ ಆಧಾರದಲ್ಲಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಅನಂತ ಕೃಷ್ಣ ಪ್ರಭು (ಈಗ 29 ವರ್ಷ) ಅವರನ್ನು ಪತ್ತೆ ಹಚ್ಚಿದ್ದಾರೆ.

Ad Widget

Ad Widget

ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಸುದರ್ಶನ್ ದೊಡಮನಿ, ಉಡುಪಿ ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಈರಣ್ಣ ಶಿರಗುಂಪಿ, ಸಿಬ್ಬಂದಿ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ.

Ad Widget
Click to comment

Leave a Reply

ಉಡುಪಿ

Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!

Published

on



Ad Widget

Ad Widget

Ad Widget

Ad Widget

ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.

Ad Widget

Ad Widget

Ad Widget

Ad Widget

ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.

Ad Widget

Ad Widget <> Ad Widget

ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.



Ad Widget

ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.

Ad Widget

Ad Widget

ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.

ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.

ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.

ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Ad Widget
Continue Reading

ಉಡುಪಿ

Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.



Ad Widget

ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಕೆಳಗೆ ಬಿದ್ದ ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ.

ಸದ್ಯ ರಾಜೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ.

Ad Widget
Continue Reading

ಉಡುಪಿ

Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ

Published

on



Ad Widget

Ad Widget

Ad Widget

Ad Widget

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.



Ad Widget

ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading