Connect with us

ಸ್ಥಳೀಯ

Uppinangady-ಸ್ನೇಹಿತನ ಸಾಲಕ್ಕಾಗಿ ಉಪ್ಪಿನಂಗಡಿಯ ಯುವಕನನ್ನು ಬೆಂಗಳೂರಿನ ಫೈನಾನ್ಸ್‌ ಒಂದರಲ್ಲಿ ಕೂಡಿ ಹಾಕಿ 3 ತಿಂಗಳು ಹಲ್ಲೆ – ಮೂವರ ಬಂಧನ!

Published

on



Ad Widget

Ad Widget

Ad Widget

Ad Widget

ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿಯ ಯುವಕನೊಬ್ಬನನ್ನು ಬರೋಬ್ಬರಿ ಮೂರು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ, ನಿತ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಬಲೆ ಬೀಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು/ಉಪ್ಪಿನಂಗಡಿ: ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿಯ ಯುವಕನೊಬ್ಬನನ್ನು ಬರೋಬ್ಬರಿ ಮೂರು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ, ನಿತ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದೇವನಹಳ್ಳಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಬಲೆ ಬೀಸಿದ್ದಾರೆ. ಈ ಘಟನೆ ರಾಜಧಾನಿಯಿಂದ ಉಪ್ಪಿನಂಗಡಿಯವರೆಗೆ ಭಾರೀ ಸಂಚಲನ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಚೀಫ್ ಫೈನಾನ್ಸಿಂಗ್ ಆಫೀಸರ್ ಆಗಿ ಕೆಲಸ ಮಾಡುತ್ತಿರುವ ಉಪ್ಪಿನಂಗಡಿ ಮಠ ನಿವಾಸಿ, ಸಫಾ ನಗರದ ಮುಹಮ್ಮದ್ ಮುಸ್ತಫಾ (27) ಸಂತ್ರಸ್ತ ಯುವಕ. ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ನನ್ನ ಸ್ನೇಹಿತ ಮುಹಮ್ಮದ್ ರಾಜಿ ಅವರೊಂದಿಗೆ ಇಂದಿರಾನಗರ ಬಳಿಯ ಲಾಡ್ಕೊಂಡರಲ್ಲಿ ವಾಸಿಸುತ್ತಿದ್ದೆ.ಜೂ 25 ರಂದು ಅಲ್ಲಿಗೆ ಬಂದ ಕಾರ್ತಿಕ್‌ ಎಂಬಾತ, ಆ ದಿನ ರಾಜಿ ಅವರು ‘ನನಗೆ ಕೆಲಸವಿದೆ’ ಎಂದು ಹೇಳಿ ಕಾರ್ತಿಕ್ ಅವರೊಂದಿಗೆ ಹೊರಟುಹೋಗಿದ್ದರು. ಮರುದಿನವೂ ರಾಜಿ ಅವರು ಬರಲಿಲ್ಲ.

Ad Widget

Ad Widget <> Ad Widget

ಮರುದಿನ ಕಾರ್ತಿಕ್ ಮತ್ತು ಲಕ್ಷ್ಮಣ್ ಅವರು ‘ರಾಜಿ ಯಾಕೆ ಬರಲಿಲ್ಲ?’ ಎಂದು ನನ್ನನ್ನು ಪ್ರಶ್ನಿಸಿ , ‘ನೀನು ನಮ್ಮ ಜೊತೆ ಬಾ’ ಎಂದು ಬಲವಂತಪಡಿಸಿ ಕಾರಿನಲ್ಲಿ ಕರೆದೊಯ್ದರು. ಅಲ್ಲಿಂದ ದೇವನಹಳ್ಳಿಗೆ ನನ್ನನ್ನು ಕರೆದೊಯ್ದು, ಒಂದು ಫೈನಾನ್ಸ್ ಕಂಪನಿಯಲ್ಲಿ ಆತನನ್ನು ಕೂಡಿಹಾಕಿದ್ದಾರೆ.



Ad Widget

ಮೂರು ತಿಂಗಳ ನರಕಯಾತನೆ:
ಅಲ್ಲಿಗೆ ಅಜಯ್ ಎಂಬಾತ ಬಂದು, “ನಿನ್ನ ಗೆಳೆಯ ರಾಜಿ ನನ್ನಿಂದ 6 ಲಕ್ಷ ರೂ. ಸಾಲ ಪಡೆದಿದ್ದಾನೆ. ಅದನ್ನು ಹಿಂದಿರುಗಿಸದಿದ್ದರೆ ನಿನ್ನನ್ನು ಬಿಡುವುದಿಲ್ಲ” ಎಂದು ದೈಹಿಕವಾಗಿ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದಾನೆ. ತನಗೆ ಈ ಹಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಸ್ತಫಾ ಗೋಗರೆದರೂ, ಆರೋಪಿಗಳು ಕೇಳಲಿಲ್ಲ.

Ad Widget

Ad Widget

ನಿತ್ಯವೂ ಚಿತ್ರಹಿಂಸೆ:
ಮುಸ್ತಫಾರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿದ ಆರೋಪಿಗಳು, ಪ್ರತಿದಿನವೂ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ. ಈ ಕೃತ್ಯದಲ್ಲಿ ಜೀವನ್ ಎಂಬಾತನೂ ಭಾಗಿಯಾಗಿದ್ದಾನೆ ಎಂದು ಮುಸ್ತಫಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಜೂನ್ 25ರಿಂದ ಅಕ್ಟೋಬರ್ 5ರವರೆಗೆ ಬರೋಬ್ಬರಿ 3 ತಿಂಗಳಿಗೂ ಹೆಚ್ಚು ಕಾಲ ಮುಸ್ತಫಾ ಆರೋಪಿಗಳ ವಶದಲ್ಲೇ ನರಕಯಾತನೆ ಅನುಭವಿಸಿದ್ದಾರೆ.

ಡೆಡ್ಲೈನ್, ನಂತರ ರಕ್ಷಣೆ:
ಅಕ್ಟೋಬರ್ 5ರ ರಾತ್ರಿ 8 ಗಂಟೆಗೆ ಆರೋಪಿಗಳು ಮುಸ್ತಫಾಗೆ ‘ಡೆಡ್ಲೈನ್’ ನೀಡಿ, “ಹಣ ಬಂದಿಲ್ಲ ಎಂದರೆ ನಿನ್ನನ್ನು ಸಾಯಿಸುತ್ತೇವೆ” ಎಂದು ಬೆದರಿಸಿದ್ದಾರೆ. ಈ ವಿಷಯ ಹೇಗೋ ಮುಸ್ತಫಾ ಅವರ ಮನೆಯವರಿಗೆ ತಿಳಿದುಬಂದಿದೆ. ಅವರು ತಕ್ಷಣ ಪೊಲೀಸರ ನೆರವು ಪಡೆದು, ಮುಸ್ತಫಾರನ್ನು ಆರೋಪಿಗಳ ವಶದಿಂದ ಬಿಡಿಸಿದ್ದಾರೆ.

ಪೊಲೀಸ್ ಕಾರ್ಯಾಚರಣೆ, ಮೂವರ ಬಂಧನ:
ಮುಹಮ್ಮದ್ ಮುಸ್ತಫಾ ನೀಡಿದ ದೂರಿನನ್ವಯ, ದೇವನಹಳ್ಳಿ ಠಾಣಾ ಪೊಲೀಸರು ಬಿ.ಎನ್.ಎಸ್. ಸೆಕ್ಷನ್ 118(1), 127(4), 140(2), 351(2), 352, 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಜಯ್, ಕಾರ್ತಿಕ್ ಮತ್ತು ಜೀವನ್ ಎಂಬುವರನ್ನು ಬಂಧಿಸಿದ್ದಾರೆ. ನಾಲ್ಕನೇ ಆರೋಪಿ ಲಕ್ಷ್ಮಣ್ನ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಸಾಲದ ಸುಳಿಯಲ್ಲಿ ಮತ್ತೊಂದು ಜೀವ ನಲುಗುಸಲು ಯತ್ನ!
ಸಾಲದ ವಿಷಯದಲ್ಲಿ ಅಮಾಯಕ ಯುವಕನೊಬ್ಬನನ್ನು ಅಪಹರಿಸಿ, ಮೂರು ತಿಂಗಳು ಕೂಡಿಹಾಕಿ ಹಲ್ಲೆ ನಡೆಸಿದ ಈ ಪ್ರಕರಣ ರಾಜ್ಯದಲ್ಲಿ ಆತಂಕ ಮೂಡಿಸಿದೆ. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರ ವಹಿಸುವಂತೆ ಈ ಘಟನೆ ಎಚ್ಚರಿಕೆ ನೀಡಿದೆ.

Ad Widget
Click to comment

Leave a Reply

ಪುತ್ತೂರು

ಮುಳಿಯ ಶ್ಯಾಮ್ ಭಟ್‌ ನಿಧನ : ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌’ ಅ.6ರಂದು ಮಧ್ಯಾಹ್ನ 2 ಗಂಟೆಯವರೆಗೆ ಶೋರೂಮ್ ಬಂದ್

Published

on



Ad Widget

Ad Widget

Ad Widget

Ad Widget

ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಸಂಸ್ಥೆಯ ಮಾಲಕ ಸರಾಫ್‌ ಮುಳಿಯ ಶ್ಯಾಮ್ ಭಟ್‌ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಹಾಗೂ ಸುಳ್ಯ ಶೋರೂಂಗಳನ್ನು ಅ.6ರಂದು ಮಧ್ಯಾಹ್ನದವರೆಗೆ ಬಂದ್ ಇರಿಸಲಾಗುವುದು.

Ad Widget

Ad Widget

Ad Widget

Ad Widget

ಚಿನ್ನಾಭರಣ ಉದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ಶ್ಯಾಮ್ ಭಟ್‌ ಅವರ ಅಗಲಿಕೆಗೆ ಸಂತಾಪ ಸೂಚಿಸುವ ಉದ್ದೇಶದಿಂದ ಶೋರೂಂ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ಯಾಮ್ ಭಟ್‌ ಅವರು ಅ.4ರಂದು ನಿಧನರಾಗಿದ್ದು, ಅ.6ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

Ad Widget

Ad Widget <> Ad Widget



Ad Widget
Ad Widget
Continue Reading

ಬಿಗ್ ನ್ಯೂಸ್

Puttur Dasara-92ನೇ ವರ್ಷದ ಶಾರದೋತ್ಸವಕ್ಕೆ ಹೊಸ ರೂಪ; ‘ಪುತ್ತೂರು ದಸರಾ’ ನಾಮಾಂಕಿತದಲ್ಲಿ ನವರಾತ್ರಿಯ ವೈಭವದ ಆಚರಣೆ

Published

on



Ad Widget

Ad Widget

Ad Widget

Ad Widget

ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.11ರಿಂದ 21ರವರೆಗೆ 92ನೇ ವರ್ಷದ ನವರಾತ್ರಿ ಪೂಜೆ ಹಾಗೂ ಶ್ರೀ ಶಾರದೋತ್ಸವ ವೈಭವದಿಂದ ನಡೆಯಲಿದೆ.

Ad Widget

Ad Widget <> Ad Widget

ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.21ರಂದು 20ಕ್ಕೂ ಅಧಿಕ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳೊಂದಿಗೆ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಇದರೊಂದಿಗೆ ‘ಪುತ್ತೂರು ದಸರಾ’ ಸಂಪನ್ನಗೊಳ್ಳಲಿದೆ.



Ad Widget

ದಸರಾ ಪರಂಪರೆಗೆ ಹೊಸ ರೂಪ
ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಮಾತನಾಡಿ, ಹಲವು ಪವಾಡಗಳಿಗೆ ಸಾಕ್ಷಿಯಾಗಿರುವ ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಶಾರದೋತ್ಸವವನ್ನು ಗತಕಾಲದ ವೈಭವವನ್ನು ಮರುಕಳಿಸುವ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.

Ad Widget

Ad Widget

ಈ ಬಾರಿ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ನಾಮಾಂಕಿತ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಪುತ್ತೂರು ತಾಲೂಕಿನ ದಸರಾ ಮಹೋತ್ಸವವಾಗಿ ರೂಪಿಸುವ ಉದ್ದೇಶವಿದೆ. ಈ ಕುರಿತು ಮೂರು ವರ್ಷಗಳ ಹಿಂದೆಯೇ ಸಮಿತಿಯಲ್ಲಿ ಚಿಂತನೆ ನಡೆದಿತ್ತು ಎಂದು ಅವರು ತಿಳಿಸಿದರು.

ಪುತ್ತೂರಿನಲ್ಲೇ ದಸರಾ ವೈಭವ
ಹಿಂದೆ ದಸರಾ ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳಲು ಪುತ್ತೂರಿನ ಜನರು ಮಂಗಳೂರು ಹಾಗೂ ಮಡಿಕೇರಿಗೆ ತೆರಳುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪುತ್ತೂರು ಶಾರದೆಯ ವೈಭವದ ಶೋಭಾಯಾತ್ರೆ ಜನರ ಗಮನ ಸೆಳೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಸೀತಾರಾಮ ರೈ ಹೇಳಿದರು.

ಪುತ್ತೂರಿನಲ್ಲೇ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ವಿಶಾಲ ರೂಪ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಪುತ್ತೂರು ತಾಲೂಕಿನ ಜನತೆಯ ದಸರಾ ಮಹೋತ್ಸವವಾಗಿ ಬೆಳೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹತ್ತು ದಿನ ಧಾರ್ಮಿಕ-ಸಾಂಸ್ಕೃತಿಕ ಸಂಭ್ರಮ
ಅ.11ರಿಂದ ಆರಂಭವಾಗುವ ಉತ್ಸವದಲ್ಲಿ ನವರಾತ್ರಿ ಪೂಜೆ, ಶ್ರೀ ಶಾರದಾ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಚಂಡಿಕಾ ಹೋಮ ಸೇರಿದಂತೆ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರು ಹಾಗೂ ಸಾರ್ವಜನಿಕರನ್ನು ರಂಜಿಸಲಿವೆ.

ಅ.21ರಂದು ನಡೆಯುವ ಸಮಾರೋಪದಂದು 20ಕ್ಕೂ ಅಧಿಕ ಪ್ರಸಿದ್ಧ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳು ಶೋಭಾಯಾತ್ರೆಗೆ ಮೆರುಗು ನೀಡಲಿವೆ. ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯೊಂದಿಗೆ ಈ ಬಾರಿಯ ‘ಪುತ್ತೂರು ದಸರಾ’ ವೈಭವಕ್ಕೆ ತೆರೆ ಬೀಳಲಿದೆ.

ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ದಸರಾ ಸಮಿತಿಯ ಗೌರವ ಮಾರ್ಗದರ್ಶಕ ಡಾ. ಸುರೇಶ್ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ ಪಿ., ಶಾರದಾ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ವಸಂತ್ ಕುಮಾರ್ ಹಾಗೂ ಶೋಭಾಯಾತ್ರೆಯ ಸಂಚಾಲಕರಾದ ಕೃಷ್ಣ ಎಂ. ಅಳಿಕೆ ಮತ್ತು ನವೀನ್ ಕುಲಾಲ್ ಪುತ್ತೂರು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading