ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷಾ ಪ್ರದಾನ ಹಾಗೂ ಯಕ್ಷರಂಜಿನಿ ಘಟಕದ ವಾರ್ಷಿಕ ಚಟುವಟಿಕೆ ಉದ್ಘಾಟನೆ; ಬುದ್ಧಿಯನ್ನು ಚುರುಕುಗೊಳಿಸುವ ಕಲೆ ಯಕ್ಷಗಾನ – ಸುಣ್ಣಂಬಳ ವಿಶ್ವೇಶ್ವರ ಭಟ್
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಯಕ್ಷರಂಜಿನಿ ಘಟಕ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ಯಕ್ಷ ದೀಕ್ಷಾ ಪ್ರದಾನ ಹಾಗೂ ಯಕ್ಷರಂಜಿನಿ ಘಟಕದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಹಾಗೂ ವೇಷಧಾರಿ ಸುಣ್ಣಂಬಳ ವಿಶ್ವೇಶ್ವರ ಭಟ್ ಮಾತನಾಡಿದರು.
ಪುತ್ತೂರು: ಒಳಿತು ಕೆಡುಕುಗಳನ್ನು ವಿಮರ್ಶಿಸಿ ಒಳ್ಳೆಯ ವಿಚಾರಗಳನ್ನು ಪುರಾಣಗಳಲ್ಲಿ ತಿಳಿಸಲಾಗಿದೆ. ಮಕ್ಕಳ ಬೆಳವಣಿಗೆಯ ಸಂದರ್ಭದಲ್ಲಿ ಒಳ್ಳೆಯ ಸಂಸ್ಕೃತಿ, ಆಚರಣೆಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಅವಶ್ಯಕ. ಯಕ್ಷಗಾನ ಸ್ವಂತಿಕೆಯನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾದ ಕಲೆ. ಬುದ್ಧಿಯ ಮಟ್ಟವನ್ನೂ ಹೆಚ್ಚಿಸುತ್ತದೆ. ಯಕ್ಷಗಾನ ಪ್ರಸಂಗಗಳ ಮೂಲಕ ಒಳ್ಳೆಯ ವಿಚಾರಗಳನ್ನು ತಿಳಿದುಕೊಳ್ಳಬಹುದು. ಇಂತಹಾ ಕಲಾ ಪ್ರಕಾರಗಳು ಹಾಗೂ ಧಾರ್ಮಿಕ ಆಚರಣೆಗಳಿಂದ ಕೂಡಿದ ಸಂಸ್ಕೃತಿಯನ್ನು ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಹಾಗೂ ವೇಷಧಾರಿ ಸುಣ್ಣಂಬಳ ವಿಶ್ವೇಶ್ವರ ಭಟ್ ನುಡಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಯಕ್ಷರಂಜಿನಿ ಘಟಕ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ಯಕ್ಷ ದೀಕ್ಷಾ ಪ್ರದಾನ ಹಾಗೂ ಯಕ್ಷರಂಜಿನಿ ಘಟಕದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿ ಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ. ಶ್ರೀಧರ ನಾಯಕ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ಸ್ವಾಗತಿಸಿ ತೃತೀಯ ಪದವಿ ವಿದ್ಯಾರ್ಥಿನಿ ಚೈತ್ರ ವಂದಿಸಿದರು. ಭಾಗ್ಯಶ್ರೀ ಕುಂಚಿನಡ್ಕ ನಿರೂಪಿಸಿದರು.
ಈ ಸಂದರ್ಭದಲ್ಲಿ ಖ್ಯಾತ ಕಲಾವಿದರಿಂದ ಪಾದುಕ ಪ್ರದಾನ ಪ್ರಸಂಗದ ತಾಳಮದ್ದಳೆ ಜರುಗಿತು. ಹಿಮ್ಮೇಳದಲ್ಲಿ ಕಾವ್ಯಶ್ರೀ ಅಜೇರು, ಮದ್ದಳೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಚೆಂಡೆಯಲ್ಲಿ ಪಿ.ಟಿ ಜಯರಾಮ ಪದ್ಯಾಣ ಸಹಕರಿಸಿದರು.ಮುಮ್ಮೇಳದಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್, ಅಶೋಕ ಭಟ್ ಉಜಿರೆ, ವಿದ್ವಾನ್ ಕೇಶವ ಭಟ್ ಕೇಕಣಾಜೆ ಹಾಗೂ ಶುಭ ಅಡಿಗ ಸಹಕರಿಸಿದರು
ಶಿಕ್ಷಣ
Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್ಜಿಎಫ್ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್ಫೆಸ್ಟ್ 2K26’
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್ಫೆಸ್ಟ್ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್ಅಪ್ ಸ್ಥಾನ ಗಳಿಸಿತು.
ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.
ವಿಜೇತರಿಗೆ ಪ್ರಶಸ್ತಿ ಪ್ರದಾನ
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್ಅಪ್ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.
ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.
‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಕಾರ್ಯಕ್ರಮಗಳು20 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಸ್ಥಳೀಯ3 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
Uncategorized21 hours agoAmbika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ
-
ಶಿಕ್ಷಣ19 hours agoSanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
-
ಬಿಗ್ ನ್ಯೂಸ್3 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ3 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!


















