ಮೈಸೂರು
Mysuru-ಮೈಸೂರು ದಸರಾಕ್ಕೆ ಬಲೂನು ಮಾರಾಟ ಮಾಡಲು ಬಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ – ಆರೋಪಿ ಕಾಲುಗಳಿಗೆ ಗುಂಡು ಹಾರಿಸಿ ಬಂಧನ!
ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಈ ಪೈಶಾಚಿಕ ಕೃತ್ಯ ಎಸಗಿದ್ದ ಆರೋಪಿ ಕಾರ್ತಿಕ್ನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪೊಲೀಸರ ಈ ದಿಟ್ಟ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಮೈಸೂರು: (ಅ.09): ಸಾಂಸ್ಕೃತಿಕ ನಗರಿ ಮೈಸೂರು ದಸರಾ ಸಂಭ್ರಮದಲ್ಲಿ ತೇಲುತ್ತಿರುವಾಗಲೇ ಅಮಾನವೀಯ ಘಟನೆಯೊಂದು ರಾಜ್ಯವನ್ನೇ ತಲ್ಲಣಗೊಳಿಸಿದೆ. ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಈ ಪೈಶಾಚಿಕ ಕೃತ್ಯ ಎಸಗಿದ್ದ ಆರೋಪಿ ಕಾರ್ತಿಕ್ನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪೊಲೀಸರ ಈ ದಿಟ್ಟ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಘಟನೆ ವಿವರ:
ಗುಲ್ಬರ್ಗ ಮೂಲದ ಅಲೆಮಾರಿ ಕುಟುಂಬವೊಂದು ದಸರಾ ಜಾತ್ರೆಯಲ್ಲಿ ಬಲೂನು ಸೇರಿದಂತೆ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಲು ಮೈಸೂರಿಗೆ ಆಗಮಿಸಿತ್ತು. ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದ ಈ ಕುಟುಂಬಕ್ಕೆ ಮೈಸೂರು ಕರಾಳ ನೆನಪು ನೀಡಿದೆ. ಮಳೆ ಬಂದ ಕಾರಣ ಮುಂಜಾನೆ ಎದ್ದು ನೋಡಿದಾಗ 9 ವರ್ಷದ ಮಗಳು ನಾಪತ್ತೆಯಾಗಿದ್ದಳು. ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರ ತಂಡ ತಕ್ಷಣವೇ ಹುಡುಕಾಟ ಆರಂಭಿಸಿದ್ದು, ಟೆಂಟ್ನ ಕೆಲವೇ ದೂರದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿತ್ತು. ಇದು ಕೇವಲ ಎರಡೇ ದಿನಗಳ ಅಂತರದಲ್ಲಿ ಒಂದೇ ಜಾಗದಲ್ಲಿ ನಡೆದ ಎರಡನೇ ಹತ್ಯೆಯಾಗಿದೆ ಎಂಬುದು ಆತಂಕಕಾರಿ ವಿಷಯ. ಎರಡು ದಿನಗಳ ಹಿಂದೆಯಷ್ಟೇ ಇದೇ ಸ್ಥಳದಲ್ಲಿ ರೌಡಿ ಶೀಟರ್ನ ಸಹವರ್ತಿಯ ಬರ್ಬರ ಹತ್ಯೆಯಾಗಿತ್ತು.
ಸಿಸಿಟಿವಿ ಆಧರಿಸಿ ಆರೋಪಿ ಪತ್ತೆ, ಗುಂಡೇಟು:
ಘಟನೆ ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂಬಾತನ ಸುಳಿವು ಸಿಕ್ಕಿದೆ. ಕೃತ್ಯ ಎಸಗಿದ್ದ ವಿಕೃತ ಕಾಮುಕ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ. ತಕ್ಷಣ ಕಾರ್ಯಪ್ರವೃತ್ತರಾದ ಮೈಸೂರು ಪೊಲೀಸರ ತಂಡ ಕೊಳ್ಳೇಗಾಲಕ್ಕೆ ತೆರಳಿದೆ.
ಮೆಟಗಳ್ಳಿ ಬಳಿ ಆರೋಪಿ ಕಾರ್ತಿಕ್ನನ್ನು ಸುತ್ತುವರಿದಾಗ, ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಪೂರ್ವ ಅಪರಾಧ ಹಿನ್ನೆಲೆ:
ಬಂಧಿತ ಆರೋಪಿ ಕಾರ್ತಿಕ್ 4 ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಎನ್ನಲಾಗಿದೆ. ಮಂಡ್ಯದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದಲ್ಲಿ ಈತ 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಕಠಿಣ ಶಿಕ್ಷೆಗೆ ಆಗ್ರಹ, ಪೊಲೀಸ್ ಕಾರ್ಯಾಚರಣೆಗೆ ಮೆಚ್ಚುಗೆ:
ಬಾಲಕಿ ಹತ್ಯೆ ಪ್ರಕರಣದ ಆರೋಪಿ ಕಾರ್ತಿಕ್ ಅರೆಸ್ಟ್ ಆಗುತ್ತಿದ್ದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ. ಹಲವರು ಗಲ್ಲು ಶಿಕ್ಷೆಗೆ ಆಗ್ರಹಿಸಿದ್ದರೆ, ಮತ್ತೊ ಕೆಲವರು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿದ್ದಾರೆ. ಇತ್ತ, ಮೈಸೂರು ಪೊಲೀಸರ ಕ್ಷಿಪ್ರ ಮತ್ತು ದಿಟ್ಟ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ24 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ


















