ಅಪರಾಧ
Mangalore: ಮಂಗಳೂರಿನಲ್ಲಿ ಓಲಾ, ಊಬರ್ ಕ್ಯಾಬ್ ಚಾಲಕನಿಗೆ ‘ಜನಾಂಗೀಯ ನಿಂದನೆ ಮಾಡಿದ ಮಲಯಾಳಂ ನಟ!
ಕ್ಯಾಬ್ ಚಾಲಕರನ್ನು “ಮುಸ್ಲಿಂ ಉಗ್ರ”, “ಟೆರರಿಸ್ಟ್” ಎಂದು ಜನಾಂಗೀಯ ನಿಂದನೆ ಮಾಡಿದ ಗಂಭೀರ ಆರೋಪದ ಮೇಲೆ ಕೇರಳ ಮೂಲದ ಮೂವರು ಮಲಯಾಳಂ ಚಿತ್ರನಟರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಕ್ಯಾಬ್ ಚಾಲಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ಕ್ಯಾಬ್ ಚಾಲಕರನ್ನು “ಮುಸ್ಲಿಂ ಉಗ್ರ”, “ಟೆರರಿಸ್ಟ್” ಎಂದು ಜನಾಂಗೀಯ ನಿಂದನೆ ಮಾಡಿದ ಗಂಭೀರ ಆರೋಪದ ಮೇಲೆ ಕೇರಳ ಮೂಲದ ಮೂವರು ಮಲಯಾಳಂ ಚಿತ್ರನಟರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಕ್ಯಾಬ್ ಚಾಲಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಏನಿದು ಪ್ರಕರಣ?
ಅಕ್ಟೋಬರ್ 9ರ ರಾತ್ರಿ, ಮಲಯಾಳಂ ಚಿತ್ರನಟರಾದ ಜಯಕೃಷ್ಣ, ವಿಮಲ್ ಮತ್ತು ಸಂತೋಷ್ ಅಬ್ರಾಹಂ ಅವರು Uber ಮತ್ತು Rapido Captain ಅಪ್ಲಿಕೇಶನ್‌ಗಳ ಮೂಲಕ ಕ್ಯಾಬ್ ಬುಕ್ ಮಾಡಿದ್ದಾರೆ. ಬಿಜೈ ನ್ಯೂ ರೋಡ್, ಮಂಗಳೂರು ಇವರ ಪಿಕ್-ಅಪ್ ಸ್ಥಳವಾಗಿತ್ತು. ಈ ಆರ್ಡರ್ ಸ್ವೀಕರಿಸಿದ ಚಾಲಕ ಅಹ್ಮದ್ ಶಫೀಕ್, ಪಿಕ್-ಅಪ್ ಸ್ಪಷ್ಟೀಕರಣಕ್ಕಾಗಿ ಆಪ್ ಮೂಲಕವೇ ಕರೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಹಿಂದಿ ಭಾಷೆಯಲ್ಲಿ ಮಾತನಾಡಿ ಅಹ್ಮದ್ ಶಫೀಕ್ ಅವರನ್ನು “ಮುಸ್ಲಿಂ ತೀವ್ರವಾದಿ, ಟೆರರಿಸ್ಟ್” ಎಂದು ಅಪಹಾಸ್ಯ ಮಾಡಿದ್ದಾರೆ ಎನ್ನಲಾಗಿದೆ.

ಜನಾಂಗೀಯ ನಿಂದನೆ, ಅವಾಚ್ಯ ಶಬ್ದಗಳ ಬಳಕೆ
ದೂರಿನ ಪ್ರಕಾರ, ಆರೋಪಿಗಳು ಚಾಲಕನನ್ನು “ಮುಸ್ಲಿಂ ಟೆರರಿಸ್ಟ್” ಎಂದು ಬೊಬ್ಬೆ ಹಾಕಿ, ಮಲಯಾಳಂ ಭಾಷೆಯಲ್ಲಿ ಚಾಲಕನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆ ಅಹ್ಮದ್ ಶಫೀಕ್ ಅವರಿಗೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ.
ಪೊಲೀಸ್ ದೂರು ಮತ್ತು ತನಿಖೆ
ಚಾಲಕ ಅಹ್ಮದ್ ಶಫೀಕ್ ಅವರ ದೂರಿನ ಆಧಾರದ ಮೇಲೆ, ಅಕ್ಟೋಬರ್ 10ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 103/2025, ಕಲಂ: 352, 353(2) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಈ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
-
ನಿಧನ ವಾರ್ತೆ9 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಪರಾಧ8 hours agoPunacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ9 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ9 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ9 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಬಿಗ್ ನ್ಯೂಸ್3 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ7 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ಬಿಗ್ ನ್ಯೂಸ್4 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ















