ಶಿಕ್ಷಣ
KR Manoj-ಕೇರಳದಲ್ಲಿ 8000ಕ್ಕೂ ಅಧಿಕ ಹಿಂದೂ ಯುವಕ-ಯುವತಿಯರನ್ನು ಮರಳಿ ಮಾತೃ ಧರ್ಮಕ್ಕೆ ಕರೆತಂದು ಕ್ರಾಂತಿಕಾರಕ ಕೆಲಸ ಮಾಡಿರುವ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಕೆ.ಆರ್ ಮನೋಜ್ ಅ.13ರಂದು ಪುತ್ತೂರು ಅಂಬಿಕಾ ವಿದ್ಯಾಲಯಕ್ಕೆ : ‘ನಾನು ಆತಿರಾ’ ಪುಸ್ತಕ ಲೋಕಾರ್ಪಣೆ – ನೂತನ ಅಂತಸ್ತು , ವ್ಯಾಯಾಮ ಶಾಲೆ ಹಾಗೂ ಸಭಾಂಗಣ ಉದ್ಘಾಟನೆ
ಕೇರಳದ ತಿರುವನಂತಪುರಂನಲ್ಲಿ ಸುಮಾರು 8,000ಕ್ಕೂ ಅಧಿಕ ಹಿಂದೂ ಯುವಕ-ಯುವತಿಯರನ್ನು ಮತಾಂತರದಿಂದ ಮರಳಿ ಮಾತೃಧರ್ಮಕ್ಕೆ ಕರೆತಂದು ಕ್ರಾಂತಿಕಾರಕ ಕೆಲಸ ಮಾಡಿರುವ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಆಚಾರ್ಯ ಕೆ.ಆರ್.ಮನೋಜ್ ಜಿ ಅವರು ಅಕ್ಟೋಬರ್ 13ರಂದು ಪುತ್ತೂರಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.
ಕೇರಳದ ತಿರುವನಂತಪುರಂನಲ್ಲಿ ಸುಮಾರು 8,000ಕ್ಕೂ ಅಧಿಕ ಹಿಂದೂ ಯುವಕ-ಯುವತಿಯರನ್ನು ಮತಾಂತರದಿಂದ ಮರಳಿ ಮಾತೃಧರ್ಮಕ್ಕೆ ಕರೆತಂದು ಕ್ರಾಂತಿಕಾರಕ ಕೆಲಸ ಮಾಡಿರುವ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಆಚಾರ್ಯ ಕೆ.ಆರ್.ಮನೋಜ್ ಜಿ ಅವರು ಅಕ್ಟೋಬರ್ 13ರಂದು ಪುತ್ತೂರಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.
ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಬಿಕಾ ಶಿಕ್ಷಣ ಸಂಸ್ಥೆಗೆ 25 ವರ್ಷಗಳು ಮತ್ತು ಬಪ್ಪಳಿಗೆಯ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ 10 ವರ್ಷಗಳು ಪೂರ್ಣಗೊಂಡ ಸಂದರ್ಭದಲ್ಲಿ, ವಿದ್ಯಾಲಯದ ನೂತನ ಅಂತಸ್ತು, ವ್ಯಾಯಾಮಶಾಲೆ, ಮತ್ತು ಸಭಾಂಗಣವನ್ನು ಆಚಾರ್ಯ ಕೆ.ಆರ್.ಮನೋಜ್ ಜಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷ್ಮೀಶ ತೋಳ್ಳಾಡಿ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ನಂತರ ಮಾತೃಧರ್ಮಕ್ಕೆ ಮರಳಿದ ಆತಿರಾ ಎಸ್. ಅವರ ‘ನಾನು ಆತಿರಾ’ ಕೃತಿಯ ಕನ್ನಡ ಅನುವಾದ ಪುಸ್ತಕದ ಲೋಕಾರ್ಪಣೆ ನಡೆಯಲಿದೆ. ಅಲ್ಲದೆ, ಅಂಬಿಕಾ ಪದವಿಪೂರ್ವ ವಿದ್ಯಾಲಯ ಮತ್ತು ಸಿಬಿಎಸ್‌ಇ ಸಂಸ್ಥೆಯ ಪಾರಂಪರಿಕ ದಿನಾಚರಣೆಯೂ ಆಯೋಜನೆಗೊಂಡಿದೆ.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ., ಪ್ರಾಚಾರ್ಯ ಗಣೇಶ ಪ್ರಸಾದ್ ಡಿ.ಎಸ್., ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ., ಕೃತಿಕಾರರಾದ ಆತಿರಾ ಎಸ್., ಹಾಗೂ ಅನುವಾದಕರಾದ ನಾಗೇಂದ್ರ ಮತ್ತು ಶ್ವೇತಾ ಜಲಗೇರಿ ಉಪಸ್ಥಿತರಿರಲಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ನಂತರ ಆರ್ಷ ವಿದ್ಯಾ ಸಮಾಜದ ತಂಡದಿಂದ ನೃತ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಈ ನೃತ್ಯ ನಾಟಕವು ಮತಾಂಧರ ಷಡ್ಯಂತ್ರಗಳನ್ನು ಎದುರಿಸುವ ಬಗ್ಗೆ ಮಾಹಿತಿಯನ್ನು ನೀಡಲಿದೆ.
ಆಚಾರ್ಯ ಕೆ.ಆರ್.ಮನೋಜ್ ಜಿ ಅವರ ಪರಿಚಯ
ಎಳವೆಯಿಂದಲೇ ಯೋಗ ಮತ್ತು ಆಧ್ಯಾತ್ಮದೆಡೆಗೆ ಆಕರ್ಷಿತರಾಗಿ, ಈ ಕ್ಷೇತ್ರಗಳಲ್ಲಿ ಗಾಢ ಸಾಧನೆಯನ್ನು ಮಾಡಿರುವ ಆಚಾರ್ಯ ಕೆ.ಆರ್.ಮನೋಜ್ ಜಿ, ಅಸಂಖ್ಯ ಶಿಷ್ಯರಿಗೆ ಮಾರ್ಗದರ್ಶನ ನೀಡಿದ್ದಾರೆ. ಯೋಗವಿದ್ಯೆ, ಆಧ್ಯಾತ್ಮಿಕ ಶಾಸ್ತ್ರ, ಮತ್ತು ಭಾರತೀಯ ಸಂಸ್ಕೃತಿಯಲ್ಲಿ ಪರಿಣತಿ ಹೊಂದಿದ್ದಾರೆ. ಸನಾತನ ಧರ್ಮದ ಸವಾಲುಗಳಿರುವ ಕೇರಳದಂತಹ ಪ್ರದೇಶದಲ್ಲಿ ಆರ್ಷ ವಿದ್ಯಾ ಸಮಾಜದ ಮೂಲಕ ಹಿಂದೂ ಪರಂಪರೆಯ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಲವ್ ಜಿಹಾದ್, ಇಂಟಲೆಕ್ಚುವಲ್ ಜಿಹಾದ್, ಲ್ಯಾಂಡ್ ಜಿಹಾದ್, ಮನಿ ಜಿಹಾದ್, ಜಾಬ್ ಜಿಹಾದ್, ಮತ್ತು ನಾರ್ಕಾಟಿಕ್ ಜಿಹಾದ್‌ನಂತಹ ಷಡ್ಯಂತ್ರಗಳಿಗೆ ಎದುರಾಗಿ, 8,000ಕ್ಕೂ ಅಧಿಕ ಮತಾಂತರಗೊಂಡವರನ್ನು ಮಾತೃಧರ್ಮಕ್ಕೆ ಕರೆತಂದು, ಸದ್ದಿಲ್ಲದ ಕ್ರಾಂತಿಯನ್ನು ನಡೆಸಿದ್ದಾರೆ. ಹೆತ್ತವರ ದುಃಖಕ್ಕೆ ಕಿವಿಯಾಗಿ, ಅವರಿಗೆ ನೆಮ್ಮದಿ ನೀಡಿದ್ದಾರೆ.
ಆರ್ಷ ವಿದ್ಯಾ ಸಮಾಜದ ಮೂಲಕ ಸನಾತನ ಧರ್ಮದ ಪಂಚಮಹಾಕರ್ತವ್ಯಗಳಾದ ಅಧ್ಯಯನ, ಅನುಷ್ಠಾನ, ಪ್ರಚಾರಣ, ಅಧ್ಯಾಪನ, ಮತ್ತು ಸಂಸ್ಕರಣವನ್ನು ಆಚರಣೆಗೆ ತಂದು, ಸಾವಿರಾರು ಮಂದಿಗೆ ದಾರಿದೀವಿಗೆಯಾಗಿದ್ದಾರೆ.
ಶಿಕ್ಷಣ
Vivekananda-ಪುತ್ತೂರು: ನಾಳೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ವಾರ್ಷಿಕೋತ್ಸವ
ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.
ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.26ರಂದು ಗುರುವಾರ ಮಧ್ಯಾಹ್ನ 2.30ರಿಂದ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುಟಾಣಿಗಳ ಮುಗ್ಧ ನೃತ್ಯ ಪ್ರದರ್ಶನದಿಂದ ಹಿಡಿದು ಹಿರಿಯ ವಿದ್ಯಾರ್ಥಿಗಳ ಅರ್ಥಪೂರ್ಣ ಸಾಂಸ್ಕೃತಿಕ ಪ್ರಸ್ತುತಿಗಳವರೆಗೆ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳು ನಡೆಯಲಿದ್ದು, ಶಾಲಾ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ ಪಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತಿ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಗೌರವ ಅತಿಥಿಯಾಗಿ FirstByteFast ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸಿಇಒ ಸ್ವಸ್ತಿಕ್ ಪದ್ಮ ಉಪಸ್ಥಿತರಿದ್ದು, ತಮ್ಮ ಅನುಭವ ಹಾಗೂ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಕನಸು ಮತ್ತು ಹುಮ್ಮಸ್ಸು ತುಂಬಲಿದ್ದಾರೆ.
ದಿನವಿಡೀ ಸಾಂಸ್ಕೃತಿಕ ವೈಭವ
ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಶಿಕ್ಷಣದ ಪ್ರದರ್ಶನದೊಂದಿಗೆ ಆರಂಭವಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಭಕ್ತಿ, ಶಿಸ್ತು ಮತ್ತು ಸಂಸ್ಕಾರ ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣದ ಪರಿಚಯ ಈ ಪ್ರದರ್ಶನದ ಮೂಲಕ ದೊರೆಯಲಿದೆ.
ಮಧ್ಯಾಹ್ನ 3ರಿಂದ 4ರವರೆಗೆ ಪೂರ್ವ ಪ್ರಾಥಮಿಕದಿಂದ 2ನೇ ತರಗತಿವರೆಗಿನ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮುದ್ದಾದ ವೇಷಭೂಷಣ, ಮುಗ್ಧ ಅಭಿನಯ ಹಾಗೂ ಲಯಬದ್ಧ ನೃತ್ಯಗಳ ಮೂಲಕ ಪುಟಾಣಿಗಳು ಸಭಿಕರನ್ನು ರಂಜಿಸಲಿದ್ದಾರೆ.

ಸಂಜೆ 4ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಬಳಿಕ ಸಂಜೆ 5.30ರಿಂದ 3ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ನೃತ್ಯ, ನಾಟಕ, ಸಂಗೀತ ಹಾಗೂ ರೂಪಕಗಳ ಮೂಲಕ ಹಿರಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಲಾ ಸಂಚಾಲಕ ರವಿನಾರಾಯಣ ಎಂ. ತಿಳಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಾರ್ಷಿಕೋತ್ಸವವು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ; ಮಕ್ಕಳ ವರ್ಷವಿಡೀ ನಡೆದ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಪ್ರತಿಫಲವಾಗಿದೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ವೇದಿಕೆಯ ಮೇಲೆ ಅನಾವರಣಗೊಳಿಸುವ ಪ್ರಯತ್ನವೇ ಈ ವಾರ್ಷಿಕೋತ್ಸವದ ವಿಶೇಷವಾಗಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
-
Uncategorized17 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ23 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಕ್ರೈಂ4 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಅಂತರ ರಾಜ್ಯ23 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ23 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ23 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ಶಿಕ್ಷಣ22 hours agoVivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















