ನಿಧನ ವಾರ್ತೆ
Puttur-ಹೆಜ್ಜೇನು ದಾಳಿಗೆ ಬಲಿಯಾದ 2ನೇ ತರಗತಿ ವಿದ್ಯಾರ್ಥಿನಿ; ಇನ್ನೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ! ರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆ
ಮಾರಣಾಂತಿಕ ಹೆಜ್ಜೇನು ದಾಳಿಗೆ ತುತ್ತಾಗಿದ್ದ 2ನೇ ತರಗತಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ವಿದ್ಯಾರ್ಥಿಯ ಸ್ಥಿತಿ ಇನ್ನೂ ಚಿಂತಾಜನಕವಾಗಿದ್ದು, ರಕ್ಷಣೆಗೆ ಧಾವಿಸಿದ್ದ ಸ್ಥಳೀಯರೊಬ್ಬರು ಚೇತರಿಸಿಕೊಂಡಿದ್ದಾರೆ.
ಪುತ್ತೂರು: ಮಾರಣಾಂತಿಕ ಹೆಜ್ಜೇನು ದಾಳಿಗೆ ತುತ್ತಾಗಿದ್ದ 2ನೇ ತರಗತಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ವಿದ್ಯಾರ್ಥಿಯ ಸ್ಥಿತಿ ಇನ್ನೂ ಚಿಂತಾಜನಕವಾಗಿದ್ದು, ರಕ್ಷಣೆಗೆ ಧಾವಿಸಿದ್ದ ಸ್ಥಳೀಯರೊಬ್ಬರು ಚೇತರಿಸಿಕೊಂಡಿದ್ದಾರೆ.
ಘಟನೆ ವಿವರ:
ಪುತ್ತೂರು ತಾಲೂಕು ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಅಕ್ಟೋಬರ್ 10ರ ಸಂಜೆ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹೆಜ್ಜೇನುಗಳು ದಾಳಿ ಮಾಡಿವೆ.
ಹೆಸರು ಮತ್ತು ವಿವರ:
ಮೃತಪಟ್ಟ ವಿದ್ಯಾರ್ಥಿನಿಯನ್ನು ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಅವರ ಪುತ್ರಿ, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಜಿಶಾ (7) ಎಂದು ಗುರುತಿಸಲಾಗಿದೆ.
ದಾಳಿಯಿಂದ ಗಂಭೀರಗೊಂಡಿರುವ ಮತ್ತೋರ್ವ ವಿದ್ಯಾರ್ಥಿ, ಕಿಶೋರ್ ಅವರ ಪುತ್ರ, ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಪ್ರತ್ಯುಶ್ (10) ಎಂದು ತಿಳಿದುಬಂದಿದೆ.
ರಕ್ಷಣೆಗೆ ಧಾವಿಸಿದ್ದ ವ್ಯಕ್ತಿಗೂ ಕಡಿತ:
ವಿದ್ಯಾರ್ಥಿಗಳ ಚೀರಾಟ ಕೇಳಿ ಸ್ಥಳೀಯರಾದ ನಾರಾಯಣ (40) ಅವರು ತಕ್ಷಣ ರಕ್ಷಣೆಗೆ ಧಾವಿಸಿದ್ದರು. ಈ ವೇಳೆ ಹೆಜ್ಜೇನುಗಳು ನಾರಾಯಣ್ ಅವರ ಮೇಲೂ ದಾಳಿ ಮಾಡಿ ಕಚ್ಚಿವೆ. ತಕ್ಷಣ ಗಾಯಾಳುಗಳನ್ನು ಪುತ್ತೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಜಿಶಾ ಸಾವು:
ತೀವ್ರ ಅಸ್ವಸ್ಥಗೊಂಡಿದ್ದ ದಿಶಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಅಕ್ಟೋಬರ್ 11ರಂದು ಜಿಶಾ ಕೊನೆಯುಸಿರೆಳೆದಿದ್ದಾಳೆ.
ಇದೇ ವೇಳೆ, ಗಂಭೀರವಾಗಿ ಗಾಯಗೊಂಡಿದ್ದ ಪ್ರತ್ಯುಶ್ ಅವರ ಆರೋಗ್ಯದಲ್ಲೂ ಏರುಪೇರಾಗಿದ್ದು, ಅವರನ್ನು ಸಹ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಕ್ಷಣೆಗೆ ಧಾವಿಸಿದ್ದ ನಾರಾಯಣ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜಿಶಾ ನಿಧನದಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ನಿಧನ ವಾರ್ತೆ
Accident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
-
Uncategorized17 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ22 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ22 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಕ್ರೈಂ4 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ರಾಜಕೀಯ22 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ22 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ಶಿಕ್ಷಣ22 hours agoVivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















