ಬಿಗ್ ನ್ಯೂಸ್
Puttur-ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ದಾಳಿ: ಸಂವಿಧಾನದ ಮೇಲಿನ ಪ್ರಹಾರ, ದಲಿತ ವಿರೋಧಿ ಮನಸ್ಥಿತಿಗೆ ಸಾಕ್ಷಿ – ಪುತ್ತೂರಿನಲ್ಲಿ ಕೆಡಿಎಸ್ಎಸ್ ಮತ್ತು ಕ್ರಿಶ್ಚಿಯನ್ ಯೂನಿಯನ್ ನಿಂದ ತೀವ್ರ ಖಂಡನೆ!
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಜೇಶ್ ಕಿಶೋರ್ ಶೂ ಎಸೆದ ಹೇಯ ಕೃತ್ಯವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ಮತ್ತು ಕ್ರಿಶ್ಚಿಯನ್ ಯೂನಿಯನ್ ತೀವ್ರವಾಗಿ ಖಂಡಿಸಿವೆ.
ಪುತ್ತೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಜೇಶ್ ಕಿಶೋರ್ ಶೂ ಎಸೆದ ಹೇಯ ಕೃತ್ಯವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ಮತ್ತು ಕ್ರಿಶ್ಚಿಯನ್ ಯೂನಿಯನ್ ತೀವ್ರವಾಗಿ ಖಂಡಿಸಿವೆ.
ಈ ಎರಡು ಸಂಘಟನೆಗಳು ಸೋಮವಾರ ಪ್ರತ್ಯೇಕ ಪತ್ರಿಕಾಗೋಷ್ಟಿ ನಡೆಸಿ ಈ ಘಟನೆಯನ್ನು “ಸಂವಿಧಾನದ ಮೇಲಿನ ದಾಳಿ” ಮತ್ತು “ದಲಿತ ವಿರೋಧಿ ಮನಸ್ಥಿತಿಯ ಅನಾವರಣ” ಎಂದು ಬಣ್ಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
“ದಲಿತರೊಬ್ಬರು ಮುಖ್ಯ ನ್ಯಾಯಮೂರ್ತಿ ಪೀಠದಲ್ಲಿ ಕುಳಿತು ನ್ಯಾಯ ನೀಡುವುದನ್ನು ಒಪ್ಪದ ಕೀಳು ಮನಸ್ಥಿತಿ ಇಂದಿಗೂ ಸಮಾಜದಲ್ಲಿ ಜೀವಂತವಾಗಿದೆ ಎಂಬುದಕ್ಕೆ ಈ ಕೃತ್ಯ ಸ್ಪಷ್ಟ ನಿದರ್ಶನ. ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಆದೇಶ ನೀಡುತ್ತಿಲ್ಲ ಎಂಬ ದ್ವೇಷ ಹಾಗೂ ಗವಾಯಿಯವರು ದಲಿತ ಸಮುದಾಯಕ್ಕೆ ಸೇರಿದವರೆಂಬ ತಾರತಮ್ಯ ಭಾವನೆಯಿಂದಲೇ ಈ ದಾಳಿ ನಡೆದಿದೆ. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು! ಎಂದು ಕೆಡಿಎಸ್ಎಸ್ ಸಂಚಾಲಕ ಕೃಷ್ಣಪ್ಪ ಸುಣ್ಣಾಜೆ ಆಗ್ರಹಿಸಿದರು.
ಸಂಘಟನಾ ಸಂಚಾಲಕ ಪಿ. ಕೆ. ರಾಜು, ಬೆಳ್ತಂಗಡಿ ತಾಲೂಕು ಸಂಚಾಲಕ ಪದ್ಮನಾಭ ಗರ್ಗಾಡಿ, ಮಾಜಿ ಸಂಚಾಲಕ ಗಣೇಶ್ ಕರೆಕ್ಕಾಡು, ಕಡಬ ವಲಯ ಸಂಚಾಲಕ ಕಮಲಾಕ್ಷ ಕಡಬ ಈ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು
ಕ್ರಿಶ್ಚಿಯನ್ ಯೂನಿಯನ್ ಪತ್ರಿಕಾಗೋಷ್ಟಿ
ಮತ್ತೊಂದು ಪತ್ರಿಕಾಗೋಷಟಿಯಲ್ಲಿ ಕ್ರಿಶ್ಚಿಯನ್ ಯೂನಿಯನ್ ಅಧ್ಯಕ್ಷ ಮೌರೀಸ್ ಮಸ್ಕರೇನಿಯಸ್ ಮಾತನಾಡಿ, “ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ಪ್ರಯತ್ನ ಆತಂಕಕಾರಿ. ನ್ಯಾಯವಾದಿಯಾಗಿ ಕಾನೂನುಬದ್ಧ ಮಾರ್ಗಗಳನ್ನು ಅನುಸರಿಸದೆ, ಹಿಂಸಾತ್ಮಕ ಮತ್ತು ಅತೀ ನೀಚ ಮಾರ್ಗವನ್ನು ಆರಿಸಿಕೊಂಡಿರುವುದು ಅಪಾಯಕಾರಿ ಬೆಳವಣಿಗೆ ಎಂದರು.
ನ್ಯಾಯಮೂರ್ತಿಗಳು ಯಾವುದೇ ರಾಜಕೀಯ ಪಕ್ಷದ ಜತೆ ಸಂಬಂಧ ಹೊಂದಿರುವುದಿಲ್ಲವಾದರೂ, ರಾಜಕೀಯ ಪಕ್ಷವೊಂದರ ಬೆಂಬಲಿಗರು ಈ ಕೃತ್ಯವನ್ನು ಖಂಡಿಸುವ ಬದಲು ಬೆಂಬಲಿಸುತ್ತಿರುವುದು ನಾಚಿಕೆಗೇಡು. ಈ ದುಷ್ಕರ್ಮಿಯ ಹಿಂದಿನ ಸೂತ್ರದಾರರು ಯಾರು? ದೇಶದ ಅಮಾಯಕ ಜನರಲ್ಲಿ ಮನುಷ್ಯ ವಿರೋಧಿ ಮನಸ್ಥಿತಿ ತುಂಬುತ್ತಿರುವವರು ಯಾರು? ನ್ಯಾಯಾಧೀಶರ ಮೇಲಿನ ಈ ದಾಳಿಯನ್ನು ಅತ್ಯಂತ ಖಂಡನೀಯ. ಗವಾಯಿಯವರ ಬೆನ್ನಿಗೆ ದೇಶದ ಪ್ರಜ್ಞಾವಂತ ಜನರು ಗಟ್ಟಿಯಾಗಿ ನಿಲ್ಲಬೇಕು. ಡಾ. ರಾಕೇಶ್ ಕಿಶೋರ್ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ, ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು
ಗೌರವ ಸಲಹೆಗಾರ ಜೆರೋನಿಯಸ್ ಪಾಯಸ್, ಉಪಾಧ್ಯಕ್ಷ ವಾಲ್ಟರ್ ಡಿಸೋಜ, ನಿಯೋಜಿತ ಅಧ್ಯಕ್ಷ ಜೋಕಿಂ ಲೂಯಿಸ್, ಸದಸ್ಯ ವಲೇರಿಯನ್ ಡಿಸೋಜ ಉಪಸ್ಥಿತರಿದ್ದರು.
ಉಭಯ ಸಂಘಟನೆಗಳು, ಈ ಹೇಯ ಕೃತ್ಯದ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ, ದೇಶದಲ್ಲಿ ದ್ವೇಷ ಮತ್ತು ವಿಧ್ವಂಸಕತೆಯನ್ನು ಬಿತ್ತುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಪ್ರಜ್ಞಾವಂತ ಸಮಾಜ ಈ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಎಂದು ಕರೆ ನೀಡಿವೆ.
ಅಂತರ ರಾಜ್ಯ
L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ದಿಲ್ಲಿಯ ಜಸೋಲಾ ವಿಹಾರ್ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಮಂಗಳೂರು
MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯ
Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.
ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.


















