ಸ್ಥಳೀಯ
Timarodi’s house-ತಿಮರೋಡಿ ಮಗಳು ಪಂಚಮಿ ಹೇಳಿಕೆ ಪಡೆಯಲು ಮನೆಗೆ ಭೇಟಿ ನೀಡಿದ ಎಸ್ಐಟಿ
ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಯ ಭಾಗವಾಗಿ ಎಸ್.ಐ.ಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯವರ ಮಗಳು ಪಂಚಮಿಯ ಹೇಳಿಕೆಯನ್ನು ದಾಖಲಿಸಲು ಇಂದು (ಅಕ್ಟೋಬರ್ 13) ಸಂಜೆ 4:05ಕ್ಕೆ ತಿಮರೋಡಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಯ ಭಾಗವಾಗಿ ಎಸ್.ಐ.ಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯವರ ಮಗಳು ಪಂಚಮಿಯ ಹೇಳಿಕೆಯನ್ನು ದಾಖಲಿಸಲು ಇಂದು (ಅಕ್ಟೋಬರ್ 13) ಸಂಜೆ 4:05ಕ್ಕೆ ತಿಮರೋಡಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಈ ಭೇಟಿಯು ಪ್ರಕರಣದ ತನಿಖೆಯಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಪಂಚಮಿಯ ಹೇಳಿಕೆಯಿಂದ ತನಿಖೆಗೆ ಮತ್ತಷ್ಟು ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ.
ಅಪರಾಧ
ಪುತ್ತೂರು ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ

ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
ಅ. 17ರಂದು ರಾತ್ರಿ ರಿಫಾಯಿ ಅವರು ಪುತ್ತೂರಿನ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಅಲ್ಲಿಗೆ ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಿಫಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್), 2023ರ ಕಲಂ 126(2), 352, 351(2) ಹಾಗೂ 115(2)ರಂತೆ ಪ್ರಕರಣ ದಾಖಲಾಗಿದೆ.
ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಅಪರಾಧ
ಸೌತಡ್ಕ ದೇವಸ್ಥಾನದ ಹೂವಿನ ಅಂಗಡಿ ವಿಚಾರದಲ್ಲಿ ಮಾರಾಮಾರಿ; ಮಹಿಳೆಯರ ಮೇಲೆ ಹಲ್ಲೆ ಆರೋಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೇವಸ್ಥಾನದ ಟ್ರಸ್ಟ್ಗೆ ಸೇರಿದ ಅಂಗಡಿಗಳ ಏಲಂ ಪ್ರಕ್ರಿಯೆಯ ಮೂಲಕ ರಾಘವ ಎಂಬವರು ಹೂವಿನ ಸ್ಟಾಲ್ ಪಡೆದಿದ್ದರು ಎನ್ನಲಾಗಿದೆ. ಆದರೆ, ಏಲಂ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೂ ಈ ಹಿಂದೆ ಅಂಗಡಿ ನಡೆಸುತ್ತಿದ್ದ ವ್ಯಾಪಾರಿ ಅಂಗಡಿಯನ್ನು ತೆರವುಗೊಳಿಸದೆ ಮುಂದುವರಿದಿದ್ದರು ಎಂದು ತಿಳಿದುಬಂದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಘವ ಭಂಡಾರಿ ಎಂಬವರು ಅಂಗಡಿಗೆ ಏಕಾಏಕಿ ಪ್ರವೇಶಿಸಿದ ಸಂದರ್ಭದಲ್ಲಿ ಎರಡೂ ಕಡೆಯ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಅದು ಮಾರಾಮಾರಿಗೆ ತಿರುಗಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಘಟನೆಗೆ ಸಂಬಂಧಿಸಿದಂತೆ ರಾಘವ ಭಂಡಾರಿ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣದ ಕುರಿತು ಪೊಲೀಸರ ಮುಂದಿನ ಕ್ರಮದ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.
ದಕ್ಷಿಣ ಕನ್ನಡ
ಬಂಟ್ವಾಳ : ಹಣ ವಾಪಸ್ ಕೇಳಿದ್ದಕ್ಕೆ ಚೂರಿ ಇರಿತ ಆರೋಪ: ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಹಣದ ವಿಚಾರವಾಗಿ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ವ್ಯಕ್ತಿಯೊರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ಅಜಿತ್ ಕುಮಾರ್ ಶೆಟ್ಟಿ (28) ವಶಕ್ಕೆ ಪಡೆಯಲಾದ ವ್ಯಕ್ತಿ
ಪೊಲೀಸ್ ಮೂಲಗಳ ಪ್ರಕಾರ, ಬಂಟ್ವಾಳ ಬಿ ಮೂಡಾ ಗ್ರಾಮದ ಉದಯ್ ಎಂಬವರಿಂದ ಆರೋಪಿಯು ಹಣ ಪಡೆದಿದ್ದು, ಅದನ್ನು ಪಾವತಿಸಲು ಬಾಕಿಯಿತ್ತು. ಈ ಹಣವನ್ನು ವಾಪಸ್ ನೀಡುವಂತೆ ಉದಯ್ ಕೇಳುತ್ತಿದ್ದರು ಎನ್ನಲಾಗಿದೆ. ಅ. 17ರ ರಾತ್ರಿ ಹಣವನ್ನು ವಾಪಸ್ ನೀಡುವುದಾಗಿ ತಿಳಿಸಿದ ಆರೋಪಿ, ಉದಯ್ ಅವರನ್ನು ಪಲ್ಲಮಜಲಿಗೆ ಬರುವಂತೆ ಹೇಳಿದ್ದಾನೆ.
ಅದರಂತೆ ಉದಯ್ ಹಣ ಪಡೆಯುವ ಸಲುವಾಗಿ ಪಲ್ಲಮಜಲು ಜಂಕ್ಷನ್ಗೆ ತೆರಳಿದ್ದು, ತನ್ನ ಸಹೋದರ ಲೋಕೇಶ್ (27) ಅವರನ್ನೂ ಸ್ಥಳಕ್ಕೆ ಬರುವಂತೆ ತಿಳಿಸಿದ್ದರು. ಲೋಕೇಶ್ ಸ್ಥಳಕ್ಕೆ ತಲುಪಿದಾಗ ಆರೋಪಿ ಅಜಿತ್ ಉದಯ್ ಅವರಿಗೆ ಚೂರಿಯಿಂದ ಇರಿಯುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ. ಈ ವೇಳೆ ತಡೆಯಲು ಮುಂದಾದ ಲೋಕೇಶ್ ಅವರನ್ನು ಆರೋಪಿ ಅಟ್ಟಿಸಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಸ್ಥಳೀಯರು ಗಾಯಗೊಂಡ ಉದಯ್ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 118(2), 109(1) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.




















