ಸ್ಥಳೀಯ
Jayanth T: ತಿಮರೋಡಿ ಗಡಿಪಾರು ವಿಷಯದಲ್ಲಿ ‘ಷಡ್ಯಂತ್ರ’ ಎಂದು ಸುಳ್ಳು ಸುದ್ದಿ ಪ್ರಸಾರ; ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು
ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದ ಗಡಿಪಾರು ಪ್ರಸ್ತಾವನೆಯನ್ನು ‘ಷಡ್ಯಂತ್ರ’ ಎಂದು ಬಿಂಬಿಸಿ ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಯೂಟ್ಯೂಬರ್ ಜಯಂತ್ ಟಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯಾಸತ್ಯತೆ ತಿಳಿದಿದ್ದರೂ ಅಪೂರ್ಣ ಮಾಹಿತಿಯೊಂದಿಗೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದ ಗಡಿಪಾರು ಪ್ರಸ್ತಾವನೆಯನ್ನು ‘ಷಡ್ಯಂತ್ರ’ ಎಂದು ಬಿಂಬಿಸಿ ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಯೂಟ್ಯೂಬರ್ ಜಯಂತ್ ಟಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯಾಸತ್ಯತೆ ತಿಳಿದಿದ್ದರೂ ಅಪೂರ್ಣ ಮಾಹಿತಿಯೊಂದಿಗೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಂಟ್ವಾಳ ಪೊಲೀಸ್ ಉಪಾಧಿಕ್ಷಕರು ನಿಯಮಾನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಪುತ್ತೂರು ಸಹಾಯಕ ಆಯುಕ್ತರಿಗೆ ಗಡಿಪಾರು ಪ್ರಸ್ತಾವನೆ ಸಲ್ಲಿಸಿರುವುದನ್ನು, ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುವ ಉದ್ದೇಶದಿಂದ ಮಾಡಲಾಗಿದೆ ಎಂದು ಬಿಂಬಿಸಿ ಸಂಬಂಧ ಕಲ್ಪಿಸಿದ್ದಾರೆ. ಇದನ್ನು ‘ಷಡ್ಯಂತ್ರ’ ಎಂದು ಕರೆದು ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಅಕ್ಟೋಬರ್ 14, 2025ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025ರ ಅಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 353(1)(ಬಿ)ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವುದರ ವಿರುದ್ಧ ಕಠಿಣ ಕ್ರಮದ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಶಿಕ್ಷಣ
Ambika-ಅಂಬಿಕಾದ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ಎಸ್.ಜಿ.ಎಫ್.ಐ ಗೆ ಆಯ್ಕೆ
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಪುತ್ತೂರಿನ ಬಾಲವನದಲ್ಲಿ ವಿದ್ಯಾಭಾರತಿ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಎಸ್.ಜಿ.ಎಫ್.ಐಗೆ ಆಯ್ಕೆಯಾಗಿದ್ದಾರೆ.
ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಪುತ್ತೂರಿನ ಬಾಲವನದಲ್ಲಿ ವಿದ್ಯಾಭಾರತಿ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಎಸ್.ಜಿ.ಎಫ್.ಐಗೆ ಆಯ್ಕೆಯಾಗಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಮೃದ್ದ್ ಎಲ್ ಶೆಟ್ಟಿ 200 ಮೀ ಬ್ಯಾಕ್ ಸ್ಟ್ರೋಕ್, 100 ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ ಹಾಗೂ 100 ಮೀ ಫ್ರೀ ಸ್ಟ್ರೈಲ್ ನಲ್ಲಿ ಬಳ್ಳಿ ಪದಕ ಪಡೆದು ಎಸ್.ಜಿ.ಎಫ್.ಐಗೆ ಆಯ್ಕೆಯಾಗಿದ್ದಾರೆ.
ಶಿಕ್ಷಣ
Vivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗ, ಐಇಇಇ ವಿದ್ಯಾರ್ಥಿ ವಿಭಾಗ, ಸೆಂಟರ್ ಆಫ್ ರೀಸರ್ಚ್ ಎಕ್ಸಲೆನ್ಸ್ ಇದರ ಸಂಯುಕ್ತ ಆಶ್ರಯದಲ್ಲಿ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ ರೆಸರೆಕ್ಟ್’ ನ್ನು ದಿನಾಂಕ 27.11.2026 ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗ, ಐಇಇಇ ವಿದ್ಯಾರ್ಥಿ ವಿಭಾಗ, ಸೆಂಟರ್ ಆಫ್ ರೀಸರ್ಚ್ ಎಕ್ಸಲೆನ್ಸ್ ಇದರ ಸಂಯುಕ್ತ ಆಶ್ರಯದಲ್ಲಿ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ ರೆಸರೆಕ್ಟ್’ ನ್ನು ದಿನಾಂಕ 27.11.2026 ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಯುವ ಆವಿಷ್ಕಾರರು, ಉದಯೋನ್ಮುಖ ತಂತ್ರಜ್ಞಾನಾಸಕ್ತರಿಗೆ ತಮ್ಮ ತಾಂತ್ರಿಕ ಕೌಶಲ್ಯಗಳು, ಸೃಜನಶೀಲತೆ ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯನ್ನು ಒರೆಗೆ ಹಚ್ಚಲು ರಾಷ್ಟಿçÃಯ ವೇದಿಕೆಯನ್ನು ಒದಗಿಸುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿರುವ ನೂತನ ಯೋಜನೆಗಳನ್ನು ಪ್ರೊತ್ಸಾಹಿಸಲು, ತಂಡವಾಗಿ ಕೆಲಸ ಮಾಡುವ ರೀತಿಯನ್ನು ಉತ್ತೇಜಿಸಲು ಮತ್ತು ಜಗತ್ತಿನ ನೈಜ ಸವಾಲುಗಳಿಗೆ ತಂತ್ರಜ್ಞಾನ ಆಧಾರಿತ ಪ್ರಾಯೋಗಿಕ ಪರಿಹಾರಗಳನ್ನು ಕಂಡುಹಿಡಿಯುವ ರೀತಿಯಲ್ಲಿ ಈ ಹ್ಯಾಕಥಾನ್ ಸ್ಪರ್ಧೆಯನ್ನು ವಿನ್ಯಾಸಗೊಳಿಸಲಾಗಿದೆ. ಈ 24 ಗಂಟೆಗಳಲ್ಲಿ ಭಾಗವಹಿಸುವ ತಂಡಗಳು ನಿರ್ದಿಷ್ಟ ಸಮಸ್ಯೆಗಳಿಗೆ ನವೀನ ಆಲೋಚನೆಗಳ ಮೂಲಕ ತಂತ್ರಜ್ಞಾನ ಅಧಾರಿತ ಪರಿಹಾರಗಳನ್ನು ಕಂಡುಹಿಡಿಯುವ ಕೆಲಸವನ್ನು ಮಾಡಲಿದ್ದಾರೆ ಮತ್ತು ತಮ್ಮ ತಂಡದ ತಾಂತ್ರಿಕ ಜ್ಞಾನ, ಸೃಜನಶೀಲತೆ ಮತ್ತು ನಾವೀನ್ಯತೆಗಳಿಂದ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳಲಿದ್ದಾರೆ.
ರೆಸರೆಕ್ಟ್’26 ಕ್ಕೆ ದೇಶಾದ್ಯಂತ ವಿವಿಧ ಭಾಗಗಳಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರು ರಾಜ್ಯಗಳ ೪೦ ಕಾಲೇಜುಗಳಿಂದ ಒಟ್ಟು 214 ತಂಡಗಳು ತಮ್ಮ ಹೆಸರನ್ನು ನೋಂದಾಯಿಸಿದ್ದವು. ಪ್ರಥಮ ಸುತ್ತಿನ ಪರಿಶೀಲನೆಯ ಬಳಿಕ 42 ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಆ ತಂಡಗಳು ಇದರಲ್ಲಿ ಭಾಗವಹಿಸುತ್ತವೆ.
ನವಂಬರ್ 27 ರಂದು ಬೆಳಿಗ್ಗೆ 9 ಗಂಟೆಗೆ ಇದರ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ಮಂಗಳೂರಿನ ಕಾಕುಂಜೆ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್.ಕೆ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ನವಂಬರ್ 28 ರಂದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭವು ನಡೆಯಲಿದ್ದು, ಬುದ್ಧಾಸ್ ಸ್ಕಿಲ್ ಅಕಾಡೆಮಿ ಇದರ ಮುಖ್ಯ ಕಾರ್ಯನಿರ್ವಣಾಧಿಕಾರಿ ಮತ್ತು ಎತ್ನೋಟೆಕ್ ಅಕಾಡೆಮಿ ಇದರ ಕಾರ್ಪೊರೇಟ್ ವ್ಯವಹಾರಗಳ ಉಪಾಧ್ಯಕ್ಷರು ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರಧಾನ್ ನಾಚಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ. ಕಾಲೇಜಿನ ಸಂಚಾಲಕ ಪ್ರಸನ್ನ ದರ್ಬೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಜೇತ ತಂಡಗಳಿಗೆ ಪಾರಿತೋಷಕದ ಜತೆಯಲ್ಲ್ತಿ ಪ್ರಥಮ ಸ್ಥಾನ ಗಳಿಸಿದ ತಂಡಕ್ಕೆ ರೂ.೩೦೦೦೦ ಹಾಗೂ ದ್ವಿತೀಯ ಸ್ಥಾನ ಗಳಿಸಿದ ತಂಡಕ್ಕೆ ರೂ. 20000ನಗದು ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತದೆ.
ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗ ಮುಖ್ಯಸ್ಥೆ ಡಾ.ರಾಧಿಕಾ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಪ್ರೊ.ಅಜಯ್ ಶಾಸ್ತಿç, ಸೆಂಟರ್ ಆಫ್ ರೀಸರ್ಚ್ ಎಕ್ಸಲೆನ್ಸ್ನ ಸಂಯೋಜಕ ಪ್ರೊ.ಶ್ರೀನಿಧಿ.ಎ ಮತ್ತು ಮಾಧ್ಯಮ ವಿಭಾಗದ ಸಂಯೋಜಕ ಡಾ.ಆಶ್ಲೆ.ಡಿ.ಸೋಜ ಪತ್ರಿಕಾ ಗೋಷ್ಟಿಯಲ್ಲಿ ಹಾಜರಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರವು ನ 24 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರವು ನ 24 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರು ಅನಿಕೇತನ ಲಾ ಚೇಂಬರ್ಸ್ ನ ವಕೀಲರಾದ ಕೃಷ್ಣಪ್ರಸಾದ್ ಎನ್ ಆರ್ ಮಾತನಾಡಿ, ಪತ್ರಿಕೆಗಳಲ್ಲಿ ಆಗಾಗ ವರದಿಯಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ಬಾಲಕಿಯರ ಅಪಹರಣ, ಆ್ಯಸಿಡ್ ದಾಳಿ ಮುಂತಾದ ಘಟನೆಗಳು ಸಮಾಜದಲ್ಲಿ ಆತಂಕವನ್ನು ಉಂಟುಮಾಡುತ್ತಿವೆ. ಇಂತಹ ಅನ್ಯಾಯಗಳು ನಡೆಯುವಾಗ ಅನೇಕರು ಧ್ವನಿ ಎತ್ತದೆ ಮೌನವಾಗಿರುವುದು ವಿಷಾದನೀಯ. ಅನ್ಯಾಯದ ವಿರುದ್ಧ ಪ್ರತಿಯೊಬ್ಬರೂ ಧೈರ್ಯದಿಂದ ಧ್ವನಿ ಎತ್ತಬೇಕು. ಮಹಿಳೆಯರ ಮೇಲಿನ ದೌರ್ಜನ್ಯವೆಂದರೆ ಕೇವಲ ದೈಹಿಕ ಹಿಂಸೆ ಮಾತ್ರವಲ್ಲ; ಮಾನಸಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಶೋಷಣೆ ಮತ್ತು ತಾರತಮ್ಯವೂ ದೌರ್ಜನ್ಯದ ವ್ಯಾಪ್ತಿಗೆ ಬರುತ್ತವೆ ಎಂದು ವಿವರಿಸಿದರು. ಮಹಿಳೆಯರ ಮೇಲಿನ ಯಾವುದೇ ರೀತಿಯ ದೌರ್ಜನ್ಯವನ್ನು ಸಹಿಸದೆ, ಅದರ ವಿರುದ್ಧ ಧ್ವನಿ ಎತ್ತಬೇಕು ಹಾಗೂ ಇತರರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ನಮ್ಮ ಸಮಾಜವು ಸಾಂಪ್ರದಾಯಿಕವಾಗಿ ಪುರುಷ ಪ್ರಧಾನ ಸಮಾಜವಾಗಿದ್ದು, ಪುರುಷರ ಪ್ರಾಬಲ್ಯದಿಂದಾಗಿ ಮಹಿಳೆಯರಿಗೆ ಸಮಾನ ಸ್ವಾತಂತ್ರ್ಯ ಮತ್ತು ಅವಕಾಶಗಳು ದೊರೆಯದೆ ಇದ್ದ ಸಂದರ್ಭಗಳಿವೆ. ಈ ಅಸಮಾನತೆಯು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದೆ. ಆದರೆ ಶಿಕ್ಷಣದಿಂದಾಗಿ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳು ಉಂಟಾಗಿವೆ. ಹಿಂದೆ ಮಹಿಳೆಯರಿಗೆ ಸ್ವಾತಂತ್ರ್ಯ ಬಹಳ ಕಡಿಮೆಯಿತ್ತು. ಆದರೆ ಇಂದು ಮಹಿಳೆಯರು ಉತ್ತಮ ಶಿಕ್ಷಣ ಪಡೆದು, ಸ್ವಾವಲಂಬಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸ್ವಾತಂತ್ರ್ಯ ಮತ್ತು ಸಮಾನ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಆದಾಗ್ಯೂ, ಮಹಿಳೆಯರ ಮೇಲಿನ ದೌರ್ಜನ್ಯಗಳು ಇನ್ನೂ ಮುಂದುವರಿದಿರುವುದು ಕಳವಳಕಾರಿ ಸಂಗತಿಯಾಗಿದೆ. ಮಹಿಳೆಯರ ಸುರಕ್ಷತೆ, ಘನತೆ ಮತ್ತು ಸಮಾನತೆಯನ್ನು ಖಚಿತಪಡಿಸಲು ಇನ್ನೂ ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಮಹಿಳಾ ಸಬಲೀಕರಣ ಘಟಕದ ನಿರ್ದೇಶಕರಾದ ಸತ್ಯಾಲತಾ ರೈ ಹಾಗೂ ಅವಿನಾ ಮಾಡ್ತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized20 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ7 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ7 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು6 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್7 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ5 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ6 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸಿನೆಮಾ6 hours agoAakasham Lo Ok Tara-ಬಾಕ್ಸ್ ಆಫೀಸ್ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’















