ರಾಜಕೀಯ
MLA Rai-ಕೇವಲ ಅನುದಾನ, ಪ್ರಾಜೆಕ್ಟ್ ತರುವುದು ಮಾತ್ರವಲ್ಲ, ಎಲ್ಲಾ ಕಾಮಗಾರಿ ಮಾಡಿ ತೋರಿಸುತ್ತೇವೆ! 7 ಕೋಟಿ ವೆಚ್ಚದ ಬೃಹತ್ ಹಾಸ್ಟೆಲ್ಗೆ ಶಾಸಕ ರೈ ಶಿಲಾನ್ಯಾಸ; ಸಿಎಂ ಭೇಟಿಗೂ ಮುನ್ನ ಬಿಗ್ ಪ್ಲಾನ್!
ಕಳೆದ ಎರಡೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ತರುವಲ್ಲಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಕೇವಲ ಅನುದಾನ ಬಂದರೆ ಸಾಕಾಗುವುದಿಲ್ಲ ಮುಂದೆ ಎಲ್ಲಾ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಆಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಕಳೆದ ಎರಡೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ತರುವಲ್ಲಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಕೇವಲ ಅನುದಾನ ಬಂದರೆ ಸಾಕಾಗುವುದಿಲ್ಲ ಮುಂದೆ ಎಲ್ಲಾ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಆಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಬನ್ನೂರು ಜೈನರಗುರಿ ಮಾರ್ನಡ್ಕದಲ್ಲಿ ರೂ.7 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿನಿಯರ ವಸತಿ ಗೃಹಕ್ಕೆ ಅವರು ಅ.14ರಂದು ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರ ವಸತಿಗೃಹ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಲಿದೆ. ಅದರಲ್ಲಿ 15 ಸಾವಿರ ಚದರ ಅಡಿಯಲ್ಲಿ 4 ಮಹಡಿಯ ಕಟ್ಟಡ, 1.ಕಿ.ಮೀ ಕಾಂಕ್ರೀಟ್ ರಸ್ತೆ, ಆವರಣಗೋಡೆ, ಸೋಲಾರ್ ಸಿಸ್ಟಮ್ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸುಮಾರು 9 ಹಾಸ್ಟೇಲ್ಗಳಿವೆ.ಹಿರೇಬಂಡಾಡಿಯಲ್ಲಿ ಸುಮಾರು 22 ಕೋಟಿ ರೂಪಾಯಿಯ ಹಾಸ್ಟೆಲ್ಗೆ ಟೆಂಡರ್ ಆಗಿದೆ. ಎರಡೂವರೆ ವರ್ಷದಲ್ಲಿ ಪುತ್ತೂರಿಗೆ ಅನುದಾನ ತರುವಲ್ಲಿ ಸತತ ಪ್ರಯತ್ನ ಮಾಡಿದ್ದೇವೆ.ನಾವು ನಮ್ಮ ಕೆಲಸವನ್ನು ರಿವ್ಯಾಲ್ಯೂವೇಷನ್ ಮಾಡುತ್ತಿದ್ದೇವೆ. ಇಷ್ಟರ ತನಕ ನಿರಂತರ ಸರಕಾರದಿಂದ ಅನುದಾನ ತರುವ ಕೆಲಸ ಮಾಡಿದ್ದೇವೆ. ಮುಂದೆ ಅದನ್ನು ಇಂಪ್ಲಿಮೆಂಟೇಷನ್ ಮಾಡುವಲ್ಲಿ ಗಮನ ಕೊಡುತ್ತೇವೆ ಎಂದು ಶಾಸಕರು ಹೇಳಿದರು.
,ಬರೇ ಅನುದಾನ ಬಂದಿದೆ ಎಂದು ಹೇಳಿದರೆ ಸಾಲದು ಇನ್ನು ಶಿಲಾನ್ಯಾಸವೂ ಆಗಬೇಕು ಉದ್ಘಾಟನೆಯೂ ಆಗಬೇಕು. ಸಮಾಜಕ್ಕೆ ಅರ್ಪಣೆ ಮಾಡುವ ಕೆಲಸ ಮಾಡಬೇಕು . ಈಗಾಗಲೇ ಕುಡಿಯುವ ನೀರಿನ ಯೋಜನೆಯ 1,006 ಕೋಟಿ ರೂ.ಅನುದಾನದ ಕೆಲಸ ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ.ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಮುಖ್ಯಮಂತ್ರಿಗಳು ಕೋರ್ಟ್ ಕಟ್ಟಡದ ಉದ್ಘಾಟನೆಗೆ ಬರುವಾಗ ಮೆಡಿಕಲ್ ಕಾಲೇಜು ಆಸ್ಪತ್ರೆಗೂ ಶಿಲಾನ್ಯಾಸ ಮಾಡಲಿದ್ದಾರೆ ಎಂದರು.

ಮೆಡಿಕಲ್ ಕಾಲೇಜಿಗೆ 1 ಸಾವಿರ ಕೋಟಿ ಅನುದಾನ !
ಅ.20ಕ್ಕೆ ಮುಖ್ಯಮಂತ್ರಿಗಳು ಪುತ್ತೂರಿಗೆ ಬಂದಾಗ ಮೆಡಿಕಲ್ ಕಾಲೇಜಿಗೆ 1 ಸಾವಿರ ಕೋಟಿ ಅನುದಾನಕ್ಕೆ ಮನವಿ ಮಾಡಲಿದ್ದೇವೆ. ಈಗಾಗಲೇ 400 ಕೋಟಿಯ ಬೇಡಿಕೆ ಇಟ್ಟಿದ್ದೇವೆ.ಪುತ್ತೂರಿನ ಅಭಿವೃದ್ಧಿಗಾಗಿ ಮಹಾಲಿಂಗೇಶ್ವರ ದೇವಸ್ಥಾನ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ, ಕ್ರೀಡಾಂಗಣಕ್ಕೆ 9.5 ಕೋಟಿ ಅನುದಾನ, ಕೊಂಬೆಟ್ಟು ಜ್ಯೂನಿಯರ್ ಕಾಲೇಜಿಗೆ ರಾತ್ರಿ ಮಕ್ಕಳಿಗೆ ಆಡಲು ರೂ. 1 ಕೋಟಿ ವೆಚ್ಚದಲ್ಲಿ ಪೆಡ್ಲೈಟ್ ವ್ಯವಸ್ಥೆ, ರೂ.1 ಕೋಟಿಯಲ್ಲಿ ಜಿಮ್ ವ್ಯವಸ್ಥೆ, ಪುತ್ತೂರಿನಲ್ಲಿ ತಲಾ ರೂ.1 ಕೋಟಿ ರೂಪಾಯಿಯಲ್ಲಿ 2 ವೃತ್ತಗಳ ಅಭಿವೃದ್ಧಿ, ಕಬಕದಿಂದ ವಿಟ್ಲಕ್ಕೆ ಚತುಷ್ಪಥ ರಸ್ತೆ ಹೀಗೆ ಅಭಿವೃದ್ಧಿ ಕಾರ್ಯ ನಿರಂತರ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.
25 ವರ್ಷಗಳ ದಾಖಲೆ ನೋಡಲಿ.
ಹಿಂದಿನ ಶಾಸಕರು ಮಾಡಿದ್ದ ಎಲ್ಲಾ ಕೆಲಸಗಳನ್ನು ನೋಡಲಿ.ನಾನು ಐದು ವರ್ಷದಲ್ಲಿ ಮಾಡಿದ ಕೆಲಸವನ್ನು ನೋಡಿ ಇದರಲ್ಲಿ ವ್ಯಾಲ್ಯೂವೆಷನ್ ಮಾಡಿ ಮಾರ್ಕ್ ಕೊಡಿ.ಮತ್ತೆ ಆಶೀರ್ವಾದ ಮಾಡಿ.ಯಾರಿಗೂ ಅನ್ಯಾಯ ಮಾಡದೆ ಕೆಲಸವನ್ನು ಮಾಡಿದ್ದೇನೆ. ಈ ಬಾರಿ ಕೇವಲ ರಸ್ತೆಗಾಗಿ 125 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ. ನಾನು ನನಗಾಗಿ ಮೆಡಿಕಲ್ ಕಾಲೇಜು, ಹಾಸ್ಟೇಲ್ ಇತರ ಕೆಲಸ ಮಾಡುತ್ತಿಲ್ಲ.ಎಲ್ಲವೂ ಪುತ್ತೂರಿನವರಿಗಾಗಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಸಮಾಜ ಕಲ್ಯಾಣ ಅಧಿಕಾರಿ ಸುನಿತಾ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ರೈ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಮಾಜಿ ಜಿ.ಪಂ.ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಎನ್ಎಸ್ ಯುಐ ರಾಜ್ಯ ಸಮಿತಿಯ ಫಾರೂಕ್ ಬಾಯಬ್ಬೆ, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ವಲಯ ಅಧ್ಯಕ್ಷ ರೋಶನ್ ರೈ ಬನ್ನೂರು, ರೈ ಎಸ್ಟೇಟ್ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಪಕ್ಷದ ಮುಖಂಡರಾದ ಶಿವರಾಮ ಆಳ್ವ, , ವಿಕ್ರಂ ರೈ, ಸನತ್ ರೈ, ಪ್ರಜ್ವಲ್ ರೈ ತೊಟ್ಲ ಮತ್ತಿತರರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಅರ್ಚಕ ಶಿವಪ್ರಸಾದ್ ಶಿಲಾನ್ಯಾಸ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು.
ಅಂತರ ರಾಜ್ಯ
By-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.
ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ ಸೆಳೆದಿದೆ. ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.
ಪಶ್ಚಿಮ ಬಂಗಾಳದ ರೇಜಿನಗರ ಮತ್ತು ನಂದಿಗ್ರಾಮ, ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ಹಾಗೂ ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರ ಜತೆಗೆ ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ನಡೆದಿತ್ತು. ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಲವು ಕ್ಷೇತ್ರಗಳಲ್ಲಿ ಫಲಿತಾಂಶದ ಚಿತ್ರಣ ಸ್ಪಷ್ಟವಾಗಿದ್ದರೂ ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಬಾಕಿಯಿದೆ.
ನಾಗೌನ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರವು ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರದ್ಯುತ್ ಬೊರ್ದೊಲೊಯಿ ಅವರು ಬಿಜೆಪಿ ಅಭ್ಯರ್ಥಿ ಸುರೇಶ್ ಬೋರಾ ವಿರುದ್ಧ 2,12,231 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಬಳಿಕ ಪ್ರದ್ಯುತ್ ಬೊರ್ದೊಲೊಯಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಿಸ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ನಾಗೌನ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು.
ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ಅಭ್ಯರ್ಥಿ ದೇವಶಿಸ್ ಶರ್ಮಾ ಅವರು ಎಐಯುಡಿಎಫ್ ಅಭ್ಯರ್ಥಿ ಬದ್ರುದ್ದೀನ್ ಅಜ್ಮಲ್ ವಿರುದ್ಧ ಸುಮಾರು 1.2 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಬಾಮಣಿ ಬೋರಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.
ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿ ಪೈಪೋಟಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ ಸುಮಾರು 1.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.
ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.
ಇನ್ನು ರೇಜಿನಗರ ಕ್ಷೇತ್ರದಲ್ಲಿ ಸಖಾರವ್ ಸರ್ಕಾರ್ ಅವರು ಎಜೆಯುಪಿ ಅಭ್ಯರ್ಥಿ ಗೋಲಂ ನಬಿ ಆಜಾದ್ ವಿರುದ್ಧ ಸುಮಾರು 38 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿಯೂ ಮತ ಎಣಿಕೆಯ ಬೆಳವಣಿಗೆಗಳ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.
ತಮಿಳುನಾಡಿನಲ್ಲಿ ಟಿವಿಕೆ ಅಭ್ಯರ್ಥಿಗಳಿಗೆ ಮುನ್ನಡೆ
ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಮಧುರಂಟಕಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಮರಗತಂ ಕುಮಾರವೇಲು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಮಾರು 6 ಸಾವಿರ ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಎಐಎಡಿಎಂಕೆ ಅಭ್ಯರ್ಥಿಯಾಗಿದ್ದ ಅವರು, ನಂತರ ಟಿವಿಕೆ ಸೇರಿ ಸ್ಪರ್ಧಿಸಿದ್ದರು ಎನ್ನಲಾಗಿದೆ.
ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಸುಮಾರು 9,600 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯಭಾಮಾ, ಡಿಎಂಕೆ ಅಭ್ಯರ್ಥಿ ಟಿ. ಇಂದಿರಾಣಿ ವಿರುದ್ಧ 16,727 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.
ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವು
ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಆನಂದ್ ಅವರು ಕಾಂಗ್ರೆಸ್ ಅಭ್ಯರ್ಥಿ ಇ. ವಿನಾಯಗಂ ವಿರುದ್ಧ 8,482 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.
ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ತಟ್ಟನಚಾವಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.
ಉಪಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳ ಮೇಲೆ ಇದರ ಪರಿಣಾಮದ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ.
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಅಂತರ ರಾಜ್ಯ
DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.
‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾರ್ ಹೇಳಿದರು.
ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.
ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.
‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.
ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















