Connect with us

ಸ್ಥಳೀಯ

Dharmasthala-ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪಿಸಿ ಭಕ್ತರಿಂದ ಹೈಕೋರ್ಟ್‌ಗೆ ಅರ್ಜಿ- ತಿಮರೋಡಿ, ಗಿರೀಶ್, ಜಯಂತ್ ಹಾಗೂ ಸಮೀರ್ ಗೆ ಕೋರ್ಟಿನಿಂದ  ನೊಟೀಸ್

Published

on

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಕುರಿತು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ಎಂ.ಡಿ. ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಕುರಿತು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ಎಂ.ಡಿ. ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ವಿಶೇಷ ತನಿಖಾ ತಂಡ ಹಾಗೂ ಇತರರಿಗೆ ತಾವು 2025ರ ಆ.20, ಸೆ. 5,8 ಮತ್ತು 9ರಂದು ಸಲ್ಲಿಸಿರುವ ಮನವಿ ಮತ್ತು ದೂರುಗಳನ್ನು ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರಾದ ಬೆಂಗಳೂರು ನಿವಾಸಿ ತೇಜಸ್‌ ಎ. ಗೌಡ, ಬೆಳ್ತಂಗಡಿಯ ಉಜಿರೆ ನಿವಾಸಿ ಭಾಸ್ಕರ್ ಬಡೆಕೊಟ್ಟು, ಧರ್ಮಸ್ಥಳ ನಿವಾಸಿಗಳಾದ ಸುರೇಂದ್ರ ಪ್ರಭು ಹಾಗೂ ಧನಕೀರ್ತಿ ಅರಿಗ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ನಡೆದಿದೆ.

Ad Widget

Ad Widget <> Ad Widget

ನ್ಯಾಯಮೂರ್ತಿಗಳು ಈ ವೇಳೆ ಪ್ರತಿವಾದಿಗಳಾದ ರಾಜ್ಯ ಸರಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಎಸ್.ಐ.ಟಿ., ಆದಾಯ ತೆರಿಗೆ ಮಂಗಳೂರು ಕೇಂದ್ರ ವಲಯ ಅಧಿಕಾರಿ ಮತ್ತು ಜಾರಿ ನಿರ್ದೇಶನಾಲಯದ ಮಂಗಳೂರು ಉಪ ವಲಯ ಕಚೇರಿಯ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿದ್ದಾರೆ.

ದೂರುಗಳ ವಿವರ:
• ತೇಜಸ್ ಎ. ಗೌಡ ಅವರ ದೂರಿನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸೌಜನ್ಯ ಹೆಸರಿನಲ್ಲಿ ಹೋರಾಟ ನಡೆಸುತ್ತಿದ್ದು, ವಕೀಲರಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೋರಾಟದಲ್ಲಿ ತೊಡಗಿರುವ ಸೌಜನ್ಯರ ತಾಯಿ ಸೇರಿದಂತೆ ಹಲವರು ಕೋಟಿಗಟ್ಟಲೆ ಬೆಲೆಯ ಆಸ್ತಿ ಖರೀದಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ವರದಿ ಮಾಡಲು ದುಡ್ಡು ಪಡೆದು, ಪೇಡ್ ಪ್ರಮೋಷನ್ ರೀತಿಯಲ್ಲಿ ಪ್ರಚಾರ ಮಾಡಲಾಗಿದೆ. ಈ ಸಂಪನ್ಮೂಲಗಳ ಮೂಲವನ್ನು ತನಿಖೆ ಮಾಡಬೇಕು ಎಂದು ಕೋರಲಾಗಿದೆ.
• ಧನಕೀರ್ತಿ ಅವರ ದೂರಿನಲ್ಲಿ ಯೂಟ್ಯೂಬರ್ ‘ಕುಡ್ಲ ರಾಂಪೇಜ್’ ಅವರು ಧರ್ಮಸ್ಥಳದ ವಿರುದ್ಧ ಷಡ್ಯಂತ್ರಪೂರಿತ ವರದಿಗಳನ್ನು ಪ್ರಸಾರ ಮಾಡುತ್ತಿದ್ದು, ಅದರ ಮೂಲವನ್ನು ತನಿಖೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಎಸ್‌ಐಟಿ ತನಿಖೆ ಸಮಯದಲ್ಲಿ ತನ್ನದೇ ತನಿಖಾ ವರದಿಗಳನ್ನು ಎಸ್‌ಐಟಿಯದ್ದು ಎಂದು ಬಿಂಬಿಸಿ ಪ್ರಸಾರ ಮಾಡಿದ್ದು, ಈ ಮಾಹಿತಿಯ ಮೂಲ ಮತ್ತು ಎಸ್‌ಐಟಿ ಸಂಪರ್ಕವನ್ನು ಪರಿಶೀಲಿಸಬೇಕು.
• ವಿಠಲ ಗೌಡ ಅವರು ಹಿಂದೆ ಹೋಟೆಲ್ ನಡೆಸುತ್ತಿದ್ದಾಗ ಕಾರ್ಮಿಕನನ್ನು ಕೊಲೆ ಮಾಡಿದ್ದು, ಆ ಕೇಸ್ ಮುಚ್ಚಿಹಾಕಲಾಗಿದೆ ಎಂದು ಆರೋಪಿಸಿ, ಸಂಬಂಧಿತ ದಾಖಲೆಗಳನ್ನು ಸಲ್ಲಿಸಲಾಗಿದೆ. ಇದರ ಬಗ್ಗೆ ಕೂಲಂಕುಶ ತನಿಖೆಗೆ ಕೋರಲಾಗಿದೆ.

Click to comment

Leave a Reply

ಬಿಗ್ ನ್ಯೂಸ್

High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Published

on

Ad Widget

Ad Widget

Ad Widget

Ad Widget

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

Ad Widget

Ad Widget <> Ad Widget

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

Ad Widget

Ad Widget

ಪ್ರತಿವಾದಿಗಳ ಪರವಾಗಿ ಸರಕಾರಿ ವಕೀಲರು ನೋಟಿಸ್ ಸ್ವೀಕರಿಸಿದರು. ಇನ್ನು ಮೂರು ದಿನಗಳೊಳಗೆ ನೋಟಿಸ್ ಜಾರಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿತು.

ನೋಟಿಸ್‌ಗೆ ಉತ್ತರ ಸಲ್ಲಿಸಲು ಡಿಸೆಂಬರ್ 16ರವರೆಗೆ ಕಾಲಾವಕಾಶ ನೀಡಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.16ಕ್ಕೆ ನಿಗದಿಪಡಿಸಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

Continue Reading

ಮಂಗಳೂರು

Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget

Ad Widget

ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್‌ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!