ದಕ್ಷಿಣ ಕನ್ನಡ
CM Siddaramaiah Puttur Visit, Ashok Janamana Program ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ತೂರು ಭೇಟಿ: ದೃಢಪಡಿಸಿದ ಸಿಎಂ ಕಚೇರಿ; ಡಿಕೆಶಿ ಆಪ್ತ ಶಾಸಕನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಪೊಲಿಟಿಕಲ್ ಮೆಸೇಜ್ ರವಾನಿಸಲಿದ್ದಾರ ಸಿಎಂ ?

Ashok Janamana Program ಪುತ್ತೂರು: (ಅಕ್ಟೋಬರ್ 19): ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಯೋಜಿಸಿರುವ ಮಹತ್ವದ “ಅಶೋಕ ಜನಮನ” ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವುದು ಈಗ ಖಚಿತವಾಗಿದೆ. ಈ ಮೂಲಕ ಸಿದ್ದರಾಮಯ್ಯನವರು ಆಗಮಿಸುವ ಕುರಿತು ಇದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಸಿಎಂ ಕಚೇರಿಯ ಹಿರಿಯ ಅಧಿಕಾರಿಗಳು ಈ ಮಾಹಿತಿಯನ್ನು ನಿಖರ ನ್ಯೂಸ್‌ಗೆ ಖಚಿತಪಡಿಸಿದ್ದಾರೆ. ಸಿಎಂ ಭೇಟಿಯ ಅಧಿಕೃತ ಟೂರ್ ಪ್ರೋಗ್ರಾಂ (ಟಿಪಿ) ಶನಿವಾರ ಸಂಜೆ ಅಥವಾ ಭಾನುವಾರ ಹೊರಬೀಳುವ ಸಾಧ್ಯತೆಯಿದೆ.
ಅಕ್ಟೋಬರ್ 20ರಂದು ಪುತ್ತೂರಿಗೆ ಭೇಟಿ ನೀಡಲಿರುವ ಸಿಎಂ, ರೈ ಎಸ್ಟೇಟ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ನಡೆಯಲಿರುವ ದೀಪಾವಳಿ ಉಡುಗೊರೆ ವಿತರಣಾ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಈ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿದ್ದಾರೆ.
ರೈ ಶಾಸಕರಾದ ಬಳಿಕ ಸಿಎಂ ಚೊಚ್ಚಲ ಭೇಟಿ, ಭರಪೂರ ಸಿದ್ಧತೆ!
ಅಶೋಕ್ ಕುಮಾರ್ ರೈ ಶಾಸಕರಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುತ್ತೂರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಐತಿಹಾಸಿಕ ಭೇಟಿಗಾಗಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಭರಪೂರ ಸಿದ್ಧತೆಗಳು ನಡೆಯುತ್ತಿವೆ. ಭದ್ರತಾ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್, ಪೊಲೀಸ್ ಉಪ ಅಧೀಕ್ಷಕ ಅರುಣ್ ನಾಗೇಗೌಡ, ಮತ್ತು ಪುತ್ತೂರು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರು ಇಂದು ಬೆಳಿಗ್ಗೆ ಸಿದ್ಧತೆಗಳನ್ನು ಪರಿಶೀಲಿಸಿದರು. ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮವನ್ನು ನಡೆಸಲು ಪೊಲೀಸರು ಸನ್ನದ್ಧರಾಗಿದ್ದಾರೆ.
ಎರಡೂವರೆ ವರ್ಷಗಳ ಬಳಿಕ ಸಿಎಂ ಭೇಟಿ!
ಪುತ್ತೂರಿಗೆ ಮುಖ್ಯಮಂತ್ರಿಯೊಬ್ಬರ ಭೇಟಿ ಸುಮಾರು 2 ವರ್ಷ 8 ತಿಂಗಳ ನಂತರ ನಡೆಯುತ್ತಿದೆ. 2023ರ ಫೆಬ್ರವರಿ 11ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣೋತ್ಸವ ಕಾರ್ಯಕ್ರಮದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು. ಇದೀಗ ಮತ್ತೆ ಸಿಎಂ ಭೇಟಿ ನೀಡುತ್ತಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ.
ಸಿದ್ದರಾಮಯ್ಯನವರ ಹಿಂದಿನ ಪುತ್ತೂರು ಭೇಟಿಗಳು ..!
ಸಿದ್ದರಾಮಯ್ಯನವರು ಈ ಹಿಂದೆ 2018ರ ಜನವರಿ 7ರಂದು ಮುಖ್ಯಮಂತ್ರಿಯಾಗಿದ್ದಾಗ ಕಿಲ್ಲೆ ಮೈದಾನದಲ್ಲಿ ಬೃಹತ್ ಸಾಧನಾ ಸಮಾವೇಶದಲ್ಲಿ ಭಾಗವಹಿಸಿದ್ದರು. ಅದಕ್ಕೂ ಸುಮಾರು ಎರಡೂವರೆ ವರ್ಷಗಳ ಮೊದಲು, ಅಂದರೆ 2015ರ ಮಾರ್ಚ್ 14ರಂದು ಪುತ್ತೂರಿಗೆ ಆಗಮಿಸಿ ಮಿನಿ ವಿಧಾನಸೌಧವನ್ನು ಉದ್ಘಾಟಿಸಿದ್ದರು. ಈ ಎರಡೂ ಸಂದರ್ಭಗಳಲ್ಲಿ ಕಾಂಗ್ರೆಸ್ ನಾಯಕಿ ಶಕುಂತಲಾ ಟಿ. ಶೆಟ್ಟಿಯವರು ಪುತ್ತೂರಿನ ಶಾಸಕರಾಗಿದ್ದರು.
ಪಾಲಿಟಿಕಲ್ ಮೆಸೇಜ್ ?
ದೀಪಾವಳಿ ಉಡುಗೊರೆ ವಿತರಿಸಲು ಖಾಸಗಿ ಸಮಾರಂಭವೊಂದರಲ್ಲಿ ಸಿದ್ದರಾಮಯ್ಯನವರು ಭಾಗವಹಿಸುತ್ತಿರುವುದು ರಾಜಕೀಯ ಪಂಡಿತರನ್ನು ಅಚ್ಚರಿಯಲ್ಲಿ ಕೆಡವಿದೆ. ಅಶೋಕ್ ರೈಯವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ರಾಜ್ಯದಲ್ಲಿ ಪವರ್ ಶೇರಿಂಗ್‌ನ ಚರ್ಚೆ ಬಿರುಸು ಪಡೆಯುತ್ತಿರುವ ಸಂದರ್ಭದಲ್ಲೇ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಆಪ್ತರ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಬೇರೆಯದೇ ಆದ ರಾಜಕೀಯ ಸಂದೇಶ ರವಾನಿಸುವ ಯತ್ನದಲ್ಲಿ ಇದ್ದಾರೆಯೇ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ರಾಜಕೀಯ19 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















