Connect with us

ಸ್ಥಳೀಯ

Chinnayya-ಚಿನ್ನಯ್ಯನ ಮರು ವಿಚಾರಣೆಗೆ ಕೋರ್ಟ್‌ ಅನುಮತಿ

Published

on



Ad Widget

Ad Widget

Ad Widget

Ad Widget

ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಮತ್ತೆ ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆಯಲಿದ್ದಾರೆ. ನ್ಯಾಯಾಧೀಶರು, ಚಿನ್ನಯ್ಯನನ್ನು ಎರಡು ದಿನಗಳ ಕಾಲ ವಿಚಾರಣೆಗೊಳಪಡಿಸಲು ಎಸ್‌ಐಟಿಗೆ ಅನುಮತಿ ನೀಡಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿಯೇ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Ad Widget

Ad Widget

Ad Widget

Ad Widget

ಧರ್ಮಸ್ಥಳ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಮತ್ತೆ ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆಯಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ನೂರಾರು ಮೃತದೇಹಗಳನ್ನು ಬೆದರಿಕೆ ಹಾಕಿ ಕಾನೂನುಬಾಹಿರವಾಗಿ ಹೂತು ಹಾಕಿಸಲಾಗಿದೆ ಎಂದು ಚಿನ್ನಯ್ಯ ಎಂಬಾತ ಪೊಲೀಸ್ ಇಲಾಖೆಯಲ್ಲಿ ದೂರು ದಾಖಲಿಸಿದ್ದ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ

Ad Widget

Ad Widget <> Ad Widget

ಚಿನ್ನಯ್ಯ, 17 ಸ್ಥಳಗಳಲ್ಲಿ ಎಸ್‌ಐಟಿ ಉತ್ಖನನ ನಡೆಸಲು ಕಾರಣಕರ್ತನಾಗಿದ್ದ. ಈಗಾಗಲೇ ಆತನನ್ನು 15 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿತ್ತು.



Ad Widget

ಚಿನ್ನಯ್ಯ ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ, ಉಜಿರೆ ಗ್ರಾಮ ಪಂಚಾಯತ್‌ನ ಶೌಚಾಲಯ ಸಿಬ್ಬಂದಿಯಾಗಿ, ತಮಿಳುನಾಡು ಸೇರಿದಂತೆ ವಿವಿಧ ಕಡೆ ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿದ್ದ. ಇತ್ತೀಚೆಗೆ ಆತ ದಿಢೀರ್‌ನಿಂದ ಪ್ರತ್ಯಕ್ಷನಾಗಿ, ಕೊಲೆ ಮತ್ತು ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದವರ ಮೃತದೇಹಗಳನ್ನು ಹೂತು ಹಾಕಿಸಿರುವುದಾಗಿ ದೂರಿದ್ದ. ಈ ಕುರಿತು ತನಿಖೆ ನಡೆಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಒತ್ತಾಯಿಸಿದ್ದ ಚಿನ್ನಯ್ಯನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲು ಎಸ್‌ಐಟಿ ನಿರ್ಧರಿಸಿದೆ.

Ad Widget

Ad Widget

ಈ ಸಂಬಂಧ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಎಸ್‌ಐಟಿಯ ತನಿಖಾಧಿಕಾರಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರು ಚಿನ್ನಯ್ಯನ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.

ಚಿನ್ನಯ್ಯನ ಪರ ನೇಮಕಗೊಂಡಿರುವ ಪ್ಯಾನಲ್ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಎಸ್‌ಐಟಿ ಪರ ವಕೀಲರಾದ ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್ ಹೆಗ್ಡೆ ಪುತ್ತೂರು ಅವರು, ಚಿನ್ನಯ್ಯನನ್ನು ಯಾಕೆ ವಿಚಾರಣೆಗೊಳಪಡಿಸಬೇಕು ಮತ್ತು ಹೇಳಿಕೆ ಏಕೆ ಪಡೆಯಬೇಕು ಎಂಬುದರ ಕುರಿತು ನ್ಯಾಯಾಧೀಶ ಟಿ.ಎಚ್. ವಿಜಯೇಂದ್ರ ಅವರ ಮುಂದೆ ವಾದ ಮಂಡಿಸಿದ್ದರು.

ದಿವ್ಯರಾಜ್ ಹೆಗ್ಡೆ ಅವರ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು, ಚಿನ್ನಯ್ಯನನ್ನು ಎರಡು ದಿನಗಳ ಕಾಲ ವಿಚಾರಣೆಗೊಳಪಡಿಸಲು ಎಸ್‌ಐಟಿಗೆ ಅನುಮತಿ ನೀಡಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿಯೇ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading