ಶಿಕ್ಷಣ
Ambika-ಅಂಬಿಕಾ ಸಂಸ್ಥೆಗೆ 25 – ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ; ಪುತ್ತೂರಿನ ಅಭಿವೃದ್ಧಿಗೆ ಅಂಬಿಕಾ ವಿದ್ಯಾರ್ಥಿಗಳು ಕೈಜೋಡಿಸಬೇಕು : ಸುಬ್ರಮಣ್ಯ ನಟ್ಟೋಜ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೧೫ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಭಾನುವಾರ ನಡೆಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೧೫ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಶೃಂಗೇರಿ ಜಗನ್ಮಾತೆ ಹಾಗೂ ಪರಮಪೂಜ್ಯ ಜಗದ್ಗುರುದ್ವಯರ ಕೃಪೆಯಿಂದ ಮತ್ತು ವಿದ್ಯಾರ್ಥಿಗಳ, ಹೆತ್ತವರ, ಊರವರ, ಹತ್ತೂರ ಅಭಿಮಾನಿಗಳ ವಿಶ್ವಾಸದ ಕಾರಣದಿಂದ ಅಂಬಿಕಾ ಶೈಕ್ಷಣಿಕ ಕ್ಷೇತ್ರದಲ್ಲಿ ೨೫ ವರ್ಷಗಳ ಮೈಲಿಗಲ್ಲನ್ನು ತಲುಪಿದೆ. ಸವಿ ನೆನಪುಗಳನ್ನು ಮೆಲುಕು ಹಾಕಲು ಹಾಗೂ ಬೆಳ್ಳಿ ಹಬ್ಬ ಆಚರಣೆಯ ಬಗೆಗೆ ಯೋಜಿಸುವುದಕ್ಕೆ ಹಿರಿಯ ವಿದ್ಯಾರ್ಥಿಗಳ ಸಹಕಾರ, ಮಾರ್ಗದರ್ಶನ ಅತ್ಯಗತ್ಯ ಎಂದು ನುಡಿದರು.
ಪುತ್ತೂರಿನಲ್ಲೂ ಓಲಾ ಊಬರ್‌ನಂತಹ ಆ್ಯಪ್ ಮೂಲಕ ವ್ಯವಹರಿಸುವ ಸಂಚಾರ ವ್ಯವಸ್ಥೆ ಜಾರಿಗೆ ಬರಬೇಕು. ಅದಕ್ಕಾಗಿ ಅಂಬಿಕಾದ ವಿದ್ಯಾರ್ಥಿಗಳು ಸಾಪ್ಟ್ವೇರ್ ರೂಪಿಸಬೇಕು. ಪುತ್ತೂರಿನ ಅಭಿವೃದ್ಧಿಗೆ ಯುವಸಮುದಾಯ ಕೈಜೋಡಿಸಬೇಕು ಎಂದು ಕರೆನೀಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿಶಿರ ರಾಮ್ ಬೋರ್ಕರ್ ಸಂಘದ ಯೋಜನೆಗಳ ರೂಪುರೇಷೆಗಳನ್ನು ತಿಳಿಸಿದರು.
ಅಂಬಿಕಾ ವಸತಿಯುತ ವಿದ್ಯಾಲಯದ ಉಪಪ್ರಾಚಾರ್ಯರಾದ ಪ್ರದೀಪ್ ಕೆ.ವೈ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು. ಸುಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ರಾಮಪ್ರಸಾದ್ ಹಾಗೂ ಕಾರ್ಯಾಲಯ ಮ್ಯಾನೇಜರ್ ರವಿಚಂದ್ರ, ಉಪನ್ಯಾಸಕರು, ಹಿರಿಯ ವಿದ್ಯಾರ್ಥಿಗಳು ಸಭೆಯಲ್ಲಿ ಹಾಜರಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.
ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.
ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ. ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು
ಸ್ಪರ್ಧೆಯ ಫಲಿತಾಂಶ:
ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.
ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.
ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.
ಶಿಕ್ಷಣ
Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್22 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್22 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್21 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ21 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ20 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ20 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ21 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು19 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















