Connect with us

Uncategorized

ಪುತ್ತೂರು : ʼಮಾದರಿ ಸಹಕಾರಿ ಸಂಘದಲ್ಲಿʼ ಯುವತಿ ಸಹಿತ ನಾಲ್ವರು ಉದ್ಯಮಿಗಳಿಗೆ ಕೋಟಿ ಕೋಟಿ ʼಅಸಹಜʼ ಸಾಲ – ತನಿಖೆಯಲ್ಲಿ ಬಯಲು ? ಪಕ್ಷದೊಳಗೆ ಬಂಡಾಯದ ಕಹಳೆ – ಪರ್ಯಾಯ ರಾಜಕೀಯ ಶಕ್ತಿ ಸ್ಥಾಪನೆಗೆ ಹಿರಿಯರ ಚಿಂತನೆ!

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿಟ್ಲ ಹೋಬಳಿಯ ಮಾದರಿ ಸಹಕಾರಿ ಸಂಘದಲ್ಲಿ ನಡೆದಿರುವ ಹಲವು ಕೋಟಿ ರೂಪಾಯಿಗಳ ಅಕ್ರಮ ಸಾಲ ವಿತರಣೆ ಪ್ರಕರಣ, ಆಡಳಿತಾರೂಢ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ತನ್ನದೇ ಪಕ್ಷದ ಆಡಳಿತ ಮಂಡಳಿಯು ನಿಯಮಗಳನ್ನು ಗಾಳಿಗೆ ತೂರಿ ನಡೆಸಿದ ಈ ಅಕ್ರಮಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ಹಿಂದೇಟು ಹಾಕುತ್ತಿರುವುದು ಗ್ರಾಮಸ್ಥರ, ಅದರಲ್ಲೂ ಹಿರಿಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯು ಮುಂದಿನ ಗ್ರಾಮ ಪಂಚಾಯಿತಿ ಮತ್ತು ಸಹಕಾರಿ ಚುನಾವಣೆಗಳಲ್ಲಿ ಬಿಜೆಪಿಗೆ ಸವಾಲೊಡ್ಡುವ ಪರ್ಯಾಯ ರಾಜಕೀಯ ಶಕ್ತಿಯ ಉದಯಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ.

Ad Widget

Ad Widget

Ad Widget

Ad Widget

ಅಕ್ರಮ ಸಾಲ ವಿತರಣೆ: ತನಿಖೆಯಲ್ಲಿ ಬಯಲಾದ ಸತ್ಯಗಳು

Ad Widget

Ad Widget alt="Ad Widget"/>

Ad Widget

ಕೇಂದ್ರ ಸಹಕಾರಿಯ ಅಧಿಕಾರಿಗಳ ತನಿಖಾ ತಂಡ  ಒಂದು ವಾರಗಳ ಕಾಲ ಸಂಘದ ಪ್ರಧಾನ ಕಚೇರಿ ಮತ್ತು ವಿವಿಧ ಶಾಖೆಗಳಲ್ಲಿ ತೀವ್ರ ತನಿಖೆ ನಡೆಸಿದಾಗ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಆರಂಭದಲ್ಲಿ ಖಾಸಗಿ ಲೇವಾದೇವಿ ನಡೆಸುವ ಯುವತಿಯೊಬ್ಬಳಿಗೆ ಕಾನೂನುಬಾಹಿರವಾಗಿ 7 ಕೋಟಿಗೂ ಅಧಿಕ ಚಿನ್ನದ ಸಾಲ ನೀಡಲಾಗಿದೆ ಎಂಬ ಆರೋಪವಿತ್ತು. ಆದರೆ ತನಿಖೆ ಆಳಕ್ಕಿಳಿದಂತೆ, ಆ ಯುವತಿ ಸೇರಿದಂತೆ ಹಲವರಿಗೆ ದೊಡ್ಡ ಮೊತ್ತದ ಅಡಮಾನ ಸಾಲಗಳನ್ನು ನೀಡಿರುವುದು ದೃಢಪಟ್ಟಿದೆ.

Ad Widget

Ad Widget <> Ad Widget

ಈ ಅಕ್ರಮ ಸಾಲ ಪಡೆದವರ ಪಟ್ಟಿಯಲ್ಲಿ ಸ್ಥಳೀಯ ನಿವಾಸಿಯಾದರೂ ಬೇರೆ ಜಿಲ್ಲೆಯಲ್ಲಿ ಉದ್ಯಮ ನಡೆಸುವ ಒಬ್ಬ ಉದ್ಯಮಿ, ಸ್ಥಳೀಯ ನಿವಾಸಿಯಲ್ಲದ ಅಡಿಕೆ ವ್ಯಾಪಾರಿ ಮತ್ತು ಸ್ಥಳೀಯವಾಗಿ ಉದ್ಯಮ ಹೊಂದಿರುವ ಮತ್ತೊಬ್ಬ ವ್ಯಕ್ತಿ ಸೇರಿದ್ದಾರೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ. ನಿಯಮಾವಳಿಗಳನ್ನು ಉಲ್ಲಂಘಿಸಿ ಕೋಟ್ಯಂತರ ರೂಪಾಯಿಗಳನ್ನು ಈ ವ್ಯಕ್ತಿಗಳಿಗೆ ವಿತರಿಸಲಾಗಿದೆ.

ವರದಿ ಸಲ್ಲಿಕೆ, ಕ್ರಮಕ್ಕೆ ಆಗ್ರಹ

Ad Widget

Ad Widget

ತನಿಖಾ ತಂಡವು ಈ ಕುರಿತ ವಿವರವಾದ ವರದಿಯನ್ನು ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಿದೆ ಎನ್ನಲಾಗಿದೆ. ಜಿಲ್ಲೆಯ ʼಪರಮೊಚ್ಚʼ ಸಹಕಾರಿಯೊಬ್ಬರು ಕೂಡ, ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಒಂದು ಸಹಕಾರಿ ಸಂಘದಲ್ಲಿ ನಡೆದ ಅಕ್ರಮಗಳಿಗೆ ಕಠಿಣ ಕ್ರಮ ಕೈಗೊಂಡರೆ, ಅದು ಇತರ ಸಹಕಾರಿ ಸಂಘಗಳಿಗೆ ಎಚ್ಚರಿಕೆಯ ಗಂಟೆಯಾಗುತ್ತದೆ. ಇಲ್ಲವಾದರೆ, ಜಿಲ್ಲೆಯ ಸಹಕಾರಿ ಕ್ಷೇತ್ರವೇ ಪತನದತ್ತ ಸಾಗಬಹುದೆಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ. ಹಿಘಾಗಿ ತನಿಖೆ ಬಂದ ಅಧಿಕಾರಿಗಲೂ ಎಷ್ಟೇ ಒತ್ತಡ ಇದ್ದರೂ ಅಕ್ರಮಗಳ ಕುರಿತು ಸರಿಯಾದ ವರದಿಯನ್ನು ನೀಡಿರುವುದಾಗಿ ಬಲ್ಲ ಮೂಲಗಳು ಖಚಿತ ಪಡಿಸಿದೆ

ಬಿಜೆಪಿಗೆ ಇಕ್ಕಟ್ಟು: ಪರ್ಯಾಯ ರಾಜಕೀಯ ಶಕ್ತಿಗೆ ಚಿಂತನೆ

ಸಹಕಾರ ಇಲಾಖೆಯ ಅಧಿಕಾರಿಗಳು ಸೂಕ್ತ ತನಿಖೆಗೆ ಮುಂದಾದರೆ, ಆಡಳಿತ ಮಂಡಳಿಯು ಸೂಪರ್‌ಸೀಡ್ ಆಗುವ ಆತಂಕ ಸೃಷ್ಟಿಯಾಗಿದೆ. ಈ ಭಾನಗಡಿಯನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಸಹಕಾರಿ ದುರೀಣರು ಇದೇ ಚಿಂತೆಯಲ್ಲಿ ತಲ್ಲಣಿಸಿದ್ದಾರೆ. ಮತ್ತೊಂದೆಡೆ, ಇಡ್ಕಿದು  ಗ್ರಾಮದ ಹಲವು ಪ್ರಮುಖರು, ಅದರಲ್ಲೂ ಸಂಘದ ಏಳಿಗೆಗೆ ಮಹತ್ವದ ಪಾತ್ರ ವಹಿಸಿದ್ದ ಮುಖಂಡರು, ಆಡಳಿತ ಮಂಡಳಿಯ ರಾಜೀನಾಮೆಗೆ ಪಕ್ಷದ ಪ್ರಮುಖರಲ್ಲಿ ಆಗ್ರಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ಕಚೇರಿಯಲ್ಲಿ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಮಾತುಕತೆ ನಡೆಸಲು ಪಕ್ಷ ಸಿದ್ಧತೆ ನಡೆಸಿತ್ತು. ಆದರೆ, ಆಡಳಿತ ಮಂಡಳಿಯ ಪ್ರಮುಖರು, “ಪಕ್ಷ ಇದಕ್ಕೆ ಕೈಹಾಕುವುದು ಬೇಡ, ನಾವೇ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳುತ್ತೇವೆ” ಎಂದು ಹೇಳಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿದ್ದಾರೆ. ಜಿಲ್ಲಾ ಮಟ್ಟದ ನಾಯಕರ ತನಕ ದೂರುಗಳು ತಲುಪಿದ್ದರೂ, ಪಕ್ಷ ಅಸಹಾಯಕತೆ ತೋಡಿಕೊಂಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಮುಚ್ಚಿಹಾಕುವ ಪ್ರಯತ್ನಗಳಿಗೆ ಗ್ರಾಮಸ್ಥರ ವಿರೋಧ

ಮಾದರಿ ಸಹಕಾರಿಯವರು ಜಿಲ್ಲೆಯ ಹಿರಿಯ ಸಹಕಾರಿಗಳನ್ನು ಬಳಸಿಕೊಂಡು ನಿಯಮ ಮೀರಿದ ಸಾಲದ ಪ್ರಕರಣವನ್ನೇ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಇದು ಗ್ರಾಮದ ಇತರ ಸಹಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಹಿರಿಯ ಮುಖಂಡರ ಸಮ್ಮುಖದಲ್ಲಿ ಸಭೆಗಳ ಮೇಲೆ ಸಭೆಗಳನ್ನು ನಡೆಸಲಾಗುತ್ತಿದ್ದರೂ, ಆಡಳಿತ ಮಂಡಳಿಯ ವಿರುದ್ಧ ಶಿಸ್ತು ಕ್ರಮದ ಬಗ್ಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳಿಂದ ಕುಪಿತಗೊಂಡ ಗ್ರಾಮದ ಕೆಲವರು ಬೇರೆ ಪಕ್ಷಗಳ ಕಡೆಗೆ ಮುಖ ಮಾಡುವ ಬದಲು, ಸ್ವಂತ ಪರ್ಯಾಯ ಶಕ್ತಿಯನ್ನು ಕಟ್ಟಿ ಬಿಜೆಪಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ ಎಂಬ ಮಾತು ಯುವಕರ ನಡುವೆ ಓಡಾಡುತ್ತಿದೆ.

ಇಡ್ಕಿದು ಒಡೆದ ಮನೆ: ಸಂಘಟನೆಗೆ ಹಿನ್ನಡೆ?

ಈ ಹಿಂದೆ ಇಡ್ಕಿದು ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ಉಪಾಧ್ಯಕ್ಷರೊಬ್ಬರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿತ್ತು. ಈ ವಿಚಾರ ಹಿರಿಯ ಸ್ವಯಂಸೇವಕರಿಗೆ ನೋವನ್ನುಂಟು ಮಾಡಿತ್ತು. ಈಗ ಸಹಕಾರಿಯಲ್ಲಿ ನಡೆದಿರುವ ಅಕ್ರಮಗಳು ಸಂಘಟನೆಗೆ ತೀವ್ರತರವಾದ ಹಿನ್ನಡೆ ಉಂಟು ಮಾಡುವ ಸಾಧ್ಯತೆಯಿದೆ. ಈ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಹಿಂದೂ ಮತಗಳು ಛಿದ್ರವಾಗಲು ಮತ್ತು ಕಾರ್ಯಕರ್ತರು ಬೇರೆ ಪಕ್ಷಕ್ಕೆ ಹೋಗುವ ಚಿಂತನೆ ನಡೆಸಲು ಕಾರಣವಾಗಬಹುದು ಎಂಬ ಆತಂಕ ಸಂಘದ ಪ್ರಮುಖರಲ್ಲಿ ಕಾಣಿಸುತ್ತಿದೆ.

ಕಾರ್ಯಕರ್ತರನ್ನು ಹಿಂದುತ್ವದ ನೆಲೆಯಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರ್ಯಾಯ ರಾಜಕೀಯ ಶಕ್ತಿಯೊಂದನ್ನು ಹುಟ್ಟುಹಾಕಲು ಗಂಭೀರ ಪ್ರಯತ್ನ ನಡೆಯುತ್ತಿದೆ. ಸುಳ್ಯದ ಐವರ್ನಾಡು, ಗುತ್ತಿಗಾರು ಭಾಗದಲ್ಲಿ ನಡೆದ ಪ್ರಕ್ರಿಯೆಯಂತೆಯೇ ಇಡ್ಕಿದು ಭಾಗದಲ್ಲೂ ಚಿಂತನೆ ನಡೆದಿದ್ದು, ಒಂದು ಹಂತದ ಪ್ರಮುಖರ ಸಭೆಯೂ ಈಗಾಗಲೇ ನಡೆದಿದೆ.

Ad Widget
Click to comment

Leave a Reply

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!