ಬಿಗ್ ನ್ಯೂಸ್
Yatish Peruvayi-ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ನಫೀಸಾ ವಜಾಗೊಳಿಸಿ – ತಪ್ಪಿದ್ದಲ್ಲಿ ಪಂಚಾಯತ್ ಮುಂದೆ ಬೃಹತ್ ಪ್ರತಿಭಟನೆ-ಯತೀಶ್ ಪೆರುವಾಯಿ
ಲೋಕಾಯುಕ್ತ ಬಲೆಗೆ ಬಿದ್ದು, ಜಾಮೀನಿನ ಮೇಲೆ ಹೊರಬಂದು, ಇನ್ನು ಅಧ್ಯಕ್ಷ ಸ್ಥಾನದಲ್ಲಿ ದರ್ಬಾರ್ ನಡೆಸುತ್ತಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಕೂಡಲೇ ನಫೀಸಾರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದರೆ ಅ. 21ರಂದು ಗ್ರಾಮ ಪಂಚಾಯತ್ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಯತೀಶ್ ಪೆರುವಾಯಿ ನೇತೃತ್ವದಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವಿಟ್ಲ: (ದಕ್ಷಿಣ ಕನ್ನಡ): ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದು, ಜಾಮೀನಿನ ಮೇಲೆ ಹೊರಬಂದರೂ, ಇನ್ನು ಅಧ್ಯಕ್ಷ ಸ್ಥಾನದಲ್ಲಿ ದರ್ಬಾರ್ ನಡೆಸುತ್ತಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಕೂಡಲೇ ನಫೀಸಾರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದರೆ ಅ. 21ರಂದು ಗ್ರಾಮ ಪಂಚಾಯತ್ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಯತೀಶ್ ಪೆರುವಾಯಿ ನೇತೃತ್ವದಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವಿಟ್ಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯತೀಶ್ ಪೆರುವಾಯಿ, “ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 48 ಗಂಟೆಗಳಿಗಿಂತ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಿದರೆ ಯಾವುದೇ ಸರ್ಕಾರಿ ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂಬ ಕಾನೂನಿದ್ದರೂ, ನಫೀಸಾ ತಮ್ಮ ಅಧಿಕಾರದ ಪ್ರಭಾವ ಬಳಸಿ ಕಾನೂನು ಉಲ್ಲಂಘಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸತ್ಯ ಹೂಳಿ ಹಾಕುವ ಯತ್ನ: ರಾಜಕೀಯ ಬೆಂಬಲದ ಆರೋಪ!
ಪ್ರಕರಣ ನ್ಯಾಯಾಲಯದಲ್ಲಿರುವಾಗಲೂ ನಫೀಸಾ ಹುದ್ದೆಯಲ್ಲಿ ಮುಂದುವರಿಯುತ್ತಿರುವುದು ಕಾನೂನುಬಾಹಿರ. ಇದಕ್ಕೆ ಪ್ರಭಾವಿ ರಾಜಕೀಯ ಬೆಂಬಲವೇ ಕಾರಣ ಎಂದು ಯತೀಶ್ ಗಂಭೀರ ಆರೋಪ ಮಾಡಿದ್ದಾರೆ. ಈಗಾಗಲೇ ಗ್ರಾಮಸ್ಥರು ವಿವಿಧ ಇಲಾಖೆಗಳಿಗೆ ಅಧ್ಯಕ್ಷರನ್ನು ವಜಾ ಮಾಡುವಂತೆ ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ.
ಅಧಿಕಾರಿಗಳ ಕರ್ತವ್ಯ ಲೋಪ: ಬಿಲ್ ಕಲೆಕ್ಟರ್ ಅಮಾನತು, ಅಧ್ಯಕ್ಷೆ ಸೇಫ್!
ಲಂಚ ಪ್ರಕರಣದಲ್ಲಿ ನಫೀಸಾ ಮೊದಲ ಆರೋಪಿಯಾಗಿದ್ದರೂ, ಅವರ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ, 40 ದಿನಗಳ ನಂತರ ಎರಡನೇ ಆರೋಪಿ, ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಮಾತ್ರ ಅಮಾನತುಗೊಳಿಸಿ ಅಧಿಕಾರಿಗಳು ಕರ್ತವ್ಯ ಮುಗಿಸಿದ್ದಾರೆ. ಇದು ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡಿದಂತಲ್ಲವೇ ಎಂಬ ಪ್ರಶ್ನೆ ಮೂಡಿದೆ.
ಅವ್ಯವಹಾರಗಳ ಸರಮಾಲೆ: ತೆರಿಗೆ ಹಣಕ್ಕೆ ಕತ್ತರಿ!
ನಫೀಸಾ ವಿರುದ್ಧ ಇದೊಂದೇ ಆರೋಪವಲ್ಲ. ಈ ಹಿಂದೆ ಸ್ವಂತ ಅನುದಾನ, ನೀರು ನಿರ್ವಹಣೆ ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ, ಹಣದ ದುರ್ಬಳಕೆ, ಗ್ರಾಮ ಸಭೆಯಲ್ಲಿ ಸುಳ್ಳು ಮಾಹಿತಿ ನೀಡಿ ಗ್ರಾಮಸ್ಥರನ್ನು ವಂಚಿಸಿರುವ ಬಗ್ಗೆಯೂ ಯತೀಶ್ ದೂರು ನೀಡಿದ್ದರು.
“ದೆಹಲಿ ಪ್ರವಾಸದ ವೇಳೆ ರೈಲಿನಲ್ಲಿ ಪ್ರಯಾಣಿಸುವ ಸುತ್ತೋಲೆ ಇದ್ದರೂ, ನಫೀಸಾ ಕುಟುಂಬ ಸದಸ್ಯರೊಂದಿಗೆ ವಿಮಾನದಲ್ಲಿ ಪ್ರಯಾಣಿಸಿ ಗ್ರಾಮಸ್ಥರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇಂತಹ ಇನ್ನೂ ಹಲವು ಆರೋಪಗಳು ಅವರ ಮೇಲಿವೆ” ಎಂದು ಯತೀಶ್ ಪಟ್ಟಿ ಮಾಡಿದರು.
ಅ. 21ಕ್ಕೆ ಪಂಚಾಯತ್ ಮುಂದೆ ಬೃಹತ್ ಪ್ರತಿಭಟನೆ!
ಕೂಡಲೇ ನಫೀಸಾ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು. ಅಷ್ಟೇ ಅಲ್ಲದೆ, ನಫೀಸಾ ಅವರಿಗೆ ಬೆಂಬಲ ನೀಡಿ, ಸ್ವಯಂ ವರ್ಗಾವಣೆ ಪಡೆದು ತೆರಳಿರುವ ಹಿಂದಿನ ಅಭಿವೃದ್ಧಿ ಅಧಿಕಾರಿ ಮತ್ತು ಬಂಟ್ವಾಳ ಕಾರ್ಯನಿರ್ವಾಹಕ ಅಧಿಕಾರಿಗಳ ವಿರುದ್ಧವೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಯತೀಶ್ ಪೆರುವಾಯಿ ಒತ್ತಾಯಿಸಿದರು.
“ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ಅಕ್ಟೋಬರ್ 21ರಂದು ಗ್ರಾಮಸ್ಥರನ್ನು ಒಟ್ಟುಗೂಡಿಸಿ ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುತ್ತೇವೆ” ಎಂದು ಯತೀಶ್ ಪೆರುವಾಯಿ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಯತೀಶ್ ಪೆರುವಾಯಿ ಅವರಿಗೆ ಗೋಪಾಲಕೃಷ್ಣ ಶೆಟ್ಟಿ, ವಿನೀತ್ ಶೆಟ್ಟಿ, ಗಣೇಶ್ ರೈ ಮತ್ತು ಗಿರೀಶ್ ಪಾಟಾಳಿ ಉಪಸ್ಥಿತರಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಧ್ವನಿಗೂಡಿಸಿದರು.
ಬಿಗ್ ನ್ಯೂಸ್
Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.
ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ
Bank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಯಾದಗಿರಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಕಳೆದ ಆರೇಳು ತಿಂಗಳ ಹಿಂದೆ 10 ಗ್ರಾಂ ಚಿನ್ನದ ಬೆಲೆ ₹1.75 ಲಕ್ಷದಿಂದ ₹1.85 ಲಕ್ಷದವರೆಗೆ ತಲುಪಿದ್ದ ಸಂದರ್ಭದಲ್ಲಿ ಅನೇಕರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಹೆಚ್ಚಿನ ಮೊತ್ತದ ಸಾಲ ಪಡೆದಿದ್ದರು. ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಹಕರನ್ನು ಬ್ಯಾಂಕ್ಗಳು ಸಂಪರ್ಕಿಸಿ, ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಹಣ ಪಾವತಿಸುವಂತೆ ಸೂಚಿಸುತ್ತಿವೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹30,000 ಇಳಿಕೆಯಾಗಿರುವುದು ಬ್ಯಾಂಕ್ಗಳ ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಚಿನ್ನದ ಮೌಲ್ಯ ಕುಸಿದಂತೆ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತವಾದ ಲೋನ್ ಟು ವ್ಯಾಲ್ಯೂ (LTV) ನಿಗದಿತ ಮಿತಿಯನ್ನು ಮೀರಿರುವ ಸಾಧ್ಯತೆಯಿದೆ. ಹೀಗಾಗಿ ವಿಶೇಷವಾಗಿ ಖಾಸಗಿ ಬ್ಯಾಂಕ್ಗಳು ಗ್ರಾಹಕರಿಗೆ ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಅಥವಾ ಹೆಚ್ಚುವರಿ ಚಿನ್ನವನ್ನು ಅಡವಿಡುವಂತೆ ಸೂಚಿಸುತ್ತಿವೆ.
ಚಿನ್ನದ ಮೌಲ್ಯ ಕುಸಿತ; ಸಾಲಗಾರರಿಗೆ ಹೆಚ್ಚುವರಿ ಹೊರೆ
ಉದಾಹರಣೆಗೆ, ಚಿನ್ನದ ಬೆಲೆ 10 ಗ್ರಾಂಗೆ ₹1.85 ಲಕ್ಷ ಇದ್ದಾಗ ₹5 ಲಕ್ಷ ಮೌಲ್ಯದ ಚಿನ್ನಾಭರಣ ಅಡವಿಟ್ಟು ₹3.75 ಲಕ್ಷದಿಂದ ₹4 ಲಕ್ಷದವರೆಗೆ ಸಾಲ ಪಡೆದಿದ್ದರೆ, ಇದೀಗ ಚಿನ್ನದ ಬೆಲೆ ಕುಸಿದಿರುವುದರಿಂದ ಅಡವಿಟ್ಟ ಆಭರಣಗಳ ಮೌಲ್ಯವೂ ಕಡಿಮೆಯಾಗಿರುತ್ತದೆ. ಇದರಿಂದ ಸಾಲದ ಮೊತ್ತಕ್ಕೆ ಹೋಲಿಸಿದರೆ ಚಿನ್ನದ ಮೌಲ್ಯ ಕಡಿಮೆಯಾಗುವ ಪರಿಸ್ಥಿತಿ ಎದುರಾಗಬಹುದು.
ಇನ್ನೂ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂಬ ಆತಂಕವೂ ಸಾಲಗಾರರ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಬ್ಯಾಂಕ್ಗಳು ಗ್ರಾಹಕರಿಗೆ ತಕ್ಷಣ ಅಗತ್ಯ ಮಾರ್ಜಿನ್ ಮೊತ್ತವನ್ನು ಪಾವತಿಸಿ ಸಾಲದ ಖಾತೆಯನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸುತ್ತಿವೆ.
ಹಣ ಪಾವತಿಸದಿದ್ದರೆ ಒಡವೆ ಹರಾಜು?
ಈ ಕುರಿತು ಮಾತನಾಡಿರುವ ಖಾಸಗಿ ಬ್ಯಾಂಕ್ನ ಪ್ರಮುಖರೊಬ್ಬರು, ಚಿನ್ನದ ಬೆಲೆ ಕುಸಿತದಿಂದ ಬ್ಯಾಂಕ್ಗಳಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಗೋಲ್ಡ್ ಲೋನ್ ಪಡೆದ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಗ್ರಾಹಕರು ನಿಗದಿತ ಸಮಯದಲ್ಲಿ ಸ್ಪಂದಿಸದಿದ್ದರೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಅಡವಿಟ್ಟ ಚಿನ್ನವನ್ನು ಹರಾಜು ಹಾಕುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಚಿನ್ನದ ಬೆಲೆ ಇಳಿಕೆ ಬಗ್ಗೆ ಮೋದಿ ಹೇಳಿಕೆ
ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಿನ್ನ ಖರೀದಿಸದಂತೆ ತಾವು ನೀಡಿದ್ದ ಸಲಹೆಯಿಂದ ಜನರ ಹಣ ಉಳಿತಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ ಕೂಡ ಪ್ರಧಾನಿಯವರ ಸಲಹೆಯಿಂದ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದೆ ಎಂದು ಪತ್ರ ಬರೆದು ಅಭಿನಂದಿಸಿತ್ತು.
ನ.23ರ ಸೋಮವಾರ ಯಾದಗಿರಿಯಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹1.31 ಲಕ್ಷ ಇತ್ತು ಎಂದು ವರದಿಯಾಗಿದೆ.
ಒಟ್ಟಿನಲ್ಲಿ, ಚಿನ್ನದ ಬೆಲೆ ಏರಿಕೆಯ ಸಂದರ್ಭದಲ್ಲಿ ಹೆಚ್ಚಿನ ಸಾಲ ಪಡೆದಿದ್ದ ಗ್ರಾಹಕರು ಇದೀಗ ಬೆಲೆ ಇಳಿಕೆಯ ಪರಿಣಾಮವಾಗಿ ಹೆಚ್ಚುವರಿ ಹಣ ಹೊಂದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬ್ಯಾಂಕ್ಗಳ ಸೂಚನೆ ಪಾಲಿಸದಿದ್ದರೆ ತಮ್ಮ ಅಮೂಲ್ಯ ಆಭರಣಗಳನ್ನೇ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ.
ಮಂಗಳೂರು
Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.
ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.
ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.
ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.
ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.
ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಅಪರಾಧ13 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್10 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ10 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು11 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಅಂತರ ರಾಜ್ಯ11 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ನಿಧನ ವಾರ್ತೆ6 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಸ್ಥಳೀಯ11 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು12 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















