Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ‘ಫಿಲೋ ವೇವ್ಸ್ 2025’ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗ ಹಾಗೂ ವಿಜ್ಞಾನ ವೇದಿಕೆ ಇದರ ಸಹಯೋಗದೊಂದಿಗೆ ಅಕ್ಟೋಬರ್ 17 ರಂದು ಕಾಲೇಜು ಸಭಾಂಗಣದಲ್ಲಿ ‘ಫಿಲೋ ವೇವ್ಸ್ 2025’ ಇದರ ಉದ್ಘಾಟನೆಯನ್ನು ನೆರವೇರಿಸಿ ಪುತ್ತೂರಿನ ನಿಧಿ ಫುಡ್ ಪ್ರಾಡಕ್ಟ್, ಅಭಿಜ್ಞಾನ ಫುಡ್ ಪ್ರೈವೇಟ್ ಲಿಮಿಟೆಡ್ ಮರ್ಕ್ಯುರಿ ಏಜೆನ್ಸೀಸ್ ನರಿಮೊಗರು ಇದರ ಮಾಲಕರಾದ ರಾಧಾಕೃಷ್ಣ ಇಟ್ಟಿಗುಂಡಿ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಜೀವನದಲ್ಲಿ ಜ್ಞಾನ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಜೊತೆಗೆ ಮಾನವೀಯ ಮೌಲ್ಯಗಳು ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಗುಣಗಳನ್ನು ಬೆಳೆಸಿ ಕೊಳ್ಳಬೇಕು ಎಂದು ಪುತ್ತೂರಿನ ನಿಧಿ ಫುಡ್ ಪ್ರಾಡಕ್ಟ್, ಅಭಿಜ್ಞಾನ ಫುಡ್ ಪ್ರೈವೇಟ್ ಲಿಮಿಟೆಡ್ ಮರ್ಕ್ಯುರಿ ಏಜೆನ್ಸೀಸ್ ನರಿಮೊಗರು ಇದರ ಮಾಲಕರಾದ ರಾಧಾಕೃಷ್ಣ ಇಟ್ಟಿಗುಂಡಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗ ಹಾಗೂ ವಿಜ್ಞಾನ ವೇದಿಕೆ ಇದರ ಸಹಯೋಗದೊಂದಿಗೆ ಅಕ್ಟೋಬರ್ 17 ರಂದು ಕಾಲೇಜು ಸಭಾಂಗಣದಲ್ಲಿ
‘ಫಿಲೋ ವೇವ್ಸ್ 2025’ ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಇವರು ನಾವು ಜೀವನದಲ್ಲಿ ಇಚ್ಛಾಶಕ್ತಿ, ಜ್ಞಾನ ಶಕ್ತಿ ಹಾಗೂ ಕ್ರಿಯಾ ಶಕ್ತಿಯನ್ನು ಬಳಸಿಕೊಂಡು ಸಾಧನೆಯನ್ನು ಮಾಡುವ ಅಗತ್ಯತೆ ಇದೆ. ಕೃಷಿ ಮತ್ತು ತೋಟಗಾರಿಕಾ ವಿಭಾಗಗಳು ವಿದ್ಯಾರ್ಥಿಗಳಿಗೆ ಸಾಕಷ್ಟು ಜ್ಞಾನ ಮತ್ತು ಸಂಶೋಧನೆಗೆ ಅವಕಾಶಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಈ ವಿಷಯಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಬಹುದಾಗಿದೆ.

Ad Widget

Ad Widget <> Ad Widget

ಹಾಗೆಯೇ ಫುಡ್ ಟೆಕ್ನಾಲಜಿ ವಿಭಾಗಗಳು ಇಂದು ಉತ್ತಮ ಅವಕಾಶಗಳನ್ನು ನೀಡುತ್ತಿದ್ದು, ಮುಖ್ಯವಾಗಿ ಉನ್ನತ ವ್ಯಾಸಂಗಕ್ಕೆ ಮತ್ತು ಸಂಶೋಧನೆಗಳಿಗೆ ವಿಪುಲ ಅವಕಾಶಗಳಿವೆ ಎಂದು ಹೇಳಿದರು.



Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ,   ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗಕ್ಕೆ ಮತ್ತು ಸಂಶೋಧನೆಗಳಿಗೆ ಇರುವ ಅವಕಾಶಗಳ ಬಗ್ಗೆ ತಿಳಿದುಕೊಂಡು ಈ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಬಹುದಾಗಿದೆ. ಇಂತಹ ಹಲವಾರು ವಲಯಗಳು ಇಂದಿನ ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಆಸಕ್ತಿ ಮತ್ತು ಸಂಶೋಧನಾ ಮನಸ್ಥಿತಿಯೊಂದಿಗೆ ಈ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡರೆ, ಉನ್ನತ ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಡೀನ್ ಯಶ್ವಂತ್ ಎಂ ಡಿ ಹಾಗೂ ವಿಜ್ಞಾನ ವೇದಿಕೆಯ ನಿರ್ದೇಶಕರಾದ ಶಿಲ್ಪಾ ಎಮಿಲ ರೋಡ್ರಿಗಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜ್ಞಾನದ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಿಷಯದ ಚಿತ್ರಕಲೆ, ವಿಜ್ಞಾನ – ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ವಿಜ್ಞಾನ ವಿಷಯದ ಫ್ಯಾಷನ್ ಶೋ ಹಾಗೂ ವಿಜ್ಞಾನ ಜಾಹೀರಾತು- ಮ್ಯಾಡ್ ಆಡ್ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿಜ್ಞಾನ ವಿಭಾಗದ ಡೀನ್ ಯಶ್ವಂತ್ ಎಂ. ಡಿ ಸ್ವಾಗತಿಸಿ, ವಿದ್ಯಾರ್ಥಿಗಳಾದ ತ್ರಿಷಾ ರೈ ವಂದಿಸಿ, ಪ್ರಾಧೀ ಕ್ಲಾರೆ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಶಿಕ್ಷಣ

Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.



Ad Widget

ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Continue Reading

ಸ್ಥಳೀಯ

Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ

Published

on



Ad Widget

Ad Widget

Ad Widget

Ad Widget

ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget

ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading