Connect with us

ಬಿಗ್ ನ್ಯೂಸ್

Indigo airplane-ಇಂಡಿಗೊ ವಿಮಾನದ ಶೌಚಾಲಯದಲ್ಲಿ ‘ಬಾಂಬ್’ ಬರಹ; ಮಂಗಳೂರಿಗೆ ಬರಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್

Published

on



Ad Widget

Ad Widget

Ad Widget

Ad Widget

ದುಬೈನಿಂದ ಮಂಗಳೂರಿಗೆ ಶನಿವಾರ ರಾತ್ರಿ ಪ್ರಯಾಣಿಸುತ್ತಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಪ್ರಯಾಣಿಕರೊಬ್ಬರು ‘ಬಾಂಬ್’ ಎಂದು ಬರೆದಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಸುರಕ್ಷತೆಯ ದೃಷ್ಟಿಯಿಂದ ವಿಮಾನವನ್ನು ಮಂಗಳೂರಿಗೆ ಬದಲಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ ತರಲಾಯಿತು.

Ad Widget

Ad Widget

Ad Widget

Ad Widget

ಬೆಂಗಳೂರು: ದುಬೈನಿಂದ ಮಂಗಳೂರಿಗೆ ಶನಿವಾರ ರಾತ್ರಿ ಪ್ರಯಾಣಿಸುತ್ತಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಪ್ರಯಾಣಿಕರೊಬ್ಬರು ‘ಬಾಂಬ್’ ಎಂದು ಬರೆದಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಯಿತು.

Ad Widget

Ad Widget

Ad Widget alt="Ad Widget"/>

Ad Widget

168 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನವು ದುಬೈನಿಂದ ಮಂಗಳೂರಿಗೆ ಸಂಜೆ ಹೊರಟಿತ್ತು. ಪ್ರಯಾಣದ ಮಧ್ಯೆ ಒಬ್ಬ ಪ್ರಯಾಣಿಕ ಶೌಚಾಲಯದಲ್ಲಿ ‘ಬಾಂಬ್’ ಎಂದು ಬರೆದು ಹೊರಬಂದಿದ್ದಾನೆ.

Ad Widget

Ad Widget <> Ad Widget

ಇದನ್ನು ಗಮನಿಸಿದ ಮತ್ತೊಬ್ಬ ಪ್ರಯಾಣಿಕ, ಗಾಬರಿಯಾಗಿ ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾನೆ. ಸುರಕ್ಷತೆಯ ದೃಷ್ಟಿಯಿಂದ ವಿಮಾನವನ್ನು ಮಂಗಳೂರಿಗೆ ಬದಲಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ ತರಲಾಯಿತು.



Ad Widget

ಕೆಐಎಎಲ್‌ನಲ್ಲಿ ಭದ್ರತಾ ಸಿಬ್ಬಂದಿ ಮಧ್ಯರಾತ್ರಿಯವರೆಗೆ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದರು. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಸಿಕ್ಕಿಲ್ಲ. ಬಾಂಬ್ ಅಪಾಯವಿಲ್ಲ ಎಂದು ದೃಢಪಟ್ಟ ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ನಿರಾಳರಾದರು.

Ad Widget

Ad Widget

ಪೊಲೀಸರು ತಿಳಿಸಿದ್ದ ಪ್ರಕಾರ, “ಶೌಚಾಲಯದಲ್ಲಿ ‘ಬಾಂಬ್’ ಎಂದು ಬರೆದಿದ್ದು ಪ್ರಯಾಣಿಕರಲ್ಲಿ ಭೀತಿ ಹುಟ್ಟಿಸಿತ್ತು. ತಕ್ಷಣವೇ ವಿಮಾನವನ್ನು ಬೆಂಗಳೂರಿಗೆ ತರಲಾಗಿ ತಪಾಸಣೆ ನಡೆಸಲಾಯಿತು. ಬರಹ ಬರೆದವನ ಗುರುತು ಇನ್ನೂ ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದ್ದು, ಆರೋಪಿಯನ್ನು ಕಂಡುಹಿಡಿದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು.”

Ad Widget

ಬಿಗ್ ನ್ಯೂಸ್

KSRTC-ಮೈಸೂರು ದಸರಾ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌: ₹950ಕ್ಕೆ ಬೆಂಗಳೂರು-ಮೈಸೂರು ಒನ್ ಡೇ ಟೂರ್ ಪ್ಯಾಕೇಜ್..!

Published

on



Ad Widget

Ad Widget

Ad Widget

Ad Widget

ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್ ಪ್ಯಾಕೇಜ್‌ ಪರಿಚಯಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್ ಪ್ಯಾಕೇಜ್‌ ಪರಿಚಯಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ‘ಬೆಂಗಳೂರು–ನಿಮಿಷಾಂಬ–ಶ್ರೀರಂಗಪಟ್ಟಣ–ಮೈಸೂರು’ ವಿಶೇಷ ಪ್ರವಾಸ ಸೇವೆ ಆರಂಭಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ಜನಪ್ರಿಯ ‘ಅಶ್ವಮೇಧ ಕ್ಲಾಸಿಕ್’ ಬಸ್‌ಗಳನ್ನು ನಿಯೋಜಿಸಲಾಗಿದೆ.

Ad Widget

Ad Widget <> Ad Widget

ಈ ಪ್ರವಾಸ ಪ್ಯಾಕೇಜ್ ಅಕ್ಟೋಬರ್ 13ರಿಂದ 28ರವರೆಗೆ ಕಾರ್ಯನಿರ್ವಹಿಸಲಿದ್ದು, ಅಕ್ಟೋಬರ್ 20 ಮತ್ತು 21ರಂದು ಸೇವೆ ಇರುವುದಿಲ್ಲ.



Ad Widget

ಪ್ರವಾಸದ ವೇಳಾಪಟ್ಟಿ ಹೀಗಿದೆ
ಪ್ರವಾಸವು ಬೆಳಗ್ಗೆ ಬೆಂಗಳೂರಿನಿಂದ ಆರಂಭವಾಗಿ, ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾತ್ರಿ ಮತ್ತೆ ಬೆಂಗಳೂರಿಗೆ ಮರಳಲಿದೆ.

Ad Widget

Ad Widget

ಬೆಳಗ್ಗೆ 6ರಿಂದ 8: ಬೆಂಗಳೂರು-ನಿಮಿಷಾಂಬ ಪ್ರಯಾಣ
ಬೆಳಗ್ಗೆ 8ರಿಂದ 9: ನಿಮಿಷಾಂಬ ದೇವಸ್ಥಾನ ದರ್ಶನ ಮತ್ತು ಉಪಾಹಾರ
ಬೆಳಗ್ಗೆ 9ರಿಂದ 11: ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ದರಿಯಾ ದೌಲತ್, ಗುಂಬಜ್ ಹಾಗೂ ಸಂಗಮ ವೀಕ್ಷಣೆ
ಬೆಳಗ್ಗೆ 11ರಿಂದ 11.30: ಶ್ರೀರಂಗಪಟ್ಟಣದಿಂದ ಮೈಸೂರಿಗೆ ಪ್ರಯಾಣ
ಬೆಳಗ್ಗೆ 11.30ರಿಂದ ಮಧ್ಯಾಹ್ನ 12: ಸೇಂಟ್ ಫಿಲೋಮಿನಾ ಚರ್ಚ್ ಭೇಟಿ
ಮಧ್ಯಾಹ್ನ 12ರಿಂದ 1: ಊಟದ ವಿರಾಮ
ಮಧ್ಯಾಹ್ನ 1ರಿಂದ 2: ಕಾವೇರಿ ಆರ್ಟ್ ಗ್ಯಾಲರಿ ಮತ್ತು ಕ್ರಾಫ್ಟ್ ಎಂಪೋರಿಯಂ ವೀಕ್ಷಣೆ
ಮಧ್ಯಾಹ್ನ 2ರಿಂದ ಸಂಜೆ 4: ಮೈಸೂರು ಅರಮನೆ ವೀಕ್ಷಣೆ
ಸಂಜೆ 4ರಿಂದ 5.30: ಮೈಸೂರು ಮೃಗಾಲಯ ಭೇಟಿ
ಸಂಜೆ 5.30ರಿಂದ ರಾತ್ರಿ 8: ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ
ರಾತ್ರಿ 8ರಿಂದ 10: ಎಕ್ಸ್‌ಪ್ರೆಸ್‌ವೇ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ

ಟೂರ್ ಪ್ಯಾಕೇಜ್ ದರ ಎಷ್ಟು?
ಕೆಎಸ್‌ಆರ್‌ಟಿಸಿ ನಿಗದಿಪಡಿಸಿರುವ ಪ್ರಯಾಣ ದರಗಳು ಹೀಗಿವೆ:
ವಯಸ್ಕರಿಗೆ: ₹950
6ರಿಂದ 12 ವರ್ಷದ ಮಕ್ಕಳಿಗೆ: ₹750

ಗಮನಿಸಿ: ಈ ಪ್ಯಾಕೇಜ್‌ನ ಪ್ರಯಾಣ ದರದಲ್ಲಿ ಊಟ ಮತ್ತು ಪ್ರವಾಸಿ ತಾಣಗಳ ಪ್ರವೇಶ ಟಿಕೆಟ್‌ಗಳು ಸೇರಿರುವುದಿಲ್ಲ. ಅವುಗಳ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕು.

ಟಿಕೆಟ್ ಬುಕ್ಕಿಂಗ್ ಮಾಡುವುದು ಹೇಗೆ?
ಪ್ರವಾಸಿಗರು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.
www.ksrtc.in
www.ksrtc.karnataka.gov.in

ಹೆಚ್ಚಿನ ಮಾಹಿತಿ ಹಾಗೂ ಬುಕ್ಕಿಂಗ್ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಸಹಾಯವಾಣಿ ಸಂಖ್ಯೆಗಳು: 080-26252625, 7760990100, 7760990560, 7760990287.

ಒಂದೇ ದಿನದಲ್ಲಿ ನಿಮಿಷಾಂಬ ದೇವಸ್ಥಾನ, ಶ್ರೀರಂಗಪಟ್ಟಣದ ಐತಿಹಾಸಿಕ ತಾಣಗಳು, ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲು ಬಯಸುವವರಿಗೆ ಈ ಪ್ಯಾಕೇಜ್ ಅನುಕೂಲಕರ ಆಯ್ಕೆಯಾಗಿದೆ.

Ad Widget
Continue Reading

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on



Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.



Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಮಂಗಳೂರು

ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on



Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.



Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.

​ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.

ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.

​ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading