Connect with us

ಬಿಗ್ ನ್ಯೂಸ್

G.L. Acharya Jewellers-ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ; ಚಿನ್ನಾಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ಅ.18ರಿಂದ ಅ.22.ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ಅ.18ರಿಂದ ಅ.22.ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ ಅನ್ವಯದೊಂದಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 400/ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7,000/- ವರೆಗೆ ರಿಯಾಯಿತಿ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ.3000/- ಡಿಸ್ಕೌಂಟ್ ನೀಡಲಾಗುವುದು. ರೂ.50,000 ಮೇಲ್ಪಟ್ಟ ಖರೀದಿಗೆ ಖಚಿತ ಉಡುಗೊರೆಯ ಕೂಪನ್ ಹಾಗೂ ಆಕರ್ಷಕ ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶವಿದೆ.

Ad Widget

Ad Widget <> Ad Widget

916 ಅಥವಾ ಬೇರೆ ಯಾವುದೇ ಶುದ್ಧತೆಯ ಆಭರಣವನ್ನು ವಿನಿಮಯ ಮಾಡಿಕೊಳ್ಳುವಾಗ, ಚಿನ್ನದ ದರ ಏರಿಕೆಯ ಲಾಭವನ್ನು ಪಡೆಯಿರಿ ಹಾಗೂ ಚಿನ್ನದ ಬೆಲೆ ಏರಿಕೆಯ ಪರಿಣಾಮವನ್ನು ಈ ಆಫರ್ ಮೂಲಕ ಕಡಿಮೆ ಮಾಡಿಕೊಳ್ಳಲು ಇದು ಒಂದು ಸುವರ್ಣಾವಕಾಶವಾಗಿದೆ. ದಿನದಿಂದ ದಿನಕ್ಕೆ ಏರುವ ಚಿನ್ನದ ದರವನ್ನು ಸರಾಸರಿ ಮಾಡುವ ಸ್ವರ್ಣಧಾರ ಚಿನ್ನದ ಹೂಡಿಕೆ ಯೋಜನೆಯಲ್ಲಿ ಈಗ ಸೇರಿದವರಿಗೆ ಬರುವ ವಿಜಯದಶಮಿ/ದೀಪಾವಳಿ ಸಮಯದಲ್ಲಿ ತಮ್ಮ ನೆಚ್ಚಿನ ಆಭರಣವನ್ನು ಕೊಳ್ಳಲು ಈ ಯೋಜನೆಯು ಒಂದು ಸುವರ್ಣಾವಕಾಶ ಮಾಡಿಕೊಡುತ್ತದೆ.



Ad Widget

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ ಹಾಗೂ ಈ ಜಿ.ಎಲ್. ಸ್ವರ್ಣ ಹಬ್ಬ ಎಲ್ಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Click to comment

Leave a Reply

ಮಂಗಳೂರು

Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.



Ad Widget

ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ಬಿಗ್ ನ್ಯೂಸ್

KSRTC-ಮೈಸೂರು ದಸರಾ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌: ₹950ಕ್ಕೆ ಬೆಂಗಳೂರು-ಮೈಸೂರು ಒನ್ ಡೇ ಟೂರ್ ಪ್ಯಾಕೇಜ್..!

Published

on



Ad Widget

Ad Widget

Ad Widget

Ad Widget

ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್ ಪ್ಯಾಕೇಜ್‌ ಪರಿಚಯಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್ ಪ್ಯಾಕೇಜ್‌ ಪರಿಚಯಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ‘ಬೆಂಗಳೂರು–ನಿಮಿಷಾಂಬ–ಶ್ರೀರಂಗಪಟ್ಟಣ–ಮೈಸೂರು’ ವಿಶೇಷ ಪ್ರವಾಸ ಸೇವೆ ಆರಂಭಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ಜನಪ್ರಿಯ ‘ಅಶ್ವಮೇಧ ಕ್ಲಾಸಿಕ್’ ಬಸ್‌ಗಳನ್ನು ನಿಯೋಜಿಸಲಾಗಿದೆ.

Ad Widget

Ad Widget <> Ad Widget

ಈ ಪ್ರವಾಸ ಪ್ಯಾಕೇಜ್ ಅಕ್ಟೋಬರ್ 13ರಿಂದ 28ರವರೆಗೆ ಕಾರ್ಯನಿರ್ವಹಿಸಲಿದ್ದು, ಅಕ್ಟೋಬರ್ 20 ಮತ್ತು 21ರಂದು ಸೇವೆ ಇರುವುದಿಲ್ಲ.



Ad Widget

ಪ್ರವಾಸದ ವೇಳಾಪಟ್ಟಿ ಹೀಗಿದೆ
ಪ್ರವಾಸವು ಬೆಳಗ್ಗೆ ಬೆಂಗಳೂರಿನಿಂದ ಆರಂಭವಾಗಿ, ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾತ್ರಿ ಮತ್ತೆ ಬೆಂಗಳೂರಿಗೆ ಮರಳಲಿದೆ.

Ad Widget

Ad Widget

ಬೆಳಗ್ಗೆ 6ರಿಂದ 8: ಬೆಂಗಳೂರು-ನಿಮಿಷಾಂಬ ಪ್ರಯಾಣ
ಬೆಳಗ್ಗೆ 8ರಿಂದ 9: ನಿಮಿಷಾಂಬ ದೇವಸ್ಥಾನ ದರ್ಶನ ಮತ್ತು ಉಪಾಹಾರ
ಬೆಳಗ್ಗೆ 9ರಿಂದ 11: ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ದರಿಯಾ ದೌಲತ್, ಗುಂಬಜ್ ಹಾಗೂ ಸಂಗಮ ವೀಕ್ಷಣೆ
ಬೆಳಗ್ಗೆ 11ರಿಂದ 11.30: ಶ್ರೀರಂಗಪಟ್ಟಣದಿಂದ ಮೈಸೂರಿಗೆ ಪ್ರಯಾಣ
ಬೆಳಗ್ಗೆ 11.30ರಿಂದ ಮಧ್ಯಾಹ್ನ 12: ಸೇಂಟ್ ಫಿಲೋಮಿನಾ ಚರ್ಚ್ ಭೇಟಿ
ಮಧ್ಯಾಹ್ನ 12ರಿಂದ 1: ಊಟದ ವಿರಾಮ
ಮಧ್ಯಾಹ್ನ 1ರಿಂದ 2: ಕಾವೇರಿ ಆರ್ಟ್ ಗ್ಯಾಲರಿ ಮತ್ತು ಕ್ರಾಫ್ಟ್ ಎಂಪೋರಿಯಂ ವೀಕ್ಷಣೆ
ಮಧ್ಯಾಹ್ನ 2ರಿಂದ ಸಂಜೆ 4: ಮೈಸೂರು ಅರಮನೆ ವೀಕ್ಷಣೆ
ಸಂಜೆ 4ರಿಂದ 5.30: ಮೈಸೂರು ಮೃಗಾಲಯ ಭೇಟಿ
ಸಂಜೆ 5.30ರಿಂದ ರಾತ್ರಿ 8: ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ
ರಾತ್ರಿ 8ರಿಂದ 10: ಎಕ್ಸ್‌ಪ್ರೆಸ್‌ವೇ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ

ಟೂರ್ ಪ್ಯಾಕೇಜ್ ದರ ಎಷ್ಟು?
ಕೆಎಸ್‌ಆರ್‌ಟಿಸಿ ನಿಗದಿಪಡಿಸಿರುವ ಪ್ರಯಾಣ ದರಗಳು ಹೀಗಿವೆ:
ವಯಸ್ಕರಿಗೆ: ₹950
6ರಿಂದ 12 ವರ್ಷದ ಮಕ್ಕಳಿಗೆ: ₹750

ಗಮನಿಸಿ: ಈ ಪ್ಯಾಕೇಜ್‌ನ ಪ್ರಯಾಣ ದರದಲ್ಲಿ ಊಟ ಮತ್ತು ಪ್ರವಾಸಿ ತಾಣಗಳ ಪ್ರವೇಶ ಟಿಕೆಟ್‌ಗಳು ಸೇರಿರುವುದಿಲ್ಲ. ಅವುಗಳ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕು.

ಟಿಕೆಟ್ ಬುಕ್ಕಿಂಗ್ ಮಾಡುವುದು ಹೇಗೆ?
ಪ್ರವಾಸಿಗರು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.
www.ksrtc.in
www.ksrtc.karnataka.gov.in

ಹೆಚ್ಚಿನ ಮಾಹಿತಿ ಹಾಗೂ ಬುಕ್ಕಿಂಗ್ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಸಹಾಯವಾಣಿ ಸಂಖ್ಯೆಗಳು: 080-26252625, 7760990100, 7760990560, 7760990287.

ಒಂದೇ ದಿನದಲ್ಲಿ ನಿಮಿಷಾಂಬ ದೇವಸ್ಥಾನ, ಶ್ರೀರಂಗಪಟ್ಟಣದ ಐತಿಹಾಸಿಕ ತಾಣಗಳು, ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲು ಬಯಸುವವರಿಗೆ ಈ ಪ್ಯಾಕೇಜ್ ಅನುಕೂಲಕರ ಆಯ್ಕೆಯಾಗಿದೆ.

Ad Widget
Continue Reading

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on



Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.



Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading