ಬಿಗ್ ನ್ಯೂಸ್
Puttur-“ಎಷ್ಟೇ ಖರ್ಚಾದರೂ ಪುತ್ತೂರಿಗೆ ಮೆಡಿಕಲ್ ಕಾಲೇಜಿಗೆ ಮಾಡುತ್ತೇನೆ!ʼʼ; ಅಶೋಕ್ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ; ಹೆಜ್ಜೇನು ಕಚ್ಚಿ ಮೃತಪಟ್ಟ ಮಗುವಿನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉದ್ಯಮಿ ಅಶೋಕ್ ಕುಮಾರ್ ರೈ ಅವರ ಮಹತ್ವಕಾಂಕ್ಷಿ “ಅಶೋಕ ಜನಮನ” ವಸ್ತ್ರ ವಿತರಣಾ ಕಾರ್ಯಕ್ರಮವು ಅಕ್ಟೋಬರ್ 20ರಂದು ಯಶಸ್ವಿಯಾಗಿ ನೆರವೇರಿತು. ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಈ ಬೃಹತ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಜನರನ್ನುದ್ದೇಶಿಸಿ ಮಾತನಾಡಿದರು.
ಪುತ್ತೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉದ್ಯಮಿ ಅಶೋಕ್ ಕುಮಾರ್ ರೈ ಅವರ ಮಹತ್ವಕಾಂಕ್ಷಿ “ಅಶೋಕ ಜನಮನ” ವಸ್ತ್ರ ವಿತರಣಾ ಕಾರ್ಯಕ್ರಮವು ಅಕ್ಟೋಬರ್ 20ರಂದು ಯಶಸ್ವಿಯಾಗಿ ನೆರವೇರಿತು. ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಈ ಬೃಹತ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಜನರನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ, ಪುತ್ತೂರಿನ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಷ್ಟೇ ಖರ್ಚಾದರೂ ಮಾಡಲು ಬದ್ಧ ಎಂದು ದೃಢಸಂಕಲ್ಪ ಪ್ರಕಟಿಸಿದರು.
ಒಂದು ಲಕ್ಷ ಜನರಿಗೆ ವಸ್ತ್ರ ಭಾಗ್ಯ: ಸಿಎಂ ಶ್ಲಾಘನೆ
ದೀಪಾವಳಿಯ ಪ್ರಯುಕ್ತ ಅಶೋಕ್ ರೈ ಮತ್ತು ಅವರ ಕುಟುಂಬ ಆಯೋಜಿಸಿದ್ದ ಈ ವಸ್ತ್ರ ವಿತರಣಾ ಕಾರ್ಯಕ್ರಮವು ಸಣ್ಣ ಮಟ್ಟದಲ್ಲಿ ಆರಂಭವಾಗಿ, ಇದೀಗ ಒಂದು ಲಕ್ಷ ಜನರಿಗೆ ತಲುಪಿರುವುದು ಮುಖ್ಯಮಂತ್ರಿಗಳ ಗಮನ ಸೆಳೆಯಿತು. “ಶಾಸಕರಾಗಿ ಅಶೋಕ್ ರೈ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮವು ಶ್ರೀಮಂತ ವರ್ಗಕ್ಕೆ ಮಾದರಿಯಾಗಬೇಕು. ಗಳಿಸಿದ್ದನ್ನು ನಿರ್ಗತಿಕರಿಗೆ ಹಂಚುವುದು ಶ್ರೇಷ್ಠ ಕಾರ್ಯ,” ಎಂದು ಸಿದ್ದರಾಮಯ್ಯ ಅವರು ಅಶೋಕ್ ರೈ ಅವರ ಸಮಾಜಮುಖಿ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಬಸವಣ್ಣ, ಅಂಬೇಡ್ಕರ್, ಕುವೆಂಪು ತತ್ವಗಳ ಸ್ಮರಣೆ: ಸಮಾನ ಸಮಾಜ ನಿರ್ಮಾಣದ ಸಂಕಲ್ಪ
ತಮ್ಮ ಭಾಷಣದಲ್ಲಿ ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವಗಳನ್ನು ಉಲ್ಲೇಖಿಸಿದ ಸಿಎಂ, “12ನೇ ಶತಮಾನದಲ್ಲಿ ಬಸವಣ್ಣ ಹೇಳಿದ ಈ ತತ್ವಗಳನ್ನು ಅಶೋಕ್ ರೈ ಅನುಸರಿಸಿ ಉತ್ತಮ ಕೆಲಸ ಮಾಡಿದ್ದಾರೆ. ಇಂತಹ ಕಾರ್ಯಗಳು ಸಮಾಜದ ಅಸಮಾನತೆಯನ್ನು ಕಡಿಮೆ ಮಾಡಿ, ಸಮಾನತೆಯನ್ನು ತರುತ್ತವೆ,” ಎಂದರು. 1949ರ ನವೆಂಬರ್ 25ರಂದು ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಸಮ ಸಮಾಜ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದ್ದನ್ನು ಸ್ಮರಿಸಿದ ಸಿದ್ದರಾಮಯ್ಯ, “ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಿದ್ದೇನೆ. ಸಂವಿಧಾನದ ಅರಿವು ಎಲ್ಲರಿಗೂ ಇರಬೇಕು, ಇಲ್ಲದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ,” ಎಂದು ಸಂವಿಧಾನದ ಮಹತ್ವವನ್ನು ಸಾರಿದರು. ಕುವೆಂಪು ಅವರ “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಮಾತನ್ನು ಉಲ್ಲೇಖಿಸಿ, “ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ, ಪ್ರೀತಿಯನ್ನು ಕಲಿಸುತ್ತದೆ. ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ಎಲ್ಲ ಧರ್ಮದವರು ಪಾಲಿಸಿದರೆ ಸಂವಿಧಾನವನ್ನು ಎತ್ತಿಹಿಡಿದಂತೆ,” ಎಂದು ಸಾಮರಸ್ಯದ ಸಂದೇಶ ನೀಡಿದರು.
ಅನ್ನಭಾಗ್ಯ ಮತ್ತು ಪಂಚ ಗ್ಯಾರಂಟಿಗಳು: ಬಡವರ ಹಸಿವು ನೀಗಿಸಲು ಬದ್ಧ
ತಮ್ಮ ಜನಪ್ರಿಯ ಅನ್ನಭಾಗ್ಯ ಯೋಜನೆಯನ್ನು ಉಲ್ಲೇಖಿಸಿದ ಸಿಎಂ, “ಯಾರೂ ಕೂಡ ಒಂದು ತುತ್ತಿಗೆ ಇನ್ನೊಬ್ಬರ ಮನೆಯಲ್ಲಿ ಕೇಳಬಾರದು, ಯಾರೂ ಹಸಿವಿನಿಂದ ಮಲಗಬಾರದು ಎಂಬ ಕಾರಣಕ್ಕೆ ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದೆ. ನಮಗೆ ಅನ್ನದ ಮಹತ್ವ ಗೊತ್ತಾಗಬೇಕು,” ಎಂದರು. ಅಲ್ಲದೆ, “ಈ ಬಾರಿ 5 ಯೋಜನೆ ಜಾರಿ ತಂದಿದ್ದೇನೆ. ಸರ್ಕಾರದಲ್ಲಿ ದುಡ್ಡಿಲ್ಲ ಎನ್ನುತ್ತಿದ್ದೀರಿ, ಆದರೆ ದುಡ್ಡಿಲ್ಲ ಎಂದಿದ್ದರೆ ಮೆಡಿಕಲ್ ಕಾಲೇಜು ತರಲು, ಅಶೋಕ್ ರೈ 2000 ಸಾವಿರ ಕೋಟಿ ತರಲು ಸಾಧ್ಯವಾಗುತ್ತಿತ್ತಾ?” ಎಂದು ಪ್ರಶ್ನಿಸಿದರು. “ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ” ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಪುತ್ತೂರಿಗೆ ಮೆಡಿಕಲ್ ಕಾಲೇಜು: ಸಿಎಂ ಅಭಯ
ಪುತ್ತೂರಿಗೆ ವೈದ್ಯಕೀಯ ಕಾಲೇಜು ಸ್ಥಾಪನೆಯ ಬಗ್ಗೆ ಮಾತನಾಡಿ, “ಮೆಡಿಕಲ್ ಕಾಲೇಜಿಗೆ ಎಷ್ಟೇ ಖರ್ಚಾದರೂ ಮಾಡಿಯೇ ಮಾಡುತ್ತೇನೆ. ನಮ್ಮ ಸರ್ಕಾರ ಏನು ಹೇಳಿದೆ ಅದನ್ನು ಮಾಡಿಯೇ ಮಾಡುತ್ತದೆ,” ಎಂದು ಪುತ್ತೂರಿನ ಜನರಿಗೆ ಮುಖ್ಯಮಂತ್ರಿಗಳು ಅಭಯ ನೀಡಿದರು. ಮೇಲ್ಜಾತಿ ಮಕ್ಕಳು ಮತ್ತು ಶ್ರೀಮಂತ ಮಕ್ಕಳು ಜೈಲು ಸೇರುವುದು, ಕೊಲೆಗಳಾಗುವುದನ್ನು ನಿಯಂತ್ರಿಸಲು ದಕ್ಷ ಅಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿಸಿದರು. “ದಕ್ಷ ಪೊಲೀಸ್ ಅಧಿಕಾರಿಗಳಿದ್ದರೆ ಹೇಗೆ ಬದಲಾವಣೆ ತರಲು ಸಾಧ್ಯ ಎನ್ನುವುದು ಗೊತ್ತಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯೂ ಮನುಷ್ಯನಾಗಲು ಬದುಕಬೇಕು,” ಎಂದರು.
ದಕ್ಷಿಣ ಕನ್ನಡದ ಜನರಿಗೆ ಮನವಿ: ಸ್ವಾತಂತ್ರ್ಯ, ಸಮಾನತೆ, ಭಾತೃತ್ವಕ್ಕೆ ಒತ್ತು
ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ, “ದಕ್ಷಿಣ ಕನ್ನಡದ ಜನರು ಇದಕ್ಕೆ ವಿಶೇಷ ಒತ್ತು ನೀಡಬೇಕು. ಅಶೋಕ್ ರೈ ಅವರ ಒತ್ತಡಕ್ಕೆ ಮಣಿದು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ,” ಎಂದರು. ಮುಂದಿನ ಚುನಾವಣೆಯಲ್ಲಿ ಜನರು 8 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಹೆಜ್ಜೇನು ಕಚ್ಚಿ ಮೃತಪಟ್ಟ ಮಗುವಿನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಈ ಸಂದರ್ಭದಲ್ಲಿ, ಹೆಜ್ಜೇನು ಕಚ್ಚಿ ನಿಧನರಾದ ಮಗುವಿನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದರು.
ಸ್ಥಳೀಯ
Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.
ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಅಂತರ ರಾಜ್ಯ
WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.
ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.
WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.
CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.
CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.
CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.
ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.
CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.
ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
ನಿಧನ ವಾರ್ತೆ17 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ17 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ17 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ16 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ17 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಸ್ಥಳೀಯ11 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ17 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ16 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















