ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಸ್ತೆಯಲ್ಲಿ ನಮಾಝ್‌ಗೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದ ಪ್ರಶ್ನೆಗೆ […]" /> ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಸ್ತೆಯಲ್ಲಿ ನಮಾಝ್‌ಗೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದ ಪ್ರಶ್ನೆಗೆ […]"> Priyank Kharge-ರಸ್ತೆಯಲ್ಲಿ ಪ್ರಾರ್ಥನೆಗೆ ಅನುಮತಿ ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ - Nikhara News | Kannada News Website
Connect with us

ರಾಜಕೀಯ

Priyank Kharge-ರಸ್ತೆಯಲ್ಲಿ ಪ್ರಾರ್ಥನೆಗೆ ಅನುಮತಿ ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ

Published

on

Ad Widget

Ad Widget

Ad Widget

Ad Widget

ರಸ್ತೆಯಲ್ಲಿ ಪ್ರಾರ್ಥನೆ ನಡೆಸಲು ಸಂಬಂಧಿತ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಸ್ತೆಯಲ್ಲಿ ಪ್ರಾರ್ಥನೆ ನಡೆಸಲು ಸಂಬಂಧಿತ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಸ್ತೆಯಲ್ಲಿ ನಮಾಝ್‌ಗೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಯತ್ನಾಳ್ ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವುದು ಯಾರಿಗೆ ಸಂದೇಶ ಕೊಡಲು? ಮುಖ್ಯಮಂತ್ರಿಗೆ ಗಮನ ಸೆಳೆಯಲು ಇಲ್ಲವೇ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಿಳಿಸಲು ಎಂದು ಖರ್ಗೆ ವ್ಯಂಗ್ಯವಾಡಿದರು.

Ad Widget

Ad Widget <> Ad Widget

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ ಎಂಬ ಬಿಜೆಪಿ ಸಂಸದ ರಾಘವೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ ಖರ್ಗೆ, “ಕಪ್ಪ ಕೊಟ್ಟು ಮುಖ್ಯಮಂತ್ರಿಯಾದ” ಎಂಬ ಯಡಿಯೂರಪ್ಪನವರ ಹೇಳಿಕೆಯನ್ನು ಒಡ್ಡಿದರು. ಬಿಜೆಪಿ ಆಡಳಿತದಲ್ಲಿ ಮೂವರು ಮುಖ್ಯಮಂತ್ರಿಗಳ ಬದಲಾವಣೆ ಕಪ್ಪದ ಕಾರಣದಿಂದಲೇ ಆಯಿತೇ? ಯಡಿಯೂರಪ್ಪ ಕಣ್ಣೀರು ಹಾಕಿ ವೇದಿಕೆಯಿಂದ ಇಳಿದಿದ್ದು ಏಕೆ ಎಂದು ಖರ್ಗೆ ಪ್ರಶ್ನಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರಲಾಗದ ಬಿಜೆಪಿಯವರು ಆರೋಪಗಳನ್ನು ಮಾಡುತ್ತಿದ್ದಾರೆ. ಬಿಹಾರಕ್ಕೆ ಹಣ ಹೋಗುತ್ತಿದೆ ಎಂದರೆ ದಾಖಲೆ ನೀಡಲಿ ಎಂದು ಖರ್ಗೆ ಸವಾಲು ಹಾಕಿದರು. ಜಗದೀಶ್ ಶೆಟ್ಟರ್ ಆಡಳಿತದಲ್ಲಿ ಶಾಲೆ-ಕಾಲೇಜುಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿಷೇಧದ ಆದೇಶವಿತ್ತು. ಈಗ ಯಾವ ಸಂಘಟನೆಯನ್ನೂ ಉಲ್ಲೇಖಿಸದ ನಮ್ಮ ಆದೇಶದಿಂದ ಬಿಜೆಪಿಗೆ ಏಕೆ ಅನುಮಾನ? ಎಂದು ಅವರು ಕೇಳಿದರು.

Ad Widget

Ad Widget

ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಸ್ಥಳೀಯ ಪರಿಸ್ಥಿತಿಯ ಆಧಾರದಲ್ಲಿ ಹೈಕೋರ್ಟ್ ತೀರ್ಮಾನಿಸುತ್ತದೆ ಎಂದು ಖರ್ಗೆ ಹೇಳಿದರು. ಆರೆಸ್ಸೆಸ್ ವಿಷಯವನ್ನು ಸರಕಾರ ಮುನ್ನೆಲೆಗೆ ತಂದಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ, ಆರೆಸ್ಸೆಸ್‌ನಂತಹ “ವಿಷಜಂತು”ಗಳನ್ನು ಬೆಳೆಸಬಾರದೆಂದು ಕುಮಾರಸ್ವಾಮಿಯೇ ಲೇಖನ ಬರೆದಿದ್ದರು ಎಂದು ಖರ್ಗೆ ನೆನಪಿಸಿದರು.

ಕಾಂಗ್ರೆಸ್‌ನ ಕುಟುಂಬ ರಾಜಕಾರಣವನ್ನು ಟೀಕಿಸಿದ ಸುನಿಲ್ ಕುಮಾರ್‌ಗೆ ತಿರುಗೇಟು ನೀಡಿದ ಖರ್ಗೆ, ಸುನಿಲ್ ಕುಮಾರ್ ತಮ್ಮ ಮಗನಿಗೆ ಒಂದು ದಿನ ಗಣವೇಷ ಹಾಕಿದರೆ ಸಾಕಾಗುವುದಿಲ್ಲ. ತ್ರಿಶೂಲ ದೀಕ್ಷೆ ಕೊಡಿಸಲಿ, ರಾತ್ರಿ ಗೋ ರಕ್ಷಣೆಗೆ ಕಳುಹಿಸಲಿ, ಶಾಲಾ, ಕಾಲೇಜು ಬಿಡಿಸಿ ಪೂರ್ಣ ಪ್ರಮಾಣದಲ್ಲಿ ಶಾಖೆಯಲ್ಲಿ ಕೆಲಸ ಮಾಡಲು ಅವಕಾಶ ಕೊಡಿಸಲಿ ಎಂದು ಹೇಳಿದರು.

Ad Widget
Click to comment

Leave a Reply

ಸ್ಥಳೀಯ

Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.

Ad Widget

Ad Widget

ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.

ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.

ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!